survey Archives - Good News 24x7 https://www.goodnews24x7.com/tag/survey/ Kannada Sat, 18 Oct 2025 11:28:49 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg survey Archives - Good News 24x7 https://www.goodnews24x7.com/tag/survey/ 32 32 ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಶೇ 94.19ರಷ್ಟು ಪ್ರಗತಿ ಸಮೀಕ್ಷೆ: ಮಂಡ್ಯ ಜಿಲ್ಲೆಗೆ 3ನೇ ಸ್ಥಾನ ಗಳಿಸಿದೆ. https://www.goodnews24x7.com/samajika-mattu-saik%e1%b9%a3a%e1%b9%87ika-samik%e1%b9%a3eyalli-se-94-19ra%e1%b9%a3%e1%b9%adu-pragati-samik%e1%b9%a3e-ma%e1%b9%87%e1%b8%8dya-jillege-3ne-sthana-ga%e1%b8%b7iside-educationalsurveyso/ Sat, 18 Oct 2025 11:28:49 +0000 https://www.goodnews24x7.com/?p=7750 ಮಂಡ್ಯ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುತ್ತಿರುವ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ಗೆ ಒಂದು ದಿನ ಮಾತ್ರ ಬಾಕಿ ಇದ್ದು, ಇದುವರೆಗೆ ಜಿಲ್ಲೆಯಲ್ಲಿ ಶೇ 94.19ರಷ್ಟು ಪ್ರಗತಿಯಾಗಿದೆ. ರಾಜ್ಯದ 31 ಜಿಲ್ಲೆಗಳ ಪೈಕಿ ಮಂಡ್ಯ ಜಿಲ್ಲೆ 3ನೇ ಸ್ಥಾನ…

The post ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಶೇ 94.19ರಷ್ಟು ಪ್ರಗತಿ ಸಮೀಕ್ಷೆ: ಮಂಡ್ಯ ಜಿಲ್ಲೆಗೆ 3ನೇ ಸ್ಥಾನ ಗಳಿಸಿದೆ. appeared first on Good News 24x7.

]]>

ಮಂಡ್ಯ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುತ್ತಿರುವ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ಗೆ ಒಂದು ದಿನ ಮಾತ್ರ ಬಾಕಿ ಇದ್ದು, ಇದುವರೆಗೆ ಜಿಲ್ಲೆಯಲ್ಲಿ ಶೇ 94.19ರಷ್ಟು ಪ್ರಗತಿಯಾಗಿದೆ. ರಾಜ್ಯದ 31 ಜಿಲ್ಲೆಗಳ ಪೈಕಿ ಮಂಡ್ಯ ಜಿಲ್ಲೆ 3ನೇ ಸ್ಥಾನ ಗಳಿಸಿದೆ.

ತುಮಕೂರು ( 95.55) ಮತ್ತು ಚಿಕ್ಕಮಗಳೂರು (ಶೇ 95.33) ಮೊದಲ ಮತ್ತು ಎರಡನೇ ಸ್ಥಾನದಲ್ಲಿವೆ. ಸೆಪ್ಟೆಂಬರ್ 22005 ಅಕ್ಟೋಬ‌ರ್ 7ರೊಳಗೆ ಸಮೀಕ್ಷೆ ಪೂರ್ಣಗೊಳಿಸಲು ಒಟ್ಟು 16 ದಿನಗಳ ಗಡುವು ನೀಡಲಾಗಿತ್ತು. ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ಪೂರ್ಣಗೊಳ್ಳದ ಕಾರಣ ಸರ್ಕಾರ ಮತ್ತೆ ಅ.18ರವರೆಗೆ ದಿನಾಂಕ ವಿಸ್ತರಿಸಿದೆ.

