'Toxic' Archives - Good News 24x7 https://www.goodnews24x7.com/tag/toxic/ Kannada Sun, 30 Aug 2026 12:08:08 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg 'Toxic' Archives - Good News 24x7 https://www.goodnews24x7.com/tag/toxic/ 32 32 ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌ https://www.goodnews24x7.com/kichchas-daughter-raves-about-yashs-performance-in-toxic-saanvi-sudeep-says-there-is-magic-in-every-frame/ Sun, 30 Aug 2026 12:08:08 +0000 https://www.goodnews24x7.com/?p=9945 ‘ಟಾಕ್ಸಿಕ್‌’ ಸಿನಿಮಾದಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಅಭಿನಯ ಹಾಗೂ ವಿಭಿನ್ನ ಆವತಾರಕ್ಕೆ ಸ್ಯಾಂಡಲ್‌ವುಡ್‌ ಮಂದಿ ಫಿದಾ ಆಗಿದ್ದು, ಇದೀಗ ಕಿಚ್ಚ ಸುದೀಪ್‌ ಪುತ್ರಿ, ಗಾಯಕಿ ಸಾನ್ವಿ ಸುದೀಪ್‌ ಕೂಡ ಯಶ್ ಅವರ ಪರ್ಫಾರ್ಮೆನ್ಸ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಟಾಕ್ಸಿಕ್: ಎ…

The post ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌ appeared first on Good News 24x7.

]]>

‘ಟಾಕ್ಸಿಕ್‌’ ಸಿನಿಮಾದಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಅಭಿನಯ ಹಾಗೂ ವಿಭಿನ್ನ ಆವತಾರಕ್ಕೆ ಸ್ಯಾಂಡಲ್‌ವುಡ್‌ ಮಂದಿ ಫಿದಾ ಆಗಿದ್ದು, ಇದೀಗ ಕಿಚ್ಚ ಸುದೀಪ್‌ ಪುತ್ರಿ, ಗಾಯಕಿ ಸಾನ್ವಿ ಸುದೀಪ್‌ ಕೂಡ ಯಶ್ ಅವರ ಪರ್ಫಾರ್ಮೆನ್ಸ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರ ಬಿಡುಗಡೆಯಾದ ಬೆನ್ನಲ್ಲೇ ರಿಷಬ್‌ ಶೆಟ್ಟಿ, ರಕ್ಷಿತಾ ಪ್ರೇಮ್‌ ಹಾಗೂ ಸ್ವತಃ ಕಿಚ್ಚ ಸುದೀಪ್‌ ಸೇರಿದಂತೆ ಹಲವು ಗಣ್ಯರು ಸಿನಿಮಾದ ಅದ್ಧೂರಿ ಮೇಕಿಂಗ್‌ ಮತ್ತು ಯಶ್‌ ಪಟ್ಟ ಶ್ರಮವನ್ನು ಕೊಂಡಾಡಿದ್ದರು. ಈ ಸಾಲಿಗೆ ಸೇರಿರುವ ಸಾನ್ವಿ, ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಯಶ್‌ ಅಭಿನಯವನ್ನು ವಿಶೇಷವಾಗಿ ಹೊಗಳಿದ್ದಾರೆ.

ತಮ್ಮ ಪೋಸ್ಟ್‌ನಲ್ಲಿ ಅನಿಸಿಕೆ ಹಂಚಿಕೊಂಡಿರುವ ಸಾನ್ವಿ, ಯಶ್ ಸಾಧನೆಯನ್ನು ‘ಅದ್ಭುತ’ ಎಂಬ ಒಂದೇ ಪದದಲ್ಲಿ ಬಣ್ಣಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಯಶ್ ಕೇವಲ ಅಭಿನಯಿಸಿಲ್ಲ, ಬದಲಿಗೆ ಸಿನಿಮಾದ ಪ್ರತಿಯೊಂದು ಫ್ರೇಮ್‌ನಲ್ಲೂ ತಮ್ಮದೇ ಆದ ಮ್ಯಾಜಿಕ್ ಮಾಡಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಸಿನಿಮಾ ಮುಗಿದು ಎಂಡ್ ಕ್ರೆಡಿಟ್ಸ್ ಬಂದ ಮೇಲೆಯೂ ಮನಸ್ಸಿನಲ್ಲಿ ಹಾಗೇ ಉಳಿದುಕೊಳ್ಳುವಂತಹ ಅಭಿನಯ ಅವರದ್ದು ಎಂದಿರುವ ಅವರು, ತಾನೊಬ್ಬ ಎಷ್ಟು ಶ್ರೇಷ್ಠ ಹಾಗೂ ಕೌಶಲಪೂರ್ಣ ನಟ ಎಂಬುದನ್ನು ಯಶ್ ವಿಶ್ವಕ್ಕೆ ಮತ್ತೊಮ್ಮೆ ತೋರಿಸಿಕೊಟ್ಟಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸ್ವತಃ ಸುದೀಪ್‌ ಅವರು ಸಿನಿಮಾ ಬಗ್ಗೆ ಮೆಚ್ಚುಗೆ ಸೂಚಿಸಿದ ಬೆನ್ನಲ್ಲೇ, ಅವರ ಪುತ್ರಿ ಸಾನ್ವಿ ಕೂಡ ಯಶ್‌ ಅವರ ಮಾಸ್‌ ಆವತಾರ ಹಾಗೂ ನಟನೆಯನ್ನು ಕೊಂಡಾಡಿರುವುದು ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಅಭಿಮಾನಿಗಳ ಗಮನ ಸೆಳೆಯುತ್ತಿದೆ.

The post ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌ appeared first on Good News 24x7.

]]>
ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ! https://www.goodnews24x7.com/after-ram-charan-kiccha-sudeeps-bodyguards-now-yash-has-a-bodyguard/ Wed, 26 Aug 2026 12:04:32 +0000 https://www.goodnews24x7.com/?p=9926 ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

The post ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ! appeared first on Good News 24x7.

