vidhana souda Archives - Good News 24x7 https://www.goodnews24x7.com/tag/vidhana-souda/ Kannada Fri, 29 May 2026 10:30:54 +0000 en-US hourly 1 https://wordpress.org/?v=7.0 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg vidhana souda Archives - Good News 24x7 https://www.goodnews24x7.com/tag/vidhana-souda/ 32 32 ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ https://www.goodnews24x7.com/karnataka-new-cm-election-important-clp-meeting-in-vidhana-soudha-today%e0%b2%95%e0%b2%b0%e0%b3%8d%e0%b2%a8%e0%b2%be%e0%b2%9f%e0%b2%95-%e0%b2%a8%e0%b3%82%e0%b2%a4%e0%b2%a8-%e0%b2%b8%e0%b2%bf%e0%b2%8e/ Fri, 29 May 2026 10:30:54 +0000 https://www.goodnews24x7.com/?p=9569 ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

The post ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ appeared first on Good News 24x7.

]]>

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30, ಶನಿವಾರ) ಸಂಜೆ 4 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 334ರ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆಯನ್ನು ಕರೆಯಲಾಗಿದೆ.

ಈ ಸಭೆಯ ಅಧ್ಯಕ್ಷತೆಯನ್ನು ನಿರ್ಗಮಿತ ಸಿಎಂ ಸಿದ್ದರಾಮಯ್ಯ ವಹಿಸಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನ ಪರಿಷತ್‌ ಸಭಾ ನಾಯಕ ಎನ್.ಎಸ್.ಭೋಸರಾಜು ಸೇರಿದಂತೆ ಪಕ್ಷದ ಎಲ್ಲಾ ಕಾರ್ಯಾಧ್ಯಕ್ಷರು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಹೊಸ ಶಾಸಕಾಂಗ ಪಕ್ಷದ ನಾಯಕನನ್ನು ಅಧಿಕೃತವಾಗಿ ಆಯ್ಕೆ ಮಾಡಿ, ತದನಂತರ ಸರ್ಕಾರ ರಚನೆಗೆ ಹಕ್ಕು ಮಂಡಿಸಲಾಗುತ್ತದೆ. ಎಲ್ಲಾ ಕಾಂಗ್ರೆಸ್ ಶಾಸಕರು ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕೆಂದು ಶಾಸಕಾಂಗ ಪಕ್ಷದ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ್ ಸೂಚಿಸಿದ್ದಾರೆ.

ಪ್ರಮಾಣವಚನ ಎಂದು?

ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದ್ದು, ಇಂದು ಸಿಎಲ್‌ಪಿ ಸಭೆಯಲ್ಲಿ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಸೋಮವಾರ ಸಂಜೆ ಗೋಧೂಳಿ ಮುಹೂರ್ತದಲ್ಲಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅಥವಾ ಕಂಠೀರವ ಕ್ರೀಡಾಂಗಣದಲ್ಲಿ ಡಿ.ಕೆ.ಶಿವಕುಮಾರ್ ಅವರ ಪ್ರಮಾಣವಚನ ಕಾರ್ಯಕ್ರಮ ನೆರವೇರಲಿದೆ. ಈಗಾಗಲೇ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ.

The post ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ appeared first on Good News 24x7.

]]>