ಮಂಡ್ಯ 5,04,016 ಜಿಲ್ಲೆಯಲ್ಲಿ 94.19ರಷ್ಟು ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ. ಅ.17ರಂದು 3,883 ಕುಟುಂಬಗಳ ជថ្មី ಮಾಡಲಾಯಿತು. ಅ.18ರಂದು ಕಡೇ ದಿನ ಬಾಕಿ ಕುಟುಂಬಗಳ ಸಮೀಕ್ಷೆ ಪೂರ್ಣಗೊಳಿಸುವ ಗುರಿಯನ್ನು ಜಿಲ್ಲಾಡಳಿತ ಹಾಕಿಕೊಂಡಿದೆ. ಜಿಲ್ಲೆಯಲ್ಲಿ 18,66,350 ಜನಸಂಖ್ಯೆಯಿದ್ದು, ಇದುವರೆಗೆ 17,57,934 ಜನರನ್ನು ಸಮೀಕ್ಷೆ ಮಾಡಲಾಗಿದೆ. ಕೃಷ್ಣರಾಜಪೇಟೆ (ಶೇ 92.5), ಮದ್ದೂರು (ಶೇ 95.8), ಮಳವಳ್ಳಿ ( 94.2), 2 ( 92.2), ಪಾಂಡವಪುರ (ಶೇ.95.3) ಹಾಗೂ ಶ್ರೀ-ರಂಗಪಟ್ಟಣ ತಾಲ್ಲೂಕಿನಲ್ಲಿ (ಶೇ 90.2) ರಷ್ಟು ಪ್ರಗತಿಯಾಗಿದೆ.

ಈ ಸಮೀಕ್ಷೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಮಂಡ್ಯ ನಗರದ ವಾರ್ಡ್ ನಂ.20ರಲ್ಲಿರುವ ಬಸವರಾಜು ಎಚ್. ಸಿ ಅವರ ಮನೆಯಿಂದ ಸೆ.22ರಂದು ಚಾಲನೆಸಿ ಚಾಲನೆ ನೀಡಿದ್ದರು.
ಮಂಡ್ಯ ಜಿಲ್ಲೆಯಲ್ಲಿ 5,04,016 ಕುಟುಂಬಗಳಿದ್ದು, 4,651 ಸಮೀಕ್ಷೆ-ದಾರರನ್ನು ನಿಯೋಜಿಸಲಾಗಿದೆ. ಒಬ್ಬ ಗಣತಿದಾರರಿಗೆ 120 ಕುಟುಂಬಗಳಂತೆ ಬ್ಲಾಕ್ ಹಂಚಿಕೆ ಮಾಡಲಾಗಿದೆ. 20 ಗಣತಿದಾರರಿಗೆ ಒಬ್ಬ ಮೇಲ್ವಿಚಾರಕರು.

ನಾಗಮಂಗಲ ಪ್ರಥಮ: ಜಿಲ್ಲೆಯ 7 ತಾಲ್ಲೂಕುಗಳ ಪೈಕಿ ನಾಗಮಂಗಲ ತಾಲ್ಲೂಕಿನಲ್ಲಿ ಶೇ 1000 ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ತಾಲ್ಲೂಕಿನಲ್ಲಿ 1,94,201 ಜನಸಂಖ್ಯೆಯಿದ್ದು, ಎಲ್ಲರನ್ನೂ ಸಮೀಕ್ಷೆ ಮಾಡಲಾಗಿದೆ ಎಂದು ಸಮೀಕ್ಷೆದಾರರು ಮಾಹಿತಿ ನೀಡಿದ್ದಾರೆ.ಮಂಡ್ಯ ಜಿಲ್ಲೆಯಲ್ಲಿ 5,04,016 ಕುಟುಂಬಗಳಿದ್ದು, 4,651 ಸಮೀಕ್ಷೆ-ದಾರರನ್ನು ನಿಯೋಜಿಸಲಾಗಿದೆ. ಒಬ್ಬ ಗಣತಿದಾರರಿಗೆ 120 ಕುಟುಂಬಗಳಂತೆ ಬ್ಲಾಕ್ ಹಂಚಿಕೆ ಮಾಡಲಾಗಿದೆ. 20 ಗಣತಿದಾರರಿಗೆ ಒಬ್ಬ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ.

ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೆಲವು ಮನೆಗಳ ಆರ್.ಆ‌ರ್.ಸಂಖ್ಯೆ ಸಿಗದೆ ಸಮೀಕ್ಷೆದಾರರು ಪರದಾಡಿದ್ದಾರೆ. ఒట్టు 60 ಪ್ರಶ್ನೆಗಳಿಗೆ ಉತ್ತರ ಪಡೆಯುವುದು ದೊಡ್ಡ ಸವಾಲು’ ಎಂದು ಸಮೀಕ್ಷೆ ಕಾರ್ಯದ ಅಧಿಕಾರಿಯೊಬ್ಬರು ತಿಳಿಸಿದರು.’ಸಮೀಕ್ಷೆಗೆ ಹೋದ ಸಂದರ್ಭಕೆಲ ಕುಟುಂಬಗಳು ಪೂರ್ಣ ಮಾಹಿತಿ ನೀಡಿಲ್ಲ. ಇನ್ನು ಕೆಲವರು ಮಾಹಿತಿ ನೀಡಲು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಜಾತಿ ಸಮೀಕ್ಷೆ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಕೆಲವು ತಿಳಿಸಿದರು.

The post ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಶೇ 94.19ರಷ್ಟು ಪ್ರಗತಿ ಸಮೀಕ್ಷೆ: ಮಂಡ್ಯ ಜಿಲ್ಲೆಗೆ 3ನೇ ಸ್ಥಾನ ಗಳಿಸಿದೆ. appeared first on Good News 24x7.

]]>
45 ನಿಮಿಷಗಳ ಸಮೀಕ್ಷೆ: ಸಮಾಧಾನದಿಂದ ವಿವರ ನೀಡಿದ ಸಿಎಂ ಸಿದ್ದರಾಮಯ್ಯ https://www.goodnews24x7.com/45-minute-survey-cm-siddaramaiah-calmly-gave-details/ Thu, 16 Oct 2025 12:45:37 +0000 https://www.goodnews24x7.com/?p=7744 ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಕ್ಕೂ ಹೆಚ್ಚು ಕಾಲ ಸಮಾಧಾನದಿಂದ ಉತ್ತರಿಸಿದರು.ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು. ನಮ್ಮ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ…

The post 45 ನಿಮಿಷಗಳ ಸಮೀಕ್ಷೆ: ಸಮಾಧಾನದಿಂದ ವಿವರ ನೀಡಿದ ಸಿಎಂ ಸಿದ್ದರಾಮಯ್ಯ appeared first on Good News 24x7.

]]>

ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಕ್ಕೂ ಹೆಚ್ಚು ಕಾಲ ಸಮಾಧಾನದಿಂದ ಉತ್ತರಿಸಿದರು.ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು.

ನಮ್ಮ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗಾಗಿ ನನ್ನ ಮನೆಗೆ ಭೇಟಿನೀಡಿದ ಸಿಬ್ಬಂದಿಗಳಿಗೆ ಮಾಹಿತಿ ನೀಡಿ, ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ. ಅಸಮಾನತೆ, ಬಡತನವನ್ನು ನಿವಾರಣೆ ಮಾಡಿ ಸಮಸಮಾಜ ನಿರ್ಮಾಣ ಮಾಡುವ ಉದ್ದೇಶದೊಂದಿಗೆ ನಮ್ಮ ಸರ್ಕಾರವು ಈ ಸಮೀಕ್ಷೆಯನ್ನು ಕೈಗೊಂಡಿದೆ. ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಂಡು, ತಮ್ಮ ಮಾಹಿತಿಯನ್ನು ಪ್ರಾಮಾಣಿಕವಾಗಿ ನೀಡಬೇಕು. ಆಗ ಮಾತ್ರ ಸಮಾಜದ ವಾಸ್ತವ ಸ್ಥಿತಿಗತಿಯ ಬಗೆಗೆ ನಿಖರ ಮಾಹಿತಿ ದೊರೆತು, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜನರನ್ನು ಗುರುತಿಸಿ, ಅವರ ಪ್ರಗತಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ.

