treatment Archives - Good News 24x7 https://www.goodnews24x7.com/tag/treatment/ Kannada Mon, 27 Apr 2026 12:08:33 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg treatment Archives - Good News 24x7 https://www.goodnews24x7.com/tag/treatment/ 32 32 ಕೋಮಾಗೆ ಜಾರಿದ್ದ ಹಾಸನದ ಇಂಜಿನಿಯರ್ ಶ್ವೇತಾ ಸಾ* https://www.goodnews24x7.com/hassan-engineer-shweta-dies-after-slipping-into-coma/ Mon, 27 Apr 2026 11:52:24 +0000 https://www.goodnews24x7.com/?p=9428 ಹಾಸನದ 25ರ ಯುವ ಸಾಫ್ಟ್‌ವೇರ್ ಇಂಜಿನಿಯರ್ ಶ್ವೇತಾ ಮೆದುಳಿನಲ್ಲಿ ತೀವ್ರ ರಕ್ತಸ್ರಾವದಿಂದ ಹಠಾತ್ ನಿಧನರಾಗಿದ್ದಾರೆ. ಮನೆಯಲ್ಲಿ ಕುಸಿದುಬಿದ್ದ ನಂತರ ಕೋಮಾಕ್ಕೆ ಜಾರಿದ ಶ್ವೇತಾ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದರು. ಕುಟುಂಬದಲ್ಲಿ ಈ ಘಟನೆ ಆತಂಕ ಮೂಡಿಸಿದೆ. ಪೋಷಕರು ಅಂಗಾಂಗ ದಾನಕ್ಕೆ ಮುಂದಾದರೂ, ಆರೋಗ್ಯ…

The post ಕೋಮಾಗೆ ಜಾರಿದ್ದ ಹಾಸನದ ಇಂಜಿನಿಯರ್ ಶ್ವೇತಾ ಸಾ* appeared first on Good News 24x7.

]]>

ಹಾಸನದ 25ರ ಯುವ ಸಾಫ್ಟ್‌ವೇರ್ ಇಂಜಿನಿಯರ್ ಶ್ವೇತಾ ಮೆದುಳಿನಲ್ಲಿ ತೀವ್ರ ರಕ್ತಸ್ರಾವದಿಂದ ಹಠಾತ್ ನಿಧನರಾಗಿದ್ದಾರೆ. ಮನೆಯಲ್ಲಿ ಕುಸಿದುಬಿದ್ದ ನಂತರ ಕೋಮಾಕ್ಕೆ ಜಾರಿದ ಶ್ವೇತಾ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದರು. ಕುಟುಂಬದಲ್ಲಿ ಈ ಘಟನೆ ಆತಂಕ ಮೂಡಿಸಿದೆ. ಪೋಷಕರು ಅಂಗಾಂಗ ದಾನಕ್ಕೆ ಮುಂದಾದರೂ, ಆರೋಗ್ಯ ಸ್ಥಿತಿಯಿಂದ ಅದು ಸಾಧ್ಯವಾಗಲಿಲ್ಲ.

