VIRAL Archives - Good News 24x7 https://www.goodnews24x7.com/tag/viral/ Kannada Wed, 08 Jul 2026 08:02:47 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg VIRAL Archives - Good News 24x7 https://www.goodnews24x7.com/tag/viral/ 32 32 ಡೀಲ್​ ಕೊಟ್ಟವರಿಗಾಗಿ ಪೊಲೀಸರ ಹುಡುಕಾಟ https://www.goodnews24x7.com/renukaswamy-murder-case-police-search-for-deal-makers/ Wed, 08 Jul 2026 08:02:47 +0000 https://www.goodnews24x7.com/?p=9810 ದರ್ಶನ್ (Darshan) ಆರೋಪಿ ಆಗಿರುವ ರೇಣುಕಾ ಸ್ವಾಮಿ ಕೊ*ಲೆ ಪ್ರಕರಣದಲ್ಲಿ ಇತ್ತೀಚೆಗಷ್ಟೆ ದೊಡ್ಡ ಬೆಳವಣಿಗೆಯೊಂದು ನಡೆದಿದೆ. ಪ್ರಕರಣದಲ್ಲಿ ಸಾಕ್ಷಿ ಆಗಿದ್ದ ಒಬ್ಬರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಪುನೀತ್, ಸುಹಾಸ್ ಮತ್ತು ವೇಣು ಎಂಬುವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಆದರೆ ಈ…

The post ಡೀಲ್​ ಕೊಟ್ಟವರಿಗಾಗಿ ಪೊಲೀಸರ ಹುಡುಕಾಟ appeared first on Good News 24x7.

]]>

ದರ್ಶನ್ (Darshan) ಆರೋಪಿ ಆಗಿರುವ ರೇಣುಕಾ ಸ್ವಾಮಿ ಕೊ*ಲೆ ಪ್ರಕರಣದಲ್ಲಿ ಇತ್ತೀಚೆಗಷ್ಟೆ ದೊಡ್ಡ ಬೆಳವಣಿಗೆಯೊಂದು ನಡೆದಿದೆ. ಪ್ರಕರಣದಲ್ಲಿ ಸಾಕ್ಷಿ ಆಗಿದ್ದ ಒಬ್ಬರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಪುನೀತ್, ಸುಹಾಸ್ ಮತ್ತು ವೇಣು ಎಂಬುವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಆದರೆ ಈ ಪ್ರಕರಣದ ಹಿಂದೆ ಕೆಲ ‘ಪ್ರಭಾವಿ’ಗಳು ಇರುವ ಶಂಕೆ ತನಿಖೆ ವೇಳೆ ಪೊಲೀಸರಿಗೆ ಮೂಡಿದ್ದು, ಆ ‘ಪ್ರಭಾವಿ’ಗಳ ಪತ್ತೆ ಹಚ್ಚುವ ಪ್ರಯತ್ನದಲ್ಲಿ ಪೊಲೀಸರು ನಿರತರಾಗಿದ್ದಾರೆ.

ತನಿಖೆ ವೇಳೆ ಆರೋಪಿಗಳಿಂದ ಪೊಲೀಸರು ಹೇಳಿಕೆ, ಮರು ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಆದರೆ ಆರೋಪಿಗಳು ಪೊಲೀಸರ ವಿಚಾರಣೆಗೆ ಸೂಕ್ತವಾಗಿ ಪ್ರತಿಕ್ರಿಯಿಸುತ್ತಿಲ್ಲ ಎನ್ನಲಾಗುತ್ತಿದೆ. ಮುಖ್ಯವಾಗಿ ಪುನೀತ್ ಎಂಬ ಆರೋಪಿ, ಸಾಕ್ಷ್ಯಗಳ ಹೇಳಿಕೆಗಳನ್ನು ಬದಲಾಯಿಸಿಕೊಡುವ ‘ಡೀಲ್’ ಪಡೆದಿದ್ದ ಎನ್ನಲಾಗುತ್ತಿದೆ. ಈತ ಪದೇ ಪದೇ ಹೇಳಿಕೆಗಳನ್ನು ಬದಲಾಯಿಸುತ್ತಿದ್ದು, ತನಿಖೆ ನಡೆಸುತ್ತಿರುವ ಪೊಲೀಸರಿಗೆ ತಲೆ ನೋವಾಗಿದೆ ಎನ್ನಲಾಗಿದೆ.

ಈಗಾಗಲೇ ಆರೋಪಿಗಳ ಮೊಬೈಲ್​​ಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು, ಕೆಲವೇ ದಿನಗಳಲ್ಲಿ ವರದಿ ಬರಲಿದ್ದು, ಈ ವೇಳೆ ಆರೋಪಿಗಳು ಯಾರೊಟ್ಟಿಗೆ ಸಂಪರ್ಕದಲ್ಲಿದ್ದರು ಎಂಬುದು ತಿಳಿಯಲಿದೆ. ಆರೋಪಿಗಳ ಬಂಧನ ಆಗುವ ಮೊದಲೇ ಅವರುಗಳು ಮೊಬೈಲ್ ಕರೆ ದಾಖಲೆಗಳು, ವಾಟ್ಸ್ ಆಪ್ ಚಾಟ್ ಇನ್ನಿತರೆ ಮಾಹಿತಿಗಳನ್ನು ಡಿಲೀಟ್ ಮಾಡಿದ್ದರು. ಫಾರೆನ್ಸಿಕ್ ತನಿಖೆಯಿಂದ ಆ ವರದಿಗಳನ್ನೆಲ್ಲ ಮರಳಿ ಪಡೆಯುವ ಪ್ರಯತ್ನದಲ್ಲಿ ಪೊಲೀಸರು ಇದ್ದಾರೆ. ಸಾಕ್ಷಿಗೆ ಬೆದರಿಕೆ ಹಾಕುವ ಸಮಯದಲ್ಲಿ ಕೆಲವರು ಕಾನ್ಫರೆನ್ಸ್ ಕಾಲ್​​ನಲ್ಲಿ ಇದ್ದರು ಎನ್ನಲಾಗುತ್ತಿದ್ದು, ಆ ಕಾಲ್​​ನಲ್ಲಿ ಆರೋಪಿಗಳ ಹೊರತಾಗಿ ಇನ್ಯಾರ್ಯಾರು ಇದ್ದರು ಎಂಬುದು ವರದಿ ಮೂಲಕ ಬಹಿರಂಗವಾಗುವ ಸಾಧ್ಯತೆ ಇದೆ.