]]>

ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ ಮೂಲದ ಅಂತರಾಷ್ಟ್ರೀಯ ಮಾರ್ಷಲ್‌ ಆರ್ಟ್ಸ್‌ ಪಟು ಹಾಗೂ ಮಾಡೆಲ್ ಕೆವಿನ್‌ ಕುಂಟಾ ತಮ್ಮ ದೈತ್ಯ ದೇಹಕಟ್ಟು ಮತ್ತು ರಗಡ್ ಲುಕ್‌ನಿಂದಾಗಿ ಇಂಟರ್‌ನೆಟ್‌ನಲ್ಲಿ ವೈರಲ್ ಆಗಿದ್ದರು. ಅದೇ ರೀತಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರ ಅಕ್ಕನ ಮಗ ಸಂಚೀತ್‌ ಸಂಜೀವ್‌ ಅಭಿನಯದ ‘ಮ್ಯಾಂಗೋ ಪಚ್ಚ’ ಚಿತ್ರದ ಪ್ರಚಾರ ಸಂದರ್ಭದಲ್ಲಿ, ಸುದೀಪ್‌ ಅವರ ಕೆಂಪು-ಬಿಳಿ ಮೈಬಣ್ಣದ ಇಟಲಿ ಮೂಲದ ಬಾಡಿಗಾರ್ಡ್‌ ಸರ್ಗಿಯುಝ್‌ ವೋಲಾಕ್‌ ನೆಟ್ಟಿಗರ ಗಮನ ಸೆಳೆದು ಭಾರಿ ಸ್ಪಾಟ್‌ಲೈಟ್ ಪಡೆದುಕೊಂಡಿದ್ದರು. ಇದೀಗ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್‌’ ಸಿನಿಮಾದ ಪ್ರಚಾರ ಕಾರ್ಯಗಳು ನಡೆಯುತ್ತಿದ್ದು, ಅವರ ಹಿಂದಿನ ಶಕ್ತಿಯಾಗಿ ನಿಂತಿರುವ ಪಕ್ಕಾ ದೇಸಿ ದೈತ್ಯ ಶ್ರೀನಿವಾಸ್‌ ಅಲಿಯಾಸ್ ‘ಸೀನ’ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಹವಾ ಸೃಷ್ಟಿಸುತ್ತಿದ್ದಾರೆ. ಯಶ್, ರಾಧಿಕಾ ಪಂಡಿತ್ ಹಾಗೂ ಅವರ ಕುಟುಂಬಕ್ಕೆ ಬಂಡೆಯಂತೆ ರಕ್ಷಣೆ ನೀಡುತ್ತಿರುವ ಈ ಯಶ್ ಶ್ರೀನಿವಾಸ್, ಕಟ್ಟುಮಸ್ತಾದ ದೇಹ ಮತ್ತು ತೀಕ್ಷ್ಣವಾದ ಲುಕ್ ಹೊಂದಿದ್ದು ಸಾವಿರಾರು ಫಾಲೋವರ್ಸ್‌ಗಳನ್ನು ಸಂಪಾದಿಸಿದ್ದಾರೆ. ಈ ಹಿಂದೆ ಯಶ್‌ ಅವರಿಗೆ ಬರೋಬ್ಬರಿ 12 ವರ್ಷಗಳ ಕಾಲ ಅಂಗರಕ್ಷಕರಾಗಿದ್ದ ರಾಮಚಂದ್ರ ರಾಜು ಅವರನ್ನು ನಿರ್ದೇಶಕ ಪ್ರಶಾಂತ್‌ ನೀಲ್‌ ಗುರುತಿಸಿ ‘ಕೆಜಿಎಫ್‌’ ಸಿನಿಮಾದ ‘ಗರುಡ’ ಪಾತ್ರಕ್ಕೆ ಆಯ್ಕೆ ಮಾಡಿದ್ದರು. ಆ ಒಂದು ಪಾತ್ರದ ಮೂಲಕ ಗರುಡ ರಾಮ್‌ ಅವರು ದಕ್ಷಿಣ ಭಾರತದಾದ್ಯಂತ ಬಹುಭಾಷಾ ಖಳನಟನಾಗಿ ಹೊರಹೊಮ್ಮಿ ಹೊಸ ಇತಿಹಾಸವನ್ನೇ ಸೃಷ್ಟಿಸಿದರು. ಪ್ರಸ್ತುತ ಲಕ್ಷ ಲಕ್ಷ ಸಂಬಳ ಪಡೆಯುತ್ತಿರುವ ಶ್ರೀನಿವಾಸ್ ಅವರಿಗೂ ಅಂತಹದ್ದೇ ಸುವರ್ಣ ಅವಕಾಶ ಸಿಗಲಿ ಎಂಬುದು ಅಭಿಮಾನಿಗಳ ಆಶಯವಾಗಿದ್ದು, ಇವರ ರಗಡ್ ಅವತಾರಕ್ಕೆ ವಿಲನ್ ಪಾತ್ರಗಳು ಪಕ್ಕಾ ಸೂಟ್ ಆಗುವುದರಿಂದ ಮುಂದಿನ ದಿನಗಳಲ್ಲಿ ಇವರೂ ಕೂಡ ಬೆಳ್ಳಿತೆರೆಯಲ್ಲಿ ದೊಡ್ಡ ಮಟ್ಟದ ಖಳನಟನಾಗಿ ಮಿಂಚಿದರೂ ಆಶ್ಚರ್ಯವಿಲ್ಲ.

The post ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ! appeared first on Good News 24x7.

