students Archives - Good News 24x7 https://www.goodnews24x7.com/tag/students/ Kannada Sun, 26 Jul 2026 05:41:02 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg students Archives - Good News 24x7 https://www.goodnews24x7.com/tag/students/ 32 32 ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ ! https://www.goodnews24x7.com/neet-paper-leak-amit-shah-says-the-interest-of-the-country-and-students-is-our-priorityneet-paper-leak-amit-shah-says-the-interest-of-the-country-and-students-is-our-priority/ Sun, 26 Jul 2026 05:41:02 +0000 https://www.goodnews24x7.com/?p=9871   ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ವಿದ್ಯಾರ್ಥಿಗಳ ಹಿತಾಸಕ್ತಿ ಮುಖ್ಯ ಎಂದ ಅಮಿತ್ ಶಾ, ಭವಿಷ್ಯದಲ್ಲಿ ಪರೀಕ್ಷಾ ಅಕ್ರಮ ತಡೆಯಲು ಕಠಿಣ ಸುಧಾರಣೆ ತರುವ ಭರವಸೆ ನೀಡಿದ್ದಾರೆ. ಸರ್ಕಾರದ ಈ…

The post ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ ! appeared first on Good News 24x7.

]]>

 

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ವಿದ್ಯಾರ್ಥಿಗಳ ಹಿತಾಸಕ್ತಿ ಮುಖ್ಯ ಎಂದ ಅಮಿತ್ ಶಾ, ಭವಿಷ್ಯದಲ್ಲಿ ಪರೀಕ್ಷಾ ಅಕ್ರಮ ತಡೆಯಲು ಕಠಿಣ ಸುಧಾರಣೆ ತರುವ ಭರವಸೆ ನೀಡಿದ್ದಾರೆ. ಸರ್ಕಾರದ ಈ ಕ್ರಮಗಳ ನಂತರ ಪ್ರತಿಭಟನೆ ಹಿಂತೆಗೆದುಕೊಳ್ಳಲಾಗಿದ್ದು, ಪರೀಕ್ಷಾ ಪಾರದರ್ಶಕತೆಗೆ ಆದ್ಯತೆ ನೀಡಲಾಗಿದೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ವಿದ್ಯಾರ್ಥಿಗಳು ಹಾಗೂ ವಿರೋಧ ಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ವಾರಗಟ್ಟಲೆ ನಡೆದ ಪ್ರತಿಭಟನೆಗಳು ಮತ್ತು ಕೇಂದ್ರ ಸರ್ಕಾರದಿಂದ ಉತ್ತರದಾಯಿತ್ವಕ್ಕಾಗಿ ಬಂದ ಒತ್ತಡದ ಹಿನ್ನೆಲೆಯಲ್ಲಿ ಪ್ರಧಾನ್ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಕಾರ್ಯಕರ್ತರಿಗೆ ಯಾವುದೇ ರಾಜಕೀಯ ಹುದ್ದೆಗಿಂತ ದೇಶ, ಯುವಕರು ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯು ಬಿಜೆಪಿಯ ಈ ತತ್ವ ಮತ್ತು ಬದ್ಧತೆಯನ್ನು ಎತ್ತಿಹಿಡಿದಿದೆ ಎಂದು ಅವರು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಅಲ್ಲದೆ, ನರೇಂದ್ರ ಮೋದಿ ನೇತೃತ್ವದ ಸರ್ಕಾರವು ವಿದ್ಯಾರ್ಥಿಗಳ ಭಾವನೆಗಳನ್ನು ಗೌರವಿಸುತ್ತದೆ ಮತ್ತು ಭವಿಷ್ಯದಲ್ಲಿ ಪರೀಕ್ಷಾ ಅಕ್ರಮಗಳನ್ನು ತಡೆಯಲು ಕಠಿಣ ಸುಧಾರಣೆಗಳನ್ನು ತರಲಿದೆ ಎಂದು ಭರವಸೆ ನೀಡಿದ್ದಾರೆ.

ಸಚಿವರ ರಾಜೀನಾಮೆ, ಪತ್ರಿಕೆ ಸೋರಿಕೆಯಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಕಾನೂನು ಕ್ರಮಗಳನ್ನು ಹಿಂಪಡೆಯುವ ಭರವಸೆಯನ್ನು ಸರ್ಕಾರ ನೀಡಿದ ನಂತರ ಜಿರಳೆ ಜನತಾ ಪಕ್ಷವು ತನ್ನ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದೆ.ಇದೇ ವೇಳೆ, ಧರ್ಮೇಂದ್ರ ಪ್ರಧಾನ್ ಅವರ ಸೇವೆಯನ್ನು ಶ್ಲಾಘಿಸಿದ ಅಮಿತ್ ಶಾ, ತಮ್ಮ ಅಧಿಕಾರಾವಧಿಯಲ್ಲಿ ಪ್ರಧಾನ್ ಅವರು ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನ, ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಗಳ ವಿಸ್ತರಣೆ, ಪಿಎಂ ಶ್ರೀ ಶಾಲೆಗಳ ಬಲವರ್ಧನೆ ಮತ್ತು ಕೌಶಲ್ಯ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಸ್ಮರಿಸಿದ್ದಾರೆ.

ರಾಜೀನಾಮೆ ಕುರಿತು ‘ಎಕ್ಸ್’ ನಲ್ಲಿ ಹಂಚಿಕೊಂಡಿರುವ ಧರ್ಮೇಂದ್ರ ಪ್ರಧಾನ್, “ಇದು ನನ್ನ ವೈಯಕ್ತಿಕ ಪ್ರತಿಷ್ಠೆಯ ಪ್ರಶ್ನೆಯಲ್ಲ. ಕಳೆದ ಕೆಲವು ದಿನಗಳ ಬೆಳವಣಿಗೆಗಳು ನನಗೆ ತೀವ್ರ ಬೇಸರ ತಂದಿವೆ. ದೇಶದ ಯುವಶಕ್ತಿಯು ಗೊಂದಲದ ಜಾಲದಲ್ಲಿ ಸಿಲುಕುವುದು ನನಗೆ ಇಷ್ಟವಿಲ್ಲ. ಈ ಜಂತರ್ ಮಂತರ್ ಪ್ರತಿಭಟನೆಯನ್ನು ದೇಶವಿರೋಧಿ ಶಕ್ತಿಗಳು ದುರುಪಯೋಗಪಡಿಸಿಕೊಳ್ಳಬಾರದು, ದೇಶದ ಏಕತೆ ಕಾಪಾಡಬೇಕು ಮತ್ತು ವಿದ್ಯಾರ್ಥಿಗಳ ಭವಿಷ್ಯ ಕಾನೂನು ಸಂಕಷ್ಟಗಳಲ್ಲಿ ಸಿಲುಕಬಾರದು ಎಂಬ ಉದ್ದೇಶದಿಂದ ನಾನು ಈ ನಿರ್ಧಾರ ಕೈಗೊಂಡಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ಅಕ್ರಮ ಕಂಡುಬಂದ ತಕ್ಷಣವೇ ಸರ್ಕಾರ ತನಿಖೆಯನ್ನು ಸಿಬಿಐಗೆ ವಹಿಸಿ, ಪರೀಕ್ಷೆಯನ್ನು ರದ್ದುಗೊಳಿಸಿ, ಜೂನ್ 21 ರಂದು ಮರುಪರೀಕ್ಷೆ ನಡೆಸಿ ಜುಲೈ 16 ರಂದು ಫಲಿತಾಂಶವನ್ನೂ ಪ್ರಕಟಿಸಿತ್ತು ಎಂದು ಅವರು ತಮ್ಮ ಪತ್ರದಲ್ಲಿ ಸ್ಮರಿಸಿದ್ದಾರೆ. ಮುಂದಿನ ವರ್ಷದಿಂದ ಈ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತಮಾದರಿಯಲ್ಲಿ ನಡೆಸಲು ಸರ್ಕಾರ ನಿರ್ಧರಿಸಿದೆ.ಸಚಿವರ ರಾಜೀನಾಮೆ, ಪತ್ರಿಕೆ ಸೋರಿಕೆಯಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಕಾನೂನು ಕ್ರಮಗಳನ್ನು ಹಿಂಪಡೆಯುವ ಪ್ರಮುಖ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸಿದ ಹಿನ್ನೆಲೆಯಲ್ಲಿ ಸಿಜೆಪಿ ತನ್ನ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದೆ.

ಇದೇ ವೇಳೆ, ಧರ್ಮೇಂದ್ರ ಪ್ರಧಾನ್ ಅವರ ಸೇವೆಯನ್ನು ಶ್ಲಾಘಿಸಿದ ಅಮಿತ್ ಶಾ, ತಮ್ಮ ಅಧಿಕಾರಾವಧಿಯಲ್ಲಿ ಪ್ರಧಾನ್ ಅವರು ರಾಷ್ಟ್ರೀಯ ಶಿಕ್ಷಣ ನೀತಿಯ ಪರಿಣಾಮಕಾರಿ ಅನುಷ್ಠಾನ, ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಗಳ ವಿಸ್ತರಣೆ, ಪಿಎಂ ಶ್ರೀ ಶಾಲೆಗಳ ಬಲವರ್ಧನೆ, ಡಿಜಿಟಲ್ ಶಿಕ್ಷಣ ಮ

The post ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ ! appeared first on Good News 24x7.