ರೇಣುಕಾ ಸ್ವಾಮಿ ಕೊ*ಲೆ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿದ್ದು, ಪ್ರಕರಣದ 49ನೇ ಸಾಕ್ಷಿ ಆಗಿರುವ ದುರ್ಗಾ ಬಾರ್​​​ನ ಸಂದೀಪ್ ಎಂಬುವರಿಗೆ ಆಕರ್ಷ್ ಎಂಬ ವ್ಯಕ್ತಿಯಿಂದ ಕರೆ ಮಾಡಿಸಿ, ತಾವು ಹೇಳಿಕೊಟ್ಟಂತೆ ನ್ಯಾಯಾಲಯದಲ್ಲಿ ಸಾಕ್ಷಿ ನುಡಿಯಬೇಕು ಎಂದು ಆರೋಪಿಗಳು ಹೇಳಿದ್ದರಂತೆ. ಆದರೆ ಸಂದೀಪ್, ನ್ಯಾಯಾಲಯದ ಮುಂದೆ ತಮಗೆ ಸುಳ್ಳು ಸಾಕ್ಷ್ಯ ನುಡಿಯುವ ಬೆದರಿಕೆಯನ್ನು ಕೆಲವರು ಹಾಕಿದ್ದಾರೆ ಎಂದು ಜವಾಬ್ದಾರಿ ಹೇಳಿಕೆಯನ್ನು ನೀಡಿದ್ದರು. ಅದರ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದು, ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

The post ಡೀಲ್​ ಕೊಟ್ಟವರಿಗಾಗಿ ಪೊಲೀಸರ ಹುಡುಕಾಟ appeared first on Good News 24x7.

]]>
ಸಖತ್ ಬೋಲ್ಡ್ ಅವತಾರದಲ್ಲಿ ಯಶ್​-ಕಿಯಾರಾ ‘ತಬಾಹಿ’ https://www.goodnews24x7.com/yash-kiara-in-a-very-bold-avatar-for-tabahi/ Wed, 08 Jul 2026 07:34:19 +0000 https://www.goodnews24x7.com/?p=9807 ರಾಕಿಂಗ್ ಸ್ಟಾರ್ ಯಶ್ ಹಾಗೂ ಕಿಯಾರಾ ಅಡ್ವಾಣಿ ನಟನೆಯ ‘ಟಾಕ್ಸಿಕ್’ ಸಿನಿಮಾದ ಮೊದಲ ವಿಡಿಯೋ ಸಾಂಗ್ ‘ತಬಾಹಿ’ ಬಿಡುಗಡೆಯಾಗಿದೆ. ಹಾಡಿನಲ್ಲಿ ಯಶ್ ಹಾಗೂ ಕಿಯಾರಾ ಅವರ ಸಖತ್ ಬೋಲ್ಡ್ ಮತ್ತು ಗ್ಲಾಮರಸ್ ಅವತಾರ ಸೋಷಿಯಲ್ ಮೀಡಿಯಾದಲ್ಲಿ ಬೆಂಕಿ ಹಚ್ಚಿದೆ. ಆಗಸ್ಟ್ 26…

The post ಸಖತ್ ಬೋಲ್ಡ್ ಅವತಾರದಲ್ಲಿ ಯಶ್​-ಕಿಯಾರಾ ‘ತಬಾಹಿ’ appeared first on Good News 24x7.

]]>

ರಾಕಿಂಗ್ ಸ್ಟಾರ್ ಯಶ್ ಹಾಗೂ ಕಿಯಾರಾ ಅಡ್ವಾಣಿ ನಟನೆಯ ‘ಟಾಕ್ಸಿಕ್’ ಸಿನಿಮಾದ ಮೊದಲ ವಿಡಿಯೋ ಸಾಂಗ್ ‘ತಬಾಹಿ’ ಬಿಡುಗಡೆಯಾಗಿದೆ. ಹಾಡಿನಲ್ಲಿ ಯಶ್ ಹಾಗೂ ಕಿಯಾರಾ ಅವರ ಸಖತ್ ಬೋಲ್ಡ್ ಮತ್ತು ಗ್ಲಾಮರಸ್ ಅವತಾರ ಸೋಷಿಯಲ್ ಮೀಡಿಯಾದಲ್ಲಿ ಬೆಂಕಿ ಹಚ್ಚಿದೆ. ಆಗಸ್ಟ್ 26 ರಂದು ರಿಲೀಸ್ ಆಗಲಿರುವ ಈ ಚಿತ್ರದ ಹಾಡಿನ ಸಂಪೂರ್ಣ ವಿವರ ಇಲ್ಲಿದೆ.

ಟಾಕ್ಸಿಕ್’ ಚಿತ್ರದಿಂದ ‘ತಬಾಹಿ’ ವಿಡಿಯೋ ಸಾಂಗ್ ಔಟ್
ರಾಯ-ರುಮಿ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ
ಯೋಗರಾಜ್ ಭಟ್ ಸಾಹಿತ್ಯದ ಮೂಡಿ ಬಂದ ಹಾಡು
ರಾಕಿಂಗ್ ಸ್ಟಾರ್ ಯಶ್ ಹಾಗೂ ಕಿಯಾರಾ ಅಡ್ವಾಣಿ ಅವರ ಹಾಟೆಸ್ಟ್ ಅವತಾರ ಅನಾವರಣಗೊಂಡಿದೆ. ‘ಟಾಕ್ಸಿಕ್’ ಚಿತ್ರದ ‘ತಬಾಹಿ’ ಹಾಡಿನಲ್ಲಿ ಇಬ್ಬರೂ ಸಖತ್ ಬೋಲ್ಡ್​ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ರೊಮ್ಯಾನ್ಸ್ ಮಿತಿಮೀರಿದೆ. ಈ ವಿಡಿಯೋದ ನೋಡಿದ ಎಲ್ಲರೂ ಕಣ್ಣರಳಿಸುತ್ತಿದ್ದಾರೆ. ಕಿಯಾರಾ ಅವರ ಗ್ಲಾಮರ್, ಯಶ್ ಅವರ ಕಟ್ಟುಮಸ್ತಾದ ದೇಹ ಕಂಡು ಎಲ್ಲರೂ ನಿಬ್ಬೆರಗಾಗಿದ್ದಾರೆ.

‘ಟಾಕ್ಸಿಕ್’ ಸಿನಿಮಾ ಆಗಸ್ಟ್​ 26ರಂದು ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಅದರ ಭಾಗವಾಗಿ ಸಿನಿಮಾ ಪ್ರಚಾರ ಆರಂಭಿಸಿದೆ. ಈ ಮೊದಲು ಟೀಸರ್​​ಗಳ ಮೂಲಕ ಸೆಳೆದಿದ್ದ ಈ ಚಿತ್ರ ತಂಡ ಈಗ ‘ತಬಾಹಿ’ ವಿಡಿಯೋ ಸಾಂಗ್ ಅನಾವರಣ ಮಾಡಿದೆ. ಬೆಳಿಗ್ಗೆ 11.33ಕ್ಕೆ ಸರಿಯಾಗಿ ಸಾಂಗ್ ರಿಲೀಸ್ ಆಗಿದೆ.