]]>
ಸಖತ್ ಬೋಲ್ಡ್ ಅವತಾರದಲ್ಲಿ ಯಶ್​-ಕಿಯಾರಾ ‘ತಬಾಹಿ’ https://www.goodnews24x7.com/yash-kiara-in-a-very-bold-avatar-for-tabahi/ Wed, 08 Jul 2026 07:34:19 +0000 https://www.goodnews24x7.com/?p=9807 ರಾಕಿಂಗ್ ಸ್ಟಾರ್ ಯಶ್ ಹಾಗೂ ಕಿಯಾರಾ ಅಡ್ವಾಣಿ ನಟನೆಯ ‘ಟಾಕ್ಸಿಕ್’ ಸಿನಿಮಾದ ಮೊದಲ ವಿಡಿಯೋ ಸಾಂಗ್ ‘ತಬಾಹಿ’ ಬಿಡುಗಡೆಯಾಗಿದೆ. ಹಾಡಿನಲ್ಲಿ ಯಶ್ ಹಾಗೂ ಕಿಯಾರಾ ಅವರ ಸಖತ್ ಬೋಲ್ಡ್ ಮತ್ತು ಗ್ಲಾಮರಸ್ ಅವತಾರ ಸೋಷಿಯಲ್ ಮೀಡಿಯಾದಲ್ಲಿ ಬೆಂಕಿ ಹಚ್ಚಿದೆ. ಆಗಸ್ಟ್ 26…

The post ಸಖತ್ ಬೋಲ್ಡ್ ಅವತಾರದಲ್ಲಿ ಯಶ್​-ಕಿಯಾರಾ ‘ತಬಾಹಿ’ appeared first on Good News 24x7.

]]>

ರಾಕಿಂಗ್ ಸ್ಟಾರ್ ಯಶ್ ಹಾಗೂ ಕಿಯಾರಾ ಅಡ್ವಾಣಿ ನಟನೆಯ ‘ಟಾಕ್ಸಿಕ್’ ಸಿನಿಮಾದ ಮೊದಲ ವಿಡಿಯೋ ಸಾಂಗ್ ‘ತಬಾಹಿ’ ಬಿಡುಗಡೆಯಾಗಿದೆ. ಹಾಡಿನಲ್ಲಿ ಯಶ್ ಹಾಗೂ ಕಿಯಾರಾ ಅವರ ಸಖತ್ ಬೋಲ್ಡ್ ಮತ್ತು ಗ್ಲಾಮರಸ್ ಅವತಾರ ಸೋಷಿಯಲ್ ಮೀಡಿಯಾದಲ್ಲಿ ಬೆಂಕಿ ಹಚ್ಚಿದೆ. ಆಗಸ್ಟ್ 26 ರಂದು ರಿಲೀಸ್ ಆಗಲಿರುವ ಈ ಚಿತ್ರದ ಹಾಡಿನ ಸಂಪೂರ್ಣ ವಿವರ ಇಲ್ಲಿದೆ.

ಟಾಕ್ಸಿಕ್’ ಚಿತ್ರದಿಂದ ‘ತಬಾಹಿ’ ವಿಡಿಯೋ ಸಾಂಗ್ ಔಟ್
ರಾಯ-ರುಮಿ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ
ಯೋಗರಾಜ್ ಭಟ್ ಸಾಹಿತ್ಯದ ಮೂಡಿ ಬಂದ ಹಾಡು
ರಾಕಿಂಗ್ ಸ್ಟಾರ್ ಯಶ್ ಹಾಗೂ ಕಿಯಾರಾ ಅಡ್ವಾಣಿ ಅವರ ಹಾಟೆಸ್ಟ್ ಅವತಾರ ಅನಾವರಣಗೊಂಡಿದೆ. ‘ಟಾಕ್ಸಿಕ್’ ಚಿತ್ರದ ‘ತಬಾಹಿ’ ಹಾಡಿನಲ್ಲಿ ಇಬ್ಬರೂ ಸಖತ್ ಬೋಲ್ಡ್​ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ರೊಮ್ಯಾನ್ಸ್ ಮಿತಿಮೀರಿದೆ. ಈ ವಿಡಿಯೋದ ನೋಡಿದ ಎಲ್ಲರೂ ಕಣ್ಣರಳಿಸುತ್ತಿದ್ದಾರೆ. ಕಿಯಾರಾ ಅವರ ಗ್ಲಾಮರ್, ಯಶ್ ಅವರ ಕಟ್ಟುಮಸ್ತಾದ ದೇಹ ಕಂಡು ಎಲ್ಲರೂ ನಿಬ್ಬೆರಗಾಗಿದ್ದಾರೆ.

‘ಟಾಕ್ಸಿಕ್’ ಸಿನಿಮಾ ಆಗಸ್ಟ್​ 26ರಂದು ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಅದರ ಭಾಗವಾಗಿ ಸಿನಿಮಾ ಪ್ರಚಾರ ಆರಂಭಿಸಿದೆ. ಈ ಮೊದಲು ಟೀಸರ್​​ಗಳ ಮೂಲಕ ಸೆಳೆದಿದ್ದ ಈ ಚಿತ್ರ ತಂಡ ಈಗ ‘ತಬಾಹಿ’ ವಿಡಿಯೋ ಸಾಂಗ್ ಅನಾವರಣ ಮಾಡಿದೆ. ಬೆಳಿಗ್ಗೆ 11.33ಕ್ಕೆ ಸರಿಯಾಗಿ ಸಾಂಗ್ ರಿಲೀಸ್ ಆಗಿದೆ.

ಯಶ್ ಹಾಗೂ ಕಿಯಾರಾ ‘ಟಾಕ್ಸಿಕ್’ ಸಿನಿಮಾದಲ್ಲಿ ಮುಖ್ಯಭೂಮಿಕೆಯಲ್ಲಿದ್ದಾರೆ. ‘ತಬಾಹಿ’ ಹಾಡಿನ ಉದ್ದಕ್ಕೂ ಯಶ್ ಹಾಗೂ ಕಿಯಾರಾ ರೊಮ್ಯಾನ್ಸ್ ಮಾಡುತ್ತಾರೆ. ಯಶ್ ಅವರು ರಾಯ ಪಾತ್ರದಲ್ಲಿ ಕಾಣಿಸಿಕೊಂಡರೆ, ಕಿಯಾರಾ ಅವರು ರುಮಿ ಪಾತ್ರದಲ್ಲಿ ನಟಿಸಿದ್ದಾರೆ. ಒಂದು ದೃಶ್ಯದಲ್ಲಿ ನಯನತಾರಾ ಕೂಡ ಕಾಣಿಸುತ್ತಾರೆ.

