Tumakuru Archives - Good News 24x7 https://www.goodnews24x7.com/tag/tumakuru/ Kannada Tue, 12 Aug 2025 08:23:21 +0000 en-US hourly 1 https://wordpress.org/?v=6.9.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Tumakuru Archives - Good News 24x7 https://www.goodnews24x7.com/tag/tumakuru/ 32 32 ಕೆ.ಎನ್.ರಾಜಣ್ಣ ವಜಾ ಖಂಡಿಸಿ ಬೆಂಬಲಿಗರ ಆಕ್ರೋಶ : ಮಧುಗಿರಿ ಬಂದ್ ! https://www.goodnews24x7.com/supporters-protest-k-n-rajannas-dismissal-madhugiri-bandh/ Tue, 12 Aug 2025 08:23:04 +0000 https://www.goodnews24x7.com/?p=5920 ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾ ಮಾಡಿರುವುದಕ್ಕೆ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧುಗಿರಿ ಪಟ್ಟಣ ಬಂದ್ ಮಾಡಿ ಮಂಗಳವಾರ ಪ್ರತಿಭಟನೆ ನಡೆಸಿದರು. ರಾಜಣ್ಣ ಬೆಂಬಲಿಗರು ಮತ್ತು ಅಭಿಮಾನಿಗಳು ಮಧುಗಿರಿ ಪಟ್ಟಣದಲ್ಲಿ ಜಮಾವಣೆಗೊಂಡರು. ಬಸ್ ನಿಲ್ದಾಣದ ಸರ್ಕಲ್‌ನಲ್ಲಿ ಟೈರ್‌ಗೆ ಬೆಂಕಿ ಹಚ್ಚಲು ಮುಂದಾದರು.…

The post ಕೆ.ಎನ್.ರಾಜಣ್ಣ ವಜಾ ಖಂಡಿಸಿ ಬೆಂಬಲಿಗರ ಆಕ್ರೋಶ : ಮಧುಗಿರಿ ಬಂದ್ ! appeared first on Good News 24x7.

]]>

ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾ ಮಾಡಿರುವುದಕ್ಕೆ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧುಗಿರಿ ಪಟ್ಟಣ ಬಂದ್ ಮಾಡಿ ಮಂಗಳವಾರ ಪ್ರತಿಭಟನೆ ನಡೆಸಿದರು.

ರಾಜಣ್ಣ ಬೆಂಬಲಿಗರು ಮತ್ತು ಅಭಿಮಾನಿಗಳು ಮಧುಗಿರಿ ಪಟ್ಟಣದಲ್ಲಿ ಜಮಾವಣೆಗೊಂಡರು. ಬಸ್ ನಿಲ್ದಾಣದ ಸರ್ಕಲ್‌ನಲ್ಲಿ ಟೈರ್‌ಗೆ ಬೆಂಕಿ ಹಚ್ಚಲು ಮುಂದಾದರು. ಈ ವೇಳೆ ಅವರನ್ನು ಪೊಲೀಸರು ತಡೆದರು. ರಾಜಣ್ಣರ ರಾಜೀನಾಮೆ ವಾಪಸ್ ಪಡೆಯುವಂತೆ ಬೆಂಬಲಿಗರು ಒತ್ತಾಯಿಸಿದರು. ಬಳಿಕ ಪಾದಯಾತ್ರೆ ಮೂಲಕ ಎಸಿ ಕಚೇರಿ ವರೆಗೆ ಅಭಿಮಾನಿಗಳು ಸಾಗಿದರು.

ಬೇಕೆ ಬೇಕು ನ್ಯಾಯ ಬೇಕು ಎಂದು ಎಸಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಅವರನ್ನು ಚದುರಿಸಲು ಪೊಲೀಸರು ಹರಸಾಹಸಪಟ್ಟರು. ಎಸಿ ಕಚೇರಿಯಿಂದ ತುಮಕೂರು ಗೇಟ್ ವರೆಗೂ ರಾಜಣ್ಣ ಬೆಂಬಲಿಗರ ಪಾದಯಾತ್ರೆ ನಡೆಯಿತು.