ಇದು ಯಾವುದೇ ಒಂದು ಜಾತಿಗೆ ಸೀಮಿತವಾದ ಸಮೀಕ್ಷೆಯಲ್ಲ, ರಾಜ್ಯದ ಪ್ರತಿಯೊಬ್ಬರ ಜೀವನದ ಮೇಲೆ ಬೆಳಕು ಚೆಲ್ಲುವ ಒಂದು ವೈಜ್ಞಾನಿಕ ಪ್ರಯತ್ನ. ಸಮೀಕ್ಷೆಯಲ್ಲಿ ಮಾಹಿತಿ ನೀಡುವುದರಿಂದ ನಿಮ್ಮ ವೈಯಕ್ತಿಕ ಮಾಹಿತಿ ದುರ್ಬಳಕೆ ಖಂಡಿತಾ ಆಗದು. ಚಿಂತೆ ಬಿಟ್ಟು, ಧೈರ್ಯವಾಗಿ ಸಿಬ್ಬಂದಿಗಳ ಜೊತೆ ಮಾಹಿತಿ ಹಂಚಿಕೊಳ್ಳಿ.

The post 45 ನಿಮಿಷಗಳ ಸಮೀಕ್ಷೆ: ಸಮಾಧಾನದಿಂದ ವಿವರ ನೀಡಿದ ಸಿಎಂ ಸಿದ್ದರಾಮಯ್ಯ appeared first on Good News 24x7.

]]>
ಗಣತಿ ಒತ್ತಡದಿಂದ ಶಿಕ್ಷಕಿ ಆ*ಹ* ! ಕೆರೆಯಲ್ಲಿ ಶ * ಪತ್ತೆ. https://www.goodnews24x7.com/teacher-dies-in-lake-due-to-census-pressure/ Thu, 16 Oct 2025 06:15:31 +0000 https://www.goodnews24x7.com/?p=7731 ಕೋಲಾರ :- ಬೇತಮಂಗಲ ರಾಜ್ಯ ಸರ್ಕಾರದ ಜಾತಿ ಗಣತಿಗೆ ತೆರಳಿದ್ದ ಕೋಲಾರ ಜಿಲ್ಲೆಯ ಶಿಕ್ಷಕಿ ಕೆರೆ ಯಲ್ಲಿ ಶವವಾಗಿ ಪತ್ತೆಯಾ ಗಿದ್ದು, ಗಣತಿಯಲ್ಲಿ ಹಿರಿಯ ಅಧಿಕಾರಿಗಳು ಕೊಟ್ಟ ಒತ್ತಡದಿಂ ದಾಗಿ ಆತ್ಮಹತ್ಯೆ ಮಾಡಿಕೊಂಡಿ ರಬಹುದು ಎನ್ನಲಾಗಿದೆ. ಅಕ್ತರ್ ಬೇಗಂ (50) ಶಿಕ್ಷಕಿ…

The post ಗಣತಿ ಒತ್ತಡದಿಂದ ಶಿಕ್ಷಕಿ ಆ*ಹ* ! ಕೆರೆಯಲ್ಲಿ ಶ * ಪತ್ತೆ. appeared first on Good News 24x7.

]]>

ಕೋಲಾರ :- ಬೇತಮಂಗಲ ರಾಜ್ಯ ಸರ್ಕಾರದ ಜಾತಿ ಗಣತಿಗೆ ತೆರಳಿದ್ದ ಕೋಲಾರ ಜಿಲ್ಲೆಯ ಶಿಕ್ಷಕಿ ಕೆರೆ ಯಲ್ಲಿ ಶವವಾಗಿ ಪತ್ತೆಯಾ ಗಿದ್ದು, ಗಣತಿಯಲ್ಲಿ ಹಿರಿಯ ಅಧಿಕಾರಿಗಳು ಕೊಟ್ಟ ಒತ್ತಡದಿಂ ದಾಗಿ ಆತ್ಮಹತ್ಯೆ ಮಾಡಿಕೊಂಡಿ ರಬಹುದು ಎನ್ನಲಾಗಿದೆ.

ಅಕ್ತರ್ ಬೇಗಂ (50) ಶಿಕ್ಷಕಿ ಯಾಗಿದ್ದರು, ಅವರು ಸೋಮವಾರ ಸಮೀ ಕೈಗೆ ತೆರಳಿದ್ದರು. ಇವರು ಕಾಣೆಯಾಗಿದ್ದಾರೆ ಎಂದು ಮನೆಯವರು ದೂರು ನೀಡಿದ್ದರು. ಬುಧವಾರ ಬೇತಮಂಗಲ ಹೋಬಳಿಯ ಅಮಾನಿಕೆರೆಯಲ್ಲಿ ಬ್ಯಾಗ್ ತೇಲುತ್ತಿದ್ದನ್ನು ಕಂಡ ಸಳೀಯರು, ಶವ ಕಂಡು ಪೊಲೀಸರ ಗಮನಕ್ಕೆ ತಂದಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಶವ ಮೇಲೆತ್ತಿದ್ದಾರೆ.