ಹಾಸನ, ಏ.27: ಸಾಫ್ಟ್‌ವೇರ್ ಇಂಜಿನಿಯರ್ ಹಠಾತ್ ಸಾ*ನ್ನಪ್ಪಿರುವ ಘಟನೆ ನಡೆದಿದೆ. ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ 25 ವರ್ಷದ ಯುವತಿ ಶ್ವೇತಾ, ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಈ ಘಟನೆ ಇಡೀ ಗ್ರಾಮದಲ್ಲಿ ಹಾಗೂ ಕುಟುಂಬಸ್ಥರಲ್ಲಿ ಸೂತಕ ಛಾಯೆ ಆವರಿಸಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಗಂಗಾಧರ್ ಮತ್ತು ಸರೋಜ ದಂಪತಿಯ ಪುತ್ರಿಯಾದ ಶ್ವೇತಾ(25), ಹಾಸನದ ಮ್ಯಾಗ್ನಾ ಸಾಫ್ಟ್ ಕಂಪನಿಯಲ್ಲಿ ಕಳೆದ ಮೂರು ವರ್ಷಗಳಿಂದ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಏಪ್ರಿಲ್ 25ರ ಶುಕ್ರವಾರ ಸಂಜೆ ಮನೆಯಲ್ಲಿದ್ದಾಗ ಶ್ವೇತಾ ಹಠಾತ್ತಾಗಿ ಕುಸಿದು ಬಿದ್ದಿದ್ದರು.
ಕುಸಿದು ಬಿದ್ದ ತಕ್ಷಣವೇ ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮುಂದಾಗಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವ ವೇಳೆಗೆ ಶ್ವೇತಾ ಕೋಮಾಗೆ ಜಾರಿದ್ದರು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿರುವ (Brain Hemorrhage) ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಚಿಕಿತ್ಸೆ ಮಾಡುತ್ತಿರುವಾಗಲೇ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡ ಶ್ವೇತಾ ಸಾ*ನ್ನಪ್ಪಿದ್ದಾರೆ.
ಮಗಳ ಸಾವಿನ ನೋವಿನ ನಡುವೆಯೂ ಪೋಷಕರು ಶ್ವೇತಾ ಅವರ ಅಂಗಾಂಗ ದಾನ ಮಾಡಲು ನಿರ್ಧಾರ ಮಾಡಿದ್ದರು. ಆ ಮೂಲಕ ಮತ್ತೊಬ್ಬರ ಬಾಳಿಗೆ ಬೆಳಕಾಗಲು ಮುಂದಾಗಿದ್ದರು. ಆದರೆ ಆಕೆಯ ದೇಹದ ಆರೋಗ್ಯದ ಸ್ಥಿತಿಗತಿಯಿಂದಾಗಿ ಅಂಗಾಂಗ ದಾನ ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ. ಇಂದು ಬಂಡಿಲಕ್ಕನಕೊಪ್ಪಲು ಗ್ರಾಮದಲ್ಲಿ ಯುವತಿಯ ಅಂತ್ಯಕ್ರಿಯೆ ನಡೆಯಲಿದೆ. ತುಂಬು ವಯಸ್ಸಿನ ಮಗಳ ಹಠಾತ್ ಸಾ*ನಿಂದ ಗಂಗಾಧರ್ ಕುಟುಂಬ ಕಂಗಾಲಾಗಿದ್ದು, ಹಸನ್ಮುಖಿ ಯುವತಿಯ ಸಾವಿಗೆ ಮ್ಯಾಗ್ನಾ ಸಾಫ್ಟ್ ಕಂಪನಿಯ ಸಹೋದ್ಯೋಗಿಗಳು ಮತ್ತು ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

The post ಕೋಮಾಗೆ ಜಾರಿದ್ದ ಹಾಸನದ ಇಂಜಿನಿಯರ್ ಶ್ವೇತಾ ಸಾ* appeared first on Good News 24x7.

]]>
ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ. https://www.goodnews24x7.com/former-prime-minister-h-d-deve-gowdas-health-improves/ Fri, 10 Oct 2025 13:03:15 +0000 https://www.goodnews24x7.com/?p=7685 ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ದೇವೇಗೌಡರು ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ. ಮೂತ್ರಸೋಂಕು ಸಮಸ್ಯೆಯಿಂದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಬೆಂಗಳೂರಿನ  ಮಣಿಪಾಲ್ ಆಸ್ಪತ್ರೆಗೆ ಕೆಲ ದಿನಗಳ ಹಿಂದೆ ದಾಖಲಿಸಲಾಗಿತ್ತು. ಸದ್ಯ ಅರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ. ದೇವೇಗೌಡರು ಇನ್ನೂ ಎರಡು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್…

The post ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ. appeared first on Good News 24x7.

]]>

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ದೇವೇಗೌಡರು ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ.

