STEMdepartment Archives - Good News 24x7 https://www.goodnews24x7.com/tag/stemdepartment/ Kannada Sat, 07 Mar 2026 07:58:28 +0000 en-US hourly 1 https://wordpress.org/?v=6.9.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg STEMdepartment Archives - Good News 24x7 https://www.goodnews24x7.com/tag/stemdepartment/ 32 32 ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ! https://www.goodnews24x7.com/cm-says-no-to-student-elections/ Sat, 07 Mar 2026 07:58:20 +0000 https://www.goodnews24x7.com/?p=8765 (ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

The post ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ! appeared first on Good News 24x7.

]]>

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸಲು ಕಾಲೇಜು ಮತ್ತು ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಉದ್ದೇಶಿಸಲಾಗಿದೆ ಎಂದರು.

ಏಷ್ಯಾ ಅಭಿವೃದ್ಧಿಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ ‘ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆ’ ಜಾರಿಗೊಳಿಸಿ, 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್ ಗಳನ್ನು ಮಾದರಿ ಸಂಸ್ಥೆಗಳನ್ನಾಗಿ ರೂಪಿಸಲಾಗುತ್ತಿದೆ.
ಸರ್ಕಾರಿ ಪ್ರಥಮ ದರ್ಜೆ ಮತ್ತು ಇಂಜಿನಿಯ ರಿಂಗ್ ಕಾಲೇಜುಗಳಲ್ಲಿ 2,000 ಹಾಗೂ ಸಾರ್ವ ಜನಿಕ ವಿವಿಗಳಲ್ಲಿ 1,000 ಬೋಧಕ ಹುದ್ದೆ ಗಳನ್ನು ಭರ್ತಿ ಮಾಡಲಾಗುವುದು.
ಮಹಿಳಾ ವಿದ್ಯಾರ್ಥಿಗಳಿಗೆ ಮೂಲಸೌಕರ್ಯ ಒದಗಿಸಲು 25 ಸರ್ಕಾರಿ ಪದವಿ ಕಾಲೇಜುಗಳು ಸೇರಿ ಒಟ್ಟು 31 ಸಂಸ್ಥೆಗಳಿಗೆ 31 ಕೋಟಿ ರೂ.ನೀಡಲಾಗುವುದು. ಸ್ಟೆಮ್ ವಿಭಾಗದ 3,000 ಮಹಿಳಾ ಪದವೀಧರರಿಗೆ 13.50 ಕೋಟಿ ರೂ. ವೆಚ್ಚ ದಲ್ಲಿ ಕೌಶಲ್ಯ ತರಬೇತಿ ಮತ್ತು ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ಮಾತೃತ್ವ ರಜೆ ಸೌಲಭ್ಯ ಕಲ್ಪಿಸಲಾಗಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಈ ವರ್ಷವೂ 100 ಕೋಟಿ ಒದಗಿಸಲಾಗುವುದು. ಧಾರವಾಡ ಮತ್ತು ಬೆಂಗಳೂರಿನಲ್ಲಿ ತಲಾ 10 ಕೋಟಿ ವೆಚ್ಚದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರ ಸ್ಥಾಪನೆ, ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿವಿ ಸ್ಥಾಪನೆಗೆ 25 ಎಕರೆ ಜಮೀನು ಮಂಜೂರು ಮಾಡಲಾಗಿದೆ.

ವಿದ್ಯಾರ್ಥಿ ಗಳಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ಒದಗಿಸಲು ‘ಉತ್ತಮ ಕಲಿಕೆ ಉಜ್ವಲ ಭವಿಷ್ಯ’ ಎಂಬ ಘೋಷವಾಕ್ಯದಡಿ ಒಟ್ಟು 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿ ಸಲು ತೀರ್ಮಾನಿಸಿದ್ದು, ಇದಕ್ಕಾಗಿ ಮುಂದಿನ ಮೂರು ವರ್ಷಗಳಲ್ಲಿ 3,900 ಕೋಟಿ ರೂ. ವೆಚ್ಚ ಮಾಡಲಾಗುವುದು. 184 ಹಿರಿಯ
ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜು ಗಳನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ ಎಂದರು.

ಶಾಲೆಗಳ ಕೊಠಡಿ ನಿರ್ಮಾಣ ಹಾಗೂ ದುರಸ್ತಿಗೆ 565 ಕೋಟಿ ರೂ, ಶೌಚಾಲಯ ನಿರ್ಮಾಣಕ್ಕೆ 75 ಕೋಟಿ ಮತ್ತು ನಿರ್ವಹಣೆಗಾಗಿ 125 ಕೋಟಿ ರೂ. ಅನುದಾನವನ್ನು ಎಸ್‌ಡಿಎಂಸಿಗಳಿಗೆ ನೇರವಾಗಿ ಬಿಡು ಗಡೆ ಮಾಡಲಾಗುವುದು. ವಿದ್ಯಾವಿಕಾಸ ಯೋಜನೆ ಯಡಿ ಪೂರ್ವ ಪ್ರಾಥಮಿಕ ಮಕ್ಕಳಿಗೆ ಚಟುವಟಿಕೆ ಪುಸ್ತಕಗಳು, 1 ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳು ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ನೀಡಲಾಗುವುದು. ಐಐಟಿ ಧಾರವಾಡದ ಸಹಯೋಗದಲ್ಲಿ 8 ರಿಂದ 12ನೇ ತರಗತಿಯ 12.28 ಲಕ್ಷ ವಿದ್ಯಾರ್ಥಿಗಳಿಗೆ 5 ಕೋಟಿ ರೂ. ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ‘ವೈಯಕ್ತಿಕ ಸ್ವಯಂ-ಕಲಿಕಾ ಡಿಜಿಟಲ್ ಟ್ಯೂಟರ್’ ಸೌಲಭ್ಯ ಕಲ್ಪಿಸಲಾಗುವುದು.

ವಿದ್ಯಾರ್ಥಿಗಳಲ್ಲಿ ಮಾನಸಿಕ ಒತ್ತಡ ನಿವಾರಿಸಲು 204 ಬಿಆರ್‌ಸಿ ಕೇಂದ್ರಗಳಲ್ಲಿ ಮಾನಸಿಕ ಆರೋಗ್ಯ ಸಲಹೆಗಾರರ ನೇಮಕ ಹಾಗೂ 16 ವರ್ಷದೊಳಗಿನ ಮಕ್ಕಳಿಗೆ ಸಾಮಾ ಜಿಕ ಜಾಲತಾಣ ನಿಷೇಧಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ, ಇದಲ್ಲದೆ, ವಿದ್ಯಾರ್ಥಿಗಳಿಗೆ ನೀಡುವ ಸವಲತ್ತುಗಳನ್ನು ನೇರ ನಗದು ವರ್ಗಾವಣೆ ಮೂಲಕ ವಿತರಿಸಲು ಕ್ರಮವಹಿಸಲಾಗಿದೆ ಎಂದರು.

The post ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ! appeared first on Good News 24x7.

]]>