]]>
ಗುರುಗಳಾದ KR ಸುಬ್ಬು ಕೃಷ್ಣ ಸ್ಮರಣಾರ್ಥ “ಲಾ ಗೈಡ್” ಸಂಸ್ಥೆಯಿಂದ ದತ್ತಿ ಪ್ರಶಸ್ತಿ https://www.goodnews24x7.com/in-memory-of-guru-kr-subbu-krishna-law-guide-institute-has-announced-an-endowment-award/ Fri, 22 May 2026 13:13:23 +0000 https://www.goodnews24x7.com/?p=9522 ಪ್ರೊ ಸಿ ಕೆ ಎನ್ ರಾಜಾ ಹಾಗೂ ಹಿರಿಯ ವಕೀಲರಾದ ದಿವಂಗತ ಕೆ ಅರ್ ಸುಬ್ಬಕೃಷ್ಣ ಅವರ ಸ್ಮರಣಾರ್ಥ ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ವತಿಯಿಂದ ಭಾರತದ ಸಂವಿಧಾನ ವಿಷಯದಲ್ಲಿ ಹೆಚ್ಚು ಅಂಕ ಪಡೆದ ಕಾನೂನು ವಿದ್ಯಾರ್ಥಿಗೆ ಪ್ರತಿ ವರ್ಷ ನಗದು…

The post ಗುರುಗಳಾದ KR ಸುಬ್ಬು ಕೃಷ್ಣ ಸ್ಮರಣಾರ್ಥ “ಲಾ ಗೈಡ್” ಸಂಸ್ಥೆಯಿಂದ ದತ್ತಿ ಪ್ರಶಸ್ತಿ appeared first on Good News 24x7.

]]>

ಪ್ರೊ ಸಿ ಕೆ ಎನ್ ರಾಜಾ ಹಾಗೂ ಹಿರಿಯ ವಕೀಲರಾದ ದಿವಂಗತ ಕೆ ಅರ್ ಸುಬ್ಬಕೃಷ್ಣ ಅವರ ಸ್ಮರಣಾರ್ಥ ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ವತಿಯಿಂದ ಭಾರತದ ಸಂವಿಧಾನ ವಿಷಯದಲ್ಲಿ ಹೆಚ್ಚು ಅಂಕ ಪಡೆದ ಕಾನೂನು ವಿದ್ಯಾರ್ಥಿಗೆ ಪ್ರತಿ ವರ್ಷ ನಗದು ಬಹುಮಾನವನ್ನು ಘೋಷಣೆ ಮಾಡಲಾಗಿದೆ.‌ ಇದಕ್ಕಾಗಿ ಒಂದು ಲಕ್ಷ ರೂಪಾಯಿಯನ್ನು ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ಗೌರವ ಸಂಪಾದಕರು ಹಾಗೂ ಹಿರಿಯ ವಕೀಲರಾದ ಎಚ್ ಎನ್ ವೆಂಕಟೇಶ್ ಕಾಲೇಜು ಆಡಳಿತ ಮಂಡಳಿಗೆ ನೀಡಿದ್ದಾರೆ. 1 ಲಕ್ಷ ಠೇವಣಿ‌ ರೂಪದಲ್ಲಿ ಇಟ್ಟು ಅದರಿಂದ ಪ್ರತಿ ವರ್ಷವೂ ಬರುವ ಹಣವನ್ನು ಭಾರತದ ಸಂವಿಧಾನ ವಿಷಯದಲ್ಲಿ ಹೆಚ್ಚು ಅಂಕ ಪಡೆದ ಕಾನೂನು ವಿದ್ಯಾರ್ಥಿಗೆ ಪ್ರಶಸ್ತಿ ರೂಪದಲ್ಲಿ ನೀಡಲು ತಿಳಿಸಿದ್ದಾರೆ.

 

ಇಂದು ಶಾರದಾ ವಿಲಾಸ ಕಾನೂನು ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ (IQAC) ವತಿಯಿಂದ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಹಿರಿಯ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಘೋಷಣೆ ಮಾಡಿದರು.ಈ ವೇಳೆ ಕಾರ್ಯಕ್ರಮದಲ್ಲಿ ಕಾನೂನು ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ಸಂಸ್ಥೆಯ ಹಳೆಯ ವಿದ್ಯಾರ್ಥಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಶ್ರೀ ಇ.ಎಸ್. ಇಂದ್ರೇಶ್, ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಹಾಗೂ ‘ಲಾ ಗೈಡ್’ ಕನ್ನಡ ಕಾನೂನು ಮಾಸಪತ್ರಿಕೆಯ ಗೌರವ ಸಂಪಾದಕರಾದ ಹಿರಿಯ ವಕೀಲರಾದ ಹೆಚ್.ಎನ್. ವೆಂಕಟೇಶ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಶಾರದಾವಿಲಾಸ ಶಿಕ್ಷಣ ಸಂಸ್ಥೆಯ ಹಿರಿಯ ಆಡಳಿತ ಮಂಡಳಿ ಸದಸ್ಯ ಶ್ರೀ ಎಸ್.ಎಲ್. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಮೈಸೂರು ವಕೀಲರ ಸಂಘದ ಅಧ್ಯಕ್ಷ ಶ್ರೀ ಎಸ್. ಲೋಕೇಶ್, ಸಂಸ್ಥೆಯ ಗೌರವ ಕಾರ್ಯದರ್ಶಿ ಶ್ರೀ ಆರ್. ದಿನೇಶ್ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಂಸ್ಥೆಯ ಹಳೆಯ ವಿದ್ಯಾರ್ಥಿಗಳು, ಕಾನೂನು ವಿದ್ಯಾರ್ಥಿಗಳು ಹಾಗೂ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರುಗು ತಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಎಚ್ ಎನ್ ವೆಂಕಟೇಶ್ ಶಾರದ ವಿಲಾಸ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ಬಗ್ಗೆ ವಿವರವಾಗಿ ತಿಳಿಸಿದರು. ಇಲ್ಲಿ ಓದಿದ ವಿದ್ಯಾರ್ಥಿಗಳು ಇಂದು ದೇಶದ ಎಲ್ಲಾ‌ ಭಾಗದಲ್ಲೂ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿದ್ದಾರೆ. ಈ ಮೂಲಕ ದೇಶವನ್ನು ಮುನ್ನಡೆಸುತ್ತಿದ್ದಾರೆ. ಇದಕ್ಕೆ ಕಾರಣ ನಮ್ಮ ಕಾಲೇಜು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮುಂದವರಿದ ನಾನು ಸಹಾ ಇದೇ ಕಾಲೇಜಿನ ವಿದ್ಯಾರ್ಥಿಯಾಗಿದ್ದೆ. ಈ ಪರಂಪರೆ ಇದೇ ರೀತಿ ಮುಂದುವರಿಯಲಿ ಅನ್ನೋದು ನನ್ನ ಆಶಯ. ಹೀಗಾಗಿ ಸಂವಿಧಾನ ವಿಷಯದಲ್ಲಿ ಅತಿ ಹೆಚ್ಚು ಅಂಕ ಗಳಿಸುವ ಒಬ್ಬ ವಿದ್ಯಾರ್ಥಿಗೆ ಲಾಗೈಡ್ ವತಿಯಿಂದ ನಗದು ದತ್ತಿ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಅದಕ್ಕಾಗಿ ಶಾರದ ವಿಲಾಸ ಕಾನೂನು ಕಾಲೇಜು ಮಂಡಳಿಗೆ ಒಂದು ಲಕ್ಷ ರೂಪಾಯಿ ಚೆಕ್‌ನ್ನು ದೇಣಿಗೆ ನೀಡಿರುವುದಾಗಿ ಅವರು ತಿಳಿಸಿದರು. ಪ್ರತಿ ವರ್ಷವೂ ಪ್ರೊ ಸಿ ಕೆ ಎನ್ ರಾಜಾ ಹಾಗೂ ಹಿರಿಯ ವಕೀಲರಾದ ದಿವಂಗತ ಕೆ ಅರ್ ಸುಬ್ಬಕೃಷ್ಣ ಅವರ ಸ್ಮರಣಾರ್ಥ ಈ ಪ್ರಶಸ್ತಿ ನೀಡಲಾಗುವುದು ಎಂದು ಸಹಾ ಹೇಳಿದರು‌.

The post ಗುರುಗಳಾದ KR ಸುಬ್ಬು ಕೃಷ್ಣ ಸ್ಮರಣಾರ್ಥ “ಲಾ ಗೈಡ್” ಸಂಸ್ಥೆಯಿಂದ ದತ್ತಿ ಪ್ರಶಸ್ತಿ appeared first on Good News 24x7.

]]>
ಹೆಮ್ಮರಗಾಲ ಪ್ರೌಢಶಾಲೆಯಲ್ಲಿ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ! https://www.goodnews24x7.com/guruvandana-and-sneha-sammilana-at-hemmaragal-high-school/ Mon, 11 May 2026 11:39:59 +0000 https://www.goodnews24x7.com/?p=9501   ನಂಜನಗೂಡು: ತಾಲ್ಲೂಕಿನ ಹೆಮ್ಮರಗಾಲ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ‘ಗುರುವಂದನಾ ಮತ್ತು ಸ್ನೇಹ ಸಮ್ಮಿಲನ’ ಕಾರ್ಯಕ್ರಮವು ಅತ್ಯಂತ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ನೆರವೇರಿತು.20 ವರ್ಷಗಳ(7300) ದಿನಗಳ ನಂತರ ಒಂದೆಡೆ ಸೇರಿದ ಹಳೆಯ ವಿದ್ಯಾರ್ಥಿಗಳು ತಮ್ಮ ಶಾಲಾ ದಿನಗಳ…

The post ಹೆಮ್ಮರಗಾಲ ಪ್ರೌಢಶಾಲೆಯಲ್ಲಿ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ! appeared first on Good News 24x7.

