station Archives - Good News 24x7 https://www.goodnews24x7.com/tag/station/ Kannada Sun, 24 Aug 2025 08:09:34 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg station Archives - Good News 24x7 https://www.goodnews24x7.com/tag/station/ 32 32 ದೇವನಹಳ್ಳಿ ಫ್ಲೈಓವರ್‌ನಲ್ಲಿ ಹಿಟ್ ಅಂಡ್ ರನ್ ದುರಂತ: ಮಹಿಳೆ ದುರ್ಮರಣ. https://www.goodnews24x7.com/hit-and-run-tragedy-on-devanahalli-flyover-woman-dies/ Sun, 24 Aug 2025 08:09:34 +0000 https://www.goodnews24x7.com/?p=6646 ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ ಬಳಿ ಬಚ್ಚಹಳ್ಳಿ ಫ್ಲೈಓವರ್ ಮೇಲೆ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕಾರು ಚಾಲಕನ ನಿರ್ಲಕ್ಷ್ಯದಿಂದ ಈ ಹಿಟ್ ಅಂಡ್ ರನ್ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಬೆಂಗಳೂರು…

The post ದೇವನಹಳ್ಳಿ ಫ್ಲೈಓವರ್‌ನಲ್ಲಿ ಹಿಟ್ ಅಂಡ್ ರನ್ ದುರಂತ: ಮಹಿಳೆ ದುರ್ಮರಣ. appeared first on Good News 24x7.

]]>

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ ಬಳಿ ಬಚ್ಚಹಳ್ಳಿ ಫ್ಲೈಓವರ್ ಮೇಲೆ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕಾರು ಚಾಲಕನ ನಿರ್ಲಕ್ಷ್ಯದಿಂದ ಈ ಹಿಟ್ ಅಂಡ್ ರನ್ ಘಟನೆ ನಡೆದಿದೆ.

ಮೃತ ಮಹಿಳೆಯನ್ನು ಬೆಂಗಳೂರು ಬಾಣಸವಾಡಿಗೆ ಸೇರಿರುವ 31 ವರ್ಷದ ನೇತ್ರಾವತಿ ಎಂದು ಗುರುತಿಸಲಾಗಿದೆ. ಅವರು ಪತಿಯೊಂದಿಗೆ ಬೈಕ್‌ನಲ್ಲಿ ಚಿಕ್ಕಬಳ್ಳಾಪುರದತ್ತ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಮಾಹಿತಿಯಂತೆ, ಕಾರು ಹಿಂದಿನಿಂದ ಬಂದು ಬೈಕ್‌ಗೆ ಗುದ್ದಿದೆ. ಪರಿಣಾಮವಾಗಿ ನೇತ್ರಾವತಿ ಸಮತೋಲನ ತಪ್ಪಿ ಫ್ಲೈಓವರ್ ಮೇಲಿಂದ ಕೆಳಗೆ ಬಿದ್ದು ತೀವ್ರವಾಗಿ ತಲೆಗೆ ಪೆಟ್ಟು ಬಿದ್ದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಪಘಾತಕ್ಕೆ ಕಾರಣವಾದ ಕಾರು ಚಾಲಕ ಅಲ್ಲಿ ನಿಂತು ಸಹಾಯ ಮಾಡದೆ ಕಾರು ಸಮೇತ ಪರಾರಿಯಾಗಿದ್ದಾನೆ. ಈ ಕುರಿತು ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ಮತ್ತು ಚಾಲಕನ ಪತ್ತೆಗಾಗಿ ಪೊಲೀಸರು ಸಿಸಿಟಿವಿ ದೃಶ್ಯ ಹಾಗೂ ಸಾಕ್ಷ್ಯಗಳ ಆಧಾರದ ಮೇಲೆ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.

ಘಟನೆ ದೇವನಹಳ್ಳಿ ಹಾಗೂ ಸುತ್ತಲಿನ ಪ್ರದೇಶದಲ್ಲಿ ಆತಂಕ ಸೃಷ್ಟಿಸಿದೆ

The post ದೇವನಹಳ್ಳಿ ಫ್ಲೈಓವರ್‌ನಲ್ಲಿ ಹಿಟ್ ಅಂಡ್ ರನ್ ದುರಂತ: ಮಹಿಳೆ ದುರ್ಮರಣ. appeared first on Good News 24x7.