 

ಈ ಸಾಂಗ್ ಕೇವಲ ಸಾಂಗ್ ಆಗಿ ಮಾತ್ರ ಉಳಿದಿಲ್ಲ, ಸಿನಿಮಾದಲ್ಲಿ ದೃಶ್ಯ ಎಷ್ಟು ಅದ್ದೂರಿಯಾಗಿ ಇರಲಿದೆ ಎಂಬುದಕ್ಕೆ ಒಂದು ಮಾದರಿ ರೀತಿಯಲ್ಲಿ ಕಾಣಿಸಿದೆ. ಅದ್ದೂರಿ ದೃಶ್ಯಗಳು ಗಮನ ಸೆಳೆಯುವ ರೀತಿಯಲ್ಲಿ ಇದೆ. ಈ ಹಾಡಿಗೆ ಯೋಗರಾಜ್​ ಭಟ್ ಅವರು ಸಾಹಿತ್ಯ ಬರೆದಿದ್ದಾರೆ. ಈ ಮೊದಲು ಲಿರಿಕಲ್ ವಿಡಿಯೋ ಮಾತ್ರ ರಿಲೀಸ್ ಆಗಿತ್ತು.

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಪ್ಯಾನ್ ವರ್ಡ್​ ಸಿನಿಮಾ ಇದೇ ಆಗಸ್ಟ್ 26ರಂದು ಅದ್ಧೂರಿಯಾಗಿ ವಿಶ್ವಾದ್ಯಂತ ತೆರೆಗೆ ಬರಲು ಸಜ್ಜಾಗುತ್ತಿದೆ. ಖ್ಯಾತ ನಿರ್ದೇಶಕಿ ಗೀತು ಮೋಹನ್ ದಾಸ್ ಆ್ಯಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರಕ್ಕೆ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಂಸ್ಥೆಗಳು ಜಂಟಿಯಾಗಿ ಭಾರಿ ಬಜೆಟ್‌ನಲ್ಲಿ ಬಂಡವಾಳ ಹೂಡಿವೆ. ಚಿತ್ರದಲ್ಲಿ ಯಶ್ ಅವರಿಗೆ ಜೋಡಿಯಾಗಿ ಬಾಲಿವುಡ್ ಬೆಡಗಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದು, ಇವರೊಂದಿಗೆ ನಯನತಾರಾ, ಹುಮಾ ಖುರೇಷಿ ಮತ್ತು ರುಕ್ಮಿಣಿ ವಸಂತ್ ಸೇರಿದಂತೆ ದಕ್ಷಿಣ ಹಾಗೂ ಬಾಲಿವುಡ್‌ನ ದಂಡೇ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಒಟ್ಟಿಗೆ ಶೂಟ್ ಆಗಿರುವ ಈ ಸಿನಿಮಾ, ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳಿಗೂ ಡಬ್ ಆಗಿ ಬಿಡುಗಡೆಯಾಗುತ್ತಿದ್ದು, ಸದ್ಯ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ.

 

The post ಸಖತ್ ಬೋಲ್ಡ್ ಅವತಾರದಲ್ಲಿ ಯಶ್​-ಕಿಯಾರಾ ‘ತಬಾಹಿ’ appeared first on Good News 24x7.

]]>
ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್! https://www.goodnews24x7.com/rocking-star-in-a-new-look-with-radhika-pandit/ Sat, 07 Mar 2026 07:49:40 +0000 https://www.goodnews24x7.com/?p=8767 Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಯಶ್ ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ…

The post ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್! appeared first on Good News 24x7.

]]>

Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ.

ಯಶ್
ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ ಅವರ ಲುಕ್ ಮತ್ತು ಸ್ಟೈಲ್ ಅಭಿಮಾನಿಗಳಲ್ಲಿ ಗಮನ ಸೆಳೆದಿತ್ತು. ಗಡ್ಡ ಹಾಗೂ ಲಾಂಗ್ ಹೇರ್‌ನಲ್ಲಿದ್ದ ಯಶ್ ಹಲವು ವರ್ಷಗಳಿಂದ ಅದೇ ಸ್ಟೈಲ್ ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಇದೀಗ ಅದೆಷ್ಟೋ ವರ್ಷಗಳ ಬಳಿಕ ಯಶ್ ಕಂಪ್ಲೀಟ್ ಲುಕ್ ಬದಲಾಗಿದೆ. ಹೊಸ ಲುಕ್‌ನಲ್ಲಿ ಮೊದಲ ಬಾರಿಗೆ ಯಶ್ ಕ್ಯಾಮೆರ ಕಣ್ಣಿಗೆ ಬಿದ್ದಿದ್ದಾರೆ. ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ.
ಕೆಜಿಎಫ್ ಬಳಿಕ ಅದೇ ಲುಕ್‌ನಲ್ಲಿ ಇದ್ದ ಯಶ್
ಕೆಜಿಎಫ್ ಸಿನಿಮಾದ ಯಶಸ್ಸಿನ ಬಳಿಕ ಯಶ್ ಅವರ ಲುಕ್ ಅಭಿಮಾನಿಗಳಲ್ಲಿ ಐಕಾನಿಕ್ ಆಗಿತ್ತು. ಗಡ್ಡ ಬಿಟ್ಟು, ಉದ್ದ ಕೂದಲಿನ ಸ್ಟೈಲ್‌ನಲ್ಲಿ ಅವರು ಹಲವು ವರ್ಷಗಳ ಕಾಲ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದರು.

