tariff Archives - Good News 24x7 https://www.goodnews24x7.com/tag/tariff/ Kannada Sat, 30 Aug 2025 07:44:06 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg tariff Archives - Good News 24x7 https://www.goodnews24x7.com/tag/tariff/ 32 32 ಟ್ರಂಪ್‌ ಸುಂಕ ನಿರ್ಧಾರಕ್ಕೆ ಯುಎಸ್‌ ಕೋರ್ಟ್‌ ಛೀಮಾರಿ ! https://www.goodnews24x7.com/us-court-rebukes-trumps-tariff-decision/ Sat, 30 Aug 2025 07:44:06 +0000 https://www.goodnews24x7.com/?p=7006 ಭಾರತ ಸೇರಿ ಹಲವು ದೇಶಗಳ ಮೇಲೆ ಮಿತಿ ಮೀರಿದ ಟ್ಯಾರಿಫ್ ಹೇರಿರುವ ಟ್ರಂಪ್ . ಆಮದು ಸುಂಕ ಕಾನೂನು ಬಾಹಿರ ಎಂದು ಯುಎಸ್‌ ಕೋರ್ಟ್‌ ಹೇಳಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಿರ್ಧಾರಕ್ಕೆ ಕೋರ್ಟ್‌ ಛೀಮಾರಿ ಹಾಕಿದೆ. ಟ್ರಂಪ್‌ ನಿರ್ಧಾರಕ್ಕೆ ವಾಷಿಂಗ್ಟನ್‌ನ…

The post ಟ್ರಂಪ್‌ ಸುಂಕ ನಿರ್ಧಾರಕ್ಕೆ ಯುಎಸ್‌ ಕೋರ್ಟ್‌ ಛೀಮಾರಿ ! appeared first on Good News 24x7.

]]>

ಭಾರತ ಸೇರಿ ಹಲವು ದೇಶಗಳ ಮೇಲೆ ಮಿತಿ ಮೀರಿದ ಟ್ಯಾರಿಫ್ ಹೇರಿರುವ ಟ್ರಂಪ್ . ಆಮದು ಸುಂಕ ಕಾನೂನು ಬಾಹಿರ ಎಂದು ಯುಎಸ್‌ ಕೋರ್ಟ್‌ ಹೇಳಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಿರ್ಧಾರಕ್ಕೆ ಕೋರ್ಟ್‌ ಛೀಮಾರಿ ಹಾಕಿದೆ.

ಟ್ರಂಪ್‌ ನಿರ್ಧಾರಕ್ಕೆ ವಾಷಿಂಗ್ಟನ್‌ನ ಫೆಡರಲ್ ಮೇಲ್ಮನವಿ ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದೆ. ಕೆಳ ನ್ಯಾಯಾಲಯದ ತೀರ್ಪನ್ನು ನ್ಯಾಯಾಲಯವು ಅನುಮೋದಿಸಿದ್ದು, ಟ್ರಂಪ್ ವಿಧಿಸಿರುವ ಹೆಚ್ಚಿನ ಆಮದು ಸುಂಕಗಳು ಕಾನೂನುಬಾಹಿರ ಎಂದು ಹೇಳಿದೆ. ಈ ಸಂದರ್ಭದಲ್ಲಿ ಈ ಅಧಿಕಾರವನ್ನು ಬಳಸಲು ಅಧ್ಯಕ್ಷರ ಅಧಿಕಾರವನ್ನು ನ್ಯಾಯಾಲಯವು ಪ್ರಶ್ನಿಸಿದೆ.

ಫೆಡರಲ್ ಮೇಲ್ಮನವಿ ನ್ಯಾಯಾಲಯವು ಅಮೆರಿಕ ಅಧ್ಯಕ್ಷರು ತುರ್ತು ಅಧಿಕಾರಗಳ ದುರುಪಯೋಗದ ಬಗ್ಗೆ ಮಾತನಾಡಿದೆ. 11 ನ್ಯಾಯಾಧೀಶರ ಪೀಠದಲ್ಲಿ, 7 ನ್ಯಾಯಾಧೀಶರು ಟ್ರಂಪ್ ಅವರ ಸುಂಕ ವಿಧಿಸುವ ನಿರ್ಧಾರವನ್ನು ಕಾನೂನುಬಾಹಿರವೆಂದು ಘೋಷಿಸಿದರೆ, 4 ನ್ಯಾಯಾಧೀಶರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಆದೇಶ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಶ್ವೇತ ಭವನ ನಿರ್ಧರಿಸಿದೆ.