]]>

 

ನಂಜನಗೂಡು: ತಾಲ್ಲೂಕಿನ ಹೆಮ್ಮರಗಾಲ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ‘ಗುರುವಂದನಾ ಮತ್ತು ಸ್ನೇಹ ಸಮ್ಮಿಲನ’ ಕಾರ್ಯಕ್ರಮವು ಅತ್ಯಂತ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ನೆರವೇರಿತು.20 ವರ್ಷಗಳ(7300) ದಿನಗಳ ನಂತರ ಒಂದೆಡೆ ಸೇರಿದ ಹಳೆಯ ವಿದ್ಯಾರ್ಥಿಗಳು ತಮ್ಮ ಶಾಲಾ ದಿನಗಳ ಸವಿ ನೆನಪುಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಅಂದಿನ ಕಾಲದಲ್ಲಿ ವಿದ್ಯೆ ಕಲಿಸಿದ, ಜೈ ಕುಮಾರಸ್ವಾಮಿ(ಜೆಕೆಎಸ್) ಸದಾಶಿವ(ಜಿಸಿಎಸ್) ಬಸವಣ್ಣ(ಬಿಎಂಬಿ) ಕುಮಾರಸ್ವಾಮಿ (ಕೆಎಸ್) ವೆಂಕಟೇಶ್(ವಿಕೆ) ಭೈರವೇಶ್ವರ, ಅಟೆಂಡರ್ ಮಹದೇವು ಸೇರಿದಂತೆ ಸುಮಾರು 8 ಮಂದಿ ಹಿರಿಯ ಶಿಕ್ಷಕರನ್ನು ಆತ್ಮೀಯವಾಗಿ ಸನ್ಮಾನಿಸಿ, ಗುರುವಂದನೆ ಸಲ್ಲಿಸಲಾಯಿತು. ತಮ್ಮ ಶಿಷ್ಯಂದಿರು ಇಂದು ಸಮಾಜದ ವಿವಿಧ ಸ್ತರಗಳಲ್ಲಿ ಗುರುತಿಸಿಕೊಂಡಿರುವುದನ್ನು ಕಂಡು ಶಿಕ್ಷಕರು ಭಾವುಕರಾದರು.

ಈ ಸಂದರ್ಭದಲ್ಲಿ 120ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಕಳೆ ನೀಡಿದರು.ಕಾರ್ಯಕ್ರಮದ ಉದ್ದಕ್ಕೂ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನಡುವಿನ ಪ್ರೀತಿ, ಗೌರವದ ಮಧುರ ಬಾಂಧವ್ಯ ಮೇಳೈಸಿತ್ತು. ಶಿಕ್ಷಕರು ವಿದ್ಯಾರ್ಥಿಗಳನ್ನು ಹರಸುತ್ತಾ ಆಡಿದ ಮಾತುಗಳು ಎಲ್ಲರ ಕಣ್ಣಾಲಿಗಳು ಒದ್ದೆಯಾಗುವಂತೆ ಮಾಡಿದವು. ಇಡೀ ವಾತಾವರಣವು ಭಾವೋದ್ವೇಗ ಹಾಗೂ ಸಂತಸದಿಂದ ಕೂಡಿತ್ತು.ಸನ್ಮಾನ ಸ್ವೀಕರಿಸಿದ ಹಿರಿಯ ಶಿಕ್ಷಕರು ಮಾತನಾಡಿ, “ವಿದ್ಯಾರ್ಥಿಗಳು ಇಷ್ಟು ವರ್ಷಗಳ ನಂತರವೂ ನಮ್ಮನ್ನು ನೆನಪಿಟ್ಟುಕೊಂಡು ಗೌರವಿಸುತ್ತಿರುವುದು ಜೀವನದ ಅತ್ಯಂತ ಹೆಮ್ಮೆಯ ಕ್ಷಣ,” ಎಂದು ಹರ್ಷ ವ್ಯಕ್ತಪಡಿಸಿದರು.

ಹಳೆಯ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಗುರುಗಳ ಪಾದಕ್ಕೆ ನಮಸ್ಕರಿಸಿ ಆಶೀರ್ವಾದ ಪಡೆದರು.ಒಟ್ಟಾರೆಯಾಗಿ ಈ ಸ್ನೇಹ ಸಮ್ಮಿಲನವು ಹಳೆಯ ನೆನಪುಗಳನ್ನು ಮೆಲುಕು ಹಾಕುವುದರ ಜೊತೆಗೆ, ಗುರು-ಶಿಷ್ಯರ ಪರಂಪರೆಯನ್ನು ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಯಿತು. ಕಾರ್ಯಕ್ರಮ ಆಯೋಜಿಸಿದ ಪತ್ರಕರ್ತ ಮಹೇಶ್ ಕೆಬ್ಬೆ,ವಿಕಾಸ್, ಶೃತಿ,ಸೋಮಣ್ಣ,ರವಿಶಂಕರ್, ಸೇರಿದಂತೆ ಕೆಲವರಿಗೆ ಸಹಪಾಠಿಗಳೇ ಸನ್ಮಾನಿಸಿದ್ದು ಅರ್ಥಪೂರ್ಣವಾಗಿತ್ತು.

The post ಹೆಮ್ಮರಗಾಲ ಪ್ರೌಢಶಾಲೆಯಲ್ಲಿ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ! appeared first on Good News 24x7.

]]>
ಉಪ್ಪಾರ ಸಮಾಜದ ವೈದ್ಯೆ ಅಪಘಾತದಲ್ಲಿ ನಿ*ಧನ! https://www.goodnews24x7.com/uppara-community-doctor-dies-in-accident/ Wed, 06 May 2026 10:05:46 +0000 https://www.goodnews24x7.com/?p=9497 ಉಪ್ಪಾರ‌ ಸಮುದಾಯದ ವಿದ್ಯಾರ್ಥಿಗಳಿಗೆ ಸ್ಪೂರ್ತಿಸೆಲೆಯಾಗಿದ್ದ, ಜನರ ನೆಚ್ಚಿನ ಪ್ರಸೂತಿ ವೈದ್ಯರಾಗಿ ಜನಮನ್ನಣೆ ಗಳಿಸಿದ್ದ ಡಾ. ಗೌತಮಿ ಅಪಘಾತದಲ್ಲಿ ನಿಧನರಾಗಿದ್ದು ಸಮುದಾಯಕ್ಕೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಭರಿಸಲಾಗದ ನಷ್ಠ, ದುಃಖ ಉಂಟಾಗಿದೆ.‌ ಮೈಸೂರು ಕೆ.ಆರ್.ಆಸ್ಪತ್ರೆ ಮತ್ತು ಮಂಡ್ಯ ಆಸ್ಪತ್ರೆಯಲ್ಲಿ ಪ್ರಸೂತಿ ವೈದ್ಯರಾಗಿ ಉತ್ತಮ…

The post ಉಪ್ಪಾರ ಸಮಾಜದ ವೈದ್ಯೆ ಅಪಘಾತದಲ್ಲಿ ನಿ*ಧನ! appeared first on Good News 24x7.

]]>

ಉಪ್ಪಾರ‌ ಸಮುದಾಯದ ವಿದ್ಯಾರ್ಥಿಗಳಿಗೆ ಸ್ಪೂರ್ತಿಸೆಲೆಯಾಗಿದ್ದ, ಜನರ ನೆಚ್ಚಿನ ಪ್ರಸೂತಿ ವೈದ್ಯರಾಗಿ ಜನಮನ್ನಣೆ ಗಳಿಸಿದ್ದ ಡಾ. ಗೌತಮಿ ಅಪಘಾತದಲ್ಲಿ ನಿಧನರಾಗಿದ್ದು ಸಮುದಾಯಕ್ಕೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಭರಿಸಲಾಗದ ನಷ್ಠ, ದುಃಖ ಉಂಟಾಗಿದೆ.‌

ಮೈಸೂರು ಕೆ.ಆರ್.ಆಸ್ಪತ್ರೆ ಮತ್ತು ಮಂಡ್ಯ ಆಸ್ಪತ್ರೆಯಲ್ಲಿ ಪ್ರಸೂತಿ ವೈದ್ಯರಾಗಿ ಉತ್ತಮ ಕಾರ್ಯ ನಿರ್ವಹಣೆಯಿಂದ ಜನಪ್ರಿಯರಾಗಿದ್ದ ಮೈಸೂರಿನ ಮೇಟಗಳ್ಳಿ ಶ್ರೀಮತಿ ಮಂಜುಳಾ ಮತ್ತು‌ ನಾಗರಾಜು ದಂಪತಿ ಪುತ್ರಿ ಡಾ.ಗೌತಮಿ ಅವರು 5 ವರ್ಷದ ವೈದ್ಯಕೀಯ ಸೇವೆ ಬಳಿಕ ಆಂದ್ರಪ್ರದೇಶದ ವಿಶಾಖಪಟ್ಟಣಂ ನಲ್ಲಿ ಎಂಎಸ್ ಮುಗಿಸಿ ಒಂದು ತಿಂಗಳ‌ ತರಬೇತಿ ಹಂತದಲ್ಲಿದ್ದರು.