ಯಶ್ ಹಾಗೂ ಕಿಯಾರಾ ‘ಟಾಕ್ಸಿಕ್’ ಸಿನಿಮಾದಲ್ಲಿ ಮುಖ್ಯಭೂಮಿಕೆಯಲ್ಲಿದ್ದಾರೆ. ‘ತಬಾಹಿ’ ಹಾಡಿನ ಉದ್ದಕ್ಕೂ ಯಶ್ ಹಾಗೂ ಕಿಯಾರಾ ರೊಮ್ಯಾನ್ಸ್ ಮಾಡುತ್ತಾರೆ. ಯಶ್ ಅವರು ರಾಯ ಪಾತ್ರದಲ್ಲಿ ಕಾಣಿಸಿಕೊಂಡರೆ, ಕಿಯಾರಾ ಅವರು ರುಮಿ ಪಾತ್ರದಲ್ಲಿ ನಟಿಸಿದ್ದಾರೆ. ಒಂದು ದೃಶ್ಯದಲ್ಲಿ ನಯನತಾರಾ ಕೂಡ ಕಾಣಿಸುತ್ತಾರೆ.

 

ಈ ಸಾಂಗ್ ಕೇವಲ ಸಾಂಗ್ ಆಗಿ ಮಾತ್ರ ಉಳಿದಿಲ್ಲ, ಸಿನಿಮಾದಲ್ಲಿ ದೃಶ್ಯ ಎಷ್ಟು ಅದ್ದೂರಿಯಾಗಿ ಇರಲಿದೆ ಎಂಬುದಕ್ಕೆ ಒಂದು ಮಾದರಿ ರೀತಿಯಲ್ಲಿ ಕಾಣಿಸಿದೆ. ಅದ್ದೂರಿ ದೃಶ್ಯಗಳು ಗಮನ ಸೆಳೆಯುವ ರೀತಿಯಲ್ಲಿ ಇದೆ. ಈ ಹಾಡಿಗೆ ಯೋಗರಾಜ್​ ಭಟ್ ಅವರು ಸಾಹಿತ್ಯ ಬರೆದಿದ್ದಾರೆ. ಈ ಮೊದಲು ಲಿರಿಕಲ್ ವಿಡಿಯೋ ಮಾತ್ರ ರಿಲೀಸ್ ಆಗಿತ್ತು.

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಪ್ಯಾನ್ ವರ್ಡ್​ ಸಿನಿಮಾ ಇದೇ ಆಗಸ್ಟ್ 26ರಂದು ಅದ್ಧೂರಿಯಾಗಿ ವಿಶ್ವಾದ್ಯಂತ ತೆರೆಗೆ ಬರಲು ಸಜ್ಜಾಗುತ್ತಿದೆ. ಖ್ಯಾತ ನಿರ್ದೇಶಕಿ ಗೀತು ಮೋಹನ್ ದಾಸ್ ಆ್ಯಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರಕ್ಕೆ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಂಸ್ಥೆಗಳು ಜಂಟಿಯಾಗಿ ಭಾರಿ ಬಜೆಟ್‌ನಲ್ಲಿ ಬಂಡವಾಳ ಹೂಡಿವೆ. ಚಿತ್ರದಲ್ಲಿ ಯಶ್ ಅವರಿಗೆ ಜೋಡಿಯಾಗಿ ಬಾಲಿವುಡ್ ಬೆಡಗಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದು, ಇವರೊಂದಿಗೆ ನಯನತಾರಾ, ಹುಮಾ ಖುರೇಷಿ ಮತ್ತು ರುಕ್ಮಿಣಿ ವಸಂತ್ ಸೇರಿದಂತೆ ದಕ್ಷಿಣ ಹಾಗೂ ಬಾಲಿವುಡ್‌ನ ದಂಡೇ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಒಟ್ಟಿಗೆ ಶೂಟ್ ಆಗಿರುವ ಈ ಸಿನಿಮಾ, ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳಿಗೂ ಡಬ್ ಆಗಿ ಬಿಡುಗಡೆಯಾಗುತ್ತಿದ್ದು, ಸದ್ಯ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ.

 

The post ಸಖತ್ ಬೋಲ್ಡ್ ಅವತಾರದಲ್ಲಿ ಯಶ್​-ಕಿಯಾರಾ ‘ತಬಾಹಿ’ appeared first on Good News 24x7.

]]>
ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ, 3 ಸಾ*ವು, ಹಲವರು ನಾಪತ್ತೆ https://www.goodnews24x7.com/landslide-in-wayanad-kerala-3-dead-many-missing/ Tue, 07 Jul 2026 10:57:58 +0000 https://www.goodnews24x7.com/?p=9783 2024ರ ಜುಲೈನಲ್ಲಿ ಸಂಭವಿಸಿದ ಭೂಕುಸಿತವು ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು, ಆ ದುರಂತದಲ್ಲಿ ಸುಮಾರು 298 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದೀಗ ಮತ್ತೆ ಅದೇ ರೀತಿಯ ಅವಘಡ ಮರುಕಳಿಸಿದ್ದು, ಈ ಭಾಗದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಸುರಕ್ಷತೆಯ ಬಗ್ಗೆ ತೀವ್ರ ಚರ್ಚೆಗಳು ಆರಂಭವಾಗಿವೆ.…

The post ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ, 3 ಸಾ*ವು, ಹಲವರು ನಾಪತ್ತೆ appeared first on Good News 24x7.

]]>

2024ರ ಜುಲೈನಲ್ಲಿ ಸಂಭವಿಸಿದ ಭೂಕುಸಿತವು ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು, ಆ ದುರಂತದಲ್ಲಿ ಸುಮಾರು 298 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದೀಗ ಮತ್ತೆ ಅದೇ ರೀತಿಯ ಅವಘಡ ಮರುಕಳಿಸಿದ್ದು, ಈ ಭಾಗದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಸುರಕ್ಷತೆಯ ಬಗ್ಗೆ ತೀವ್ರ ಚರ್ಚೆಗಳು ಆರಂಭವಾಗಿವೆ.