]]>
ಮಾಸ್ಕ್ ಮ್ಯಾನ್ ಸ್ಫೋಟಕ ಹೇಳಿಕೆ ಏನು…? https://www.goodnews24x7.com/what-is-the-explosive-statement-of-the-mask-man/ Sat, 23 Aug 2025 06:10:51 +0000 https://www.goodnews24x7.com/?p=6503 ಧರ್ಮಸ್ಥಳದಲ್ಲಿ ಉತ್ಖನನ ನಿಲ್ಲಿಸಿ ಮಾಸ್ಕ್ ಮ್ಯಾನ್‌ನನ್ನೇ ವಿಚಾರಣೆ ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು, ಆತ ಹೇಳಿದ್ದೆಲ್ಲಾ ಬುರುಡೆ ಎಂದು ಕನ್ಫರ್ಮ್ ಆದ ಬಳಿಕ ಮಾಸ್ಕ್ ಮ್ಯಾನ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ಸತ್ಯದ ಅನಾವರಣವಾಗಿದೆ. ನನಗೆ ಈ ರೀತಿ ಹೇಳಲು ಹೇಳಿದ್ರು, ನಾನು…

The post ಮಾಸ್ಕ್ ಮ್ಯಾನ್ ಸ್ಫೋಟಕ ಹೇಳಿಕೆ ಏನು…? appeared first on Good News 24x7.

]]>

ಧರ್ಮಸ್ಥಳದಲ್ಲಿ ಉತ್ಖನನ ನಿಲ್ಲಿಸಿ ಮಾಸ್ಕ್ ಮ್ಯಾನ್‌ನನ್ನೇ ವಿಚಾರಣೆ ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು, ಆತ ಹೇಳಿದ್ದೆಲ್ಲಾ ಬುರುಡೆ ಎಂದು ಕನ್ಫರ್ಮ್ ಆದ ಬಳಿಕ ಮಾಸ್ಕ್ ಮ್ಯಾನ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ಸತ್ಯದ ಅನಾವರಣವಾಗಿದೆ. ನನಗೆ ಈ ರೀತಿ ಹೇಳಲು ಹೇಳಿದ್ರು, ನಾನು ಈ ರೀತಿ ಹೇಳಿದೆ. ಬುರುಡೆ ತೆಗೆದುಕೊಂಡು ಕೋರ್ಟ್‌ಗೆ ಒಪ್ಪಿಸಿ ಅಂದ್ರು, ನಾನು ಒಪ್ಪಿಸಿದೆ. ಕೋರ್ಟ್‌ಗೆ ಹಾಜರುಪಡಿಸಿದ ಬುರುಡೆ ಎಲ್ಲಿಂದ ಬಂತು ನನಗೆ ಗೊತ್ತಿಲ್ಲ ಎಂದು ಮಾಸ್ಕ್ ಮ್ಯಾನ್ ಚೆನ್ನ ಹೇಳಿದ್ದಾನೆ.
ಸದ್ಯ ಆರೋಪಿ ಚೆನ್ನನಿಗೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಯುತ್ತಿದ್ದು, ಬಳಿಕ ಆತನನ್ನು ಎಸ್‌ಐಟಿ ಅಧಿಕಾರಿಗಳು ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ.

ಅನಾಮಿಕ ತೋರಿಸಿದ 17 ಪಾಯಿಂಟ್‌ಗಳಲ್ಲಿ ಏನೂ ಸಿಗದಿದ್ದ ಹಿನ್ನೆಲೆ ಎಸ್‌ಐಟಿ ತಂಡ ಸಮಾಧಿ ಶೋಧವನ್ನು ಸ್ಥಗಿತಗೊಳಿಸಿ ಮಾಸ್ಕ್ ಮ್ಯಾನ್ ವಿರುದ್ಧವೇ ರಿವರ್ಸ್ ತನಿಖೆ ಶುರು ಮಾಡಿತ್ತು. ಪ್ರಕರಣದ ತನಿಖಾಧಿಕಾರಿ ಜಿತೇಂದ್ರ ದಯಾಮ ಮತ್ತು ಸುಮಾರು 25 ಪೊಲೀಸರ ತಂಡ ಎಸ್‌ಐಟಿ ಠಾಣೆಯಲ್ಲಿ ತೀವ್ರ ವಿಚಾರಣೆ ನಡೆಸಿದ್ದರು.