ಕೆಲವೇ ದಿನಗಳಲ್ಲಿ ಎಂಡಿ ಮಾಡಲು ವಿದೇಶಕ್ಕೆ ತೆರಳುವವರಿದ್ದರು.‌ಆದರೆ, ದಿನಾಂಕ 5-5-2026 ಮಂಗಳವಾರ ರಾತ್ರಿ ಸ್ಕೂಟರ್ ನಿಂದ‌ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಿಧನರಾಗಿದ್ದಾರೆ. ಡಾ.ಗೌತಮಿ ಅವರ ನಿಧನ ಆರೋಗ್ಯ ಕ್ಷೇತ್ರಕ್ಕೆ, ಸಮುದಾಯಕ್ಕೆ‌ ತುಂಬಲಾರದ ನಷ್ಟವಾಗಿದೆ. ಭಗವಂತನು ಮೃತರ ಆತ್ಮಕ್ಕೆ ಶಾಂತಿ ಕರುಣಿಸಿ, ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತದೆ.

The post ಉಪ್ಪಾರ ಸಮಾಜದ ವೈದ್ಯೆ ಅಪಘಾತದಲ್ಲಿ ನಿ*ಧನ! appeared first on Good News 24x7.

]]>
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ! https://www.goodnews24x7.com/9383-2karnataka-sslc-result-2026-students-set-records-7-students-get-full-marks/ Thu, 23 Apr 2026 09:40:03 +0000 https://www.goodnews24x7.com/?p=9383 ಬೆಂಗಳೂರು, ಏಪ್ರಿಲ್ 23: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರದಿಂದ ಕಾಯುತ್ತಿದ್ದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (ಪರೀಕ್ಷೆ-1) ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಪರೀಕ್ಷೆಯಲ್ಲಿ ಹಲವು ಹೊಸ ದಾಖಲೆಗಳು ನಿರ್ಮಾಣವಾಗಿದ್ದು, ಒಟ್ಟು ಏಳು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸುವ…

The post ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ! appeared first on Good News 24x7.

]]>

ಬೆಂಗಳೂರು, ಏಪ್ರಿಲ್ 23: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರದಿಂದ ಕಾಯುತ್ತಿದ್ದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (ಪರೀಕ್ಷೆ-1) ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಪರೀಕ್ಷೆಯಲ್ಲಿ ಹಲವು ಹೊಸ ದಾಖಲೆಗಳು ನಿರ್ಮಾಣವಾಗಿದ್ದು, ಒಟ್ಟು ಏಳು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಟಾಪ್‌ 7 ಸಾಧಕರು:
ದಾವಣಗೆರೆಯ ಭರತ್‌, ರಾಯಚೂರಿನ ಸುಖದೇವ್, ಚಿಕ್ಕೋಡಿಯ ಪ್ರಾರ್ಥನಾ, ಚಿಕ್ಕಮಗಳೂರಿನ ಬೃಂದಾ, ಉಡುಪಿಯ ಪ್ರೀತಂ, ವಿಜಯಪುರದ ಸೌಜನ್ಯ ಹಾಗೂ ಬೆಂಗಳೂರು ಉತ್ತರದ ಧನುಷ್‌ ಅವರು ‘ಔಟ್ ಆಫ್ ಔಟ್’ ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.

ಜಿಲ್ಲಾವಾರು ಸಾಧನೆ (ಟಾಪ್ 5):
ಫಲಿತಾಂಶದಲ್ಲಿ ಕರಾವಳಿ ಜಿಲ್ಲೆಗಳ ಪ್ರಾಬಲ್ಯ ಮುಂದುವರಿದಿದ್ದು, ದಕ್ಷಿಣ ಕನ್ನಡ ಜಿಲ್ಲೆಯು ಮೊದಲ ಸ್ಥಾನ ಅಲಂಕರಿಸಿದೆ.

ದಕ್ಷಿಣ ಕನ್ನಡ: ಶೇ. 98.40

ಉಡುಪಿ: ಶೇ. 98.18

ಉತ್ತರ ಕನ್ನಡ: ಶೇ. 98.02

ಹಾಸನ: ಶೇ. 97.51

ಮಂಡ್ಯ: ಶೇ. 97.40

ಗ್ರಾಮೀಣ ಹಾಗೂ ಕಲ್ಯಾಣ ಕರ್ನಾಟಕದ ಪ್ರಗತಿ:
ನಗರ ಪ್ರದೇಶದ ವಿದ್ಯಾರ್ಥಿಗಳಿಗಿಂತ ಗ್ರಾಮೀಣ ಭಾಗದ ಮಕ್ಕಳೇ ಈ ಬಾರಿ ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಶೇ. 92ರಷ್ಟು ಫಲಿತಾಂಶ ದಾಖಲಾಗಿದ್ದರೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೇ. 91ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಗಣನೀಯ ಪ್ರಗತಿ ಕಂಡುಬಂದಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಡಿಜಿಲಾಕರ್‌ನಲ್ಲಿ ಅಂಕಪಟ್ಟಿ ಲಭ್ಯ:
ಶಿಕ್ಷಣ ಮಂಡಳಿಯು ಈ ಬಾರಿ ವಿಶೇಷ ಕ್ರಮ ಕೈಗೊಂಡಿದ್ದು, ಫಲಿತಾಂಶ ಪ್ರಕಟವಾದ ತಕ್ಷಣವೇ ವಿದ್ಯಾರ್ಥಿಗಳ ಅಧಿಕೃತ ಅಂಕಪಟ್ಟಿಗಳನ್ನು ‘ಡಿಜಿಲಾಕರ್’ (DigiLocker) ನಲ್ಲಿ ಲಭ್ಯವಾಗುವಂತೆ ಮಾಡಿದೆ. ವಿದ್ಯಾರ್ಥಿಗಳು digilocker.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ದಾಖಲೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ತೃತೀಯ ಭಾಷೆ: ಗ್ರೇಡ್ ಬದಲಿಗೆ ಅಂಕ:
ಈ ವರ್ಷದಿಂದ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಗ್ರೇಡ್ ನೀಡಲು ಇಲಾಖೆ ನಿರ್ಧರಿಸಿತ್ತು. ಆದರೆ, ಹೈಕೋರ್ಟ್ ಆದೇಶದಂತೆ ಈ ನಿರ್ಧಾರವನ್ನು ಕೈಬಿಟ್ಟು, ಎಂದಿನಂತೆ ಅಂಕಗಳನ್ನೇ ನೀಡಲಾಗಿದೆ. ಹೀಗಾಗಿ ಒಟ್ಟು 625 ಅಂಕಗಳಿಗೆ ಫಲಿತಾಂಶ ಪ್ರಕಟವಾಗಿದ್ದು, ತೃತೀಯ ಭಾಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ.

The post ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ! appeared first on Good News 24x7.

]]>
ಶಾಲಾ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳಿಗೆ ಮಿತಿ: ಡಿಜಿಟಲ್ ಬಳಕೆ ಕರಡು ನೀತಿ ಪ್ರಕಟ, ದಿನಕ್ಕೆ 1 ಗಂಟೆ ಮಾತ್ರ ಮೊಬೈಲ್ ಬಳಕೆ ಶಿಫಾರಸು. https://www.goodnews24x7.com/limit-social-media-usage-for-school-children-draft-policy-on-digital-usage-released-recommends-only-1-hour-of-mobile-usage-per-day/ Tue, 24 Mar 2026 13:30:40 +0000 https://www.goodnews24x7.com/?p=8979 ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಅವಲಂಬನೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟು, ಜವಾಬ್ದಾರಿಯುತ ಡಿಜಿಟಲ್ ಬಳಕೆಗೆ ಸಂಬಂಧಿಸಿದ ಕರಡು ನೀತಿಯನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಘೋಷಣೆಯ ಅನಂತರ ರೂಪುಗೊಂಡ ಈ ನೀತಿ, 16 ವರ್ಷದೊಳಗಿನ…

The post ಶಾಲಾ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳಿಗೆ ಮಿತಿ: ಡಿಜಿಟಲ್ ಬಳಕೆ ಕರಡು ನೀತಿ ಪ್ರಕಟ, ದಿನಕ್ಕೆ 1 ಗಂಟೆ ಮಾತ್ರ ಮೊಬೈಲ್ ಬಳಕೆ ಶಿಫಾರಸು. appeared first on Good News 24x7.

]]>

ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಅವಲಂಬನೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟು, ಜವಾಬ್ದಾರಿಯುತ ಡಿಜಿಟಲ್ ಬಳಕೆಗೆ ಸಂಬಂಧಿಸಿದ ಕರಡು ನೀತಿಯನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಘೋಷಣೆಯ ಅನಂತರ ರೂಪುಗೊಂಡ ಈ ನೀತಿ, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ ಸೇರಿದಂತೆ ಹಲವು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಸೂಚಿಸುತ್ತದೆ.