ಕೇರಳದ ವಯನಾಡಿನ ಕಲ್ಲಾಡಿಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೂವರು ಮೃತಪಟ್ಟಿದ್ದು, ಐವರು ನಾಪತ್ತೆಯಾಗಿದ್ದಾರೆ. ಸುರಂಗ ಮಾರ್ಗದ ಕಾಮಗಾರಿ ಸ್ಥಳದ ಮೇಲೆ ಮಣ್ಣಿನ ರಾಶಿ ಕುಸಿದು ಕಾರ್ಮಿಕರಿದ್ದ ಬಸ್‌ಗಳು ಹೂತುಹೋಗಿವೆ. ಭಾರೀ ಮಳೆಯ ನಡುವೆ ಎನ್‌ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಮುಖ್ಯಮಂತ್ರಿ ಸತೀಶನ್ ತುರ್ತು ಸಭೆ ಕರೆದಿದ್ದು, ಸಚಿವರು ಸ್ಥಳಕ್ಕೆ ದೌಡಾಯಿಸಿ ಪರಿಹಾರ ಕಾರ್ಯಗಳ ಉಸ್ತುವಾರಿ ವಹಿಸಿದ್ದಾರೆ.

ಕೇರಳದ ವಯನಾಡಿನಲ್ಲಿ ಮತ್ತೊಂದು ಭೀಕರ ಭೂಕುಸಿತ ಸಂಭವಿಸಿದೆ. ಅನಕ್ಕಂಫೊಯಿಲ್-ಕಲ್ಲಾಡಿ-ಮೇಪ್ಪಾಡಿ ಅವಳಿ ಸುರಂಗ ಮಾರ್ಗದ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಈ ದುರಂತ ನಡೆದಿದ್ದು, 3 ಮಂದಿ ಸಾವಿಗೀಡಾಗಿದ್ದಾರೆ. ಸುಮಾರು ಏಳು ಮಂದಿ ಮಣ್ಣಿನಡಿ ಸಿಲುಕಿರುವ ಆತಂಕ ವ್ಯಕ್ತವಾಗಿದೆ. ಕನಿಷ್ಠ ಆರು ಮಂದಿ ಕಾರ್ಮಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರೆಡ್ ಅಲರ್ಟ್ ಘೋಷಣೆ
ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು ವಯನಾಡ್ ಮತ್ತು ಕೋಝಿಕ್ಕೋಡ್ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ. ಮಲಪ್ಪುರಂ, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಜಾರಿಯಲ್ಲಿದೆ. ಕೇವಲ ಒಂದು ದಿನದಲ್ಲಿ ವೈಥಿರಿಯಲ್ಲಿ 123 ಮಿ.ಮೀ ಮಳೆಯಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ತುರ್ತು ಸಭೆ ಕರೆದಿದ್ದಾರೆ. ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಸೂಚನೆ ನೀಡಿದ್ದು, ಸಚಿವರಾದ ಟಿ. ಸಿದ್ದಿಕ್ ಮತ್ತು ಎ.ಪಿ. ಅನಿಲ್ ಕುಮಾರ್ ಅವರಿಗೆ ಸ್ಥಳಕ್ಕೆ ತೆರಳಿ ಉಸ್ತುವಾರಿ ನೋಡಿಕೊಳ್ಳುವಂತೆ ಆದೇಶಿಸಿದ್ದಾರೆ. ಕಲ್ಪೆಟ್ಟಾದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಿದೆ.

The post ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ, 3 ಸಾ*ವು, ಹಲವರು ನಾಪತ್ತೆ appeared first on Good News 24x7.

]]>
ಪೊಲೀಸರ ವಿರುದ್ಧ ವರ್ಷಾ ಹರೀಶ್‌ಗೌಡ ಬೇಸರ https://www.goodnews24x7.com/varsha-harish-gowda-upset-with-police/ Tue, 07 Jul 2026 05:38:34 +0000 https://www.goodnews24x7.com/?p=9775 ಮೈಸೂರು, ಜು.7, 2026: ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಅಶ್ಲೀಲ ಕಮೆಂಟ್‌ ಹಾಕಿದ ಆರೋಪಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು ನೀಡಿದರು, ಪೊಲೀಸರು ಈವರೆಗೂ ಯಾವುದೇ ಕ್ರಮಕೈಗೊಳ್ಳದ ಬಗ್ಗೆ ಹುಣಸೂರು ಶಾಸಕ ಜಿ.ಡಿ. ಹರೀಶ್‌ ಗೌಡ ಅವರ ಪತ್ನಿ ವರ್ಷ ಹರೀಶ್‌…

The post ಪೊಲೀಸರ ವಿರುದ್ಧ ವರ್ಷಾ ಹರೀಶ್‌ಗೌಡ ಬೇಸರ appeared first on Good News 24x7.

]]>

ಮೈಸೂರು, ಜು.7, 2026: ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಅಶ್ಲೀಲ ಕಮೆಂಟ್‌ ಹಾಕಿದ ಆರೋಪಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು ನೀಡಿದರು, ಪೊಲೀಸರು ಈವರೆಗೂ ಯಾವುದೇ ಕ್ರಮಕೈಗೊಳ್ಳದ ಬಗ್ಗೆ ಹುಣಸೂರು ಶಾಸಕ ಜಿ.ಡಿ. ಹರೀಶ್‌ ಗೌಡ ಅವರ ಪತ್ನಿ ವರ್ಷ ಹರೀಶ್‌ ಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧವಾಗಿ ಅಶ್ಲೀಲ ಕಮೆಂಟ್‌ ಹಾಕಿರುವ ಕುರಿತಂತೆ ಮೈಸೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿ, 10 ದಿನಗಳಾಗಿದೆ. ಆದರೂ ಆರೋಪಿ ಪತ್ತೆ ಮಾಡುವಲ್ಲಿ ಪೊಲೀಸ್‌ ಇಲಾಖೆ ವಿಫಲವಾಗಿದೆ. ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನ ಸಾಕಷ್ಟು ಮುಂದುವರಿದಿದ್ದು, ಯಾವುದೇ ಸಾಮಾಜಿಕ ಜಾಲತಾಣದಲ್ಲಿ ಖಾತೆ ತೆರೆಯಲು ಇ-ಮೇಲ್ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸುವ ಅಗತ್ಯವಿದೆ. ಇವುಗಳ ಆಧಾರದಲ್ಲಿ ವಿಕೃತಿ ಮೆರೆದಿರುವವರನ್ನು ಪತ್ತೆ ಹಚ್ಚಲು ಸಾಧ್ಯವಿದೆ. ಹೀಗಿದ್ದರು ದೂರು ನೀಡಿ ಹತ್ತು ದಿನಗಳಾದದರೂ ಆರೋಪಿಯ ಪತ್ತೆ ಮಾಡಲು ಪೊಲೀಸರಿಗೆ ಸಾಧ್ಯವಾಗದಿರುವುದು ನಿಜಕ್ಕೂ ಕಳವಳಕಾರಿಯಾಗಿದೆ ಎಂದರು.