The post ಮಾಸ್ಕ್ ಮ್ಯಾನ್ ಸ್ಫೋಟಕ ಹೇಳಿಕೆ ಏನು…? appeared first on Good News 24x7.

]]>
ಹಳದಿ ಮಾರ್ಗದ ಮೆಟ್ರೋ ಲೋಕಾರ್ಪಣೆ; ಮೋದಿಗಾಗಿ ಈ ಮಾರ್ಗದ ಮೆಟ್ರೋ ಕೂಡ ಬಂದ್. https://www.goodnews24x7.com/ha%e1%b8%b7adi-margada-me%e1%b9%adro-lokarpa%e1%b9%87e-modigagi-i-margada-me%e1%b9%adro-ku%e1%b8%8da-band-be%e1%b9%85ga%e1%b8%b7uru-nagarada-ar-vi-rasteyinda-bommasandrada-na%e1%b8%8duvina-nam/ Sun, 10 Aug 2025 05:49:22 +0000 https://www.goodnews24x7.com/?p=5673 ಬೆಂಗಳೂರು: ನಗರದ ಆರ್.ವಿ ರಸ್ತೆಯಿಂದ ಬೊಮ್ಮಸಂದ್ರದ ನಡುವಿನ ನಮ್ಮ ಮೆಟ್ರೋ ಹಳದಿ ಮಾರ್ಗ (Namma Metro Yellow Line)ಕ್ಕೆ ಪ್ರಧಾನಿ ಮೋದಿ ಅವರು ಇಂದು ಚಾಲನೆ ನೀಡಲಿದ್ದಾರೆ. ಯೆಲ್ಲೋ ಮಾರ್ಗದ ಮೆಟ್ರೋ ಆರಂಭಿಸುತ್ತಿರುವುದರಿಂದ ಹಸಿರು ಮಾರ್ಗದ ಮೆಟ್ರೋವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುತ್ತಿದೆ.…

The post ಹಳದಿ ಮಾರ್ಗದ ಮೆಟ್ರೋ ಲೋಕಾರ್ಪಣೆ; ಮೋದಿಗಾಗಿ ಈ ಮಾರ್ಗದ ಮೆಟ್ರೋ ಕೂಡ ಬಂದ್. appeared first on Good News 24x7.

]]>

ಬೆಂಗಳೂರು: ನಗರದ ಆರ್.ವಿ ರಸ್ತೆಯಿಂದ ಬೊಮ್ಮಸಂದ್ರದ ನಡುವಿನ ನಮ್ಮ ಮೆಟ್ರೋ ಹಳದಿ ಮಾರ್ಗ (Namma Metro Yellow Line)ಕ್ಕೆ ಪ್ರಧಾನಿ ಮೋದಿ ಅವರು ಇಂದು ಚಾಲನೆ ನೀಡಲಿದ್ದಾರೆ. ಯೆಲ್ಲೋ ಮಾರ್ಗದ ಮೆಟ್ರೋ ಆರಂಭಿಸುತ್ತಿರುವುದರಿಂದ ಹಸಿರು ಮಾರ್ಗದ ಮೆಟ್ರೋವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುತ್ತಿದೆ.

ಸಿಲಿಕಾನ್ ಸಿಟಿ ಬೆಂಗಳೂರಿಗೆ ಪ್ರಧಾನಿ ಮೋದಿ ಅವರು ಇಂದು ಆಗಮಿಸುತ್ತಿದ್ದಾರೆ. ಕೆಎಸ್ಆರ್ ರೈಲು ನಿಲ್ದಾಣದಿಂದ ಮೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಇದಾದ ಮೇಲೆ ಹಳದಿ ಮಾರ್ಗದ ಮೆಟ್ರೋವನ್ನು ಉದ್ಘಾಟನೆ ಮಾಡಲಿದ್ದಾರೆ. ಇದೇ ವೇಳೆ ಮೆಟ್ರೋದ 3ನೇ ಹಂತದ ಶಂಕುಸ್ಥಾಪನೆ ಕೂಡ ಇದೇ ವೇಳೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರಿಗೆ ಭದ್ರತಾ ದೃಷ್ಟಿಯಿಂದ ಹಸಿರು ಮಾರ್ಗದ ಮೆಟ್ರೋವನ್ನ ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಪ್ರಧಾನಿ ಮೋದಿ ಅವರ ಕಾರ್ಯಕ್ರಮಗಳು ಮುಗಿದ ಬಳಿಕ ಹಸಿರು ಮಾರ್ಗದ ಮೆಟ್ರೋ ಎಂದಿನಂತೆ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಪ್ರಯಾಣಿಕರು ಸಹಕರಿಸಬೇಕು ಎಂದು ಕೋರಲಾಗಿದೆ.

