Varuna assembly constituency Archives - Good News 24x7 https://www.goodnews24x7.com/tag/varuna-assembly-constituency/ Kannada Tue, 22 Oct 2024 10:04:09 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Varuna assembly constituency Archives - Good News 24x7 https://www.goodnews24x7.com/tag/varuna-assembly-constituency/ 32 32 ವರುಣಾಕ್ಕೆ 501 ಕೋಟಿ ಕೊಟ್ಟ ಸಿಎಂ, ಸಿದ್ದರಾಮಯ್ಯ ತವರಿನಲ್ಲಿ ಅಭಿವೃದ್ಧಿ ಪರ್ವ https://www.goodnews24x7.com/cm-who-gave-501-crores-to-varuna-siddaramaiahs-home-development-festival/ Tue, 22 Oct 2024 10:03:51 +0000 https://www.goodnews24x7.com/?p=890 ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 501.81 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿ ಮಾತನಾಡಿದರು. ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ‌ ಆಗಿದ್ದೇನೆ. ವರುಣಾ ಕಾಂಗ್ರೆಸ್ಸಿನ ಭದ್ರ ಕೋಟೆ.…

The post ವರುಣಾಕ್ಕೆ 501 ಕೋಟಿ ಕೊಟ್ಟ ಸಿಎಂ, ಸಿದ್ದರಾಮಯ್ಯ ತವರಿನಲ್ಲಿ ಅಭಿವೃದ್ಧಿ ಪರ್ವ appeared first on Good News 24x7.

]]>

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 501.81 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿ ಮಾತನಾಡಿದರು.

ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ‌ ಆಗಿದ್ದೇನೆ. ವರುಣಾ ಕಾಂಗ್ರೆಸ್ಸಿನ ಭದ್ರ ಕೋಟೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗಿಂತ ಹೆಚ್ಚು ಮತ ಕೊಟ್ಟಿದ್ದೀರಿ. ನನಗೆ ವಿಶೇಷವಾಗಿ ಆಶೀರ್ವಾದ ಮಾಡಿದ್ದಕ್ಕಾಗಿ ನಾನು ಕ್ಷೇತ್ರದ ಮತದಾರರಿಗೆ ಅನಂತ ಅನಂತ ಧನ್ಯವಾದ ಅರ್ಪಿಸಿದರು.

ವರುಣಾ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಅನುದಾನ ಕೊಡಲಾಗುತ್ತಿದೆ. ನಾನು ಉಪಕಾರ ಮಾಡುತ್ತಿಲ್ಲ. ಕ್ಷೇತ್ರದ ಪ್ರತಿನಿಧಿಯಾಗಿ ಅಭಿವೃದ್ಧಿ ಮಾಡುವ ನನ್ನ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇನೆ ಎಂದರು.

ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೆಲ್ಲಾ ವರುಣ ಕ್ಷೇತ್ರ ಮಾತ್ರವಲ್ಲದೆ ರಾಜ್ಯದ ಎಲ್ಲ ಬಡವರಿಗೆ ಆರ್ಥಿಕ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೇನೆ. ಹತ್ತು ಹಲವು ಭಾಗ್ಯಗಳನ್ನು ಕೊಡುವ ಜೊತೆಗೆ ಹಲವು ನಿಗಮಗಳ ಸಾಲ ಮನ್ನಾ ಮಾಡಿದ್ದೇನೆ. ಅಂಬೇಡ್ಕರ್ ಅವರ ಆಶಯದಂತೆ ಬಡವರಿಗೆ ಆರ್ಥಿಕ‌ ಶಕ್ತಿ ಕೊಡುವ ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇನೆ.

ಎರಡನೇ ಬಾರಿ ಮುಖ್ಯಮಂತ್ರಿ ಆದಾಗಲೂ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ, ಮಧ್ಯಮ ವರ್ಗದವರ ಬದುಕಿಗೆ ಆಸರೆ ಆಗುವ ಐದೂ ಗ್ಯಾರಂಟಿ ಯೋಜನೆಗಳನ್ನು ಜನಪರವಾಗಿ ರೂಪಿದಿ ಜಾರಿ ಮಾಡಿದ್ದೇವೆ. ಪ್ರತೀ ವರ್ಷ ಈ ಗ್ಯಾರಂಟಿಗಳ ಮೂಲಕ 56 ಸಾವಿರ ಕೋಟಿ ರೂಪಾಯಿಗಳನ್ನು ಜನರ ಖಾತೆಗೆ ನೇರವಾಗಿ ಹಾಕುತ್ತಿದ್ದೇವೆ. ಹೀಗೆ ದೇಶದಲ್ಲಿ ನುಡಿದಂತೆ ನಡೆದುಕೊಂಡಿರುವ ಪಕ್ಷ ನಿಮ್ಮ ಪಕ್ಷ. ನಿಮ್ಮದೇ ಕಾಂಗ್ರೆಸ್ ಪಕ್ಷ ಎಂದರು.

The post ವರುಣಾಕ್ಕೆ 501 ಕೋಟಿ ಕೊಟ್ಟ ಸಿಎಂ, ಸಿದ್ದರಾಮಯ್ಯ ತವರಿನಲ್ಲಿ ಅಭಿವೃದ್ಧಿ ಪರ್ವ appeared first on Good News 24x7.

]]>