ತುಮಕೂರು ಗೇಟ್‌ನ ರಸ್ತೆಯಲ್ಲಿ ಪ್ರತಿಭಟನಾಕಾರರು ಧರಣಿ ಕುಳಿತರು. ಇದೇ ವೇಳೆ, ಬೇಕರಿಯೊಂದಕ್ಕೆ ನುಗ್ಗಲು ಪ್ರಯತ್ನಿಸಿದರು. ಎಂಜಿ ಕ್ರೀಡಾಂಗಣದ ಬಳಿ ಬೆಂಬಲಿಗರು ಹೈಡ್ರಾಮಾ ನಡೆಸಿದರು. ಅಭಿಮಾನಿಯೊಬ್ಬ ವಿಷ ಕುಡಿಯಲು ಪ್ರಯತ್ನಿಸಿದ ಪ್ರಸಂಗವೂ ನಡೆಯಿತು. ಆತನನ್ನು ತಕ್ಷಣವೇ ಅಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು.

ತಮ್ಮ ಸಡಿಲ ಹೇಳಿಕೆಗಳ ಮೂಲಕವೇ ಪಕ್ಷದೊಳಗಡೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದ ಕೆ.ಎನ್.ರಾಜಣ್ಣ ಅವರನ್ನು ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಅವರು ಸೋವಾರ ಸಂಪುಟದಿಂದ ವಜಾಗೊಳಿಸಿದರು. ಈ ಸಂಬಂಧ ರಾಜಣ್ಣ ಬೇಸರಗೊಂಡಿದ್ದಾರೆ. ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ.

The post ಕೆ.ಎನ್.ರಾಜಣ್ಣ ವಜಾ ಖಂಡಿಸಿ ಬೆಂಬಲಿಗರ ಆಕ್ರೋಶ : ಮಧುಗಿರಿ ಬಂದ್ ! appeared first on Good News 24x7.

]]>
9 ದಿನಗಳ ಕಾಲ ಹಾಲನೂರು ಶ್ರೀ ಮಲ್ಲೇಶ್ವರ ಸ್ವಾಮಿ, ಪಾರ್ವತಿದೇವಿ ಜಾತ್ರೆ. https://www.goodnews24x7.com/9-%e0%b2%a6%e0%b2%bf%e0%b2%a8%e0%b2%97%e0%b2%b3-%e0%b2%95%e0%b2%be%e0%b2%b2-%e0%b2%b9%e0%b2%be%e0%b2%b2%e0%b2%a8%e0%b3%82%e0%b2%b0%e0%b3%81-%e0%b2%b6%e0%b3%8d%e0%b2%b0%e0%b3%80-%e0%b2%ae%e0%b2%b2/ Fri, 04 Apr 2025 10:28:30 +0000 https://www.goodnews24x7.com/?p=3038 ತುಮಕೂರು :- ತುಮಕೂರು ತಾಲ್ಲೂಕಿನ ಕಸಬಾ ಹೋಬಳಿ ಹಾಲನೂರು ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಮಲ್ಲೇಶ್ವರ ಸ್ವಾಮಿ, ಪಾರ್ವತಿದೇವಿ ಜಾತ್ರಾ ಮಹೋತ್ಸವ ಏಪ್ರಿಲ್ 8 ರಿಂದ ಏಪ್ರಿಲ್ 16ರವರೆಗೆ 9 ದಿನಗಳ ಕಾಲ ನಡೆಯಲಿದೆ. ಜಿಲ್ಲಾಧಿಕಾರಿ ಶುಭ ಕಲ್ಯಾಣ್, ತಹಶೀಲ್ದಾರ್ ರಾಜೇಶ್ವರಿ,…

The post 9 ದಿನಗಳ ಕಾಲ ಹಾಲನೂರು ಶ್ರೀ ಮಲ್ಲೇಶ್ವರ ಸ್ವಾಮಿ, ಪಾರ್ವತಿದೇವಿ ಜಾತ್ರೆ. appeared first on Good News 24x7.