ಮೂತ್ರಸೋಂಕು ಸಮಸ್ಯೆಯಿಂದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಬೆಂಗಳೂರಿನ  ಮಣಿಪಾಲ್ ಆಸ್ಪತ್ರೆಗೆ ಕೆಲ ದಿನಗಳ ಹಿಂದೆ ದಾಖಲಿಸಲಾಗಿತ್ತು. ಸದ್ಯ ಅರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ. ದೇವೇಗೌಡರು ಇನ್ನೂ ಎರಡು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.

 

 

 

 

 

 

 

ದೇವೇಗೌಡರನ್ನು ಆದಿಚುಂಚನಗಿರಿ ಮಠಾಧೀಶರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳು ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಪ್ರೋ. ಕೆ.ಎಸ್ ರಂಗಪ್ಪ ಭೇಟಿಯನ್ನ ಮಾಡಿ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ

ಐಸಿಯುನಿಂದ ಜನರಲ್ ವಾರ್ಡ್‌ಗೆ ಶಿಫ್ಟ್

 

 

 

 

 

 

ಮೊದಲು ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ದೇವೇಗೌಡರಿಗೆ ಚಿಕಿತ್ಸೆ ನೀಡಲಾಗಿತ್ತು. ಖ್ಯಾತ ವೈದ್ಯ ಡಾ. ಸುದರ್ಶನ್ ಬಲ್ಲಾಳ್ ನೇತ್ವತ್ವದಲ್ಲಿ ಚಿಕಿತ್ಸೆ ನಡೆಯುತ್ತಿತ್ತು, ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ. ಹೀಗಾಗಿ ಬಳಿಕ ಅವರನ್ನು ನಿನ್ನೆ ಐಸಿಯುನಿಂದ ಜನರಲ್ ವಾರ್ಡ್‌ಗೆ ಶಿಫ್ಟ್ ಮಾಡಲಾಗಿತ್ತು.

ಮಾಜಿ ಪ್ರಧಾನಮಂತ್ರಿಗಳು ಹಾಗೂ ವರಿಷ್ಠರಾದ ಶ್ರೀ ಹೆಚ್‌.ಡಿ. ದೇವೇಗೌಡರು ಆರೋಗ್ಯವಾಗಿದ್ದಾರೆ. ಕಾರ್ಯಕರ್ತರು, ಅಭಿಮಾನಿಗಳು ಯಾವುದೇ ರೀತಿ ಆತಂಕಪಡುವ ಅಗತ್ಯವಿಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ.

The post ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ. appeared first on Good News 24x7.

]]>
ಕೆ.ಆರ್.ಪೇಟೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗೆ ಹೃದಯಾಘಾತ; ದುರ್ಮರಣ. https://www.goodnews24x7.com/engineering-student-dies-of-heart-attack-in-k-r-pete/ Wed, 13 Aug 2025 10:31:52 +0000 https://www.goodnews24x7.com/?p=6041 ಗ್ರಾಮದಲ್ಲಿ ಕೆ.ಆರ್.ಪೇಟೆ, ಆ.12- ಹೃದಯಾಘಾತದಿಂದ ಇಂಜಿನಿಯ ರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕರೋಟಿ ನಡೆದಿದೆ. ಗ್ರಾಮದ ನಿವಾಸಿ ನವೀನ್ (21) ಸಾವನ್ನಪ್ಪಿದವರು. ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಮಾಡುತ್ತಿದ್ದ ಈತ ರಜೆ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಆಗಮಿಸಿದ್ದ. ಈ ವೇಳೆ ನವೀನ್‌ಗೆ ಹಠಾತ್ ಹೃದಯಾಘಾತವಾಗಿದ್ದು,…

The post ಕೆ.ಆರ್.ಪೇಟೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗೆ ಹೃದಯಾಘಾತ; ದುರ್ಮರಣ. appeared first on Good News 24x7.

]]>

ಗ್ರಾಮದಲ್ಲಿ ಕೆ.ಆರ್.ಪೇಟೆ, ಆ.12- ಹೃದಯಾಘಾತದಿಂದ ಇಂಜಿನಿಯ ರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕರೋಟಿ ನಡೆದಿದೆ.