ಹೊಸ ಲುಕ್‌ನಲ್ಲಿ ದರ್ಶನ
ಇತ್ತೀಚೆಗೆ ಮುಂಬೈನಲ್ಲಿ ಯಶ್ ಹೊಸ ಲುಕ್‌ನಲ್ಲಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಪತ್ನಿ ರಾಧಿಕಾ ಪಂಡಿತ್ ಜೊತೆ ಕ್ಯಾಮರಾ ಕಣ್ಣಿಗೆ ಬಿದ್ದಿದ್ದಾರೆ. ಇದೀಗ ಯಶ್ , ಹೊಸ ಹೇರ್ ಸ್ಟೈಲ್ ಮತ್ತು ಕ್ಲೀನ್ ಲುಕ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಕೆಜಿಎಫ್ ನಂತರ ಇದೇ ಮೊದಲ ಬಾರಿಗೆ ಈ ರೀತಿಯಾಗಿ ಕಾಣಿಸಿಕೊಂಡಿದ್ದಾರೆ.

ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಅಭಿಮಾನಿಗಳಲ್ಲಿ ಬಹಳ ನಿರೀಕ್ಷೆ ಮೂಡಿಸಿದೆ. ಆದರೆ ಇತ್ತೀಚೆಗೆ ಈ ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ ಎಂಬ ಮಾಹಿತಿ ಹೊರಬಿದ್ದಿದೆ . ಈ ಹಿನ್ನೆಲೆಯಲ್ಲಿ ಯಶ್ ಈಗ ತಮ್ಮ ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ.

The post ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್! appeared first on Good News 24x7.

]]>
ದಾಖಲೆಯ ವೀವ್ಸ್ ಗಳಿಸಿದ ‘ಟಾಕ್ಸಿಕ್’ ಟೀಸರ್ https://www.goodnews24x7.com/toxic-teaser-garners-record-views/ Sat, 21 Feb 2026 12:33:03 +0000 https://www.goodnews24x7.com/?p=8437 ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಟೀಸರ್ ನಿನ್ನೆಯಷ್ಟೆ (ಫೆಬ್ರವರಿ 20) ಬಿಡುಗಡೆ ಆಗಿದೆ. ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ ‘ಟಾಕ್ಸಿಕ್’ ನಿನ್ನೆ ಬೆಳಿಗ್ಗೆ 9:30ಕ್ಕೆ ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಟೀಸರ್ ಬಿಡುಗಡೆ ಆಗಿದ್ದು,…

The post ದಾಖಲೆಯ ವೀವ್ಸ್ ಗಳಿಸಿದ ‘ಟಾಕ್ಸಿಕ್’ ಟೀಸರ್ appeared first on Good News 24x7.

]]>

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಟೀಸರ್ ನಿನ್ನೆಯಷ್ಟೆ (ಫೆಬ್ರವರಿ 20) ಬಿಡುಗಡೆ ಆಗಿದೆ. ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ ‘ಟಾಕ್ಸಿಕ್’ ನಿನ್ನೆ ಬೆಳಿಗ್ಗೆ 9:30ಕ್ಕೆ ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಟೀಸರ್ ಬಿಡುಗಡೆ ಆಗಿದ್ದು, ಟೀಸರ್ ಬಿಡುಗಡೆ ಆಗಿ 24 ಗಂಟೆಗಳಾಗಿವೆ. ಈ ಅವಧಿಯಲ್ಲಿ ದಾಖಲೆ ಮೊತ್ತದ ಜನ ಸಿನಿಮಾದ ಟೀಸರ್ ವೀಕ್ಷಿಸಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಟೀಸರ್ ಕೇವಲ 24 ಗಂಟೆಗಳಲ್ಲಿ ಸುಮಾರು ಐದು ಕೋಟಿ ವೀವ್ಸ್ ಗಳಿಸಿಕೊಂಡಿದೆ.

1:55 ನಿಮಿಷದ ಟೀಸರ್ ಅನ್ನು ನಿನ್ನೆ ‘ಟಾಕ್ಸಿಕ್’ ಚಿತ್ರತಂಡ ಬಿಡುಗಡೆ ಮಾಡಿತ್ತು. ಟೀಸರ್, ಸಿನಿಮಾದ ನಿರ್ಮಾಣ ಸಂಸ್ಥೆಯಾದ ಕೆವಿಎನ್​ ಪ್ರೊಡಕ್ಷನ್ಸ್​​ನ ಯೂಟ್ಯೂಬ್ ಚಾನೆಲ್​​ನಲ್ಲಿ ಬಿಡುಗಡೆ ಆಯ್ತು. ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಟೀಸರ್​​ಗೆ ಭರಪೂರ ಮೆಚ್ಚುಗೆಗಳು ವ್ಯಕ್ತವಾಗಿವೆ. ಟೀಸರ್ ಬಿಡುಗಡೆ ಆದ ಕೆಲವೇ ನಿಮಿಷಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

‘ಟಾಕ್ಸಿಕ್​’ನ ಕನ್ನಡದ ಟೀಸರ್ ಬಿಡುಗಡೆ ಆದ 24 ಗಂಟೆಗಳಲ್ಲಿ 74,19,923 ವೀವ್ಸ್ ಪಡೆದುಕೊಂಡಿದೆ. ಕನ್ನಡದ ಟೀಸರ್​​ಗಳ ಮಟ್ಟಿಗೆ ಇದೊಂದು ಹೊಸ ದಾಖಲೆಯೇ ಆಗಿದೆ. ಇನ್ನು ಇದೇ ಸಿನಿಮಾದ ತಮಿಳು ಟೀಸರ್ ಅದೇ ಅವಧಿಯಲ್ಲಿ 54.31 ಲಕ್ಷಕ್ಕೂ ಹೆಚ್ಚು ವೀವ್ಸ್ ಪಡೆದುಕೊಂಡಿದೆ. ಇನ್ನು ಮಲಯಾಳಂ ಟೀಸರ್ 27.63 ಲಕ್ಷಕ್ಕೂ ಹೆಚ್ಚು ವೀವ್ಸ್ ಪಡೆದುಕೊಂಡಿದೆ.