ಕರಡು ನೀತಿ ಪ್ರಕಾರ, ಶಾಲಾ ಕೆಲಸ ಹೊರತುಪಡಿಸಿ ವಿದ್ಯಾರ್ಥಿಗಳು ದಿನಕ್ಕೆ ಗರಿಷ್ಠ 1 ಗಂಟೆ ಮಾತ್ರ ಮೊಬೈಲ್ ಬಳಸಬೇಕು ಎಂದು ಶಿಫಾರಸು ಮಾಡಲಾಗಿದೆ. ನಿದ್ರೆಗೆ ಒಂದು ಗಂಟೆ ಮೊದಲು ಎಲ್ಲಾ ಡಿಜಿಟಲ್ ಸಾಧನಗಳನ್ನು ನಿಲ್ಲಿಸುವ ‘ಟೆಕ್ ಕರ್ಫ್ಯೂ’ ಜಾರಿಗೊಳಿಸುವುದಕ್ಕೂ ಸೂಚನೆ ನೀಡಲಾಗಿದೆ. ಪ್ರತಿ ಶಾಲೆಯೂ ತನ್ನದೇ ಡಿಜಿಟಲ್ ಬಳಕೆ ನೀತಿಯನ್ನು ರೂಪಿಸಿ, ಡಿಜಿಟಲ್ ವೆಲ್ನೆಸ್ ಸಮಿತಿ ಸ್ಥಾಪಿಸುವುದು ಕಡ್ಡಾಯವಾಗಲಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಿಮ್ಹಾನ್ಸ್, ಶಿಕ್ಷಣ ಇಲಾಖೆ ಹಾಗೂ ತಜ್ಞರ ಸಹಭಾಗಿತ್ವದಲ್ಲಿ ರೂಪುಗೊಂಡ ಈ ನೀತಿ, ಸೈಬರ್ ಬುಲಿಯಿಂಗ್ ತಡೆ, ಸುರಕ್ಷಿತ ಡಿಜಿಟಲ್ ಬಳಕೆ, ಶಿಕ್ಷಕರ ತರಬೇತಿ ಮತ್ತು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ರಕ್ಷಣೆಗೆ ವಿಶೇಷ ಒತ್ತು ನೀಡುತ್ತದೆ. ಜೊತೆಗೆ, ಪೋಷಕರಿಗೂ ಮಕ್ಕಳ ಡಿಜಿಟಲ್ ಚಟುವಟಿಕೆಗಳ ಮೇಲ್ವಿಚಾರಣೆ ಮತ್ತು ಆಫ್‌ಲೈನ್ ಚಟುವಟಿಕೆಗಳನ್ನು ಉತ್ತೇಜಿಸುವ ಜವಾಬ್ದಾರಿ ನೀಡಲಾಗಿದೆ.

The post ಶಾಲಾ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳಿಗೆ ಮಿತಿ: ಡಿಜಿಟಲ್ ಬಳಕೆ ಕರಡು ನೀತಿ ಪ್ರಕಟ, ದಿನಕ್ಕೆ 1 ಗಂಟೆ ಮಾತ್ರ ಮೊಬೈಲ್ ಬಳಕೆ ಶಿಫಾರಸು. appeared first on Good News 24x7.

]]>
SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್ ನೀಡಿದ ಸರ್ಕಾರ! https://www.goodnews24x7.com/government-gives-good-news-to-students-writing-sslc-examsgovernment-gives-good-news-to-students-writing-sslc-exams/ Mon, 16 Mar 2026 12:02:18 +0000 https://www.goodnews24x7.com/?p=8905   2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಇದೇ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದ್ದು, ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ ಸಜ್ಜಾಗುತ್ತಿದ್ದಾರೆ. ಇನ್ನು ವಿದ್ಯಾರ್ಥಿಗಳ ಪರೀಕ್ಷಾ ಪ್ರಯಾಣವನ್ನು ಸುಗಮಗೊಳಿಸಲು ಕೆಎಸ್​​ಆರ್​​ಟಿಸಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪರೀಕ್ಷಾ…

The post SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್ ನೀಡಿದ ಸರ್ಕಾರ! appeared first on Good News 24x7.

]]>

 

2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಇದೇ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದ್ದು, ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ ಸಜ್ಜಾಗುತ್ತಿದ್ದಾರೆ. ಇನ್ನು ವಿದ್ಯಾರ್ಥಿಗಳ ಪರೀಕ್ಷಾ ಪ್ರಯಾಣವನ್ನು ಸುಗಮಗೊಳಿಸಲು ಕೆಎಸ್​​ಆರ್​​ಟಿಸಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಘೋಷಿಸಿದೆ.
ಎಸ್​​ಎಸ್​ಎಲ್​ಸಿ ವಾರ್ಷಿಕ ಪರೀಕ್ಷೆಗೆ ದಿನಗಣನೆ ಆರಂಭವಾಗಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್​​​​​ಆರ್​​​ಟಿಸಿ ಉಚಿತ ಪ್ರಯಾಣ ಘೋಷಿಸಿದೆ. ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಘೋಷಿಸಿದೆ. ಹೌದು.. ಎಸ್​​ಎಸ್​​ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಲ್‌ ಟಿಕೆಟ್‌ ತೋರಿಸಿ, ನಿವಾಸದಿಂದ ಪರೀಕ್ಷಾ ಕೇಂದ್ರದವರೆಗೆ ಕೆಎಸ್​ಆರ್​​ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ಪರೀಕ್ಷೆಗಳು ನಡೆಯಲಿದೆ. ಪರೀಕ್ಷೆ ಬರೆಯಬೇಕಾದರೆ ಹಾಲ್ ಟಿಕೆಟ್ ಅವಶ್ಯವಾಗಿದೆ. ಅದೇ ರೀತಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಬಸ್ ಕಂಡೆಕ್ಟರ್​ಗೆ ಹಾಲ್ ಟಿಕೆಟ್ ತೋರಿಸಿದರಷ್ಟೇ ಉಚಿತವಾಗಿ ಪ್ರಯಾಣಿಸುವ ಅವಕಾಶ ಸಿಗಲಿದೆ. ಹೀಗಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮರೆಯದೆ ಹಾಲ್ ಟಿಕೆಟ್ ತೆಗೆದುಕೊಂಡು ಹೋಗಿ.ಬೆಂಗಳೂರಿನ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಮಾರ್ಚ್ 18ರಿಂದ ಆರಂಭಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ.

ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ದಿನಾಂಕ: 18-03-2026 ರಿಂದ 02-04-2026 ರವರೆಗೆ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1 ಅನ್ನು ಬೆಂಗಳೂರು ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸುವಂತೆ ಹಾಗೂ ನಿಷೇಧಿತ ಪ್ರದೇಶದಲ್ಲಿ ಜೆರಾಕ್ಸ್ / ಸೈಬರ್/ ಕಂಪ್ಯೂಟರ್ ಸೆಂಟರ್‌ಗಳನ್ನು ಮುಚ್ಚುವಂತೆ ಕೋರಲಾಗಿರುತ್ತದೆ ಎಂದಿದ್ದಾರೆ.

ಈ ವಿಷಯದ ಬಗ್ಗೆ ನಾನು ಖುದ್ದಾಗಿ ಮಾಡಿದ ವಿಚಾರಣೆಯಿಂದ ಮತ್ತು ಗುಪ್ತವಾರ್ತಾ ವರದಿಯಿಂದ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಅನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶಕ್ಕೆ ಅನ್ವಯಿಸುವಂತೆ ನಿಷೇಧಾಜ್ಞೆ ಹೊರಡಿಸುವುದು ಅಗತ್ಯವಿರುವುದನ್ನು ಮನಗಂಡಿರುತ್ತೇನೆ ಎಂದು ತಿಳಿಸಿದ್ದಾರೆ.

The post SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್ ನೀಡಿದ ಸರ್ಕಾರ! appeared first on Good News 24x7.

]]>
ಪೊಲೀಸ್ ಇಲಾಖೆಯ ದಕ್ಷತೆಯಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ: ಸಿ.ಎಂ https://www.goodnews24x7.com/the-efficiency-of-the-police-department-gives-the-government-a-good-name-cm/ Tue, 28 Oct 2025 09:52:57 +0000 https://www.goodnews24x7.com/?p=7908 ಬೆಂಗಳೂರು : ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್…

The post ಪೊಲೀಸ್ ಇಲಾಖೆಯ ದಕ್ಷತೆಯಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ: ಸಿ.ಎಂ appeared first on Good News 24x7.