ಗ್ರಾಮದ ನಿವಾಸಿ ನವೀನ್ (21) ಸಾವನ್ನಪ್ಪಿದವರು. ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಮಾಡುತ್ತಿದ್ದ ಈತ ರಜೆ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಆಗಮಿಸಿದ್ದ. ಈ ವೇಳೆ ನವೀನ್‌ಗೆ ಹಠಾತ್ ಹೃದಯಾಘಾತವಾಗಿದ್ದು, ಪೋಷಕರು ಕಿಕ್ಕೇರಿ ಸರ್ಕಾರಿ ಆಸ್ಪತ್ರೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡದೆ, ಚನ್ನರಾಯಪಟ್ಟಣ ಆಸ್ಪತ್ರೆಗೆ ತೆರಳುವಂತೆ ತಿಳಿಸಿದ್ದಾರೆ. ಚಿಕಿತ್ಸೆಗಾಗಿ ಚನ್ನರಾಯಪಟ್ಟಣಕ್ಕೆ ಕರೆದೊಯ್ಯುವ ಮಾರ್ಗಮಧ್ಯೆ ನವೀನ್ ಸಾವನ್ನಪ್ಪಿದ್ದಾನೆ.

ಪೋಷಕರ ಆಕ್ರಂದನ: ಮಗನಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಕಿಕ್ಕೇರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದರೆ ನನ್ನ ಮಗ ಬದುಕುಳಿಯುತ್ತಿದ್ದ ಎಂದು ನವೀನ್ ಪೋಷಕರು ಆರೋಪಿಸಿದರು.

The post ಕೆ.ಆರ್.ಪೇಟೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗೆ ಹೃದಯಾಘಾತ; ದುರ್ಮರಣ. appeared first on Good News 24x7.

]]>
ಹಾಸನದಲ್ಲಿ21 ವರ್ಷದ ಯುವಕನ ಜೀ*ವ ಕಸಿದ ಹೃದಯಾಘಾತ, ಜೀ*ವ ಕಳೆದುಕೊಂಡವರ ಸಂಖ್ಯೆ 34ಕ್ಕೆ ಏರಿಕೆ! https://www.goodnews24x7.com/heart-attack-claims-life-of-21-year-old-in-hassan-death-toll-rises-to-34/ Fri, 04 Jul 2025 07:54:19 +0000 https://www.goodnews24x7.com/?p=4889 ಹಾಸನ :  ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರಿದಿವೆ. ಇದೀಗ ಚಿಕ್ಕಕೊಂಡಗುಳ ಗ್ರಾಮದ 21 ವರ್ಷದ ಮದನ್ ಎಂಬಾತ ಹೃದಯಾಘಾತಕ್ಕೆ ಕಣ್ಮುಚ್ಚಿದ್ದಾನೆ. ಮದನ್ ಮೂಲತಃ ಹಾಸನ ತಾಲ್ಲೂಕಿನ ಚಿಟ್ನಳ್ಳಿ ಗ್ರಾಮದವರಾಗಿದ್ದರು. ಕಳೆದ ಎರಡು ದಿನಗಳಿಂದ ಚಿಕ್ಕಕೊಂಡಗುಳದ ಬಾವನ ಮನೆಗೆ ಬಂದಿದ್ದರು. ನಿನ್ನೆ ರಾತ್ರಿ…

The post ಹಾಸನದಲ್ಲಿ21 ವರ್ಷದ ಯುವಕನ ಜೀ*ವ ಕಸಿದ ಹೃದಯಾಘಾತ, ಜೀ*ವ ಕಳೆದುಕೊಂಡವರ ಸಂಖ್ಯೆ 34ಕ್ಕೆ ಏರಿಕೆ! appeared first on Good News 24x7.