ಅತಿ ಹೆಚ್ಚು ವೀವ್ಸ್ ಪಡೆದುಕೊಂಡಿರುವುದು ‘ಟಾಕ್ಸಿಕ್’ ಸಿನಿಮಾದ ಹಿಂದಿ ಟೀಸರ್. ಕೇವಲ 24 ಗಂಟೆಯಲ್ಲಿ 2.19 ಕೋಟಿಗೂ ಹೆಚ್ಚು ಜನ ‘ಟಾಕ್ಸಿಕ್’ ಸಿನಿಮಾದ ಹಿಂದಿ ಟೀಸರ್ ಅನ್ನು ವೀಕ್ಷಿಸಿದ್ದಾರೆ. ಎರಡನೇ ಸ್ಥಾನ ತೆಲುಗು ಟೀಸರ್​​ಗೆ. ‘ಟಾಕ್ಸಿಕ್’ ಸಿನಿಮಾದ ತೆಲುಗು ಟೀಸರ್ ಅನ್ನು ಕೇವಲ 24 ಗಂಟೆಯಲ್ಲಿ 1.10 ಕೋಟಿಗೂ ಹೆಚ್ಚು ಬಾರಿ ವೀಕ್ಷಿಸಲಾಗಿದೆ. ಅಲ್ಲಿಗೆ ಒಟ್ಟು ಸುಮಾರು 5 ಕೋಟಿ ಬಾರಿ ಟೀಸರ್ ವೀಕ್ಷಣೆ ಕಂಡಿದೆ.

‘ಟಾಕ್ಸಿಕ್’ ಸಿನಿಮಾನಲ್ಲಿ ಯಶ್ ದ್ವಿಪಾತ್ರದಲ್ಲಿ ನಟಿಸಿದ್ದು, ಸಿನಿಮಾನಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಅವರುಗಳು ನಾಯಕಿಯರಾಗಿ ನಟಿಸುತ್ತಿದ್ದಾರೆ. ಸಿನಿಮಾವನ್ನು ಗೀತು ಮೋಹನ್​​​ದಾಸ್ ನಿರ್​​ದೇಶನ ಮಾಡಿದ್ದು, ಸಿನಿಮಾಕ್ಕೆ ಕೆವಿಎನ್ ಮತ್ತು ಯಶ್ ಅವರ ಮಾನ್​​ಸ್ಟರ್ ಮೈಂಡ್ಸ್ ಬಂಡವಾಳ ಹೂಡಿದೆ.

The post ದಾಖಲೆಯ ವೀವ್ಸ್ ಗಳಿಸಿದ ‘ಟಾಕ್ಸಿಕ್’ ಟೀಸರ್ appeared first on Good News 24x7.

]]>
‘ಎದೆ ತಟ್ಟಿ ಹೇಳು ನಾ ಭಾರತೀಯನೆಂದು. ಗರ್ವದಿಂದ ಬಾಳು ನಾ ಕನ್ನಡಿಗನೆಂದು ; ಯಶ್ https://www.goodnews24x7.com/tap-your-chest-and-say-i-am-an-indian-live-with-pride-i-am-a-kannadigan-yash/ Sat, 01 Nov 2025 10:15:07 +0000 https://www.goodnews24x7.com/?p=7965 ಪ್ಯಾನ್ ಇಂಡಿಯಾ ಸ್ಟಾರ್ ಯಶ್ ತಮ್ಮ ಕನ್ನಡ ಪ್ರೀತಿ ಸ್ಪಷ್ಟಪಡಿಸಿದ್ದಾರೆ. ಕನ್ನಡ ರಾಜ್ಯೋತ್ಸವದಂದು ‘ಸಾವಿರ ಭಾಷೆ ನಾಲಿಗೆಯಲ್ಲಿರಲಿ, ಕನ್ನಡ ಭಾಷೆ ಹೃದಯದಲ್ಲಿರಲಿ’ ಎಂದು ಟ್ವೀಟ್ ಮಾಡುವ ಮೂಲಕ ಕನ್ನಡ ಪ್ರೀತಿ ತೋರಿಸಿದ್ದಾರೆ. ಅಲ್ಲದೆ, ಅವರ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಕುರಿತಾದ ಎಲ್ಲಾ…

The post ‘ಎದೆ ತಟ್ಟಿ ಹೇಳು ನಾ ಭಾರತೀಯನೆಂದು. ಗರ್ವದಿಂದ ಬಾಳು ನಾ ಕನ್ನಡಿಗನೆಂದು ; ಯಶ್ appeared first on Good News 24x7.

]]>

ಪ್ಯಾನ್ ಇಂಡಿಯಾ ಸ್ಟಾರ್ ಯಶ್ ತಮ್ಮ ಕನ್ನಡ ಪ್ರೀತಿ ಸ್ಪಷ್ಟಪಡಿಸಿದ್ದಾರೆ. ಕನ್ನಡ ರಾಜ್ಯೋತ್ಸವದಂದು ‘ಸಾವಿರ ಭಾಷೆ ನಾಲಿಗೆಯಲ್ಲಿರಲಿ, ಕನ್ನಡ ಭಾಷೆ ಹೃದಯದಲ್ಲಿರಲಿ’ ಎಂದು ಟ್ವೀಟ್ ಮಾಡುವ ಮೂಲಕ ಕನ್ನಡ ಪ್ರೀತಿ ತೋರಿಸಿದ್ದಾರೆ. ಅಲ್ಲದೆ, ಅವರ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಕುರಿತಾದ ಎಲ್ಲಾ ವದಂತಿಗಳನ್ನು ನಿರ್ಮಾಪಕರು ತಳ್ಳಿ ಹಾಕಿದ್ದು, ಸಿನಿಮಾ ಯುಗಾದಿಗೆ ತೆರೆಗೆ ಬರಲಿದೆ.