]]>

ತುಮಕೂರು :- ತುಮಕೂರು ತಾಲ್ಲೂಕಿನ ಕಸಬಾ ಹೋಬಳಿ ಹಾಲನೂರು ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಮಲ್ಲೇಶ್ವರ ಸ್ವಾಮಿ, ಪಾರ್ವತಿದೇವಿ ಜಾತ್ರಾ ಮಹೋತ್ಸವ ಏಪ್ರಿಲ್ 8 ರಿಂದ ಏಪ್ರಿಲ್ 16ರವರೆಗೆ 9 ದಿನಗಳ ಕಾಲ ನಡೆಯಲಿದೆ.
ಜಿಲ್ಲಾಧಿಕಾರಿ ಶುಭ ಕಲ್ಯಾಣ್, ತಹಶೀಲ್ದಾರ್ ರಾಜೇಶ್ವರಿ, ಮುಜರಾಯಿ ಇಲಾಖೆ ಹಾಗೂ ಭಕ್ತಮಂಡಲಿ ,ಹಾಲನೂರು ಗ್ರಾಮದ ಯಜಮಾನರು, ಗ್ರಾಮಸ್ಥರ ನೇತೃತ್ವದಲ್ಲಿ ನಡೆಯಲಿರುವ ಜಾತ್ರಾ ಮಹೋತ್ಸವ ಏ.8 ರಂದು ಮಂಗಳವಾರ ಸಂಜೆ ಧ್ವಜಾರೋಹಣದೊಂದಿಗೆ ಚಾಲನೆಗೊಳ್ಳಲಿದೆ. ಏ.9 ರಂದು ಗ್ರಾಮದ ಎಲ್ಲಾ ಮನೆಗಳಿಂದ ಆರತಿಗಳು ಬರಲಿವೆ.ನಂತರ ಗಿರಿಜಾ ಕಲ್ಯಾಣ ನಡೆಯಲಿದೆ.
ಏ.10 ತ್ರಯೋದಶಿ ಗುರುವಾರ ಮಧ್ಯಾಹ್ನ 12-45 ಕ್ಕೆ ಬ್ರಹ್ಮ ರಥೋತ್ಸವ ನಡೆಯಲಿದೆ. ಬೆಳ್ಳಾವಿ ಮಠದ ಶ್ರೀ ಕಾರದ ವೀರಬಸವ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಏ.11 ರಂದು ಸಂಜೆ ಅಡ್ಡ ಪಲ್ಲಕ್ಕಿ ಉತ್ಸವ ಹಾಗೂ ಅದಲಾಪುರ ಮಹಾಲಕ್ಷ್ಮಿ ದೇವಿ ಮೆರವಣಿಗೆ ನೆರವೇರಲಿದೆ. ರಂಗೋಲಿ ಸ್ಪರ್ಧೆ ಸಹ ಏರ್ಪಡಿಸಲಾಗಿದೆ.
ಏ.12 ರಂದು ಹುಣ್ಣಿಮೆ ಶನಿವಾರದಂದು ಜಾತ್ರೆಯ ಮುಖ್ಯ ಆಕರ್ಷಣೆ ಉಪ್ಪರಿಗೆ ವಾಹನ ಉತ್ಸವ ನಡೆಯಲಿದ್ದು ,ಅಂದು ರಾತ್ರಿ ಶ್ರೀ ಮಲ್ಲೇಶ್ವರ ಕೃಪಾಪೋಷಿತ ನಾಟಕ ಮಂಡಳಿ ವತಿಯಿಂದ ಕುರುಕ್ಷೇತ್ರ ನಾಟಕ ಪ್ರದರ್ಶನವಾಗಲಿದೆ. ಏ.13 ರಂದು ರುದ್ರಾಕ್ಷಿ ಮಂಟಪ ಮೆರವಣಿಗೆ ಏ.16 ರಂದು ವಸಂತೋತ್ಸವ ಓಕುಳಿ ಆಚರಣೆ ಮೂಲಕ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ. ಜಾತ್ರೆ ನಡೆಯುವ 9 ದಿನವೂ ನಿರಂತರವಾಗಿ ಅನ್ನ ದಾಸೋಹ ನಡೆಯಲಿದೆ. ಮುಜರಾಯಿ ಇಲಾಖೆ ನೇತೃತ್ವದಲ್ಲಿ ನಡೆಯುವ ಸದರಿ ಜಾತ್ರಾ ಮಹೋತ್ಸವದ ವೇಳೆ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಇರುತ್ತದೆ.
ರಥ ಬೀದಿಯಲ್ಲಿ ನೂರಾರು ಅಂಗಡಿ ಮುಂಗಟ್ಟು ತೆರೆದು ಕೊಳ್ಳಲಿವೆ. ಸಹಸ್ರಾರು ಭಕ್ತಾದಿಗಳು ಭಾಗವಹಿಸಲಿದ್ದಾರೆ. ಪ್ರಮುಖವಾಗಿ ಹರಕೆ ಮಾಡಿಕೊಂಡವರು ಹಾಗೂ ಹರಕೆ ಮಾಡಿಕೊಳ್ಳುವವರು ಕುಟುಂಬ ಸಮೇತರಾಗಿ ಆಗಮಿಸಿ ಹರಕೆ ತೀರಿಸಲಿದ್ದಾರೆ. ಸಂತಾನ, ಆರೋಗ್ಯ,ವಿದ್ಯೆ, ಲಗ್ನ ಇತ್ಯಾದಿಗಳ ಈಡೇರಿಕೆಗೆ ಭಕ್ತರು ಹರಕೆ ಹೊತ್ತಿರುತ್ತಾರೆ. ಹರಕೆ ಈಡೇರಿದ ಮೇಲೆ ಹರಕೆ ತೀರಿಸುತ್ತಾರೆ. ಹಾಗೆಯೇ ಜಾತ್ರೆಗೆ ಬರುವ ಭಕ್ತಾದಿಗಳು ಹಾಲನೂರು ಸುತ್ತಮುತ್ತಲಿನ ಪುರಾಣ ಪ್ರಸಿದ್ಧ ದೇವಾಲಯಗಳಾದ ಅರೆಯೂರು ವೈದ್ಯನಾಥೇಶ್ವರ,ಕೈದಾಳ ಚನ್ನಕೇಶವ,ಗೂಳೂರು ಗಣೇಶ, ಹೆತ್ತೇನಹಳ್ಳಿ ಮಾರಮ್ಮನ ಶ್ರೀ ಕ್ಷೇತ್ರಗಳಿಗೆ ಭೇಟಿ ನೀಡಬಹುದಾಗಿದೆ.