]]>

ಹಾಸನ :  ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರಿದಿವೆ. ಇದೀಗ ಚಿಕ್ಕಕೊಂಡಗುಳ ಗ್ರಾಮದ 21 ವರ್ಷದ ಮದನ್ ಎಂಬಾತ ಹೃದಯಾಘಾತಕ್ಕೆ ಕಣ್ಮುಚ್ಚಿದ್ದಾನೆ. ಮದನ್ ಮೂಲತಃ ಹಾಸನ ತಾಲ್ಲೂಕಿನ ಚಿಟ್ನಳ್ಳಿ ಗ್ರಾಮದವರಾಗಿದ್ದರು. ಕಳೆದ ಎರಡು ದಿನಗಳಿಂದ ಚಿಕ್ಕಕೊಂಡಗುಳದ ಬಾವನ ಮನೆಗೆ ಬಂದಿದ್ದರು. ನಿನ್ನೆ ರಾತ್ರಿ ಮನೆಯಲ್ಲಿದ್ದ ವೇಳೆ ಮದನ್ಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ.


ಎದೆನೋವಿನಿಂದ ಮದನ್ ಕುಸಿದು ಬಿದ್ದಿದ್ದಾನೆ. ಕೂಡಲೇ ಸಂಬಂಧಿಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟರಲ್ಲೇ ಮದನ್ ಮೃಪಟ್ಟಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಹೃದಯಾಘಾತದಿಂದ ಜೀವ ಕಳೆದುಕೊಂಡವರ ಸಂಖ್ಯೆ 34ಕ್ಕೆ ಏರಿಕೆ ಆಗಿದೆ.

ಸಂಪತ್ಕುಮಾರ್ (53), ಸಿ.ಬಿ ವಿರೂಪಾಕ್ಷ (70), ಸಂತೋಷ್ (41), ದೇವಮ್ಮ (72) ಮೃತಪಟ್ಟವರು. ಹಾಸನ ನಗರದ ಕರಿಗೌಡ ಕಾಲೋನಿ ನಿವಾಸಿ ಸಂಪತ್ಕುಮಾರ್ಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಕುಟುಂಬಸ್ಥರು ಹಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಂಪತ್ಕುಮಾರ್ ಸಾವನ್ನಪ್ಪಿದ್ದಾರೆ.

 

 

 

ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ದುರಂತ
ಸಕಲೇಶಪುರ ತಾಲ್ಲೂಕಿನ, ಬೆಳಗೋಡು ಹೋಬಳಿ ಚಿಕ್ಕನಾಯಕನಹಳ್ಳಿ ಗ್ರಾಮದ ಸಿ.ಬಿ ವಿರೂಪಾಕ್ಷ ಅವರಿಗೆ ಕಳೆದ ರಾತ್ರಿ 11:30ರ ಸುಮಾರಿನಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಕುಟುಂಬಸ್ಥರು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಆದ್ರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.

ಮಲಗಿದ್ದಲ್ಲೇ ಸಾವು

ಗ್ರಾಪಂ ಸದಸ್ಯ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಆಲೂರು ತಾಲ್ಲೂಕಿನ, ಕಲ್ಲಾರೆ ಗ್ರಾಮದಲ್ಲಿ ನಡೆದಿದೆ. ಸಂತೋಷ್ (41) ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ. ರಾತ್ರಿ ಮಲಗಿದ್ದಲ್ಲಿಯೇ ಹೃದಯಾಘಾತವಾಗಿದೆ. ಬೆಳಗ್ಗೆ ಮೇಲೆಳದಿದ್ದಾಗ ಕುಟುಂಬಸ್ಥರು ನೋಡಿದ್ದು ಕೂಡಲೇ ಹಾಸನದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ಅಷ್ಟರಲ್ಲಿ ಹೃದಯಾಘಾತದಿಂದ ಸಂತೋಷ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಸಂತೋಷ್ ಕಾರಗೋಡು ಗ್ರಾ.ಪಂ. ಸದಸ್ಯರಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

