terrorist attack Archives - Good News 24x7 https://www.goodnews24x7.com/tag/terrorist-attack/ Kannada Wed, 07 May 2025 12:43:57 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg terrorist attack Archives - Good News 24x7 https://www.goodnews24x7.com/tag/terrorist-attack/ 32 32 ‘ಸಿಂಧೂರ-ರಾಮಯ್ಯ’ ಆದ ಸಿಎಂ ಸಿದ್ದರಾಮಯ್ಯ! https://www.goodnews24x7.com/cm-siddaramaiah-becomes-sindoor-ramaiah/ Wed, 07 May 2025 12:43:57 +0000 https://www.goodnews24x7.com/?p=3703 ಬೆಂಗಳೂರು : ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ಸರ್ಕಾರದಿಂದ ಉಗ್ರದ ಶಿಬಿರಗಳನ್ನು ಗುರಿಯಾಗಿಸಿಕೊಂಡು 9 ಉಗ್ರ ನೆಲೆಗಳ ಮೇಲೆ ಬಾಂಬ್ ಹಾಕಿ ಛಿದ್ರಗೊಳಿಸಿದೆ. ಇದರ ಕುರಿತಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡುವುದಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಣೆಗೆ ಸಿಂಧೂರ ಇಟ್ಟುಕೊಂಡು ಬಂದಿದ್ದಾರೆ. ಇದನ್ನು…

The post ‘ಸಿಂಧೂರ-ರಾಮಯ್ಯ’ ಆದ ಸಿಎಂ ಸಿದ್ದರಾಮಯ್ಯ! appeared first on Good News 24x7.

]]>

ಬೆಂಗಳೂರು : ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ಸರ್ಕಾರದಿಂದ ಉಗ್ರದ ಶಿಬಿರಗಳನ್ನು ಗುರಿಯಾಗಿಸಿಕೊಂಡು 9 ಉಗ್ರ ನೆಲೆಗಳ ಮೇಲೆ ಬಾಂಬ್ ಹಾಕಿ ಛಿದ್ರಗೊಳಿಸಿದೆ. ಇದರ ಕುರಿತಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡುವುದಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಣೆಗೆ ಸಿಂಧೂರ ಇಟ್ಟುಕೊಂಡು ಬಂದಿದ್ದಾರೆ. ಇದನ್ನು ನೋಡಿದ ಜನರು ಆಪರೇಷನ್ ಸಿಂಧೂರ ಸುದ್ದಿಗೋಷ್ಠಿಗೆ ನಮ್ಮ ಸಿಎಂ ಸಿಂಧೂರ-ರಾಮಯ್ಯ ಆಗಿದ್ದಾರೆ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನು ಸುದ್ದಿಗೋಷ್ಠಿ ಆರಂಭದ ಬೆನ್ನಲ್ಲಿಯೇ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಧ್ಯಮಗಳಿಂದ ನೀವು ಹಣೆಗೆ ಸಿಂಧೂರ ಇಟ್ಟುಕೊಂಡು ಬಂದಿರುವ ಉದ್ದೇಶವೇನು ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ನಾನು ಪಟಾಲಮ್ಮ ದೇವಾಲಯಕ್ಕೆ ಹೋಗಿದ್ದೆ. ಅಲ್ಲಿ ದೇವರ ದರ್ಶನ ಮಾಡಿದ ನಂತರ ಸಿಂಧೂರ ಇಟ್ಟುಕೊಂಡು ಬಂದಿದ್ದೇನೆ ಎಂದು ಹೇಳಿ ಈ ವಿಚಾರವನ್ನು ಅಲ್ಲಿಗೆ ಮೊಟಕುಗೊಳಿಸಿದರು. ಈ ಬಗ್ಗೆ ಇನ್ನೂ ಪ್ರಶ್ನೆ ಕೇಳುವುದಕ್ಕೆ ಅವಕಾಶ ಇಲ್ಲದಂತೆ ಸುದ್ದಿಗೋಷ್ಠಿಯ ವಿಚಾರಗಳನ್ನು ಮುಂದುವರೆಸಿದರು.