ರಾಕಿಂಗ್ ಸ್ಟಾರ್ ಯಶ್ (Yash) ಅವರು ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಅವರಿಗೆ ಕನ್ನಡದ ಮೇಲೆ ಗೌರವ ಇನ್ನೂ ಹಾಗೆಯೇ ಉಳಿದುಕೊಂಡಿದೆ. ಆದರೆ, ಅವರು ಕರ್ನಾಟಕದಲ್ಲಿ ನಡೆಯೋ ಎಲ್ಲಾ ಬೆಳವಣಿಗೆ ಬಗ್ಗೆಯೂ ಪ್ರತಿಕ್ರಿಯೆ ನೀಡೋದಿಲ್ಲ. ಈ ಬಗ್ಗೆ ಅನೇಕರಿಗೆ ಬೇಸರ ಇದೆ. ಯಶ್ ಕನ್ನಡ ಮರೆತಿದ್ದಾರೆ ಎಂಬ ಆರೋಪ ಮರೆತಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಒಂದೇ ಟ್ವೀಟ್ ಮೂಲಕ ಅವರು ಅದನ್ನು ಸುಳ್ಳು ಮಾಡಿದ್ದಾರೆ.

ಇಂದು (ನವೆಂಬರ್ 1) ಕನ್ನಡ ರಾಜ್ಯೋತ್ಸವ. ಈ ಸಮಯದಲ್ಲಿ ಅನೇಕರು ಶುಭಾಶಯ ಕೋರುತ್ತಿದ್ದಾರೆ. ಯಶ್ ಕೂಡ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಟ್ವೀಟ್ ಮಾಡಿದ್ದಾರೆ. ‘ಎದೆ ತಟ್ಟಿ ಹೇಳು ನಾ ಭಾರತೀಯನೆಂದು. ಗರ್ವದಿಂದ ಬಾಳು ನಾ ಕನ್ನಡಿಗನೆಂದು. ಸಾವಿರ ಭಾಷೆ ನಾಲಿಗೆಯಲ್ಲಿರಲಿ. ಕನ್ನಡ ಭಾಷೆ ಹೃದಯದಲ್ಲಿರಲಿ. ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ’ ಎಂದು ಯಶ್ ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.

ಟಾಕ್ಸಿಕ್ ಸಿನಿಮಾ ಯಶ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ನಟನೆ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾ ಹಲವು ಭಾಷೆಯಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್​ಗೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಮುಂದಿನ ವರ್ಷ ಮಾರ್ಚ್ 19ರಂದು ತೆರೆಗೆ ಬರಲಿದೆ. ಯುಗಾದಿ ಪ್ರಯುಕ್ತ ಸಿನಿಮಾ ರಿಲೀಸ್ ಆಗಲಿದೆ.

ಹಬ್ಬಿತ್ತು ವದಂತಿ
‘ಟಾಕ್ಸಿಕ್’ ಸಿನಿಮಾ ಬಗ್ಗೆ ಸಾಕಷ್ಟು ವದಂತಿಗಳು ಹಬ್ಬಿದ್ದವು. ಈ ಸಿನಿಮಾದ ಶೂಟಿಂಗ್ ಬಗ್ಗೆ ಯಶ್ ಹಾಗೂ ನಿರ್ದೇಶಕಿ ಗೀತು ಮೋಹನ್​ದಾಸ್​ಗೆ ಕಿರಿಕ್ ಆಗಿದೆ ಎಂದು ವರದಿ ಆಗಿತ್ತು. ಆದರೆ, ಇದನ್ನು ನಿರ್ಮಾಣ ಸಂಸ್ಥೆ ಕೆವಿಎನ್ ತಳ್ಳಿ ಹಾಕಿದೆ. ಇದು ಕೇವಲ ವಂದತಿ ಎಂದು ಸ್ಪಷ್ಟಪಡಿಸಿದೆ. ಇದರಿಂದ ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ. ಸಿನಿಮಾ ಅಂದುಕೊಂಡ ದಿನಾಂಕದಂದೇ ತೆರೆಗೆ ಬರಲಿದೆ.

The post ‘ಎದೆ ತಟ್ಟಿ ಹೇಳು ನಾ ಭಾರತೀಯನೆಂದು. ಗರ್ವದಿಂದ ಬಾಳು ನಾ ಕನ್ನಡಿಗನೆಂದು ; ಯಶ್ appeared first on Good News 24x7.

]]>
ಟಾಕ್ಸಿಕ್’ ಚಿತ್ರದ ಗ್ಲಿಂಪ್ಸ್ ರಿಲೀಸ್ ಯಶ್ ಲುಕ್ ಹೇಗಿದೆ? https://www.goodnews24x7.com/%e0%b2%9f%e0%b2%be%e0%b2%95%e0%b3%8d%e0%b2%b8%e0%b2%bf%e0%b2%95%e0%b3%8d-%e0%b2%9a%e0%b2%bf%e0%b2%a4%e0%b3%8d%e0%b2%b0%e0%b2%a6-%e0%b2%97%e0%b3%8d%e0%b2%b2%e0%b2%bf%e0%b2%82%e0%b2%aa%e0%b3%8d/ Wed, 08 Jan 2025 07:46:21 +0000 https://www.goodnews24x7.com/?p=1623 ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನದಂದು ವಿಶೇಷ ಉಡುಗೊರೆ ಕೊಡೋದಾಗಿ ‘ಟಾಕ್ಸಿಕ್’ ತಂಡ ಈ ಮೊದಲೇ ಘೋಷಣೆ ಮಾಡಿತ್ತು. ಅಂತೆಯೇ ಇಂದು ಬೆಳಿಗ್ಗೆ 10 ಗಂಟೆ 25 ನಿಮಿಷಕ್ಕೆ ‘ಟಾಕ್ಸಿಕ್’ ಗ್ಲಿಂಪ್ಸ್ ರಿಲೀಸ್ ಆಗಿದೆ. ಯಶ್ ಅವರ ಚಿತ್ರದ ಮೇಲಿರುವ ನಿರೀಕ್ಷೆ…

The post ಟಾಕ್ಸಿಕ್’ ಚಿತ್ರದ ಗ್ಲಿಂಪ್ಸ್ ರಿಲೀಸ್ ಯಶ್ ಲುಕ್ ಹೇಗಿದೆ? appeared first on Good News 24x7.