The post 9 ದಿನಗಳ ಕಾಲ ಹಾಲನೂರು ಶ್ರೀ ಮಲ್ಲೇಶ್ವರ ಸ್ವಾಮಿ, ಪಾರ್ವತಿದೇವಿ ಜಾತ್ರೆ. appeared first on Good News 24x7.

]]>
ಮಧುಗಿರಿ DYSP ಮಹಿಳೆಯೊಂದಿಗೆ ಅಸಭ್ಯ ವರ್ತನೆ ; ಬಂಧಿತ ಅಧಿಕಾರಿ ಇಂದು ಕೋರ್ಟ್ಗೆ ಹಾಜರು. https://www.goodnews24x7.com/%e0%b2%ae%e0%b2%a7%e0%b3%81%e0%b2%97%e0%b2%bf%e0%b2%b0%e0%b2%bf-dysp-%e0%b2%ae%e0%b2%b9%e0%b2%bf%e0%b2%b3%e0%b3%86%e0%b2%af%e0%b3%8a%e0%b2%82%e0%b2%a6%e0%b2%bf%e0%b2%97%e0%b3%86-%e0%b2%85%e0%b2%b8/ Sat, 04 Jan 2025 05:47:00 +0000 https://www.goodnews24x7.com/?p=1504 ತುಮಕೂರು: ದೂರು ನೀಡಲು ಬಂದ ಮಹಿಳೆಯೊಂದಿಗೆ ಪೊಲೀಸ್ ಠಾಣೆಯಲ್ಲೇ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಬಂಧನಕ್ಕೊಳಗಾಗಿರುವ ಮಧುಗಿರಿ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಮಧುಗಿರಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪೊಲೀಸರು ಮೆಡಿಕಲ್ ಟೆಸ್ಟ್ ಮಾಡಿಸಿದರು. ಶುಕ್ರವಾರ ರಾತ್ರಿ ಬಂಧಿಸಿರುವ ಮಧುಗಿರಿ ಪೊಲೀಸರು, ಆರೋಪಿ…

The post ಮಧುಗಿರಿ DYSP ಮಹಿಳೆಯೊಂದಿಗೆ ಅಸಭ್ಯ ವರ್ತನೆ ; ಬಂಧಿತ ಅಧಿಕಾರಿ ಇಂದು ಕೋರ್ಟ್ಗೆ ಹಾಜರು. appeared first on Good News 24x7.

