tigers Archives - Good News 24x7 https://www.goodnews24x7.com/tag/tigers/ Kannada Tue, 04 Nov 2025 13:32:27 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg tigers Archives - Good News 24x7 https://www.goodnews24x7.com/tag/tigers/ 32 32 ನಂಜನಗೂಡಿನ ಹುಸ್ಕೂರು ಗ್ರಾಮದ ಸಮೀಪವಿರುವ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ. https://www.goodnews24x7.com/crocodile-spotted-in-a-lake-near-huskuru-village-in-nanjangud/ Tue, 04 Nov 2025 13:32:27 +0000 https://www.goodnews24x7.com/?p=8032 ನಂಜನಗೂಡು ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ಹುಲಿ ,ಚಿರತೆ, ಆನೆಗಳ, ಕಾಟದ ಸರದಿಯಲ್ಲಿ ಮೊಸಳೆ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ.ಭಾರಿ ಗಾತ್ರದ ಮೊಸಳೆ ಕಂಡು ಕಳೆದ ಮೂರ್ನಾಲ್ಕು ದಿನಗಳಿಂದ ಹೊಲಗದ್ದೆ ನೀರಾವರಿ ಕೃಷಿ ಚಟುವಟಿಕೆಗಳಿಗೆ ರೈತರು ತೆರಳದೆ ಕಂಗಾಲಾಗಿದ್ದಾರೆ. ಹುಸ್ಕೂರು ಗ್ರಾಮದ ಸಮೀಪವಿರುವ ಕೆರೆಯಲ್ಲಿ…

The post ನಂಜನಗೂಡಿನ ಹುಸ್ಕೂರು ಗ್ರಾಮದ ಸಮೀಪವಿರುವ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ. appeared first on Good News 24x7.

]]>

ನಂಜನಗೂಡು ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ಹುಲಿ ,ಚಿರತೆ, ಆನೆಗಳ, ಕಾಟದ ಸರದಿಯಲ್ಲಿ ಮೊಸಳೆ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ.ಭಾರಿ ಗಾತ್ರದ ಮೊಸಳೆ ಕಂಡು ಕಳೆದ ಮೂರ್ನಾಲ್ಕು ದಿನಗಳಿಂದ ಹೊಲಗದ್ದೆ ನೀರಾವರಿ ಕೃಷಿ ಚಟುವಟಿಕೆಗಳಿಗೆ ರೈತರು ತೆರಳದೆ ಕಂಗಾಲಾಗಿದ್ದಾರೆ.

ಹುಸ್ಕೂರು ಗ್ರಾಮದ ಸಮೀಪವಿರುವ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಭಯ ಸೃಷ್ಟಿಸುತ್ತಿರುವ ಮೊಸಳೆಯನ್ನು ಹಿಡಿದು ಗ್ರಾಮಸ್ಥರ ಆತಂಕ ದೂರ ಮಾಡಲು ಅರಣ್ಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದ ಹುಸ್ಕೂರು ಗ್ರಾಮಸ್ಥರು.ಹುಸ್ಕೂರು ಗ್ರಾಮಸ್ಥರ ಮನವಿಗೆ ಕ್ಯಾರೆ ಎನ್ನದ ಅರಣ್ಯ ಅಧಿಕಾರಿಗಳು. ನಂಜನಗೂಡು ಅರಣ್ಯ ಅಧಿಕಾರಿಗಳ ವಿರುದ್ಧ ಹುಸ್ಕೂರು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಭಯ ಸೃಷ್ಟಿಸಿರುವ ಮೊಸಳೆಯನ್ನು ಹಿಡಿದು ಬೇರೆಡೆ ಸ್ಥಳಾಂತರ ಮಾಡಲು ಆಗ್ರಹಿಸಿದ್ದಾರೆ.

The post ನಂಜನಗೂಡಿನ ಹುಸ್ಕೂರು ಗ್ರಾಮದ ಸಮೀಪವಿರುವ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ. appeared first on Good News 24x7.

]]>
ಮಲೆಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳ ಸಾ*ವಿನ ಹಿಂದಿನ ಕಾರಣ ಅನಾವರಣ ; ಇಬ್ಬರು ಆರೋಪಿಗಳ ಬಂಧಿನ! https://www.goodnews24x7.com/reason-behind-death-of-five-tigers-in-male-mahadeshwar-wildlife-sanctuary-revealed-two-accused-arrested/ Sat, 28 Jun 2025 05:44:54 +0000 https://www.goodnews24x7.com/?p=4739 ಚಾಮರಾಜನಗರ : ‘ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ವಲಯದಲ್ಲಿ ಐದು ಹುಲಿಗಳಅಸಹಜ ಸಾವಿಗೆ ವಿಷಪ್ರಾಶನವೇ ಕಾರಣವೆಂದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು. ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು. ‘ಸಾವಿನ ತನಿಖೆಗೆ…

The post ಮಲೆಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳ ಸಾ*ವಿನ ಹಿಂದಿನ ಕಾರಣ ಅನಾವರಣ ; ಇಬ್ಬರು ಆರೋಪಿಗಳ ಬಂಧಿನ! appeared first on Good News 24x7.