ಇತರೆ ದೇಶಗಳ ಮೇಲೆ ವಿಧಿಸಿರುವ ಎಲ್ಲಾ ಸುಂಕಗಳು ಜಾರಿಯಲ್ಲಿರುತ್ತವೆ. ಒಂದು ವೇಳೆ ಟ್ಯಾರಿಫ್‌ ತೆಗೆದುಹಾಕಿದರೆ, ದೇಶಕ್ಕೆ ಹಾನಿಕಾರಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪುನರುಚ್ಚರಿಸಿದ್ದಾರೆ. ‌ಟ್ರಂಪ್ ಅವರ ಹಲವು ಸುಂಕಗಳು ಕಾನೂನುಬಾಹಿರ ಎಂದು ಯುಎಸ್ ನ್ಯಾಯಾಲಯ ತೀರ್ಪು ನೀಡಿದ ಬೆನ್ನಲ್ಲೇ ಟ್ರಂಪ್‌ ಪ್ರತಿಕ್ರಿಯಿಸಿದ್ದಾರೆ.

ಎಲ್ಲಾ ಸುಂಕಗಳು ಇನ್ನೂ ಜಾರಿಯಲ್ಲಿವೆ. ಇಂದು ಅತ್ಯಂತ ಪಕ್ಷಪಾತದ ಮೇಲ್ಮನವಿಗೆ ನ್ಯಾಯಾಲಯವು ನಮ್ಮ ಸುಂಕಗಳನ್ನು ತೆಗೆದುಹಾಕಬೇಕು ಎಂದು ತಪ್ಪಾಗಿ ಹೇಳಿದೆ. ಆದರೆ, ಕೊನೆಯಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ ಗೆಲ್ಲುತ್ತದೆ ಎಂದು ಅವರಿಗೆ ತಿಳಿದಿದೆ. ಈ ಸುಂಕಗಳು ಎಂದಾದರೂ ರದ್ದಾದರೆ, ಅದು ದೇಶಕ್ಕೆ ವಿಪತ್ತು. ಅದು ನಮ್ಮನ್ನು ಆರ್ಥಿಕವಾಗಿ ದುರ್ಬಲಗೊಳಿಸುತ್ತದೆ. ನಾವು ಬಲಿಪಶು ಆಗಬೇಕಾಗುತ್ತದೆ ಎಂದು ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ನಮ್ಮ ತಯಾರಕರು, ರೈತರು ಮತ್ತು ಎಲ್ಲರನ್ನೂ ದುರ್ಬಲಗೊಳಿಸುವ ಅನ್ಯಾಯದ ಸುಂಕಗಳನ್ನು ನಾವು ಒಪ್ಪಲ್ಲ. ಇತರ ದೇಶಗಳು, ಅವರು ಮಿತ್ರರಾಗಿರಲಿ ಅಥವಾ ವೈರಿಯಾಗಿರಲಿ ವಿಧಿಸುವ ಸುಂಕೇತರ ವ್ಯಾಪಾರ ಅಡೆತಡೆಗಳನ್ನು ಅಮೆರಿಕ ಇನ್ಮುಂದೆ ಸಹಿಸುವುದಿಲ್ಲ. ಒಂದು ವೇಳೆ ಈ ನಿರ್ಧಾರವನ್ನು (ಟ್ಯಾರಿಫ್) ತಡೆಯಲು ಮುಂದಾದರೆ, ಅಕ್ಷರಶಃ ಅಮೆರಿಕ ಸಂಯುಕ್ತ ಸಂಸ್ಥಾನವನ್ನು ನಾಶಪಡಿಸಿದಂತೆ ಎಂದು ಟ್ರಂಪ್‌ ಹೇಳಿದ್ದಾರೆ.

ಸುಂಕಗಳು ಕಾರ್ಮಿಕರಿಗೆ ಸಹಾಯ ಮಾಡಲು ಮತ್ತು ‘ಮೇಡ್ ಇನ್ ಅಮೆರಿಕ’ ಉತ್ಪನ್ನಗಳನ್ನು ಉತ್ಪಾದಿಸುವ ಕಂಪನಿಗಳನ್ನು ಬೆಂಬಲಿಸಲು ಅತ್ಯುತ್ತಮ ಸಾಧನವಾಗಿದೆ ಎಂದು ಟ್ರಂಪ್‌ ನಿಲುವು.