ನಗರದ ಬಸವನಗುಡಿ ಪೊಲೀಸರ ಮನವಿ ಹಿನ್ನೆಲೆ ಹಸಿರು ಮಾರ್ಗದಲ್ಲಿ ಬರುವಂತಹ 4 ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಲಾಗುತ್ತಿದೆ. ಲಾಲ್ ಬಾಗ್, ಸೌತ್ ಎಂಡ್, ಜಯನಗರ, ಆರ್.ವಿ ರಸ್ತೆಯ ಮೆಟ್ರೋ ಸ್ಟೇಷನ್ಗಳನ್ನು ಭದ್ರತೆ ದೃಷ್ಟಿಯಿಂದ ತಾತ್ಕಾಲಿಕವಾಗಿ ಮುಚ್ಚಲಾಗಿರುತ್ತದೆ. ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೂ ಬಂದ್ ಆಗಿರುತ್ತವೆ. 12 ಗಂಟೆ ನಂತರ ಎಂದಿನಂತೆ ಸಂಚಾರ ಆರಂಭ ಮಾಡಲಾಗುತ್ತದೆ.

The post ಹಳದಿ ಮಾರ್ಗದ ಮೆಟ್ರೋ ಲೋಕಾರ್ಪಣೆ; ಮೋದಿಗಾಗಿ ಈ ಮಾರ್ಗದ ಮೆಟ್ರೋ ಕೂಡ ಬಂದ್. appeared first on Good News 24x7.

]]>
ಹಾಸನ ಮೂಲದ ಮೂವರು ಯುವಕರು ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ನಾಪತ್ತೆ. https://www.goodnews24x7.com/three-youths-from-hassan-go-missing-after-swimming-in-tungabhadra-river-near-mantralaya/ Sun, 13 Jul 2025 06:25:09 +0000 https://www.goodnews24x7.com/?p=5064 ರಾಯಚೂರು: ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ಶನಿವಾರ ನಡೆದಿದೆ. ಯುವಕರನ್ನು ಹಾಸನ ಮೂಲದ ಅಜಿತ್ (20), ಸಚಿನ್ (20) ಹಾಗೂ ಪ್ರಮೋದ್ (19) ಎಂದು ಗುರುತಿಸಲಾಗಿದೆ. ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ರಾಯರ…

The post ಹಾಸನ ಮೂಲದ ಮೂವರು ಯುವಕರು ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ನಾಪತ್ತೆ. appeared first on Good News 24x7.

]]>

ರಾಯಚೂರು: ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ಶನಿವಾರ ನಡೆದಿದೆ. ಯುವಕರನ್ನು ಹಾಸನ ಮೂಲದ ಅಜಿತ್ (20), ಸಚಿನ್ (20) ಹಾಗೂ ಪ್ರಮೋದ್ (19) ಎಂದು ಗುರುತಿಸಲಾಗಿದೆ.

ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ರಾಯರ ದರ್ಶನಕ್ಕಾಗಿ ಹಾಸನದಿಂದ 7 ಜನ ಯುವಕರ ತಂಡ ಬಂದಿತ್ತು. ಯುವಕರು ಸ್ನಾನಘಟ್ಟದ ಬಳಿ ತುಂಬಿ ಹರಿಯುತ್ತಿರುವ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದರು. ಆಗ ನದಿಗೆ ಹೆಚ್ಚಿನ ನೀರು ಹರಿಬಿಟ್ಟಿರುವುದ್ದರಿಂದ, ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನದಿಯಲ್ಲಿ ನೀರಿನ ರಭಸ ಕಂಡು ಬೇಡವೆಂದು ಹೇಳಿದರೂ ಈಜಲು ಹೋಗಿದ್ದಾರೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಪೊಲೀಸರು ಹಾಗೂ ಈಜುಗಾರರ ತಂಡದಿಂದ ಯುವಕರ ಶೋಧ ಕಾರ್ಯ ನಡೆದಿದೆ. ರಾತ್ರಿಯಾಗಿದ್ದರಿಂದ ಶೋಧ ಕಾರ್ಯಾಚರಣೆ ನಿಲ್ಲಿಸಿದ್ದು, ಭಾನುವಾರ ಬೆಳಗ್ಗೆ ಪುನರಾರಂಭಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

The post ಹಾಸನ ಮೂಲದ ಮೂವರು ಯುವಕರು ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ನಾಪತ್ತೆ. appeared first on Good News 24x7.