]]>

ಚಾಮರಾಜನಗರ : ‘ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ವಲಯದಲ್ಲಿ ಐದು ಹುಲಿಗಳಅಸಹಜ ಸಾವಿಗೆ ವಿಷಪ್ರಾಶನವೇ ಕಾರಣವೆಂದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.
ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು. ‘ಸಾವಿನ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ವರದಿಯನ್ನು ಆಧರಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆಯೂ ತನಿಖೆಗೆ ಸೂಚಿಸಲಾಗಿದ್ದು. ಅವರ ವಿರುದ್ಧವೂ ಶಿಸ್ತು ಕ್ರಮವನ್ನು ಜರುಗಿಸಲಾಗುವುದು’ ಎಂದರು.   ‘ವಿಷಪೂರಿತ ಜಾನುವಾರು ಕಳೇಬರವನ್ನು ತಿಂದು ಹುಲಿಗಳು ಸತ್ತಿವೆ. ಹುಲಿಗಳ ಹಾಗೂ ಹಸುವಿನ ಅಂಗಾಂಗಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಚಾಮರಾಜನಗರ ವೃತ್ತ CCF ಟಿ.ಹೀರಾಲಾಲ್ ಮಾಹಿತಿ ನೀಡಿದರು.


ರಾಷ್ಟ್ರೀಯ ವನ್ಯಪ್ರಾಣಿ ಹುಲಿಗಳ ಕಗ್ಗೊಲೆ ನಡೆದಿರುವ ಸ್ಥಳ ಚಾಮರಾಜ ನಗರ ಜಿಲ್ಲೆಯಲ್ಲಿದೆ. ನಿರ್ದಿಷ್ಟವಾಗಿ ಹನೂರು ತಾಲ್ಲೂಕು ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ರಂ ವಲಯದ ಮೀಣ್ಯಂ ಉಪ ವಲಯದಲ್ಲಿ ನಡೆದಿದೆ
ಕಾಡಿನಲ್ಲಿ ತಮ್ಮ ಪಾಡಿಗೆ ಸಂಚರಿಸುತ್ತಿದ್ದ ತಾಯಿ ಹುಲಿ, ಐದು ಮರಿ ಹುಲಿಗಳ ಸಾವಿಗೆ ಕಾರಣಗಳೇನು. ಎಂಬುದನ್ನು ನಿಖರವಾಗಿ ತಿಳಿಯಲು ಪರಿಸರ ವನ್ಯಜೀವಿ ವಲಯದ ಸಂರಕ್ಷಣೆಗಾಗಿ ಕೆಲಸ ಮಾಡುತ್ತಿರುವ ವ್ಯಕ್ತಿಗಳು ತೊಡಗಿದ್ದಾರೆ. ಮುಖ್ಯವಾಗಿ ಈ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ವನ್ಯಜೀವನ ತಜ್ಞರಾದ ಜೋಸೆಫ್ ಹೂವ‌ರ್, ವಿನೋದ್ ಕುಮಾರ್ ಬಿ. ನಾಯಕ್ ತಾವು ಸಂಗ್ರಹಿಸಿದ ಮಾಹಿತಿ ಹಂಚಿ ಕೊಂಡಿದ್ದಾರೆ.

“ಈ ಘಟನೆಯಲ್ಲಿ ಸ್ಥಳೀಯ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿ ಸಹ ತೀವ್ರವಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಯಾವುದೇ ರೀತಿಯ ಜನಜಾಗೃತಿ ಕೆಲಸವನ್ನು ಅರಣ್ಯ ಸಿಬ್ಬಂದಿ ಮಾಡಿಲ್ಲ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಅರಣ್ಯ- ವನ್ಯಜೀವಿ ಸಂರಕ್ಷಣೆ ಸಾಧ್ಯವೇ ಇಲ್ಲ ವಿಷ ಪ್ರಾಶನದಿಂದ ಮೃತಪಟ್ಟ 5 ಹುಲಿಗಳು ನಮ್ಮ ಅರಣ್ಯ ಇಲಾಖೆಗೆ ಕಾಡಂಚಿನ ಜನರಿಗೆ ಮತ್ತು ನಮ್ಮನ್ನು ಆಳುವ ಜನಪ್ರತಿನಿಧಿಗಳಿಗೆ ಯಾವ ಪಾಠ ಕಳಿಸಿ ಹೋಗಿವೆ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಲಿದೆ’ ಎಂದು ಹೇಳುತ್ತಾರೆ.