]]>

ಬೆಂಗಳೂರು : ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಸ್ಥಾನದಲ್ಲಿದೆ: ಸಿ.ಎಂ ಅಪಾರ ಮೆಚ್ಚುಗೆ. ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ಕಾರ್ಯಯೋಜನೆ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.ನಮ್ಮ ಯುವ ಶಕ್ತಿ, ವಿದ್ಯಾರ್ಥಿ ಯುವಜನರ ಚೈತನ್ಯ ಮತ್ತು ಸಾಮರ್ಥ್ಯ ಮಾದಕ ವಸ್ತುಗಳಿಂದ ಬಲಿ ಆಗಬಾರದು. ಇದಕ್ಕೆ ಪೊಲೀಸ್ ಇಲಾಖೆ ಕಟಿಬದ್ದ ನಿಲುವು ತಳೆಯಬೇಕು ಎಂದರು.ಮಂಗಳೂರು ಹತೋಟಿಗೆ ಬಂದಿದ್ದು ನಮ್ಮ ಅಧಿಕಾರಿಗಳಿಂದಲೇ: ಸಿಎಂ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಘರ್ಷಣೆ, ಅನೈತಿಕ ಪೊಲೀಸ್ ಗಿರಿ ಹೆಚ್ಚಾಗಿತ್ತು. ಹಿಂದಿದ್ದ ಅಧಿಕಾರಿಗಳು ನಿಯಂತ್ರಣ ಮಾಡಲಿಲ್ಲ. ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಈಗ ದಕ್ಷಿಣ ಕನ್ನಡ ಜಿಲ್ಲೆ ನಿಯಂತ್ರಣದಲ್ಲಿದೆ. ಈ ಸಾಧನೆ ಮಾಡಿದ್ದೂ ನಮ್ಮದೇ ಅಧಿಕಾರಿಗಳು ಮತ್ತು ಸಿಬ್ಬಂದಿ. ಇವರೇನು ಬೇರೆ ಗ್ರಹದಿಂದ ಬಂದವರಲ್ಲ. ನಿಮ್ಮವರೇ, ನಮ್ಮವರೇ ಆಗಿದ್ದಾರೆ. ಆದ್ದರಿಂದ ನೀವು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯವಿದೆ. ಸಾಧಿಸಿ ತೋರಿಸಿ ಎಂದು ಕರೆ ನೀಡಿದರು.

ಇದೇ ರೀತಿ ಇಡೀ ರಾಜ್ಯದಲ್ಲಿ ಮಾದಕ ವಸ್ತು ಹಾವಳಿ ತಪ್ಪಿಸಲು ನಿಮ್ಮಿಂದ ಸಾಧ್ಯವಿದೆ. ನೀವು ಸಾಧ್ಯ ಮಾಡಿದರೆ ಕರ್ನಾಟಕ ಪೊಲೀಸ್ ಘನತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಾಗುತ್ತದೆ ಎಂದರು. ಕೆಲವು ಪೊಲೀಸರು ರಿಯಲ್ ಎಸ್ಟೇಟ್ ಮಾಡುವವರ ಜೊತೆ, ಡ್ರಗ್ ಜಾಲದ ಜೊತೆ ಶಾಮೀಲಾಗಿರ್ತಾರೆ. ರೌಡಿಗಳನ್ನು ಮೊಳಕೆಯಲ್ಲೆ ಚಿವುಟಿ ಹಾಕುವುದು ನಿಮ್ಮಿಂದ ಸಾಧ್ಯವಿದೆ. ಪೊಲೀಸರ ಬಗ್ಗೆ ಅಪರಾಧ ಜಗತ್ತಿಗೆ ಭಯ ಕಡಿಮೆಯಾಗಿದೆ. ಯಾಕೆ ಹೀಗಾಯ್ತು ಎಂದು ನಿಮ್ಮನ್ನು ನೀವೇ ಪ್ರಶ್ನಿಸಿಕೊಂಡರೆ ಉತ್ತರ ನಿಮಗೇ ಗೊತ್ತಿರುತ್ತದೆ ಎಂದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಆತ್ಮಸಾಕ್ಷಿಯನ್ನು ಕೆದಕಿದರು.

ಡ್ರಗ್ ಮಾರುವವರು, ತರುವವರು, ಎಲ್ಲಿಂದ ಡ್ರಗ್ಸ್ ಬರುತ್ತದೆ, ಈ ಜಾಲದ ಏಜೆಂಟರು ಯಾರ್ಯಾರು ಎನ್ನುವುದೂ ನಿಮಗೇ ಗೊತ್ತಿರುತ್ತದೆ. ಆದಷ್ಟು ಬೇಗ ರಾಜ್ಯ, “ಡ್ರಗ್ ಮುಕ್ತ ಕರ್ನಾಟಕ” ಆಗಲಿ, ಮಾಡಿ ತೋರಿಸಿ ಎಂದು ಕರೆ ನೀಡಿದರು. ಇಂದು ನಾನೇ ಬಿಡುಗಡೆ ಮಾಡಿದ ಪೀಕ್ ಕ್ಯಾಪ್ ಮಾದರಿಯನ್ನೂ ಆಯ್ಕೆ ಮಾಡಿದ್ದು ನಾನೇ. 1956 ರಿಂದ ಸುಮಾರು 70 ವರ್ಷಗಳಿಂದ ಇದ್ದ ಒಂದೇ ಮಾದರಿಯ ಕ್ಯಾಪ್ ಅನ್ನು ಇಂದು ಬದಲಾಯಿಸಿದ್ದೇವೆ. ಅಧಿಕಾರಿ ಮತ್ತು ಸಿಬ್ಬಂದಿಗೆ ಒಂದೇ ಮಾದರಿ ಕ್ಯಾಪ್ ಒದಗಿಸಲಾಗಿದ್ದು ಇದರಿಂದ ನಿಮ್ಮ ಆತ್ಮ ವಿಶ್ವಾಸ ಹೆಚ್ಚಾಗಲಿ ಎಂದು ಕರೆ ನೀಡಿದರು.

ಕೇವಲ ಕ್ಯಾಪ್ ಬದಲಾಗುವುದಲ್ಲ. ನಿಮ್ಮ ಕಾರ್ಯಕ್ಷಮತೆಯೂ ಬದಲಾಗಲಿ ಎಂದು ಕರೆ ನೀಡಿದರು. ಪೊಲೀಸ್ ಇಲಾಖೆಯ ದಕ್ಷತೆಯಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ. ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಸ್ಥಾನದಲ್ಲಿದೆ ಎನ್ನುವ ವರದಿ ರಾಜ್ಯದ ಘನತೆ ಹೆಚ್ಚಿಸಿದೆ ಎಂದು ಸಿ.ಎಂ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.

The post ಪೊಲೀಸ್ ಇಲಾಖೆಯ ದಕ್ಷತೆಯಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ: ಸಿ.ಎಂ appeared first on Good News 24x7.

]]>
ದೇಶದ ಭವಿಷ್ಯ ನಿರೂಪಿಸುವ ಹೊಣೆ ಶಿಕ್ಷಕರದ್ದು: ಶಾಸಕ ಜಿಟಿಡ https://www.goodnews24x7.com/teachers-are-responsible-for-shaping-the-future-of-the-country-mla-gtd/ Sat, 13 Sep 2025 11:51:33 +0000 https://www.goodnews24x7.com/?p=7509 ಮೈಸೂರು: ಪ್ರಸ್ತುತ ದಿನಗಳಲ್ಲಿ ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಮೊಬೈಲ್ ಸಂಸ್ಕೃತಿಯನ್ನು ದೂರ ಮಾಡಿಸುವ ಜತೆಗೆ,ದೇಶದ ಭವಿಷ್ಯವನ್ನು ನಿರ್ಮಿಸುವ ಮಕ್ಕಳನ್ನುತಯಾರು ಮಾಡುವ ಹೊಣೆ ಶಿಕ್ಷಕರದ್ದಾಗಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು.ಹೂಟಗಳ್ಳಿ ಸರಸ್ವತಿ ಕನ್ವೆನ್ಷನ್ ಹಾಲ್‌ನಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ಅವರ ಜನ್ಮ ದಿನಚರಣೆ ಅಂಗವಾಗಿ…

The post ದೇಶದ ಭವಿಷ್ಯ ನಿರೂಪಿಸುವ ಹೊಣೆ ಶಿಕ್ಷಕರದ್ದು: ಶಾಸಕ ಜಿಟಿಡ appeared first on Good News 24x7.

]]>

ಮೈಸೂರು: ಪ್ರಸ್ತುತ ದಿನಗಳಲ್ಲಿ ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಮೊಬೈಲ್ ಸಂಸ್ಕೃತಿಯನ್ನು ದೂರ ಮಾಡಿಸುವ ಜತೆಗೆ,ದೇಶದ ಭವಿಷ್ಯವನ್ನು ನಿರ್ಮಿಸುವ ಮಕ್ಕಳನ್ನುತಯಾರು ಮಾಡುವ ಹೊಣೆ ಶಿಕ್ಷಕರದ್ದಾಗಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು.ಹೂಟಗಳ್ಳಿ ಸರಸ್ವತಿ ಕನ್ವೆನ್ಷನ್ ಹಾಲ್‌ನಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ಅವರ ಜನ್ಮ ದಿನಚರಣೆ ಅಂಗವಾಗಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಖಾಸಗಿ ಶಾಲೆಗಳಿಗಿಂತಲೂ ಸರ್ಕಾರಿ ಶಾಲೆಗಳಲ್ಲಿ ಫಲಿತಾಂಶ ಬರುತ್ತಿದೆ. ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳು ಇದ್ದಾರೆ.ಅಂತಹವರನ್ನು ಗುರುತಿಸಿ ಹೆಚ್ಚಿನ ಪ್ರೋತ್ಸಾಹ ನೀಡಬೇಕು.