ಅಕ್ತರ್ ಅವರು ಕಳೆದ 15 ದಿನಗಳಿಂದ ಜಾತಿ ಗಣತಿಯಲ್ಲಿದ್ದರು. ಸಮೀಕ್ಷೆಯಲ್ಲಿ ಜನರು ಸರಿ ಯಾಗಿ ಸ್ಪಂದಿಸದ ಕಾರಣ, ಗಣತಿ ಮುಂದೆ ಸಾಗದೆ ಮಾನ ಸಿಕ ಹಿಂಸೆಗೆ ಒಳಗಾಗಿದ್ದರು. ಇದಿಷ್ಟೇ ಅಲ್ಲದೇ ಹಿರಿಯ ಅಧಿ ಕಾರಿಗಳ ಒತ್ತಡವೂ ಸಹ ಶಿಕ್ಷಕಿ ಖಿನ್ನತೆಗೆ ಒಳಗಾಗುವಂತೆ ಮಾಡಿತ್ತು ಎನ್ನಲಾಗಿದೆ. ಸೋಮವಾರ ಸಮೀಕ್ಷೆ ಮುಗಿಸಿ ಮನೆಗೆ ಬರದ್ದನ್ನು ಕಂಡು ಬೇಗಂ ಅವರ ಪತಿ ಪೊಲೀಸರಿಗೆ ದೂರಿತ್ತಿ ದ್ದರು. ಬುಧವಾರ ಶವ ಪತ್ತೆಯಾಗಿದ್ದು, ಕೆಜಿಎಫ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸಾವಿಗೆ ಹಿರಿಯ ಅಧಿಕಾರಿಗಳ ಮಾನಸಿಕ ಹಿಂಸೆಯೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಕೋಲಾರದ ಮಹಾಲಕ್ಷ್ಮಿ ಬಡವಾಣೆಯ ನಿವಾಸಿಯಾಗಿದ್ದ ಅಖ್ತರ್ ಬೇಗಂ ಶವ ಕೆಜಿಎಫ್‌ನ ಬೇತಮಂಗಲ ಹೋಬಳಿ ಅಯ್ಯಪಲ್ಲಿ ಅಮಾನಿ ಕೆರೆಯಲ್ಲಿ ಪತ್ತೆಯಾಗಿದೆ. ಈ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೂರು ದಿನದಿಂದ ನಾಪತ್ತೆಯಾಗಿದ್ದ ಅಖ್ತರ್ ಬೇಗಂ ಶವ ಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಟೀ ಕೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಯ್ಯಪಲ್ಲಿ ಅಮಾನಿ ಕೆರೆಯ ದಡದಲ್ಲಿ ಅಖ್ತರ್ ಬೇಗಂಗೆ ಗಣತಿಗೆ ನೀಡಿದ್ದ ಕಿಟ್ ಪತ್ತೆಯಾಗಿದೆ. ಇದನ್ನು ನೋಡಿ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು, ಅಗ್ನಿಶಾಮಕ ದಳದ ಜೊತೆ ಹುಡುಕಾಟ ನಡೆಸಿ ಕೆರೆಯಲ್ಲಿ ಶವ ಪತ್ತೆ ಮಾಡಿ ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಮಗನ ಬೈಕ್‌ನಲ್ಲಿ ಡ್ರಾಪ್ ತೆಗೆದುಕೊಂಡು ಮೂರು ದಿನದ ಹಿಂದೆ ಗಣತಿಗೆ ತೆರಳಿದ್ದರು. ಅವರ ಮೊಬೈಲ್ ಮನೆಯಲ್ಲಿಯೇ ಬಿಟ್ಟು ಹೋಗಿದ್ದರು. ಅವರು ಹಲವು ದಿನದಿಂದ ಮಾನಸಿಕ ಒತ್ತಡದಿಂದ ಬಳಲುತ್ತಿದ್ದರು ಎಂಬ ಮಾಹಿತಿಯೂ ಇದೆ. ಸೋಮವಾರ ರಾತ್ರಿ ಅಖ್ತರ್ ಬೇಗಂ ಮನೆಗೆ ವಾಪಸ್ ಆಗದೇ ಇದ್ದಾಗ ಕೋಲಾರ ನಗರ ಠಾಣೆಗೆ ದೂರು ನೀಡಲಾಗಿತ್ತು.