]]>

ತುಮಕೂರು: ದೂರು ನೀಡಲು ಬಂದ ಮಹಿಳೆಯೊಂದಿಗೆ ಪೊಲೀಸ್ ಠಾಣೆಯಲ್ಲೇ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಬಂಧನಕ್ಕೊಳಗಾಗಿರುವ ಮಧುಗಿರಿ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಮಧುಗಿರಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪೊಲೀಸರು ಮೆಡಿಕಲ್ ಟೆಸ್ಟ್ ಮಾಡಿಸಿದರು.
ಶುಕ್ರವಾರ ರಾತ್ರಿ ಬಂಧಿಸಿರುವ ಮಧುಗಿರಿ ಪೊಲೀಸರು, ಆರೋಪಿ ರಾಮಚಂದ್ರಪ್ಪ ಅವರನ್ನು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಮಧುಗಿರಿ ಜೆಎಂಎಫ್ ಸಿ ಕೋರ್ಟ್ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಸಂತ್ರಸ್ತ ಮಹಿಳೆಯಿಂದ ದೂರು ಪಡೆದು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ನಂತರ ಡಿವೈಎಸ್ ಪಿಯನ್ನ ಬಂಧಿಸಿ ಕೆಲ ಸಮಯ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಕೂರಿಸಿ ವಿಚಾರಣೆ ನಡೆಸಿದರು.

ದೂರು ನೀಡಲು ಬಂದಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಆರೋಪದಡಿ ಮಧುಗಿರಿ ಉಪವಿಭಾಗದ ಡಿವೈಎಸ್ಪಿ ರಾಮಚಂದ್ರಯ್ಯ ಅವರನ್ನ ಸಸ್ಪೆಂಡ್ ಮಾಡಿ ಪೊಲೀಸ್ ಇಲಾಖೆ ನಿನ್ನೆಯೇ ಆದೇಶಿಸಿತ್ತು.
ಮಹಿಳೆಯೊಂದಿಗೆ ಅಸಭ್ಯ ವರ್ತನೆ ತೋರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರಿಂದ ಪೊಲೀಸ್ ಇಲಾಖೆಯು ತಲೆತಗ್ಗಿಸುವಂತಾಗಿತ್ತು. ಹೀಗಾಗಿ ನಿವೃತ್ತಿಗೆ ಎರಡು ವರ್ಷವಿದ್ದ ರಾಮಚಂದ್ರಯ್ಯ ಅವರನ್ನ ಅಮಾನತು ಮಾಡಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಲೋಕ್ ಮೋಹನ್ ಅವರು ಆದೇಶ ಹೊರಡಿಸಿದ್ದಾರೆ. ಜಮೀನು ವಿಚಾರವಾಗಿ ಮಹಿಳೆಯು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಎಂದು ಕರೆಯಿಸಿಕೊಂಡಿದ್ದ ಡಿವೈಎಸ್ಪಿ ಅವರು ಆ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು. ಕೆಲ ದಿನಗಳ ಹಿಂದೆಯೇ ಈ ಕೃತ್ಯವೆಸಗಿದ್ದು, ಶುಕ್ರವಾರ ವಿಡಿಯೋ ವೈರಲ್ ಆಗಿತ್ತು.

The post ಮಧುಗಿರಿ DYSP ಮಹಿಳೆಯೊಂದಿಗೆ ಅಸಭ್ಯ ವರ್ತನೆ ; ಬಂಧಿತ ಅಧಿಕಾರಿ ಇಂದು ಕೋರ್ಟ್ಗೆ ಹಾಜರು. appeared first on Good News 24x7.

]]>