ದೂರು ನೀಡಿದರು ಆರೋಪಿ ವಿರುದ್ಧ ಕ್ರಮವಹಿಸದಿರುವ ಪೊಲೀಸರ ನಡೆಯನ್ನು ಗಮನಿಸಿದರೆ ಅಶ್ಲೀಲ ಕಮೆಂಟ್ ಹಾಕಿದ ಆರೋಪಿ ತುಂಬಾ ಪ್ರಭಾವಿ ಇರಬಹುದಾ? ಪ್ರಭಾವ ಬಳಸಿ ಪೊಲೀಸ್ ಇಲಾಖೆ ಮೇಲೆ ಒತ್ತಡ ಹೇರಿರಬಹುದೇ? ಎಂಬ ಕುರಿತಂತೆ ಅನುಮಾನ ವ್ಯಕ್ತವಾಗುತ್ತಿದೆ. ಈ ಪ್ರಕರಣ ನನ್ನ ಮನಸ್ಸಿಗೆ ತುಂಬಾ ಆಘಾತವಾಗಿದೆ, ನೋವಾಗಿದ್ದು, ಪೊಲೀಸರು ಯಾವುದೇ ಒತ್ತಡಗಳು ಅಥವಾ ಪ್ರಭಾವಕ್ಕೊಳಗಾಗದೆ, ಆರೋಪಿಯನ್ನು ಬಂಧಿಸಿ ಕ್ರಮಕೈಗೊಳ್ಳಬೇಕಿದೆ ಎಂದು ಆಗ್ರಹಿಸಿದರು.

ಈ ವಿಷಯದಲ್ಲಿ ನನಗೆ ಯಾರ ಮೇಲೂ ಅನುಮಾನವಿಲ್ಲ, ನಾನು ಹುಣಸೂರು ಕ್ಷೇತ್ರದ ಜನರೊಂದಿಗೆ ಹೆಚ್ಚಿನ ಒಡನಾಡ ಹೊಂದಿದ್ದೇನೆ. ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಲು ತೆರಳುತ್ತೇನೆ. ಜನರು ಕೂಡ ನನ್ನನ್ನು ಪ್ರೀತಿ, ಅಭಿಮಾನದಿಂದ ಕಾಣುತ್ತಾರೆ. ಇದನ್ನು ಸಹಿಸಲಾರದವರು ಈ ರೀತಿ ಮಾಡಿರಬಹುದು. ನಾನು ರಾಜಕೀಯ ಹಿನ್ನೆಲೆ ಇರುವ ಕುಟುಂಬದಿಂದ ಬಂದಿದ್ದೇನೆ. ಆದರೂ ರಾಜಕೀಯದ ಬಗ್ಗೆ ನನಗೆ ಆಸಕ್ತಿಯಿಲ್ಲ ಮತ್ತು ಮುಂದೆ ಚುನಾವಣೆಗೆ ಸ್ಪರ್ಧಿಸುವ ಉದ್ದೇಶವೂ ನನಗಿಲ್ಲ ಎಂದರು.

The post ಪೊಲೀಸರ ವಿರುದ್ಧ ವರ್ಷಾ ಹರೀಶ್‌ಗೌಡ ಬೇಸರ appeared first on Good News 24x7.

]]>
ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ https://www.goodnews24x7.com/water-level-details-of-major-dams-in-karnataka/ Tue, 07 Jul 2026 05:15:26 +0000 https://www.goodnews24x7.com/?p=9772 ಕರ್ನಾಟಕದ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಪ್ರಮುಖ ಜಲಾಶಯಗಳಿಗೆ ಭಾರಿ ಒಳಹರಿವು ಆರಂಭವಾಗಿದೆ. ಶಿವಮೊಗ್ಗದ ಗಾಜನೂರು ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಎಲ್ಲಾ 22 ಗೇಟ್‌ಗಳ ಮೂಲಕ ಕೃಷ್ಣಾ ನದಿಯ ಉಪನದಿಗೆ ನೀರು ಹರಿಸಲಾಗುತ್ತಿದೆ. ಬೆಂಗಳೂರು, ಜುಲೈ…

The post ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ appeared first on Good News 24x7.

]]>

ಕರ್ನಾಟಕದ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಪ್ರಮುಖ ಜಲಾಶಯಗಳಿಗೆ ಭಾರಿ ಒಳಹರಿವು ಆರಂಭವಾಗಿದೆ. ಶಿವಮೊಗ್ಗದ ಗಾಜನೂರು ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಎಲ್ಲಾ 22 ಗೇಟ್‌ಗಳ ಮೂಲಕ ಕೃಷ್ಣಾ ನದಿಯ ಉಪನದಿಗೆ ನೀರು ಹರಿಸಲಾಗುತ್ತಿದೆ.

ಬೆಂಗಳೂರು, ಜುಲೈ 7: ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ಮುಂಗಾರು ಮಳೆ (Monsoon Rain) ತೀವ್ರಗೊಂಡಿದ್ದು, ಬತ್ತಿ ಹೋಗುತ್ತಿದ್ದ ಕರ್ನಾಟಕದ ಪ್ರಮುಖ ಜಲಾಶಯಗಳಿಗೆ ಈಗ ಭಾರಿ ಪ್ರಮಾಣದ ಒಳಹರಿವು ಆರಂಭವಾಗಿದೆ. ಜೂನ್ ತಿಂಗಳಲ್ಲಿ ಕೊಂಚ ಕೈಕೊಟ್ಟಿದ್ದ ಮಳೆಯು ಜುಲೈ ಆರಂಭದಲ್ಲಿ ಚುರುಕುಗೊಂಡಿದೆ. ನದಿ-ಜಲಾಶಯಗಳು ಮೈದುಂಬಿಕೊಳ್ಳುತ್ತಿವೆ. ಇದರ ಪರಿಣಾಮವಾಗಿ ಶಿವಮೊಗ್ಗ ತಾಲೂಕಿನ ಗಾಜನೂರು ಬಳಿಯ ತುಂಗಾ ಜಲಾಶಯವು ಪ್ರಸಕ್ತ ಸಾಲಿನಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣವಾಗಿ ಭರ್ತಿಯಾಗಿದೆ. ಡ್ಯಾಂ ಸುರಕ್ಷತೆಯ ದೃಷ್ಟಿಯಿಂದ ಒಟ್ಟು 22 ಗೇಟ್‌ಗಳನ್ನು ಮುಂಜಾನೆ ತೆರೆಯಲಾಗಿದ್ದು, ಸುಮಾರು 24,ವಾಹನ ಕ್ಯೂಸೆಕ್ ನೀರನ್ನು ತುಂಗಾ ನದಿಗೆ ಹರಿಸಲಾಗುತ್ತಿದೆ. ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಡ್ಯಾಂ ಆವರಣದಲ್ಲಿರುವ ತುಂಗಾದೇವಿಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಲಾಗಿದೆ.