ಅಖ್ತರ್ ಬೇಗಂ ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ? ಅಥವ ಅವರನ್ನು ಕೊಲೆ ಮಾಡಿ ಶವವನ್ನು ಕೆರೆಗೆ ಎಸೆಯಲಾಗಿದೆಯೇ? ಎಂಬ ಕುರಿತು ತನಿಖೆ ಬಳಿಕ ಮಾಹಿತಿ ತಿಳಿಯಬೇಕಿದೆ.

ಕೆಲವು ದಿನಗಳ ಹಿಂದೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಕುರಿತ ವೀಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದರು. ಶಿಕ್ಷಕರಿಗೆ ಗೌರವಧನದ ಬಗ್ಗೆ ಯಾವುದೇ ಅನುಮಾನ ಬೇಡ. ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಗಣತಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದ್ದರು. ಈಗಾಗಲೇ ಗಣತಿಯಲ್ಲಿ ತೊಡಗಿದ್ದ ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದರು ಅವರು ಅವಲಂಬಿತರಿಗೆ ತಲಾ 20 ಲಕ್ಷ ಪರಿಹಾರ ನೀಡಲು ಹಣವನ್ನು ಜಿಲ್ಲಾಧಿಕಾರಿಗಳ ಖಾತೆಗೆ ವರ್ಗಾವಣೆ ಮಾಡಲಾಗಿದೆ.

The post ಗಣತಿ ಒತ್ತಡದಿಂದ ಶಿಕ್ಷಕಿ ಆ*ಹ* ! ಕೆರೆಯಲ್ಲಿ ಶ * ಪತ್ತೆ. appeared first on Good News 24x7.

]]>
3 ಹಂತದಲ್ಲಿ ಒಳ ಮೀಸಲಾತಿ ಸಮೀಕ್ಷೆ ಸೋಮವಾರದಿಂದಲೇ ಶುರು! ಸಿದ್ದರಾಮಯ್ಯ ಮಾಹಿತಿ. https://www.goodnews24x7.com/internal-reservation-survey-to-start-in-3-phases-from-monday-siddaramaiah-information/ Wed, 21 May 2025 10:03:25 +0000 https://www.goodnews24x7.com/?p=4055 ಬೆಂಗಳೂರು: ಎಸ್ ಸಿ ಒಳಮೀಸಲಾತಿ ಗೊಂದಲದ ಹಿನ್ನೆಲೆಯಲ್ಲಿ ಸಮಗ್ರ ದತ್ತಾಂಶ ಸಂಗ್ರಹ ಮಾಡುವ ನಿಟ್ಟಿನಲ್ಲಿ ಸೋಮವಾರದಿಂದ 3 ಹಂತದಲ್ಲಿ ಸಮೀಕ್ಷೆ ನಡೆಯಲಿದೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು. ವಿಧಾನಸೌಧದಲ್ಲಿ ಸೋಮವಾರ ಒಳಮೀಸಲಾತಿ ಗೊಂದಲ ಹಿನ್ನೆಲೆಯಲ್ಲಿ ಸಮೀಕ್ಷೆ…

The post 3 ಹಂತದಲ್ಲಿ ಒಳ ಮೀಸಲಾತಿ ಸಮೀಕ್ಷೆ ಸೋಮವಾರದಿಂದಲೇ ಶುರು! ಸಿದ್ದರಾಮಯ್ಯ ಮಾಹಿತಿ. appeared first on Good News 24x7.