ಸಿದ್ದರಾಂಯ್ಯ ಅವರು ಸುದ್ದಿಗೋಷ್ಠಿ ಆರಂಭ ಆಗುತ್ತಿದ್ದಂತೆ ಕೆಲವರು ತಮ್ಮ ಸಾಮಾಜಿಕ ಜಾಲತಾಣಲದಲ್ಲಿ ಈ ಬಗ್ಗೆ ಟೀಕೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಇಂದು ಹಣೆಗೆ ಅತ್ಯಂತ ದೊಡ್ಡ ಸಿಂಧೂರವನ್ನು ಇಟ್ಟುಕೊಂಡಿದ್ದಾರೆ. ಹಿಂದುಗಳನ್ನು ಓಲೈಸಲು ಹಣೆಗೆ ಸಿಂಧೂರ ಇಟ್ಟು ಮುಂದಿನ ಎಲೆಕ್ಷನ್ನಿಗೆ ಸಿದ್ದರಾಮಯ್ಯ ರೆಡಿ ಆಗುತ್ತಿದ್ದಾರೆ ಎಂಬ ಮಾತುಗಳನ್ನು ಕೆಲವರು ಹೇಳಿದ್ದಾರೆ. ಈ ಸಿದ್ದರಾಮಯ್ಯ ಅವರ ವಿಡಿಯೋ ನೋಡಿದ ನೆಟ್ಟಿಗರು ತರಹೇವಾರಿ ಕಾಮೆಂಟ್ಗಳನ್ನು ಮಾಡಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ಹಂಚಿಕೊಂಟ ನೆಟ್ಟಿಗರು, ‘ಸಿಂಧೂರ ರಾಮಯ್ಯ ಅತ್ಯುತ್ತಮ ದಿನವು ಇಟ್ಟುಕೊಳ್ಳಿ ಸಿಂಧೂರ ಬಂಡಾರ’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ‘ಅತೀ ಭಾರವಾದ ಹೃದಯದಿಂದ ಯೋಧರ ಸಾಧನೆಯನ್ನು ಬಣ್ಣಿಸಿದಂತೆ ಆಗಿದೆ. ಇದೇನು ಶ್ಲಾಘನೆಯೋ ಅಥವಾ ಶೋಕ ಸಂದೇಶವೊ ಎಂದು ತಿಳಿಯುವದಿಲ್ಲ’ ಎಂದು ಹೇಳಿದ್ದಾರೆ. ಇನ್ನೊಬ್ಬರು ‘ನಿಮ್ಮ ಹಣೆಯಲ್ಲಿರುವ ಸಿಂಧೂರ ನೋಡಿ ನಗು ಬಂತು ಜೈ ಹಿಂದ್ ಜೈ ಭಾರತ’ ಎಂದಿದ್ದಾರೆ. ಇನ್ನೊಬ್ಬರು ಆಪರೇಷನ್ ಸಿಂಧೂರ್ ಓಕೆ ಆದರೆ, ನಿಮ್ಮ ಹಣೆಯಲ್ಲಿ ಸಿಂಧೂರ ಯಾಕೇ???’ ಎಂದು ಪ್ರಶ್ನೆ ಮಾಡಿದ್ದಾರೆ. ಮತ್ತೊಬ್ಬರು ‘ಸಿದ್ದಣ್ಣ ಏನ್ ಕುಂಕುಮ ಇಟ್ಕೊಂಡಿದೀಯ ಒಂದ ಎರಡ-ನಿಮ್ ಅವತಾರಗಳು’ ಎಂದು ಟೀಕಿಸಿದ್ದಾರೆ.