]]>
ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ಹಲವು ಮೃ*ತದೇಹಗಳ ರಹಸ್ಯ ವಿಲೇವಾರಿ ದೂರು: ಪ್ರಕರಣ ದಾಖಲು. https://www.goodnews24x7.com/complaint-of-secret-disposal-of-several-dead-bodies-at-dharmasthala-village-police-station-case-registered/ Sat, 05 Jul 2025 11:03:27 +0000 https://www.goodnews24x7.com/?p=4925 ಮಂಗಳೂರು: ತಾನು ರಹಸ್ಯವಾಗಿ ಹಲವು ಮೃತದೇಹಗಳನ್ನು ವಿಲೇವಾರಿ ಮಾಡಿದ್ದೆ ಎಂದು ವ್ಯಕ್ತಿಯೊಬ್ಬರು ವಕೀಲರ ಮೂಲಕ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ದ.ಕ ಜಿಲ್ಲಾ ಪೊಲೀಸ್…

The post ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ಹಲವು ಮೃ*ತದೇಹಗಳ ರಹಸ್ಯ ವಿಲೇವಾರಿ ದೂರು: ಪ್ರಕರಣ ದಾಖಲು. appeared first on Good News 24x7.

]]>

ಮಂಗಳೂರು: ತಾನು ರಹಸ್ಯವಾಗಿ ಹಲವು ಮೃತದೇಹಗಳನ್ನು ವಿಲೇವಾರಿ ಮಾಡಿದ್ದೆ ಎಂದು ವ್ಯಕ್ತಿಯೊಬ್ಬರು ವಕೀಲರ ಮೂಲಕ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಿಂದ ಪತ್ರಿಕಾ ಪ್ರಕಟಣೆ ನೀಡಲಾಗಿದೆ. ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದಿನಿಂದ ಹಲವಾರು ಅಪರಾಧ ಕೃತ್ಯಗಳು ನಡೆದಿದ್ದು, ದೂರುದಾರರಿಗೆ ಜೀವಬೆದರಿಕೆ ಒಡ್ಡಿ, ಸದ್ರಿ ಅಪರಾದ ಕೃತ್ಯಗಳ ಮೃತದೇಹಗಳನ್ನು ದೂರುದಾರರ ಮೂಲಕ ರಹಸ್ಯವಾಗಿ ವಿಲೇವಾರಿ ಮಾಡಿಸಿರುತ್ತಾರೆ. ಈ ಹಿನ್ನೆಲೆ ಹಲವಾರು ಮೃತದೇಹಗಳನ್ನು ದೂರುದಾರರು ವಿಲೇವಾರಿ ಮಾಡಿದ್ದು, ಪ್ರಸ್ತುತ ದೂರುದಾರರಿಗೆ ಪಾಪಪ್ರಜ್ಞೆ ಕಾಡುತ್ತಿರುವುದರಿಂದ, ತನಗೆ ಹಾಗೂ ತನ್ನ ಕುಟುಂಬಕ್ಕೆ ಕಾನೂನಾತ್ಮಕವಾಗಿ ರಕ್ಷಣೆ ದೊರೆತ ಕೂಡಲೇ, ಈ ಅಪರಾಧ ಕೃತ್ಯಗಳನ್ನು ನಡೆಸಿದವರ ಸಂಪೂರ್ಣ ಮಾಹಿತಿಯನ್ನು ಹಾಗೂ ತಾನು ಮೃತದೇಹಗಳನ್ನು ವಿಲೇವಾರಿ ಮಾಡಿದ ಸ್ಥಳಗಳನ್ನು ಪೊಲೀಸರಿಗೆ ತೋರಿಸಲು ಸಿದ್ದವಿರುವುದಾಗಿ ಜುಲೈ 3ರಂದು ಪೊಲೀಸ್ ಅಧೀಕ್ಷಕರ ಕಚೇರಿಗೆ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗೆ ಸದ್ರಿ ವ್ಯಕ್ತಿಯಿಂದ ದೂರು ಸಲ್ಲಿಕೆಯಾಗಿರುತ್ತದೆ.