]]>

ಬೆಂಗಳೂರು: ಎಸ್ ಸಿ ಒಳಮೀಸಲಾತಿ ಗೊಂದಲದ ಹಿನ್ನೆಲೆಯಲ್ಲಿ ಸಮಗ್ರ ದತ್ತಾಂಶ ಸಂಗ್ರಹ ಮಾಡುವ ನಿಟ್ಟಿನಲ್ಲಿ ಸೋಮವಾರದಿಂದ 3 ಹಂತದಲ್ಲಿ ಸಮೀಕ್ಷೆ ನಡೆಯಲಿದೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು.

ವಿಧಾನಸೌಧದಲ್ಲಿ ಸೋಮವಾರ ಒಳಮೀಸಲಾತಿ ಗೊಂದಲ ಹಿನ್ನೆಲೆಯಲ್ಲಿ ಸಮೀಕ್ಷೆ ಕುರಿತಾಗಿ ಮಾತನಾಡಿದ ಅವರು, ಮೊದಲನೇ ಹಂತ ಇಂದಿನಿಂದಲೇ ಆರಂಭಗೊಳ್ಳಲಿದೆ. ಈ ಹಂತದಲ್ಲಿ ಮನೆ ಮನೆಗೆ ಹೋಗಿ ಸಮೀಕ್ಷೆ ನಡೆಸಲಾಗುತ್ತದೆ. ಎರಡನೇ ಹಂತ ಮೇ 5 ರಿಂದ ಶುರುವಾಗಲಿದೆ. ಇದಕ್ಕಾಗಿ ವಿಶೇಷ ಶಿಬಿರಗಳಲ್ಲಿ ಈ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದರು.

ಇನ್ನು 3 ನೇ ಹಂತ ಆನ್ ಲೈನ್ ಮೂಲಕ ನಡೆಯಲಿದೆ. ಅಲ್ಲೂ ಜನರಿಗೆ ಮಾಹಿತಿಯನ್ನು ನೀಡಲು ಅವಕಾಶ ಇದೆ. ಈ ಹಿನ್ನೆಲೆಯಲ್ಲಿ ಎಸ್ಸಿ ಸಮುದಾಯ ಗಣತಿದಾರರು ಮನೆ ಮನೆಗೆ ಬಂದಾಗ ಮಾಹಿತಿಯನ್ನು ನೀಡಬೇಕು. ಗಣತಿದಾರರು ಮನೆಗೆ ಭೇಟಿ ಕೊಟ್ಟಾಗ ಜನರು ಇಲ್ಲದೇ ಹೋದರೆ ಶಿಬಿರದಲ್ಲಾದರೂ ಅಥವಾ ಆನ್ ಲೈನ್ ಮೂಲಕವೂ ಮಾಹಿತಿಯನ್ನು ನೀಡಬಹುದು ಎಂದು ಮನವಿ ಮಾಡಿದರು.

100 ಕೋಟಿ ಖರ್ಚು
ಎಸ್ಸಿ ಒಳಮೀಸಲಾತಿ ಸಮೀಕ್ಷೆಗೆ ಸುಮಾರು 100 ಕೋಟಿ ಖರ್ಚು ಆಗಬಹುದು. ನಾಗಮೋಹನ್ ದಾಸ್ ಅವರು ಏನು ಶಿಫಾರಸು ಮಾಡುತ್ತಾರೆ ಅದರ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
60 ದಿನ ಡೆಡ್ ಲೈನ್
ಸಮೀಕ್ಷೆ ನಡೆಸಲು 60 ದಿನಗಳ ಕಾಲ ಡೆಟ್ ಲೈನ್ ಕೊಡಲಾಗಿದೆ. ಜಾತಿಗಣತಿಯೂ ಒಳಮೀಸಲಾತಿ ಗಣತಿಗೂ ಯಾವುದೇ ಸಂಬಂಧ ಇಲ್ಲ. ಇದು ಕೇವಲ ಎಸ್ಸಿ ಸಮುದಾಯಕ್ಕೆ ಮಾತ್ರ ಸೀಮಿತವಾಗಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಹೆಲ್ಪ್ ಲೈನ್ ಆರಂಭ
9481359000 ಹೆಲ್ತ್ ಲೈನ್ ಆರಂಭ ಮಾಡಲಾಗಿದೆ. ಯಾವುದೇ ಗೊಂದಲ ಇದ್ದರೂ ಈ ಫೋನ್ ನಂಬರ್ ಗೆ ಕರೆ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸಮೀಕ್ಷೆ ಹೇಗೆ ?
ಇವತ್ತಿನಿಂದ 17 ರವರೆಗೆ ಮನೆ ಮನೆಗೆ ಹೋಗಿ ದತ್ತಾಂಶ ಸಂಗ್ರಹಿಸುವ ಕೆಲಸ ಆಗ್ತದೆ. ಸುಮಾರು 65 ಸಾವಿರ ಶಿಕ್ಷಕರನ್ನು ಇದಕ್ಕಾಗಿ ನಿಯೋಜಿಸಲಾಗಿದೆ. 10-12 ಮಂದಿ ಶಿಕ್ಷಕರಿಗೆ ಒಬ್ಬ ಮೇಲ್ವಿಚಾರಕ ಇರ್ತಾರೆ. ಮನೆ ಮನೆ ಭೇಟಿ ಕೊಡುವ ಜೊತೆಗೆ, ಮೊದಲ ಹಂತದಲ್ಲಿ 5-5-25 ರಿಂದ 17-5-2025 ವರೆಗೆ ನಡೆಯಲಿದೆ.