ಸಿಂಧೂರ ಇಡಲು ವಿರೋಧಿಸಿದ್ದ ಸಿದ್ದರಾಮಯ್ಯ


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವು ಬಾರಿ ನಾನು ದೇವರನ್ನು ನಂಬುವುದಿಲ್ಲ, ಹಣೆಗೆ ಕುಂಕುಮ ಇಟ್ಟುಕೊಳ್ಳಲು ಭಯವಾಗುತ್ತದೆ ಎನ್ನುವ ಹೇಳಿಕೆ ಹೇಳಿದ್ದರು. ಈ ಹಿಂದೆ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಸಂದರ್ಭದಲ್ಲಿ ಅಲ್ಲಿನ ಕಾಮಗಾರಿ ಚಾಲನೆಗೆ ಹೋದ ವೇಳೆ ಪೂಜಾರಿಯೊಬ್ಬರು ಹಣೆಗೆ ಕುಂಕುಮ ಇಡಲು ಬಂದಾಗ, ‘ಬೇಡಪ್ಪ ಬೇಡ ನನಗೆ ಕುಂಕುಮ ಇಟ್ಟುಕೊಳ್ಳುವುದಕ್ಕೆ ಭಯ ಆಗುತ್ತದೆ’ ಎಂದು ಹೇಳಿದ್ದರು. ಆದರೆ, ಇದಾದ ನಂತರ ಸಿದ್ದರಾಮಯ್ಯ ಅವರು ಇದೀಗ ವರುಣ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಸಿಎಂ ಆಗಿದ್ದಾರೆ. ಕಳೆದ ವರ್ಷ ಸೆಪ್ಟಂಬರ್ನಲ್ಲಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೋಗಿದ್ದ ವೇಳೆ ಹಾಗೂ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಹೋಗಿದ್ದ ವೇಳೆ ತಾವೇ ಹಣೆಗೆ ಕುಂಕುಮ ಧರಿಸಿಕೊಂಡು ಬಂದಿದ್ದರು. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಸ್ತಿಕರೋ, ನಾಸ್ತಿಕರೋ ಎನ್ನುವ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.

ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು?
ಸೇನೆ ಉಗ್ರಗಾಮಿ ನೆಲೆ ನಾಶ ಮಾಡಿದೆ. ಪರಾಕ್ರಮ ಮೆರೆದಿದ್ದಾರೆ. ಸೈನಿಕರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಭಾರತದ ಸೇನೆ ಸಿಂಧೂರ ಆಪರೇಷನ್ ಮಾಡಿದೆ. 9 ಉಗ್ರಗಾಮಿ ನೆಲೆಗಳ ಮೇಲೆ ದಾಳಿಮಾಡಿದೆ. ಪಾಕಿಸ್ತಾನದವರಿಗೆ ಉಗ್ರಗಾಮಿ ಗಳು ಅಂತ ಗೊತ್ತಿದೆ. ಆದರೂ ಬೆಂಬಲಕೊಡ್ತಾ ಬಂದಿದ್ದಾರೆ. 26 ಅಮಾಯಕರನ್ನು ಉಗ್ರರು ಕೊಂದು ಹಾಕಿದ್ದರು. ಇವರನ್ನು ಸಾಕುವವರು ಪಾಕಿಸ್ತಾನದವರು. ಅಂತರರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನ ಉಗ್ರರ ದಾಳಿ ಖಂಡಿಸುವ ಕೆಲಸ ಮಾಡಿಲ್ಲ. ಭಾರತದ ದಾಳಿಯನ್ನು ನಾನು ಬೆಂಬಲಿಸುವೆ. ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆ ಇದು. ಉಗ್ರರ ನೆಲೆಗಳ ಮೇಲೆ ಮಾತ್ರ ದಾಳಿ ನಡೆದಿದೆ. ಅಮಾಯಕರ ಸಾವು ಆಗದ ಹಾಗೆ ನೋಡಿಕೊಂಡಿದೆ. ಅದಕ್ಕಾಗಿ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ. ಕೇಂದ್ರ ಸರ್ಕಾರದ ಪರವಾಗಿ ನಾನು ಬೆಂಬಲ ಘೋಷಣೆ ಮಾಡ್ತೇನೆ. ನಾವು ಎಲ್ಲರೂ ಎಚ್ಚರ ವಹಿಸುವ ಕೆಲಸ ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರದ ಜೊತೆಗೆ ಮಾತುಕತೆ ಮಾಡಿ, ಅವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡುಸುವ ಕೆಲಸ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

The post ‘ಸಿಂಧೂರ-ರಾಮಯ್ಯ’ ಆದ ಸಿಎಂ ಸಿದ್ದರಾಮಯ್ಯ! appeared first on Good News 24x7.