ಚಿಕಿತ್ಸೆ ಪಡೆದು ವಾಪಸ್ ಬರುವಾಗ ಸಾವು
ಮತ್ತೊಂದು ಪ್ರಕರಣದಲ್ಲಿ ಹೃದಯಾಘಾತದಿಂದ ವೃದ್ದೆ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಅರೆಕೆರೆ ಗ್ರಾಮದಲ್ಲಿ ನಡೆದಿದೆ. ದೇವಮ್ಮ (72) ಹೃದಯಾಘಾತಕ್ಕೆ ಬಲಿಯಾದ ವೃದ್ದೆ. ದೇವಮ್ಮ ಮನೆಯಲ್ಲಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಎದೆನೋವು ಹೆಚ್ಚಾಗುತ್ತಲೇ ಬೆಂಗಳೂರು ಜಯದೇವ ಆಸ್ಪತ್ರೆಗೆ ತೆರಳಿ ವೈದ್ಯರ ಸಲಹೆ, ಚಿಕಿತ್ಸೆ, ಔಷಧಿ ಪಡೆದು ಗ್ರಾಮಕ್ಕೆ ವಾಪಾಸ್ಸಾಗುತ್ತಿದ್ದರು. ಬೆಂಗಳೂರಿನಿಂದ ಗ್ರಾಮಕ್ಕೆ ವಾಪಸ್ಸಾಗುವ ಮಾರ್ಗ ಮಧ್ಯೆ ದೇವಮ್ಮ ಮೃತಪಟ್ಟಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದ್ದು ಜಿಲ್ಲೆಯ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ.

The post ಹಾಸನದಲ್ಲಿ21 ವರ್ಷದ ಯುವಕನ ಜೀ*ವ ಕಸಿದ ಹೃದಯಾಘಾತ, ಜೀ*ವ ಕಳೆದುಕೊಂಡವರ ಸಂಖ್ಯೆ 34ಕ್ಕೆ ಏರಿಕೆ! appeared first on Good News 24x7.

]]>
5 ಬಾಲಕಿಯನ್ನು ಅಪಹರಿಸಿ ಕೊ*: ಘಟನೆ ನಡೆದ 6 ಗಂಟೆಯೊಳಗೆ ಪೊಲೀಸರ ಗುಂಡೇ*ಟಿಗೆ ಬಿಹಾರ ಮೂಲದ ಆರೋಪಿ ಬ*! https://www.goodnews24x7.com/5-%e0%b2%ac%e0%b2%be%e0%b2%b2%e0%b2%95%e0%b2%bf%e0%b2%af%e0%b2%a8%e0%b3%8d%e0%b2%a8%e0%b3%81-%e0%b2%85%e0%b2%aa%e0%b2%b9%e0%b2%b0%e0%b2%bf%e0%b2%b8%e0%b2%bf-%e0%b2%95%e0%b3%8a-%e0%b2%98%e0%b2%9f/ Mon, 14 Apr 2025 05:50:26 +0000 https://www.goodnews24x7.com/?p=3221 ಹುಬ್ಬಳ್ಳಿ :- ಮನೆಯಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಲಾಗಿದೆ. ಕೃತ್ಯ ಎಸಗಿದ ಬಿಹಾರ ಮೂಲದ ರಿತೇಶ ಕುಮಾರ್ (35) ಎಂಬಾತ ಭಾನುವಾರ ಸಂಜೆ ನಗರದ ತಾರಿ ಹಾಳ ಸೇತುವೆ ಬಳಿ ಪೊಲೀಸರ ಗುಂಡೇಟಿಗೆ ಮೃತಪಟ್ಟಿದ್ದಾನೆ. ತಾರಿಹಾಳ ಬಳಿ…

The post 5 ಬಾಲಕಿಯನ್ನು ಅಪಹರಿಸಿ ಕೊ*: ಘಟನೆ ನಡೆದ 6 ಗಂಟೆಯೊಳಗೆ ಪೊಲೀಸರ ಗುಂಡೇ*ಟಿಗೆ ಬಿಹಾರ ಮೂಲದ ಆರೋಪಿ ಬ*! appeared first on Good News 24x7.