ಎರಡನೇ ಹಂತದಲ್ಲಿ 19-5-2025 ರಿಂದ 21-5-2025 ರವರೆಗೆ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಸಮೀಕ್ಷೆ ನಡೆಯುತ್ತದೆ. ಯಾರಾದರೂ ಬಿಟ್ಟು ಹೋಗಿದ್ದರೆ ಶಿಬಿರಕ್ಕೆ ಬಂದು ಸೇರಿಸಬಹುದು. ಮೂರನೇ ಹಂತದಲ್ಲಿ 19-5-2025 ರಿಂದ 22-5-2025 ರವರೆಗೆ ಆನ್ ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹಿಸಲಾಗುವುದು ಎಂದರು.ಮೊಬೈಲ್ ಆಪ್
ಮೊಬೈಲ್ ಆಪ್ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 6:30 ರಿಂದ ಸಂಜೆ 6:30ರವರೆಗೆ ಮೊಬೈಲ್ ಆಪ್ ಎನಾಬಲ್ ಮಾಡಲಾಗಿರುತ್ತದೆ. ಇದಕ್ಕೆ ಪರಿಶಿಷ್ಟ ಜಾತಿ ಸಮುದಾಯದ ಯಾರೂ ತಪ್ಪಿಸಬಾರದು.

ನಾವು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲೂ ವರದಿ ಜಾರಿ ಬಗ್ಗೆ ಘೋಷಣೆ ಮಾಡಿದ್ದೆವು. ಒಳ ಮೀಸಲಾತಿ ಪರವಾಗಿ ಸುಪ್ರೀಂಕೋರ್ಟ್ ಕೂಡ ಹೇಳಿದೆ. ಸಮುದಾಯದ ಸಂಘಟನೆಗಳು, ಮುಖಂಡರಿಗೂ ನಾವು ಒಳ ಮೀಸಲಾತಿ ಬಗ್ಗೆ ಭರವಸೆ ನೀಡಿದ್ದೆವು. ಆದ್ದರಿಂದ ದತ್ತಾಂಶ ಸಂಗ್ರಹ ಸಮೀಕ್ಷೆಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡು ಮಾಹಿತಿ ಕೊಡಿ ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು. ಎಲ್ಲಾ ಸಂಘಟನೆಗಳೂ ಇದಕ್ಕೆ ಸಹಕರಿಸಿ ಎಂದೂ ಸಿಎಂ ಮನವಿ ಮಾಡಿದರು.

ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಶಿವರಾಜ್ ತಂಗಡಗಿ, ಶಿವಾನಂದ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಶಾಸಕರಾದ ರೂಪಶಶಿಕಲ್, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ನಸೀರ್ ಅಹಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

 

The post 3 ಹಂತದಲ್ಲಿ ಒಳ ಮೀಸಲಾತಿ ಸಮೀಕ್ಷೆ ಸೋಮವಾರದಿಂದಲೇ ಶುರು! ಸಿದ್ದರಾಮಯ್ಯ ಮಾಹಿತಿ. appeared first on Good News 24x7.

]]>