]]>

ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನದಂದು ವಿಶೇಷ ಉಡುಗೊರೆ ಕೊಡೋದಾಗಿ ‘ಟಾಕ್ಸಿಕ್’ ತಂಡ ಈ ಮೊದಲೇ ಘೋಷಣೆ ಮಾಡಿತ್ತು. ಅಂತೆಯೇ ಇಂದು ಬೆಳಿಗ್ಗೆ 10 ಗಂಟೆ 25 ನಿಮಿಷಕ್ಕೆ ‘ಟಾಕ್ಸಿಕ್’ ಗ್ಲಿಂಪ್ಸ್ ರಿಲೀಸ್ ಆಗಿದೆ. ಯಶ್ ಅವರ ಚಿತ್ರದ ಮೇಲಿರುವ ನಿರೀಕ್ಷೆ ಈಗ ದ್ವಿಗುಣವಾಗಿದೆ.
ನಟ ರಾಕಿಂಗ್ ಸ್ಟಾರ್ ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚುವಂತೆ ಆಗಿದೆ. ಅದಕ್ಕೆ ಕಾರಣ ಆಗಿರೋದು ಈ ಚಿತ್ರದ ಗ್ಲಿಂಪ್ಸ್. ಬರ್ತ್ಡೇ ಪ್ರಯುಕ್ತ ಚಿತ್ರದ ಮೊದಲ ಗ್ಲಿಂಪ್ಸ್ ಬಿಡುಗಡೆ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಜನವರಿ 8 ಯಶ್ ಜನ್ಮದಿನ. ಈ ಪ್ರಯುಕ್ತ ಚಿತ್ರದ ಬಗ್ಗೆ ಅಪ್ಡೇಟ್ ಕೊಡೋದಾಗಿ ತಂಡದವರು ಮೊದಲೇ ಹೇಳಿದ್ದರು. ಅದರಂತೆಯೇ ‘ಟಾಕ್ಸಿಕ್’ ಚಿತ್ರದ ಗ್ಲಿಂಪ್ಸ್ ರಿಲೀಸ್ ಮಾಡಲಾಗಿದೆ. ಇದು ಗಮನ ಸೆಳೆಯುತ್ತಿದೆ.

ಯಶ್ ಅವರು ಕ್ಲಾಸಿ ಲುಕ್ನಲ್ಲಿ ಕ್ಲಬ್ ಒಂದಕ್ಕೆ ಎಂಟ್ರಿ ಕೊಡುತ್ತಾರೆ. ಅವರು ಎಂಟ್ರಿ ಕೊಡೋದು ವಿಂಟೇಜ್ ಕಾರಿನಲ್ಲಿ. ಈ ಲುಕ್ನ ಈ ಮೊದಲೇ ಪೋಸ್ಟರ್ನಲ್ಲಿ ರಿಲೀಸ್ ಮಾಡಲಾಗಿತ್ತು. ಯಶ್ ಅವರ ಲುಕ್ ಈಗ ಗಮನ ಸೆಳೆಯುತ್ತಿದೆ.
‘ಟಾಕ್ಸಿಕ್’ ಚಿತ್ರದ ಬಗ್ಗೆ ಯಾವುದೇ ಹಿಂಟ್ ಕೊಡದ ರೀತಿಯಲ್ಲಿ ಈ ಚಿತ್ರದ ಗ್ಲಿಂಪ್ಸ್ ಮೂಡಿ ಬಂದಿದೆ. ಈ ಸಿನಿಮಾ ಈ ವರ್ಷಾಂತ್ಯಕ್ಕೆ ತೆರೆಗೆ ಬರಲಿದೆ. ಹೀಗಾಗಿ ಈಗಲೇ ಹೆಚ್ಚಿನ ವಿಚಾರ ರಿವೀಲ್ ಮಾಡೋದು ಬೇಡ ಎಂಬ ನಿರ್ಧಾರಕ್ಕೆ ತಂಡ ಬಂದಂತಿದೆ
‘ಟಾಕ್ಸಿಕ್’ ಚಿತ್ರಕ್ಕೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಅವರು ದೊಡ್ಡ ಬಜೆಟ್ನಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಾ ಇದ್ದಾರೆ
ಯಶ್ ಎಂಟ್ರಿ ಕೊಡೋ ಕ್ಲಬ್ನಲ್ಲಿ ದೊಡ್ಡ ಮಟ್ಟದಲ್ಲಿ ಪಾರ್ಟಿ ನಡೆಯುತ್ತಾ ಇರುತ್ತದೆ. ಈ ಪಾರ್ಟಿಯಲ್ಲಿ ಯಶ್ ಕೂಡ ಭಾಗಿ ಆಗುತ್ತಾರೆ. ಆ ಬಳಿಕ ಅವರು ಪಾರ್ಟಿಯಲ್ಲಿ ಎಂಜಾಯ್ ಮಾಡುತ್ತಾರೆ. ಹುಡುಗಿಯ ಮೇಲೆ ಎಣ್ಣೆ ಸುರಿಯುತ್ತಾರೆ.

‘ಟಾಕ್ಸಿಕ್’ ಚಿತ್ರದಲ್ಲಿ ಹಿಂದಿಯ ಕಿಯಾರಾ ಅಡ್ವಾಣಿ, ತಮಿಳಿನ ನಯನತಾರಾ ನಟಿಸುತ್ತಿದ್ದಾರೆ. ಈ ಸಿನಿಮಾ ವರ್ಷಾಂತ್ಯಕ್ಕೆ ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ಡ್ರಗ್ಸ್ ಬಗ್ಗೆ ಇರಲಿದೆ ಎಂದು ಹೇಳಲಾಗುತ್ತಿದೆ. ಸಿನಿಮಾಗಾಗಿ ಫ್ಯಾನ್ಸ್ ಕಾದಿದ್ದಾರೆ.

The post ಟಾಕ್ಸಿಕ್’ ಚಿತ್ರದ ಗ್ಲಿಂಪ್ಸ್ ರಿಲೀಸ್ ಯಶ್ ಲುಕ್ ಹೇಗಿದೆ? appeared first on Good News 24x7.

]]>