ಹಾಲಿನ ನೊರೆಯಂತೆ ಧುಮುಕುತ್ತಿರುವ ನೀರು, ರೈತರಲ್ಲಿ ಹುಮ್ಮಸ್ಸು
ತುಂಗಾ ಜಲಾಶಯದ ಎಲ್ಲಾ ಗೇಟ್‌ಗಳಿಂದ ನೀರು ಧುಮುಕುತ್ತಿರುವುದರಿಂದ ಇಡೀ ವಾತಾವರಣ ಹಾಲಿನ ನೊರೆಯಂತೆ ಕಂಗೊಳಿಸುತ್ತಿದೆ. ಮಳೆಯ ನಡುವೆಯೂ ಡ್ಯಾಂ ಸೌಂದರ್ಯ ಇಮ್ಮಡಿಯಾಗಿದೆ. ನಿರಂತರ ಮಳೆಯಿಂದಾಗಿ ತುಂಗಾ ನದಿ ತುಂಬಿ ಹರಿಯುತ್ತಿದ್ದು, ಶಿವಮೊಗ್ಗ ಮಾತ್ರವಲ್ಲದೆ ದಾವಣಗೆರೆ, ಹಾವೇರಿ, ಗದಗ ಹಾಗೂ ಬಳ್ಳಾರಿ ಜಿಲ್ಲೆಗಳ ರೈತರ ಕೃಷಿ ಚಟುವಟಿಕೆಗಳಿಗೆ ಭಾರಿ ಅನುಕೂಲವಾಗಲಿದೆ. ಮಳೆ ತಡವಾಗಿದ್ದರಿಂದ ಆತಂಕದಲ್ಲಿದ್ದ ರೈತರ ಮುಖದಲ್ಲಿ ಈಗ ಮಂದಹಾಸ ಮೂಡಿದ್ದು, ಕೃಷಿ ಚಟುವಟಿಕೆಗಳು ಮತ್ತೆ ಚುರುಕುಗೊಂಡಿವೆ.

ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ
ಕೆಆರ್​ಎಸ್ ಜಲಾಶಯ (ಮಂಡ್ಯ)
ಗರಿಷ್ಠ ಮಟ್ಟ: 124.80 ಅಡಿ
ಇಂದಿನ ನೀರಿನ ಮಟ್ಟ: 82.45 ಅಡಿ
ಒಳಹರಿವು: 5,734 ಕ್ಯೂಸೆಕ್, ಹೊರಹರಿವು: 777 ಕ್ಯೂಸೆಕ್
ಗರಿಷ್ಠ ಸಾಮರ್ಥ್ಯ: 49.452 ಟಿಎಂಸಿ
ಇಂದಿನ ಸಂಗ್ರಹ: 11.909 ಟಿಎಂಸಿ
ಕಬಿನಿ ಜಲಾಶಯ (ಮೈಸೂರು)
ಕಬಿನಿ ಜಲಾಶಯದ ಇಂದಿನ ನೀರಿನ ಮಟ್ಟ 59.32 ಅಡಿಯಷ್ಟಿದೆ (ಕಳೆದ ವರ್ಷ ಇದೇ ದಿನ 80.79 ಅಡಿ ಇತ್ತು). ಪ್ರಸ್ತುತ ಜಲಾಶಯದಲ್ಲಿ 7.07 ಟಿಎಂಸಿ ನೀರು ಸಂಗ್ರಹವಿದ್ದು, 4,394 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ನದಿಗೆ 500 ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದ್ದು, ಕಾಲುವೆಗಳಿಗೆ ಸದ್ಯ ನೀರು ಹರಿಸುತ್ತಿಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ ಕಬಿನಿಯಲ್ಲಿ ನೀರಿನ ಮಟ್ಟ ಹಾಗೂ ಒಳಹರಿವು ಕಡಿಮೆ ಇದೆ. ಕಳೆದ 24 ಗಂಟೆಗಳಲ್ಲಿ ಇಲ್ಲಿ 30 ಮಿ.ಮೀ ಮಳೆ ದಾಖಲಾಗಿದೆ.

ಹೇಮಾವತಿ ಜಲಾಶಯ (ಹಾಸನ)
ಗರಿಷ್ಠ ಮಟ್ಟ: 2922 ಅಡಿ (37 ಟಿಎಂಸಿ)
ಇಂದಿನ ನೀರಿನ ಮಟ್ಟ: 2895.91 ಅಡಿ (17.379 ಟಿಎಂಸಿ)
ಒಳಹರಿವು: 8,901 ಕ್ಯೂಸೆಕ್, ಹೊರಹರಿವು: 300 ಕ್ಯೂಸೆಕ್
ಭದ್ರಾ ಜಲಾಶಯ (ಲಕ್ಕವಳ್ಳಿ/ಭದ್ರಾವತಿ)
ಗರಿಷ್ಠ ಮಟ್ಟ: 186 ಅಡಿ (71.535 ಟಿಎಂಸಿ)
ಇಂದಿನ ನೀರಿನ ಮಟ್ಟ: 140.6 ಅಡಿ (27.231 ಟಿಎಂಸಿ)
ಒಳಹರಿವು: 8,117 ಕ್ಯೂಸೆಕ್, ಹೊರಹರಿವು: 212 ಕ್ಯೂಸೆಕ್
ಬಸವಸಾಗರ ಜಲಾಶಯ (ನಾರಾಯಣಪುರ, ಯಾದಗಿರಿ)
ಗರಿಷ್ಠ ಮಟ್ಟ: 492.25 ಮೀಟರ್
ಇಂದಿನ ನೀರಿನ ಮಟ್ಟ: 488.82 ಮೀಟರ್
ಒಳಹರಿವು: 00 ಕ್ಯೂಸೆಕ್, ಹೊರಹರಿವು: 761 ಕ್ಯೂಸೆಕ್
ರಾಜ್ಯಾದ್ಯಂತ ಮುಂಗಾರು ಮಳೆ ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಕೆಆರ್‌ಎಸ್, ಭದ್ರಾ ಮತ್ತು ಹೇಮಾವತಿ ಜಲಾಶಯಗಳ ನೀರಿನ ಮಟ್ಟದಲ್ಲಿ ಭಾರೀ ಏರಿಕೆಯಾಗುವ ನಿರೀಕ್ಷೆಯಿದೆ.