ಹಲವು ವರ್ಷಗಳಿಂದ ಕಾಳಜಿಯಿಲ್ಲದ ಮತ್ತು ಅವಿವೇಕದ ರಾಜಕಾರಣಿಗಳು ಸುಂಕಗಳನ್ನು ನಮ್ಮ ವಿರುದ್ಧವೇ ಬಳಸಲು ಅನುಮತಿಸಿದ್ದರು. ಈಗ ಯುನೈಟೆಡ್ ಸ್ಟೇಟ್ಸ್ ಸುಪ್ರೀಂ ಕೋರ್ಟ್ ಸಹಾಯದಿಂದ, ಅವುಗಳನ್ನು ನಮ್ಮ ರಾಷ್ಟ್ರದ ಪ್ರಯೋಜನಕ್ಕಾಗಿ ಬಳಸುತ್ತೇವೆ. ಅಮೆರಿಕವನ್ನು ಮತ್ತೆ ಶ್ರೀಮಂತ, ಬಲಿಷ್ಠ ಮತ್ತು ಶಕ್ತಿಶಾಲಿಯನ್ನಾಗಿ ಮಾಡುತ್ತೇವೆ ಎಂದು ಟ್ರಂಪ್‌ ಪ್ರತಿಜ್ಞೆ ಮಾಡಿದ್ದಾರೆ.

The post ಟ್ರಂಪ್‌ ಸುಂಕ ನಿರ್ಧಾರಕ್ಕೆ ಯುಎಸ್‌ ಕೋರ್ಟ್‌ ಛೀಮಾರಿ ! appeared first on Good News 24x7.

]]>
ಅಮೆರಿಕದ ಸುಂಕ ನಿಟ್ಟಿಗೆ ಖರ್ಗೆ ಕಿಡಿ: ದೇಶದ ಹಿತ ಕಾಪಾಡಲು ಪ್ರಧಾನಿ ಮೋದಿ ವಿಫಲ, ಎಎಐಸಿಸಿ ಅಧ್ಯಕ್ಷರ ವಾಗ್ದಾಳಿ. https://www.goodnews24x7.com/kharge-slams-us-tariff-hike-pm-modi-has-failed-to-protect-countrys-interests-aaicc-president-lashes-out/ Thu, 28 Aug 2025 05:04:11 +0000 https://www.goodnews24x7.com/?p=6852 ನವದೆಹಲಿ: ಭಾರತೀಯ ರಫ್ತು ಉತ್ಪನ್ನಗಳ ಮೇಲೆ ಶೇಕಡಾ 50ರಷ್ಟು ಸುಂಕ ವಿಧಿಸಿರುವ ಅಮೆರಿಕದ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಹಿತ ಕಾಪಾಡಲು ವಿಫಲರಾಗಿದ್ದಾರೆಂದು ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ (ಮಾಜಿ…

The post ಅಮೆರಿಕದ ಸುಂಕ ನಿಟ್ಟಿಗೆ ಖರ್ಗೆ ಕಿಡಿ: ದೇಶದ ಹಿತ ಕಾಪಾಡಲು ಪ್ರಧಾನಿ ಮೋದಿ ವಿಫಲ, ಎಎಐಸಿಸಿ ಅಧ್ಯಕ್ಷರ ವಾಗ್ದಾಳಿ. appeared first on Good News 24x7.

]]>

ನವದೆಹಲಿ: ಭಾರತೀಯ ರಫ್ತು ಉತ್ಪನ್ನಗಳ ಮೇಲೆ ಶೇಕಡಾ 50ರಷ್ಟು ಸುಂಕ ವಿಧಿಸಿರುವ ಅಮೆರಿಕದ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಹಿತ ಕಾಪಾಡಲು ವಿಫಲರಾಗಿದ್ದಾರೆಂದು ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ (ಮಾಜಿ ಟ್ವಿಟ್ಟರ್) ಪೋಸ್ಟ್ ಮಾಡಿದ ಖರ್ಗೆ, “ಪ್ರಧಾನಮಂತ್ರಿ ಮೋದಿಯವರು ನಗು, ಅಪ್ಪುಗೆ ಮತ್ತು ಸೆಲ್ಫಿಗಳ ಬಿಟ್ಟು ಪರಿಣಾಮಕಾರಿಯಾದ ವಿದೇಶಾಂಗ ನೀತಿಯ ಕಡೆ ಗಮನಹರಿಸಬೇಕು,” ಎಂದು ತೀವ್ರ ಟೀಕೆ ಮಾಡಿದ್ದಾರೆ.