]]>

ಹುಬ್ಬಳ್ಳಿ :- ಮನೆಯಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಲಾಗಿದೆ. ಕೃತ್ಯ ಎಸಗಿದ ಬಿಹಾರ ಮೂಲದ ರಿತೇಶ ಕುಮಾರ್ (35) ಎಂಬಾತ ಭಾನುವಾರ ಸಂಜೆ ನಗರದ ತಾರಿ ಹಾಳ ಸೇತುವೆ ಬಳಿ ಪೊಲೀಸರ ಗುಂಡೇಟಿಗೆ ಮೃತಪಟ್ಟಿದ್ದಾನೆ.
ತಾರಿಹಾಳ ಬಳಿ ಸ್ಥಳ ಪರಿ ಶೀಲನೆಗೆ ಕರೆದೊಯ್ದಾಗ ಈತ ಪೊಲೀಸ್ ವಾಹನದ ಮೇಲೆ ಕಲ್ಲು ತೂರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಅಶೋಕ ನಗರದ ಪಿಎಸ್ಐ ಅನ್ನಪೂರ್ಣ ಅವರು ಗಾಳಿ ಯಲ್ಲಿ ಗುಂಡು ಹಾರಿಸಿದರೂ ಆರೋಪಿ ತಪ್ಪಿಸಿಕೊಂಡು ಓಡಲು ಯತ್ನಿಸಿದ. ಈ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದಾಗ ಆತನ ಕಾಲು ಹಾಗೂ ಬೆನ್ನಿಗೆ ಗುಂಡು ತಗುಲಿದೆ ಎಂದು ಘಟನೆ ಕುರಿತು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಸುದ್ದಿ ಪೊಲೀಸರ ಗುಂಡೇಟಿಗೆ ಬಲಿಯಾದ ಕಾಮುಕ.


ಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಗಾಯಗೊಂಡಿದ್ದ ಅವನನ್ನು ತಕ್ಷಣ ಕೆಎಂಸಿಆರ್ಐ ಆಸ್ಪತ್ರೆಗೆ ತರಲಾಯಿತು. ಅಷ್ಟರಲ್ಲಿ ಮೃತಪಟ್ಟಿದ್ದ ಪೊಲೀಸ್ ಸಿಬ್ಬಂದಿ ಯಶವಂತ ಮೊರಬ ಮತ್ತು ವೀರೇಶ ಅವರೂ ಘಟನೆ ಯಲ್ಲಿ ಗಾಯಗೊಂಡಿದ್ದು ಚಿಕಿತ್ಸೆ ಪಡೆಯು ತ್ತಿದ್ದಾರೆ ಎಂದು ಅವರು ವಿವರಿಸಿದರು.
ವಿವರ: ಭಾನುವಾರ ಬೆಳಿಗ್ಗೆ 10.40ರ ಸುಮಾರಿಗೆ ವಿಜಯನಗರದಲ್ಲಿ ಐದು ವರ್ಷದ ಮಗು ನಾಪತ್ತೆಯಾದ ಕುರಿತು ಪ್ರಕರಣ ದಾಖಲಾಗಿತ್ತು. ನಂತರ ಮಗು ನಾಪತ್ತೆಯಾದ ಸ್ಥಳದ ಎದುರಿಗಿರುವ ಶೆಡ್ನಲ್ಲಿ ಮೃತದೇಹ ಪತ್ತೆಯಾಗಿತ್ತು ಎಂದರು. ಸಿಸಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ನಡೆಸಿ ದಾಗ ಕೃತ್ಯದ ಕುರಿತು ಆತ ಮಾಹಿತಿ ನೀಡಿದ್ದ. ಆದರೆ, ತನ್ನ ವಿಳಾಸ ಹಾಗೂ ಗುರುತಿನ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ನೀಡಿರಲಿಲ್ಲ ಎಂದು ಹೇಳಿದರು.
ಬಿಹಾರ ಮೂಲದ ಅವನು ವಿವಿಧ ಊರುಗಳಲ್ಲಿ ಕೆಲಸ ಮಾಡಿದ್ದ. ಹುಬ್ಬಳ್ಳಿ ಯಲ್ಲೂ ಕೆಲಸ ಮಾಡುತ್ತಾ ತಾರಿಹಾಳ ಸೇತುವೆ ಬಳಿಯ ಹಳೇ ಶೆಡ್ನಲ್ಲಿ ವಾಸಿಸುತ್ತಿರುವುದಾಗಿ ತಿಳಿಸಿದ್ದ. ಅವನ ಜೊತೆ ಯಾರಿದ್ದಾರೆಂದು ತಿಳಿದುಕೊ ಳ್ಳಲು, ಅವನನ್ನು ಸ್ಥಳಕ್ಕೆ ಕರೆದುಕೊಂಡು ಹೋದಾಗ ಎನ್ ಕೌಂಟರ್ ನಡೆದಿದೆ ಎಂದರು. ಬಹಾರ ಪಾಟ್ನಾದ ನಿವಾಸಿ ಯಾದ ಆರೋಪಿ ರಿತೀಶ ಕುಮಾರ್ ಭಾನುವಾರ ಬೆಳಿಗ್ಗೆ 10.40ರ ಸುಮಾರು ವಿಜಯನಗರದ ವಾಸವಾಗಿದ್ದ ಬಾಲಕಿಗೆ ತಿಂಡಿ ತಿನಿಸುಗಳನ್ನು ನೀಡುವುದಾಗಿ ಪುಸಲಾಯಿಸಿ ಕರೆದಿದ್ದಾನೆ. ನಂತರ ಅವಳನ್ನು ಎತ್ತಿಹಾಕಿಕೊಂಡು ಎದುರಿನ ಮನೆಯಲ್ಲಿರುವ ಶೆಡ್ಗೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ್ದಾನೆ. ಆಕೆ ಕೂಗಿ ಕೊಂಡಾಗ ಕೊಲೆ ಮಾಡಿ ಪರಾರಿಯಾಗಿ ದ್ದಾನೆ. ಬಾಲಕಿಯ ಶವ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಆತನನ್ನು ಹಿಡಿದು ಅಶೋಕ ನಗರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಶಶಿಕುಮಾರ್ ತಿಳಿಸಿದರು.