The post ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ appeared first on Good News 24x7.

]]>
ಸೊಳ್ಳೆ ಹಿಡಿದು ಕೊಟ್ರೆ ಸಿಗುತ್ತೆ 400 ರೂ ಬಹುಮಾನ! https://www.goodnews24x7.com/catching-a-mosquito-and-getting-a-reward-of-rs-400/ Mon, 06 Jul 2026 08:42:57 +0000 https://www.goodnews24x7.com/?p=9767 ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ಹಿವರೆ ಬಜಾರ್ ಗ್ರಾಮ ವಿಶಿಷ್ಟವಾಗಿದೆ. ಇಲ್ಲಿ ಒಂದೇ ಒಂದು ಸೊಳ್ಳೆಯೂ ಇಲ್ಲ, ಸೊಳ್ಳೆ ಹಿಡಿದು ಕೊಟ್ಟರೆ 400 ರೂ. ಬಹುಮಾನ. ಹಿಂದೆ ಬಡತನದಿಂದ ಬಳಲುತ್ತಿದ್ದ ಈ ಗ್ರಾಮ, ಸಮುದಾಯದ ಪ್ರಯತ್ನದಿಂದ ನೀರು ನಿರ್ವಹಣೆ ಹಾಗೂ ಸ್ವಚ್ಛತೆಯಲ್ಲಿ ಮಾದರಿಯಾಗಿದೆ.…

The post ಸೊಳ್ಳೆ ಹಿಡಿದು ಕೊಟ್ರೆ ಸಿಗುತ್ತೆ 400 ರೂ ಬಹುಮಾನ! appeared first on Good News 24x7.

]]>

ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ಹಿವರೆ ಬಜಾರ್ ಗ್ರಾಮ ವಿಶಿಷ್ಟವಾಗಿದೆ. ಇಲ್ಲಿ ಒಂದೇ ಒಂದು ಸೊಳ್ಳೆಯೂ ಇಲ್ಲ, ಸೊಳ್ಳೆ ಹಿಡಿದು ಕೊಟ್ಟರೆ 400 ರೂ. ಬಹುಮಾನ. ಹಿಂದೆ ಬಡತನದಿಂದ ಬಳಲುತ್ತಿದ್ದ ಈ ಗ್ರಾಮ, ಸಮುದಾಯದ ಪ್ರಯತ್ನದಿಂದ ನೀರು ನಿರ್ವಹಣೆ ಹಾಗೂ ಸ್ವಚ್ಛತೆಯಲ್ಲಿ ಮಾದರಿಯಾಗಿದೆ. ಇಂದು 80ಕ್ಕೂ ಹೆಚ್ಚು ಕೋಟ್ಯಧಿಪತಿಗಳಿರುವ ಈ ಹಳ್ಳಿಯ ಕಥೆ ದೇಶಕ್ಕೆ ಸ್ಪೂರ್ತಿದಾಯಕ.

ಪುಣೆ, ಜುಲೈ 06: ಭಾರತದಲ್ಲಿ ಪ್ರತಿ ವರ್ಷ ಸೊಳ್ಳೆಕಡಿತ ಮತ್ತು ಅದರಿಂದ ಬರುವ ರೋಗಗಳಿಂದ ಸಾವಿರಾರು ಜನರು ಪರದಾಡುತ್ತಾರೆ. ಆದರೆ, ನಮ್ಮ ದೇಶದಲ್ಲೇ ಒಂದೇ ಒಂದು ಸೊಳ್ಳೆಯೂ ಇಲ್ಲದ ವಿಚಿತ್ರ ಹಾಗೂ ಅದ್ಭುತ ಹಳ್ಳಿಯೊಂದಿದೆ. ಅಷ್ಟೇ ಅಲ್ಲ, ಈ ಗ್ರಾಮದಲ್ಲಿ ನೀವು ಎಲ್ಲಾದರೂ ಒಂದು ಸೊಳ್ಳೆಯನ್ನು ಹುಡುಕಿ ಹಿಡಿದು ಕೊಟ್ಟರೆ ನಿಮಗೆ 400 ರೂಪಾಯಿ ಬಹುಮಾನ ಕೂಡ ಕೊಡ್ತಾರೆ. ಹೌದು, ಇದು ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ‘ಹಿವರೆ ಬಜಾರ್’ ಎಂಬ ಹಳ್ಳಿಯ ಆಸಕ್ತಿದಾಯಕ ಕಥೆ.

ಶೇ.90 ಬಡವರಿದ್ದ ಹಳ್ಳಿಯಲ್ಲಿ ಈಗ 80 ಜನ ಕೋಟ್ಯಧಿಪತಿಗಳು ಇಂದು ಹಿವರೆ ಬಜಾರ್ ಗ್ರಾಮದಲ್ಲಿ ಒಟ್ಟು 305 ಕುಟುಂಬಗಳಿದ್ದು, ಇವರಲ್ಲಿ 80 ಕ್ಕೂ ಹೆಚ್ಚು ಜನ ಕೋಟ್ಯಧಿಪತಿಗಳಿದ್ದಾರೆ . ಆದರೆ, 1990 ರ ದಶಕದ ಮೊದಲು ಈ ಗ್ರಾಮದ ಪರಿಸ್ಥಿತಿ ಹೀಗಿರಲಿಲ್ಲ. ತೀವ್ರ ಬರಗಾಲದಿಂದ ಕಂಗೆಟ್ಟಿದ್ದ ಈ ಊರಿನ ಶೇ. 90 ರಷ್ಟು ಜನರು ಅತ್ಯಂತ ಬಡವರಾಗಿದ್ದರು. ಕುಡಿಯಲು ನೀರಿಲ್ಲದೆ ಗ್ರಾಮಸ್ಥರು ಊರು ಬಿಟ್ಟು ವಲಸೆ ಹೋಗುತ್ತಿದ್ದರು