ಅವರು ಮುಂದಾಗಿ ಹೇಳಿದರು: “ಈಗ ‘ಅಬ್ಕಿ ಬಾರ್ ಟ್ರಂಪ್ ಸರ್ಕಾರ್’ ಘೋಷಣೆಯ ಫಲವಾಗಿ, ಅಮೆರಿಕ ಭಾರತೀಯ ವಸ್ತುಗಳ ಮೇಲೆ ಶೇಕಡಾ 50ರಷ್ಟು ಸುಂಕ ವಿಧಿಸಿದೆ. ಇದರ ಮೊದಲ ಬಲಿಯಾಗಿಯಾಗಿ ನಾವು 10 ಪ್ರಮುಖ ವಲಯಗಳಲ್ಲಿ ಸುಮಾರು ₹2.17 ಲಕ್ಷ ಕೋಟಿ ನಷ್ಟ ಅನುಭವಿಸಬಹುದು.”

ರೈತರ ಮೇಲೆ ಪರಿಣಾಮ, ಮೋದಿ ಭರವಸೆ ವಿಫಲ,

ಅಮೆರಿಕದೊಂದಿಗೆ ನಡೆದ ದ್ವಿಪಕ್ಷೀಯ ವ್ಯಾಪಾರ ಚರ್ಚೆಗಳಲ್ಲಿ ರೈತರ ಹಿತಾಸಕ್ತಿಗಳನ್ನು ಕಾಪಾಡುವುದಾಗಿ ಮೋದಿ ನೀಡಿದ ಭರವಸೆ ಇದೀಗ ಪ್ರಶ್ನೆಯಲ್ಲಿದೆ. “ಈ ಸುಂಕ ನೀತಿಯ ಪ್ರಭಾವದಿಂದಾಗಿ, ರೈತರ ಮೇಲೆ ದುಷ್ಪರಿಣಾಮ ಬೀರಲಿದೆ. ಮೋದಿ ನೀಡಿದ್ದ ಭರವಸೆ ಕೇವಲ ಮಾತಿಗೆ ಸೀಮಿತವಾಗಿದೆ,” ಎಂದು ಖರ್ಗೆ ಹೇಳಿದ್ದಾರೆ.

ಜವಳಿ ಮತ್ತು ಆಭರಣ ವಲಯಗಳಿಗೆ ಬಿಕ್ಕಟ್ಟಿನ ಸೂಚನೆ,

ಅಮೆರಿಕದ ಸುಂಕದಿಂದ ಜವಳಿ ಕ್ಷೇತ್ರ ಅತ್ಯಂತ ಗಂಭೀರ ಹಂತಕ್ಕೆ ತಲುಪಿದ್ದು, ಸುಮಾರು 5,00,000 ಉದ್ಯೋಗಗಳು ಅಪಾಯದಲ್ಲಿವೆ. ಇದೇ ರೀತಿಯಲ್ಲಿ ರತ್ನ ಮತ್ತು ಆಭರಣ ವಲಯಕ್ಕೂ ಭಾರಿ ಹೊಡೆತ ಬಿದ್ದಿದ್ದು, ಶೇಕಡಾ 50ರಷ್ಟು ಸುಂಕ ಮುಂದುವರೆದರೆ ಸುಮಾರು 1.5 ರಿಂದ 2 ಲಕ್ಷ ಉದ್ಯಮಗಳು ಮುಚ್ಚಲಿಕ್ಕಾಗುವ ಸಾಧ್ಯತೆ ಇದೆ ಎಂದು ಖರ್ಗೆ ಎಚ್ಚರಿಸಿದ್ದಾರೆ.

The post ಅಮೆರಿಕದ ಸುಂಕ ನಿಟ್ಟಿಗೆ ಖರ್ಗೆ ಕಿಡಿ: ದೇಶದ ಹಿತ ಕಾಪಾಡಲು ಪ್ರಧಾನಿ ಮೋದಿ ವಿಫಲ, ಎಎಐಸಿಸಿ ಅಧ್ಯಕ್ಷರ ವಾಗ್ದಾಳಿ. appeared first on Good News 24x7.

]]>