ಮಗುವಿನ ಮೇಲೆ ಅತ್ಯಾಚಾರವಾಗಿ ರುವ ಬಗ್ಗೆ ಮಾಹಿತಿಯಿಲ್ಲ. ವೈದ್ಯಕೀಯ ವರದಿ ಬಂದ ನಂತರ ತಿಳಿಯಲಿದೆ. ಪೋಕ್ಸ್ ಅಡಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದರು.
ಬಾಲಕಿಯನ್ನು ಅಪಹರಿಸಿ ಕೊಲೆಗೈದ ಘಟನೆ ವಿರುದ್ಧ ಭಾನುವಾರ ಸಂಜೆ ವಿವಿಧ ಸಂಘಟನೆಗಳಿಂದ ಹುಬ್ಬಳ್ಳಿ ಕೆಎಂಸಿ ಎದುರು ಪ್ರತಿಭಟನೆ ನಡೆಯಿತು. ಆರೋಪಿ ಎನ್ಕೌಂಟರ್ನಿಂದ ಮೃತಪಟ್ಟ ವಿಷಯ ತಿಳಿದು ಸಾರ್ವಜನಿಕರು ಪ್ರತಿಭಟನೆ ಕೈಬಿಟ್ಟು ಕೆಎಂಸಿ ಆಸತ್ರೆ ಎದುರು ಸಂಭ್ರಮಿಸಿದರು. ಪೊಲೀಸ್ ಕಮಿಷನರ್ ಶಶಿಕುಮಾರ್
ಅವರಿಗೆ ಜೈಕಾರ ಹಾಕಿದರು.

The post 5 ಬಾಲಕಿಯನ್ನು ಅಪಹರಿಸಿ ಕೊ*: ಘಟನೆ ನಡೆದ 6 ಗಂಟೆಯೊಳಗೆ ಪೊಲೀಸರ ಗುಂಡೇ*ಟಿಗೆ ಬಿಹಾರ ಮೂಲದ ಆರೋಪಿ ಬ*! appeared first on Good News 24x7.

]]>