]]>
ಪಹಲ್ಗಾಮ್‌ನತ್ತ ಮತ್ತೆ ಮುಖ ಮಾಡಿದ ಪ್ರವಾಸಿಗರು! https://www.goodnews24x7.com/tourists-turn-their-faces-to-pahalgam-again/ Thu, 01 May 2025 07:23:57 +0000 https://www.goodnews24x7.com/?p=3532 ಕಾಶ್ಮೀರ: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಏ.22ರಂದು ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾ*ಳಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಕಾಶ್ಮೀರದಲ್ಲಿ ಎಲ್ಲವೂ ಶಾಂತವಾಗಿದೆ, ಪ್ರವಾಸಿಗರು ಯಾವುದೇ ಭಯವಿಲ್ಲದೆ ಭೂಮಿ ಮೇಲಿನ ಸ್ವರ್ಗಕ್ಕೆ ಭೇಟಿ ನೀಡಬಹುದು ಎಂದು ಲೆಕ್ಕಾಚಾರ ಹಾಕಿಕೊಳ್ಳುತ್ತಿದ್ದ ಮಧ್ಯೆ ಈ ದುರ್ಘಟನೆ…

The post ಪಹಲ್ಗಾಮ್‌ನತ್ತ ಮತ್ತೆ ಮುಖ ಮಾಡಿದ ಪ್ರವಾಸಿಗರು! appeared first on Good News 24x7.

]]>

ಕಾಶ್ಮೀರ: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಏ.22ರಂದು ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾ*ಳಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಕಾಶ್ಮೀರದಲ್ಲಿ ಎಲ್ಲವೂ ಶಾಂತವಾಗಿದೆ, ಪ್ರವಾಸಿಗರು ಯಾವುದೇ ಭಯವಿಲ್ಲದೆ ಭೂಮಿ ಮೇಲಿನ ಸ್ವರ್ಗಕ್ಕೆ ಭೇಟಿ ನೀಡಬಹುದು ಎಂದು ಲೆಕ್ಕಾಚಾರ ಹಾಕಿಕೊಳ್ಳುತ್ತಿದ್ದ ಮಧ್ಯೆ ಈ ದುರ್ಘಟನೆ ಸಂಭವಿಸಿದೆ. ಈ ಭೀಕರ ದುರಂತದ ಬಳಿಕ ಜಮ್ಮು ಮತ್ತು ಕಾಶ್ಮೀರದ ಪ್ರವಾಸೋದ್ಯಮ, ಆರ್ಥಿಕ ಚಟುವಟಿಕೆ ಮೇಲೆ ಗಂಭೀರ ಪರಿಣಾಮ ಉಂಟು ಮಾಡುವ ಅಪಾಯವಿದೆ ಎಂದೇ ವಿಶ್ಲೇಷಿಸಲಾಗುತ್ತಿತ್ತು. ಆದರೀಗ ಪ್ರವಾಸೋದ್ಯಮ ತಜ್ಞರು ಲೆಕ್ಕಾಚಾರ ಉಲ್ಟಾ ಆಯಿತಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ದೇಶದ ಜನತೆ ದಾ*ಳಿಯಲ್ಲಿ ಮೃತಪಟ್ಟವರಿಗೆ ನಮನ ಸಲ್ಲಿಸುತ್ತಿದ್ದರೆ, ಒಂದಷ್ಟು ಜನರು ಮತ್ತೆ ಕಾಶ್ಮೀರ ಪ್ರವಾಸ ಆರಂಭಿಸಿದ್ದಾರೆ. ಇದು ಕಾಶ್ಮೀರದಲ್ಲಿ ಕಳೆದೊಂದು ವಾರದಿಂದ ಸೃಷ್ಟಿಯಾಗಿದ್ದ ಬಿಗುವಿನ ವಾತಾವರಣ ಶಾಂತವಾಯ್ತಾ? ಪ್ರಶ್ನೆ ಹುಟ್ಟು ಹಾಕಿದೆ. ಪಹಲ್ಗಾಮ್ನಲ್ಲಿ ಸಂಭವಿಸಿದ ಭಯೋ* ತ್ಪಾದಕ ದಾ*ಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿ 26 ಪ್ರವಾಸಿಗರು ಸಾ*ವನ್ನಪ್ಪಿದ್ದರು. ಈ ಘಟನೆ ಬಳಿಕ ಕಾಶ್ಮೀರದ ಪ್ರವಾಸೋದ್ಯಮ ಚಟುವಟಿಕೆ ಕೆಲಕಾಲ ಬಿಕೋ ಎನ್ನುತ್ತದೆ ಎಂದೇ ಅಂದಾಜಿಸಲಾಗಿತ್ತು. ಇದಕ್ಕೆ ಪೂರಕವಾಗಿ ಕಾಶ್ಮೀರ ಪ್ರವಾಸ ಬುಕ್ ಮಾಡಿದ್ದವರು ರದ್ದು ಮಾಡುತ್ತಿದ್ದರು. ಈ ಎಲ್ಲ ಬೆಳವಣಿಗೆಗಳ ನಡುವೆ ಪ್ರವಾಸಿಗರು ಮತ್ತೆ ಪಹಲ್ಗಾಮ್ಗೆ ಬರಲು ಪ್ರಾರಂಭಿಸಿದ್ದಾರೆ.