ಹುಲಿ ಸಂರಕ್ಷಣೆ ಯೋಜನೆ ಜಾರಿಯಾದ ನಂತರ ಹುಲಿಗಳನ್ನು ಕೊಂದ ದುರ್ಘಟನೆಗಳಿವೆ. ಆದರೆ ಏಕಕಾಲದಲ್ಲಿ ಒಂದು ತಾಯಿ ಹುಲಿ ಮತ್ತು ಐದು ಮರಿ ಹುಲಿಗಳನ್ನು ಕೊಂದ ನಿದರ್ಶನಗಳಿಲ್ಲ. ಇದೇ ಮೊದಲಬಾರಿಗೆ ಇಂಥ ದುರಂತ ನಡೆದಿದೆ. ಹುಲಿಗಳು ಸತ್ತು ಬಿದ್ದಿದ್ದ ಸ್ಥಳದಿಂದ 150 ಅಡಿ ದೂರದಲ್ಲಿ ಜಾನುವಾರು ಕಳೇಬರವಿದೆ. ಇದಕ್ಕೆ ದುಷ್ಕರ್ಮಿಗಳು ವಿಷ ಸಿಂಪಡಿಸಿದ್ದು ಅದರ ಮಾಂಸವನ್ನು ಹುಲಿಗಳು ತಿಂದ ಕಾರಣ ಸಾವನ್ನಪಿರುವ ಶಂಕೆ ಇದೆ. ನಿಯಮಾವಳಿಯಂತೆ ಮರಣೋತ್ತರ ಪರೀಕ್ಷೆ ನಡೆದಿದೆ. ಅದರ ವರದಿ ಬರಬೇಕಾಗಿದೆ. ಮೇಲ್ನೋಟಕ್ಕೆ ವಿಷ ಪ್ರಾಶನದಿಂದಲೇ ಹುಲಿಗಳು ಸತ್ತಿರಬಹುದು ಎಂದು ತಿಳಿಯುತ್ತದೆ.


ಮಲೆಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳ ಸಾವಿಗೆ ವಿಷಪ್ರಾಶನವೇ ಕಾರಣ ಅನ್ನೋದು ಖಚಿತವಾಗಿತ್ತು. ಆದರೆ ವಿಷವಿಟ್ಟವರು ಯಾರು ಅನ್ನೋದು ಗೊತ್ತಾಗಿರಲಿಲ್ಲ. ಇದೀಗ ಅದು ಕೂಡ ಬಯಲಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮತ್ತು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ಮಾದ ಅಲಿಯಾಸ್ ಮಾದುರಾಜು ಹಾಗೂ ನಾಗರಾಜ್ ಬಂಧಿತರು. ಸದ್ಯ ಪೊಲೀಸರು ಮತ್ತು ಅರಣ್ಯ ಸಿಬ್ಬಂದಿಗಳಿಂದ ವಿಚಾರಣೆ ನಡಲಾಗುತ್ತಿದೆ.

The post ಮಲೆಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳ ಸಾ*ವಿನ ಹಿಂದಿನ ಕಾರಣ ಅನಾವರಣ ; ಇಬ್ಬರು ಆರೋಪಿಗಳ ಬಂಧಿನ! appeared first on Good News 24x7.

]]>
ಮಲೆಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾ*ವು: ತನಿಖೆಗೆ ಆದೇಶಿಸಿದ ಸಚಿವ ಈಶ್ವರ ಖಂಡ್ರೆ. https://www.goodnews24x7.com/unnatural-death-of-4-tigers-in-malemahadeshwar-hill-minister-eshwar-khandre-orders-investigation/ Thu, 26 Jun 2025 12:31:41 +0000 https://www.goodnews24x7.com/?p=4681 ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಸಾವನ್ನಪ್ಪಿದ್ದು ಬೆಳಕಿಗೆ ಬಂದಿದೆ. ಹುಲಿ ಮತ್ತು ಮರಿಗಳ ಈ ಅಸಹಜ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಪಿಸಿಸಿಎಫ್ ನೇತೃತ್ವದ…

The post ಮಲೆಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾ*ವು: ತನಿಖೆಗೆ ಆದೇಶಿಸಿದ ಸಚಿವ ಈಶ್ವರ ಖಂಡ್ರೆ. appeared first on Good News 24x7.

]]>

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಸಾವನ್ನಪ್ಪಿದ್ದು ಬೆಳಕಿಗೆ ಬಂದಿದೆ. ಹುಲಿ ಮತ್ತು ಮರಿಗಳ ಈ ಅಸಹಜ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ.


ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ 4 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.

ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿವಂಗತ ಪ್ರಧಾನಿ ಇಂದಿರಾಗಾಂಧಿ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದೆ. 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ.

ಕೂಡಲೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ, ಸ್ಥಳ ತನಿಖೆ ಕೈಗೊಂಡು, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯವಿದ್ದರೆ ಅವರ ವಿರುದ್ಧ ಅಥವಾ ವಿದ್ಯುತ್ ಸ್ಪರ್ಶ, ವಿಷಪ್ರಾಶನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ವಹಿಸುವಂತೆ ಮತ್ತು 3 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಸಚಿವರು ಸೂಚಿಸಿದ್ದಾರೆ.

The post ಮಲೆಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾ*ವು: ತನಿಖೆಗೆ ಆದೇಶಿಸಿದ ಸಚಿವ ಈಶ್ವರ ಖಂಡ್ರೆ. appeared first on Good News 24x7.

]]>