ಈ ದೂರಿನ ಬಗ್ಗೆ ನ್ಯಾಯಾಲಯದಿಂದ ಅಗತ್ಯ ಅನುಮತಿಯನ್ನು ಪಡೆದುಕೊಂಡು, ದಿನಾಂಕ 04.07.2025 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 39/2025, ಕಲಂ: 211(a) ಬಿಎನ್ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಜರಗಿಸಲಾಗುವುದು. ದೂರುದಾರರು ದೂರಿನಲ್ಲಿ ತನ್ನ ಹೆಸರು ಮತ್ತು ಮಾಹಿತಿಯನ್ನು ಗೌಪ್ಯವಾಗಿ ಇಡುವಂತೆ ವಿನಂತಿಸಿಕೊಂಡ ಮೇರೆಗೆ, ದೂರುದಾರರ ಮಾಹಿತಿಯನ್ನು ಪೊಲೀಸ್ ಮೂಲಗಳಿಂದ ನೀಡಲಾಗುವುದಿಲ್ಲ ಎಂದು ತಿಳಿಸಲಾಗಿದೆ.

ಈ ಬಗ್ಗೆ ನೀಡಿದ ಇನ್ನೊಂದು ಪ್ರಕಟಣೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ: 39/2025 ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ದೂರಿಗೆ ಅನ್ವಯವಾಗುವಂತೆ, ಈವರೆಗೆ ಪೊಲೀಸ್ ಠಾಣೆಗೆ ತಲೆಬುರುಡೆ ಹಾಗೂ ಅವಶೇಷದ ಕೆಲಭಾಗಗಳಿರುವ ಎರಡು ಫೋಟೋಗಳ ಕಲರ್ ಝೆರಾಕ್ಸ್ ಪ್ರತಿಯನ್ನು ಮಾತ್ರ ಸಲ್ಲಿಸಿರುತ್ತಾರೆ. ಇದನ್ನು ಹೊರತುಪಡಿಸಿದಂತೆ ಯಾವುದೇ ಕಳೇಬರವನ್ನು ಈವರೆಗೆ ಪೊಲೀಸ್ ಠಾಣೆಗೆ ನೀಡಿರುವುದಿಲ್ಲ. ದೂರುದಾರರ ಪರವಾಗಿ ವಕೀಲರು ದೂರು ಸಲ್ಲಿಸುವ ವೇಳೆ ಕಳೇಬರವನ್ನು ಮುಂದಿನ ಹಂತದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ಲಿಖಿತವಾಗಿ ತಿಳಿಸಿರುತ್ತಾರೆ ಎಂದು ತಿಳಿಸಲಾಗಿದೆ.

 

 

 

The post ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ಹಲವು ಮೃ*ತದೇಹಗಳ ರಹಸ್ಯ ವಿಲೇವಾರಿ ದೂರು: ಪ್ರಕರಣ ದಾಖಲು. appeared first on Good News 24x7.

]]>
ಶಿವಮೊಗ್ಗದಲ್ಲಿ ಹಸುವಿನ ಕೆಚ್ಚಲು ಕೊ*ಯ್ದು ವಿಕೃತಿ ಮೆರೆದ ಕಿಡಿಗೇಡಿಗಳು https://www.goodnews24x7.com/miscreants-cut-off-cows-udder-and-commit-mischief-in-shivamogga/ Sun, 29 Jun 2025 08:34:31 +0000 https://www.goodnews24x7.com/?p=4806 ಶಿವಮೊಗ್ಗ : ಕರ್ನಾಟಕದಲ್ಲಿ ಜಾನುವಾರುಗಳ ಮೇಲಿನ ಕ್ರೌರ್ಯ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಹಲವೆಡೆ ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ವಿಕೃತಿ ಮೆರೆಯುತ್ತಿದ್ದಾರೆ. ಗೋವಿನ ಮೇಲಿನ ದಾಳಿ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ. ಹೀಗಿದ್ದರು ಇದೀಗ ಮತ್ತೊಂದು ಹಸುವಿನ ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದಿರುವಂತಹ…

The post ಶಿವಮೊಗ್ಗದಲ್ಲಿ ಹಸುವಿನ ಕೆಚ್ಚಲು ಕೊ*ಯ್ದು ವಿಕೃತಿ ಮೆರೆದ ಕಿಡಿಗೇಡಿಗಳು appeared first on Good News 24x7.