ವಾರಾಂತ್ಯದ ರಜಾ ದಿನವನ್ನು ಕಳೆಯಲು ಒಂದಷ್ಟು ಸಂಖ್ಯೆಯ ಪ್ರವಾಸಿಗರು ಏ.26, 27ರಂದು ಪಹಲ್ಗಾಮ್ ವ್ಯಾಪ್ತಿಗೆ ಆಗಮಿಸಿದ್ದರು. ಪ್ರವಾಸಿಗರು ಲಿದರ್ ನದಿ ದಡದಲ್ಲಿರುವ ಸೆಲ್ಫಿ ಪಾಯಿಂಟ್ನಲ್ಲಿ ಫೋಟೋಗಳನ್ನು ತೆಗೆಯುತ್ತಿದ್ದರು. ಯಾವುದೇ ನಿರ್ಬಂಧಗಳಿಲ್ಲದ ಕಾರಣ ಪ್ರವಾಸಿಗರು ತಮ್ಮ ರಜಾ ದಿನಗಳನ್ನು ಕಳೆಯಲು ನಿರ್ಧರಿಸಿದರು. ಸದ್ಯ ಪ್ರವಾಸಿಗರನ್ನು ಮತ್ತೆ ತನ್ನತ್ತ ಸೆಳೆಯಲು ಕಾಶ್ಮೀರ ಹೋಟೆಲ್ ಮಾಲೀಕರು ರಿಯಾಯಿತಿಗಳನ್ನು ನೀಡುತ್ತಿದ್ದಾರೆ. ಕೆಲವು ಊಟದ ಸ್ಥಳಗಳಲ್ಲಿ ಒಂದು ಊಟದೊಂದಿಗೆ ಇನ್ನೊಂದು ಊಟವನ್ನು ಉಚಿತವಾಗಿ ನೀಡಲಾಗುತ್ತಿದೆ. ಪಹಲ್ಗಾಮ್ನಲ್ಲಿ ಪ್ರವಾಸಿಗರು ಮತ್ತೆ ಕಾಣಿಸಿಕೊಂಡಿದ್ದಾರೆ. ಭಯಾನಕ ಘಟನೆ ನಡೆದರೂ ಪ್ರವಾಸಿಗರು ಹಿಂಜರಿಯದೆ ಬರುತ್ತಿದ್ದಾರೆ. ಏಪ್ರಿಲ್ 22 ರಂದು ಭಯೋ*ತ್ಪಾದಕ ದಾ*ಳಿ ಘಟನೆ ನಂತರ ಎರಡ್ಮೂರು ದಿನ ಪಹಲ್ಗಾಮ್ ಸ್ತಬ್ಧವಾಗಿತ್ತು. ಆದರೆ ಶನಿವಾರ ಪ್ರವಾಸಿಗರು ಮರಳಿ ಬಂದಿದ್ದಾರೆ.