ಸರ್ಕಾರಿ ಶಾಲೆಗಳಲ್ಲೂ ಖಾಸಗಿ ಶಾಲೆಗಳ ಸೌಲಭ್ಯ ಒದಗಿಸುವುದಕ್ಕೆ ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್ ಬಳಕೆ ಮಾಡುವುದು ಹೆಚ್ಚಾಗಿದೆ. ಓದುವ ಮಕ್ಕಳಲ್ಲಿ ಮೊಬೈಲ್ ಬಳಸದಂತೆಹಾಗೂ ಮೊಬೈಲ್ ಸಂಸ್ಕೃತಿಯನ್ನು ದೂರವಿರಿಸಿ ಶಿಕ್ಷಣದ ಕಡೆಗೆ ಗಮನಹರಿಸುವಂತೆ ಮಾಡಬೇಕು. ಪ್ರತಿಭಾವಂತ ಮಕ್ಕಳನ್ನು ತಯಾರು ಮಾಡುವ ಜವಾಬ್ದಾರಿ ಅರಿತು ಕೆಲಸಮಾಡಬೇಕು ಎಂದರು. ಬಡವರ ಮಕ್ಕಳು ಮೆರಿಟ್‌ನಲ್ಲಿ ತೇರ್ಗಡೆ ಹೊಂದುವಂತೆ ಮಾಡಬೇಕು. ಬಡವರ ಮಕ್ಕಳಿಗೆ ಶಿಕ್ಷಣಕೊಡಿಸುವ ಅವಕಾಶವನ್ನು ದೇವರು ಕಲ್ಪಿಸಿದ್ದಾನೆ. ಸಂಬಳಕ್ಕಾಗಿ ಕೆಲಸ ಮಾಡದೆ ನಿಸ್ವಾರ್ಥ ಸೇವೆಯನ್ನು ಇಟ್ಟುಕೊಂಡುಕೆಲಸಮಾಡಬೇಕಿದೆ.ನಮ್ಮ ತಂದೆ ಬಡವರು. ಹಸು ಸಾಕಲು ಊರಿನ ಹೊರಗೆ ಹುಲ್ಲು ತರುತ್ತಿದ್ದೆ. ಕುಟುಂಬದ ಹೊಣೆ ಹೊತ್ತು ಹಗಲುರಾತ್ರಿ ಕೆಲಸ ಮಾಡಿದ್ದೇನೆ. ಸೊಸೈಟಿಯಲ್ಲಿ ಅಕ್ಕಿ ಅಳೆಯುತ್ತಿದ್ದೆ. ಅಲ್ಲಿಯೇ ಮಲಗಿ ಜನರ ಸಂಪಾದನೆ ಮಾಡಿದೆ. ನಂತರ,ಸಹಕಾರ ಕ್ಷೇತ್ರದಿಂದ ಮೇಲಕ್ಕೆ ಬಂದಿದ್ದೇನೆ ಎಂದರು. ಸರ್ಕಾರಿ ಶಾಲೆಗಳ ಮುಖ್ಯಶಿಕ್ಷಕರು ತಮ್ಮ ಶಾಲೆಯನ್ನು ಹದ್ದುಬಸ್ತಿನಲ್ಲಿಡಬೇಕು. ಶೌಚಾಲಯ,ಕುಡಿಯುವ ನೀರಿನ ಗಮನಹರಿಸಬೇಕು.ಕೆಲವು ಗ್ರಾಮಗಳ ಶಾಲೆಗಳಲ್ಲಿ ಕಸ ಕ್ಲೀನ್ ಮಾಡದೆ ಕೆಲವು ಕಡೆ ಹಾಗೆಯೇ ಬಿದ್ದಿರುತ್ತದೆ. ಬರೀ ಪಾಠ ಮಾಡುವುದಕ್ಕೆ ಮಾತ್ರಮುಖ್ಯ ಶಿಕ್ಷಕರ ಕೆಲಸವಲ್ಲ. ಶಾಲೆಯನ್ನು ತಮ್ಮ ಮನೆಯಂತೆ ಜವಾಬ್ದಾರಿಯಿಂದ ಗಮನಿಸಬೇಕು. ಶಾಲೆಗಳ ಸರ್ವೆ ಮಾಡಿ ಹಕ್ಕುಪತ್ರ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಭ್ರಷ್ಟಾಚಾರರಹಿತ ಕ್ಷೇತ್ರ: ಸಮಾಜದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಭ್ರಷ್ಟಾಚಾರ ಇಲ್ಲದೆ ನಡೆಯುತ್ತಿರುವ ಕ್ಷೇತ್ರ ಇದ್ದರೆ ಅದು ಶಿಕ್ಷಕರ ಕ್ಷೇತ್ರವಾಗಿದೆ. ಸೇವಾ ಮನೋಭಾವ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿದ್ದಾರೆ ಎನ್ನುವುದಾದರೇ ಅದು ಶಿಕ್ಷಕರು ಮಾತ್ರ ಎಂದು ಬಣ್ಣಿಸಿದರು. ಡಾ.ರಾಧಾಕೃಷ್ಣನ್ ಅವರ ಬಗ್ಗೆ ಹೇಳಬೇಕಿಲ್ಲ. ದೇಶದಲ್ಲೇ ತತ್ವಜ್ಞಾನಿ,ದೊಡ್ಡ ಮೇಧಾವಿಯಾಗಿದ್ದರು. ಒಬ್ಬ ಶಿಕ್ಷಕರೊಬ್ಬರು ಏನೆಲ್ಲಾ ಪದವಿಗಳನ್ನು ಪಡೆಯಬಹುದು ಎಂಬುದಕ್ಕೆ ಅವರೇ ಉದಾಹರಣೆಯಾಗಿದ್ದಾರೆ. ಶಿಕ್ಷಕರು ದೇಶದ ಭವಿಷ್ಯವನ್ನು ನಿರ್ಮಿಸುವ ಹೊಣೆ ಹೊಂದಿದ್ದಾರೆ. ಶಿಕ್ಷಕರ ದಿನಾಚರಣೆತ ದಿನದಂದು ಪ್ರಧಾನಮಂತ್ರಿಗಳು,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಶಿಕ್ಷಕರನ್ನುನೆನಪಿಸಿಕೊಂಡರು. ನಡಿಗೆ ಮೂಲಕ ಶಿಕ್ಷಕರು ಮಕ್ಕಳಿಗೆ ಪಾಠ ಮಾಡಿ ಬರುತ್ತಿದ್ದರು. ಈಗ ರಸ್ತೆ,ಬಸ್ ವ್ಯವಸ್ಥೆ ಮಾಡಿಕೊಡಲಾಗಿದೆ. ಶಿಕ್ಷಣ,ಕಲೆ,ಸಾಹಿತ್ಯ,ಸಂಗೀತ,ಯೋಗ,ಧ್ಯಾನ ಕಲಿಸಬೇಕು ಎಂದರು. ದಲಿತ ಮಹಿಳೆ ಸಾವಿತ್ರಿಬಾಪುಲೆ ಅವರು ಶಾಲೆಯನ್ನು ತೆರೆದು ಮಕ್ಕಳಿಗೆ ಶಿಕ್ಷಣ ಕೊಡಿಸಲು ಶ್ರಮಿಸಿದರು. ಮೊದಲ ಶಿಕ್ಷಕಿಯಾಗಿ ಕೆಲಸ ಮಾಡಿದ ಸಾವಿತ್ರಿಬಾಪುಲೆ ಅವರ ತತ್ವ,ಸಿದ್ಧಾಂತಗಳನ್ನು ಅಳವಡಿಸಿಕೊಂಡು ಸಾಗಬೇಕು. ಕಲಿಸು ಫೌಂಡೇಷನ್‌ನಿಂದ ೨೦ ಲಕ್ಷ, ಕೆನರಾ ಬ್ಯಾಂಕ್‌ನಿಂದ ೧ ಕೋಟಿ, ಟಿವಿಎಸ್,ಐಟಿಸಿ ಕಂಪೆನಿ,ಸಾಯಿ ಗಾರ್ಮೆಂಟ್ಸ್, ಜೆ.ಕೆ.ಟೈರ್ಸ್‌ ಸೇರಿದಂತೆ ಅನೇಕ ಕಂಪನಿಗಳು,ಕಾರ್ಖಾನೆಯವರು ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಸ್ಮಾರ್ಟ್‌ಕ್ಲಾಸ್ ಕೊಠಡಿಗಳನ್ನು ನಿರ್ಮಿಸಿಕೊಟ್ಟಿದ್ದಾರೆ ಶಿಕ್ಷಕರು ತುಂಬಾ ಸಂತೋಷದಿಂದ ಬಂದಿದ್ದಾರೆ. ಗುರುಗಳ ಸ್ಥಾನದಲ್ಲಿ ಇರುವ ಶಿಕ್ಷಕರು ಉತ್ತಮ ಪ್ರಜೆಗಳನ್ನರೂಪಿಸಬೇಕು. ಶಿಸ್ತನ್ನುಕಾಪಾಡಿಕೊಳ್ಳಬೇಕು. ಶಾಲೆಗಳಿಗೆ ಬೇಕಾದ ಕೊಠಡಿಗಳು,ಕುಡಿಯುವ ನೀರು,ಶೌಚಾಲಯ ಇಲ್ಲವೆಂದರೆ ಕಟ್ಟಿಸಿಕೊಡುವ ಶ್ರೀಮಂತರು ಇಲ್ಲೇ ಕುಳಿತಿದ್ದಾರೆ.ಆದರೆ,ಶಿಕ್ಷಕರು ಪದೇ ಪದೇ ಎದ್ದು ಹೋಗಿ ಮಾಡುವುದು ಸರಿಯಲ್ಲ. ಶಿಕ್ಷಕರೇ ಶಿಸ್ತು ಕಲಿಯದಿದ್ದರೆ ಬೇರೆಯವರಿಗೆ ಹೇಗೆ ಕಲಿಸಲು ಸಾಧ್ಯವಿದೆ ಎಂದು ಬೇಸರಿಸಿದರು. ಇಂದು ಇರುವ ಜಮೀನುಗಳನ್ನುಮಾರಾಟ ಮಾಡಿ ಮದುವೆ ಮಾಡುವುದು ಹೆಚ್ಚಾಗುತ್ತಿದೆ.