]]>

ಶಿವಮೊಗ್ಗ : ಕರ್ನಾಟಕದಲ್ಲಿ ಜಾನುವಾರುಗಳ ಮೇಲಿನ ಕ್ರೌರ್ಯ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಹಲವೆಡೆ ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ವಿಕೃತಿ ಮೆರೆಯುತ್ತಿದ್ದಾರೆ. ಗೋವಿನ ಮೇಲಿನ ದಾಳಿ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ. ಹೀಗಿದ್ದರು ಇದೀಗ ಮತ್ತೊಂದು ಹಸುವಿನ ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದಿರುವಂತಹ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ವಿಜಾಪುರದಲ್ಲಿ ನಡೆದಿದೆ. ಈ ಕುರಿತಾಗಿ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿಡಿಗೇಡಿಗಳು ಗ್ರಾಮದ ವಿಜಯಕುಮಾರ್ ಎಂಬುವರಿಗೆ ಸೇರಿದ ಹಸುವಿನ ಕೆಚ್ಚಲು ಕೊಯ್ದಿದ್ದಾರೆ. ಶನಿವಾರ ಹಸು ಮೇಯಲು ಹೋಗಿದ್ದಾಗ ಕೃತ್ಯವೆಸಗಿ ವಿಕೃತಿ ಮೆರೆದಿದ್ದಾರೆ. ಸ್ಥಳೀಯರ ಸಹಾಯದಿಂದ ಹಸುವನ್ನು ಮನೆಗೆ ಕರೆತಂದ ವಿಜಯಕುಮಾರ್, ಚಿಕಿತ್ಸೆ ನೀಡಿದ್ದಾರೆ.

 

 

 

 

 

ಇತ್ತ ಇತ್ತೀಚೆಗೆ ಜಿಲ್ಲೆಯಲ್ಲಿ ಹಸುಗಳ ಮಾರಣ ಹೋಮ ನಡೆದಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಭದ್ರಾವತಿಯ ಹಳೆ ಸಿಗೇಬಾಗಿ ನದಿಯ ತಟದಲ್ಲಿ ರಾಶಿರಾಶಿ ಗೋವಿನ ಮೂಳೆ, ಕೊಂಬು ಪತ್ತೆಯಾಗಿದ್ದವು. ಉದ್ದೇಶ ಪೂರ್ವಕವಾಗಿ ನದಿಗೆ ಗೋವಿನ ತ್ಯಾಜ್ಯ ಎಸೆಯಲಾಗಿದೆ ಎಂದು ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದರು.
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಕೇಸ್ ಕರ್ನಾಟಕದಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಪ್ರಕರಣ ಮಾಸುವ ಮುನ್ನವೇ ಬಾಗಲಕೋಟೆ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕೆಲವೆಡೆ ಮೂಕ ಪ್ರಾಣಿ ಮೇಲೆ ದುಷ್ಕರ್ಮಿಗಳು ಕೌರ್ಯ ಎಸಗಿದ್ದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಗರ್ಭ ಧರಿಸಿದ್ದ ಹಸುವಿನ ತಲೆಯನ್ನೇ ಕಡೆಯಲಾಗಿತ್ತು. ಹೊಟ್ಟೆಯೊಳಗಿದ್ದ ಕರುವನ್ನ ಹೊರತೆಗೆದು ಹಸುವಿನ ದೇಹ ಎತ್ಕೊಂಡು ಹೋಗಿದ್ದರು. ಇತ್ತೀಚೆಗೆ ಬೆಂಗಳೂರು ದಕ್ಷಿಣ ತಾಲೂಕಿನ ಸೂಲಿವಾರ ಗ್ರಾಮದಲ್ಲಿ ಹಾಲಿನ ಡೈರಿ ಅಧ್ಯಕ್ಷರಿಗೆ ಸೇರಿದ್ದ ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ಕ್ರೌರ್ಯ ಮೆರೆದಿರುವಂತಹ ಘಟನೆ ನಡೆದಿತ್ತು.