ಈ ಬಗ್ಗೆ ಕೋಲ್ಕೊತ್ತಾದ ಜಾಯ್ದೀಪ್ ಘೋಷ್ ದಸ್ತಿದಾರ್ ಎಂಬುವವರು ಮಾತನಾಡಿ, ‘ಬೈಸರನ್ ಹುಲ್ಲುಗಾವಲು ಪ್ರವಾಸಿಗರಿಗೆ ಮುಕ್ತವಾಗಿಲ್ಲ. ನಾವು ಪಹಲ್ಗಾಮ್ನ ಇತರ ಸ್ಥಳಗಳಿಗೆ ಭೇಟಿ ನೀಡಿದ್ದೇವೆ. ನಾವು ಶುಕ್ರವಾರ ಕಾಶ್ಮೀರಕ್ಕೆ ಬಂದೆವು. ಇಲ್ಲಿ ಎಲ್ಲವೂ ಸಾಮಾನ್ಯವಾಗಿದೆ. ಅಂಗಡಿಗಳು ಮುಚ್ಚಿದ್ದರೂ, ಸ್ಥಳೀಯರು ಮತ್ತು ಭದ್ರತಾ ಸಿಬ್ಬಂದಿ ಸಹಾಯ ಮಾಡುತ್ತಿದ್ದಾರೆ. ಬೈಸರನ್ ಹುಲ್ಲುಗಾವಲು ಮಾತ್ರ ಪ್ರವೇಶಕ್ಕೆ ಲಭ್ಯವಿಲ್ಲ. ಉಳಿದಂತೆ ಎಲ್ಲಾ ಸ್ಥಳಗಳಿಗೂ ಭೇಟಿ ನೀಡಿದ್ದೇವೆʼ ಎಂದು ಹೇಳಿದರು.

ಬಿಹಾರದ ಶಿಕ್ಷಕ ಮೃತ್ಯುಂಜಯ್ ಪಾಂಡೆ ಎಂಬ ಪ್ರವಾಸಿಗರು ತಮ್ಮ ಅನುಭವ ಹಂಚಿಕೊಂಡು, ‘ಏಪ್ರಿಲ್ 24-26 ರವರೆಗೆ ಕಾಶ್ಮೀರ ಪ್ರವಾಸ್ ಬುಕ್ ಮಾಡಿದ್ದೆ. ಆದರೆ ದಾಳಿಯ ನಂತರ ರದ್ದು ಮಾಡಿದೆ. ಪಹಲ್ಗಾಮ್ಗೆ ಭೇಟಿ ನೀಡಲು ಯಾವುದೇ ನಿರ್ಬಂಧಗಳಿಲ್ಲ ಎಂದು ತಿಳಿಯಿತು. ಹೀಗಾಗಿ ಕಾತರತೆ ತಡೆಯಲು ಸಾಧ್ಯವಾಗದೆ ಶನಿವಾರ ಬೆಳಿಗ್ಗೆ ಬಂದೆವು. ಸಂಜೆಯ ವೇಳೆಗೆ ಹಿಂತಿರುಗುತ್ತೇವೆʼ ಎಂದು ತಿಳಿಸಿದ್ದಾರೆ.

ಸಾಮಾನ್ಯವಾಗಿ 3,000-5,000 ಪ್ರವಾಸಿಗರು ಪ್ರತಿದಿನ ಭೇಟಿ ನೀಡುತ್ತಿದ್ದ ಪ್ರವಾಸಿ ತಾಣಗಳು ಖಾಲಿ ಹೊಡೆಯುತ್ತಿದ್ದ, ಕೆಲವೇ ಕೆಲವು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಸೂಕ್ಷ್ಮ ಪ್ರವಾಸಿ ತಾಣಗಳಲ್ಲಿ ಕೇವಲ ಭದ್ರತಾ ಪಡೆಗಳು ಮತ್ತು ಸ್ಥಳೀಯ ನಿವಾಸಿಗಳು ಮಾತ್ರ ಇದ್ದಾರೆ. ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ಹೊರತುಪಡಿಸಿ, ಹೆಚ್ಚಿನ ಅಂಗಡಿಗಳು ಮುಚ್ಚಲ್ಪಟ್ಟಿವೆ. ಒಟ್ಟಾರೆಯಾಗಿ, ಪಹಲ್ಗಾಮ್ನಲ್ಲಿ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಪ್ರವಾಸಿಗರು ಮತ್ತೆ ಭೇಟಿ ನೀಡಲು ಪ್ರಾರಂಭಿಸಿದ್ದಾರೆ. ಸ್ಥಳೀಯರು ಪ್ರವಾಸಿಗರಿಗೆ ಸಹಾಯ ಮಾಡುತ್ತಿದ್ದಾರೆ. ಆದರೂ, ಕೆಲವು ಪ್ರದೇಶಗಳಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲಾಗಿದೆ ಎಂದು ವರದಿಯಾಗಿದೆ.

The post ಪಹಲ್ಗಾಮ್‌ನತ್ತ ಮತ್ತೆ ಮುಖ ಮಾಡಿದ ಪ್ರವಾಸಿಗರು! appeared first on Good News 24x7.

]]>