ಶಿಕ್ಷಕರು ಸರಳ ವಿವಾಹದ ಬಗ್ಗೆ ಅರಿವು ಮೂಡಿಸಬೇಕು. ಸಮಾಜವನ್ನು ಬದಲಿಸುವ ಕೆಲಸ ಮಾಡಬೇಕು. ನಾನೇನನ್ನ ಮಗ,ಇಬ್ಬರು ಹೆಣ್ಣು ಮಕ್ಕಳಿಗೆ ತಿರುಪತಿಯಲ್ಲಿ, ತಮ್ಮನ ಮಗನ ಮದುವೆಯನ್ನು ಧರ್ಮಸ್ಥಳದಲ್ಲಿ ಮದುವೆ ಮಾಡಿದ್ದೇನೆ. ಹಾಗಾಗಿ, ಹೆಣ್ಣು ಮಕ್ಕಳಿಗೆ ಸರಳ ವಿವಾಹ ಮಾಡಿ ಅವರ ಹೆಸರಿನಲ್ಲಿ ಜಮೀನು ಬರೆದುಕೊಡಬೇಕು ಎಂದು ನುಡಿದರು.ಜಿಪಂ ಮಾಜಿ ಸದಸ್ಯೆ ಚಂದ್ರಿಕಾ ಸುರೇಶ್, ತಾಪಂ ಕಾರ್ಯ ನಿರ್ವಹಣಾಧಿಕಾರಿ ಸಿ.ಕೃಷ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾಶ್ ಮತ್ತಿತರರು ಹಾಜರಿದ್ದರು. ಮೈಸೂರಿನ ಹೂಟಗಳ್ಳಿ ಸರಸ್ವತಿ ಕನ್ವೆನ್ಷನ್ ಹಾಲ್‌ನಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ಅವರ ಜನ್ಮ ದಿನಚರಣೆ ಅಂಗವಾಗಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಶಾಸಕ ಜಿ.ಟಿ.ದೇವೇಗೌಡ ಉದ್ಘಾಟಿಸಿದರು..ಜಿಪಂ ಮಾಜಿ ಸದಸ್ಯೆ ಚಂದ್ರಿಕಾ ಸುರೇಶ್, ತಾಪಂ ಕಾರ್ಯ ನಿರ್ವಹಣಾಧಿಕಾರಿ ಸಿ.ಕೃಷ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾ

The post ದೇಶದ ಭವಿಷ್ಯ ನಿರೂಪಿಸುವ ಹೊಣೆ ಶಿಕ್ಷಕರದ್ದು: ಶಾಸಕ ಜಿಟಿಡ appeared first on Good News 24x7.

]]>
ಗದ್ದೆಗೆ ಇಳಿದು ಭತ್ತದ ನಾಟಿಯಲ್ಲಿ ತೊಡಗಿದ ವಿದ್ಯಾರ್ಥಿಗಳು: ಪ್ರಾಯೋಗಿಕ ಅನುಭವದಿಂದ ಕೃಷಿಯ ಅರಿವು. https://www.goodnews24x7.com/students-went-down-to-the-field-and-engaged-in-paddy-planting-knowledge-of-agriculture-through-practical-experience/ Sun, 31 Aug 2025 05:50:10 +0000 https://www.goodnews24x7.com/?p=7106 ನಾಪೋಕ್ಲು: ಹಳೆ ತಾಲೂಕು ಸಮೀಪದ ಅಂಕುರ್ ಪಬ್ಲಿಕ್ ಶಾಲೆಯ ಸೈನ್ಸ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಕೃಷಿಯ ಪ್ರಾಯೋಗಿಕ ಅರಿವು ನೀಡುವ ಉದ್ದೇಶದಿಂದ ಭತ್ತದ ನಾಟಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ, 9ನೇ ತರಗತಿಯ ವಿದ್ಯಾರ್ಥಿಗಳು ಕೊಳಕೇರಿ ಗ್ರಾಮದ ಕೆಟೋಳಿರ ರಾಜಾ…

The post ಗದ್ದೆಗೆ ಇಳಿದು ಭತ್ತದ ನಾಟಿಯಲ್ಲಿ ತೊಡಗಿದ ವಿದ್ಯಾರ್ಥಿಗಳು: ಪ್ರಾಯೋಗಿಕ ಅನುಭವದಿಂದ ಕೃಷಿಯ ಅರಿವು. appeared first on Good News 24x7.

]]>

ನಾಪೋಕ್ಲು: ಹಳೆ ತಾಲೂಕು ಸಮೀಪದ ಅಂಕುರ್ ಪಬ್ಲಿಕ್ ಶಾಲೆಯ ಸೈನ್ಸ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಕೃಷಿಯ ಪ್ರಾಯೋಗಿಕ ಅರಿವು ನೀಡುವ ಉದ್ದೇಶದಿಂದ ಭತ್ತದ ನಾಟಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮದ ಅಂಗವಾಗಿ, 9ನೇ ತರಗತಿಯ ವಿದ್ಯಾರ್ಥಿಗಳು ಕೊಳಕೇರಿ ಗ್ರಾಮದ ಕೆಟೋಳಿರ ರಾಜಾ ಚರ್ಮಣ ಅವರ ಹೊಲದಲ್ಲಿ ಕೆಸರು ಗದ್ದೆಗೆ ಇಳಿದು ನಾಟಿ ನಡೆಸಿದರು. ತಮ್ಮ ಕೈಯಾರೆ ಭತ್ತದ ಅಗೆ ನೆಡುವ ಮೂಲಕ ಕೃಷಿ ಬದುಕಿನ ಮಹತ್ವ, ಶ್ರಮದ ಮೌಲ್ಯ ಮತ್ತು ಅನ್ನದಾತರ ಪರिश್ರಮವನ್ನು ನೇರವಾಗಿ ಅನುಭವಿಸಿದರು.

ಶಾಲೆಯ ಕಾರ್ಯದರ್ಶಿ ರತ್ನಾ ಚರ್ಮಣ ಅವರು ಮಕ್ಕಳೊಂದಿಗೆ ನೇರವಾಗಿ ಭಾಗವಹಿಸಿ, ಭತ್ತದ ಸಸಿ ಎಡೆಯುವುದು, ನಾಟಿ ಮಾಡುವುದು, ಕಳೆ ಕೀಳುವುದು ಹಾಗೂ ಬೆಳೆ ಬೆಳೆಸುವ ವಿಧಾನಗಳ ಬಗ್ಗೆ ಪ್ರಾತ್ಯಕ್ಷತೆ ನೀಡಿದರು. ಕೃಷಿಯ ಮಹತ್ವವನ್ನು ವಿವರಿಸುತ್ತಾ, “ಭೂಮಿಯನ್ನು ಬಂಜರಾಗಿ ಬಿಡದೆ ಉಪಯೋಗಿಸಬೇಕು, ಅದು ನಮ್ಮ ಭವಿಷ್ಯದ ಪಾಲಿಗೆ ಅತಿಮಹತ್ವದ ದಾರಿ” ಎಂದು ವಿದ್ಯಾರ್ಥಿಗಳಿಗೆ ಮನಮಿಡಿಯುವಂತೆ ವಿವರಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕಿಯರಾದ ಶೈಲಾ ನರೇಶ್ ಮತ್ತು ಶೃತಿ ಅವರು ಭತ್ತದ ನಾಟಿಯ ತಂತ್ರ, ವಿಧಾನಗಳು ಹಾಗೂ ಕೃಷಿಯ ಪ್ರಾಮುಖ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಈ ರೀತಿಯ ಕಾರ್ಯಕ್ರಮಗಳು ಶಾಲೆಯ ಪಾಠ್ಯೇತರ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳನ್ನು ಕೃಷಿಯ ಹತ್ತಿರ ತರಲು ಸಹಾಯ ಮಾಡುತ್ತಿದ್ದು, ಪರಿಸರ ಸ್ನೇಹಿ ಶಿಕ್ಷಣದತ್ತ ಒಂದು ಹೆಜ್ಜೆಯೆಂದು ಶಾಲಾ ಆಡಳಿತ ಮಂಡಳಿ ಅಭಿಪ್ರಾಯಪಟ್ಟಿದೆ.

The post ಗದ್ದೆಗೆ ಇಳಿದು ಭತ್ತದ ನಾಟಿಯಲ್ಲಿ ತೊಡಗಿದ ವಿದ್ಯಾರ್ಥಿಗಳು: ಪ್ರಾಯೋಗಿಕ ಅನುಭವದಿಂದ ಕೃಷಿಯ ಅರಿವು. appeared first on Good News 24x7.

]]>