The post ಶಿವಮೊಗ್ಗದಲ್ಲಿ ಹಸುವಿನ ಕೆಚ್ಚಲು ಕೊ*ಯ್ದು ವಿಕೃತಿ ಮೆರೆದ ಕಿಡಿಗೇಡಿಗಳು appeared first on Good News 24x7.

]]>
ಎಲ್ಲೇ ಇದ್ದರೂ ಮನೆಗೆ ವಾಪಸ್ಸು ಬಾ ಮಗನೇ! ಮಗನ ಹುಡುಕಾಟಕ್ಕೆ ಅಂಗಲಾಚಿದ ಪೋಷಕರು. https://www.goodnews24x7.com/wherever-you-are-come-back-home-son-parents-are-desperately-searching-for-their-son/ Sun, 15 Jun 2025 09:19:37 +0000 https://www.goodnews24x7.com/?p=4426 ಟಿ ನರಸೀಪುರ :- ಕ್ಷುಲ್ಲಕ ಕಾರಣಕ್ಕೆ ಮನೆ ಬಿಟ್ಟು ಹೋಗಿರುವ ಮಗನ ಬರುವಿಕೆಗೆ ಕಾದು ಕುಳಿತಿರುವ ಪೋಷಕರು. ಮನೆಗೆ ವಾಪಾಸ್ ಬರುವಂತೆ ಕಣ್ಣೀರು ಹಾಕುತ್ತಿರುವ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ಪಟ್ಟಣದಲ್ಲಿ ನಡೆದಿದೆ. ಪುನೀತ್ ಮನೆ ಬಿಟ್ಟು ಹೋಗಿರುವ ಯುವಕ…

The post ಎಲ್ಲೇ ಇದ್ದರೂ ಮನೆಗೆ ವಾಪಸ್ಸು ಬಾ ಮಗನೇ! ಮಗನ ಹುಡುಕಾಟಕ್ಕೆ ಅಂಗಲಾಚಿದ ಪೋಷಕರು. appeared first on Good News 24x7.

]]>

ಟಿ ನರಸೀಪುರ :- ಕ್ಷುಲ್ಲಕ ಕಾರಣಕ್ಕೆ ಮನೆ ಬಿಟ್ಟು ಹೋಗಿರುವ ಮಗನ ಬರುವಿಕೆಗೆ ಕಾದು ಕುಳಿತಿರುವ ಪೋಷಕರು. ಮನೆಗೆ ವಾಪಾಸ್ ಬರುವಂತೆ ಕಣ್ಣೀರು ಹಾಕುತ್ತಿರುವ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ಪಟ್ಟಣದಲ್ಲಿ ನಡೆದಿದೆ.

ಪುನೀತ್ ಮನೆ ಬಿಟ್ಟು ಹೋಗಿರುವ ಯುವಕ ನರಸೀಪುರ ಪಟ್ಟಣದ ದಾಸನಾಯಕರ ಕಾಲೋನಿಯ ನಿವಾಸಿ ರವಿ ಮತ್ತು ಶಿಲ್ಪಾ ಎಂಬುವರ ಪುತ್ರ.
ಬನ್ನೂರಿನ ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿ.25-12-2024 ರಂದು ಮನೆ ಬಿಟ್ಟು ಹೋಗಿದ್ದ, 6 ತಿಂಗಳು ಕಳೆದರು ಮನೆಗೆ ವಾಪಾಸ್ ಬರದ ಮಗನನ್ನ. ಎಲ್ಲಿದ್ದರು ಮನೆಗೆ ಬಾ ಎಂದು ಪೋಷಕರು ಕಣ್ಣೀರಿಡುತ್ತಿದ್ದಾರೆ.

ಸದ್ಯ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಯುವಕನನ್ನ ಕಂಡರೆ ಮಾಹಿತಿ ನೀಡುವಂತೆ ಪೋಷಕರ ಮನವಿ ಮಾಡಿದ್ದಾರೆ
7760031291, 9611081291,
ನರಸೀಪುರ ಪೊಲೀಸ್ ಠಾಣೆ ನಂಬರ್ 08227 261227

The post ಎಲ್ಲೇ ಇದ್ದರೂ ಮನೆಗೆ ವಾಪಸ್ಸು ಬಾ ಮಗನೇ! ಮಗನ ಹುಡುಕಾಟಕ್ಕೆ ಅಂಗಲಾಚಿದ ಪೋಷಕರು. appeared first on Good News 24x7.

]]>