1990 ರಲ್ಲಿ ಗ್ರಾಮಸ್ಥರೆಲ್ಲಾ ಒಟ್ಟಾಗಿ ‘ಜಂಟಿ ಅರಣ್ಯ ನಿರ್ವಹಣಾ ಸಮಿತಿ’ಯನ್ನು ರಚಿಸಿಕೊಂಡರು. ಊರಿನಲ್ಲೇ ಬಾವಿಗಳನ್ನು ಅಗೆಯಲು ಮತ್ತು ಲಕ್ಷಾಂತರ ಮರಗಳನ್ನು ನೆಡಲು ನಿರ್ಧರಿಸಿದರು.ಶ್ರಮದಾನ ಮತ್ತು ಸರ್ಕಾರದ ನೆರವು: ಗ್ರಾಮಸ್ಥರು ತಾವೇ ಖುದ್ದಾಗಿ ಉಚಿತವಾಗಿ ಶ್ರಮದಾನ ಮಾಡಿದರು. ಇದಕ್ಕೆ ಮಹಾರಾಷ್ಟ್ರ ಸರ್ಕಾರದ ಉದ್ಯೋಗ ಖಾತರಿ ಯೋಜನೆಯ ಬೆಂಬಲವೂ ಸಿಕ್ಕಿತು.ಈ ನಿರಂತರ ಪ್ರಯತ್ನದ ಫಲವಾಗಿ, ಒಂದು ಕಾಲದಲ್ಲಿ ನೀರಿಲ್ಲದಿದ್ದ ಈ ಗ್ರಾಮದಲ್ಲಿ ಇಂದು ಭೂಮಿಯ ಒಳಗಿನ ನೀರಿನ ಮಟ್ಟ ಕೇವಲ 30 ರಿಂದ 35 ಅಡಿಗೆ ತಲುಪಿದೆ.

ನೀರು ಉಳಿಸಲು ಬೆಳೆಗಳ ಬದಲಾವಣೆ ಗ್ರಾಮಸ್ಥರು ಕೇವಲ ನೀರನ್ನು ಸಂಗ್ರಹಿಸಲಿಲ್ಲ, ಅದನ್ನು ಜಾಣ್ಮೆಯಿಂದ ಬಳಸಲು ಕಲಿತರು. ಹೆಚ್ಚು ನೀರು ಬೇಡುವ ಭತ್ತ, ಕಬ್ಬು ಮತ್ತು ಜೋಳದಂತಹ ಬೆಳೆಗಳನ್ನು ಗ್ರಾಮದಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಯಿತು. ಬದಲಾಗಿ ಕಡಿಮೆ ನೀರಿನಲ್ಲಿ ಬೆಳೆಯುವ, ಹೆಚ್ಚು ಲಾಭ ನೀಡುವ ಆಲೂಗಡ್ಡೆ ಮತ್ತು ಈರುಳ್ಳಿಗಳನ್ನು ಬೆಳೆಯಲು ಆರಂಭಿಸಿದರು.

ಇಂದು ಹಿವರೆ ಬಜಾರ್‌ನ ರೈತರು ಮಳೆಗಾಗಿ ಕಾಯುತ್ತಾ ಕೂರುವುದಿಲ್ಲ. ಸರಿಯಾದ ಜಲ ನಿರ್ವಹಣೆ ಹಾಗೂ ಸ್ವಚ್ಛತೆಯಿಂದಾಗಿ ಇಡೀ ಗ್ರಾಮ ಹಸಿರಾಗಿದೆ ಮತ್ತು ಸೊಳ್ಳೆ ಮುಕ್ತವಾಗಿದೆ. ಬಡತನದಿಂದ ಕೋಟ್ಯಧಿಪತಿಗಳ ಹಳ್ಳಿಯಾಗಿ ಬದಲಾಗಿರುವ ಹಿವರೆ ಬಜಾರ್ ಇಡೀ ದೇಶಕ್ಕೆ ಮಾದರಿಯಾಗಿದೆ.

The post ಸೊಳ್ಳೆ ಹಿಡಿದು ಕೊಟ್ರೆ ಸಿಗುತ್ತೆ 400 ರೂ ಬಹುಮಾನ! appeared first on Good News 24x7.

]]>
ಚಿತ್ರರಂಗದ ತಾರತಮ್ಯ ಬಿಚ್ಚಿಟ್ಟ ಕೃತಿ ಸನೋನ್ https://www.goodnews24x7.com/kriti-sanon-exposes-discrimination-in-the-film-industry/ Sun, 05 Jul 2026 06:57:40 +0000 https://www.goodnews24x7.com/?p=9759 ಸಿನಿಮಾದ ಚಿತ್ರೀಕರಣದ ವೇಳೆ ನಟಿಯರನ್ನು ಹೇಗೆ ನಡೆಸಿಕೊಳ್ಳಲಾಗುತ್ತದೆ ಎಂಬುದರ ಬಗ್ಗೆ ಕೃತಿ ಸನನ್ ಅವರು ಮಾತನಾಡಿದ್ದಾರೆ. ಹೀರೋ ಮತ್ತು ಹೀರೋಯಿನ್ ನಡುವೆ ಬಹಳ ತಾರತಮ್ಯ ಮಾಡಲಾಗುತ್ತದೆ ಎಂದು ಅವರು ಓಪನ್ ಆಗಿ ಹೇಳಿದ್ದಾರೆ. ಸೆಟ್‌ಗಳಲ್ಲಿನ ಈ ತಾರತಮ್ಯಗಳು ಸಂಪೂರ್ಣವಾಗಿ ತೊಲಗಬೇಕಿದೆ ಎಂದು…

The post ಚಿತ್ರರಂಗದ ತಾರತಮ್ಯ ಬಿಚ್ಚಿಟ್ಟ ಕೃತಿ ಸನೋನ್ appeared first on Good News 24x7.

]]>

ಸಿನಿಮಾದ ಚಿತ್ರೀಕರಣದ ವೇಳೆ ನಟಿಯರನ್ನು ಹೇಗೆ ನಡೆಸಿಕೊಳ್ಳಲಾಗುತ್ತದೆ ಎಂಬುದರ ಬಗ್ಗೆ ಕೃತಿ ಸನನ್ ಅವರು ಮಾತನಾಡಿದ್ದಾರೆ. ಹೀರೋ ಮತ್ತು ಹೀರೋಯಿನ್ ನಡುವೆ ಬಹಳ ತಾರತಮ್ಯ ಮಾಡಲಾಗುತ್ತದೆ ಎಂದು ಅವರು ಓಪನ್ ಆಗಿ ಹೇಳಿದ್ದಾರೆ. ಸೆಟ್‌ಗಳಲ್ಲಿನ ಈ ತಾರತಮ್ಯಗಳು ಸಂಪೂರ್ಣವಾಗಿ ತೊಲಗಬೇಕಿದೆ ಎಂದು ಕೃತಿ ಸನೋನ್ ಅಭಿಪ್ರಾಯಪಟ್ಟಿದ್ದಾರೆ.

ಶೂಟಿಂಗ್ ವೇಳೆ ನಟಿಯರನ್ನು ಕೀಳಾಗಿ ಕಾಣಲಾಗುತ್ತದೆ: ಚಿತ್ರರಂಗದ ತಾರತಮ್ಯ ಬಿಚ್ಚಿಟ್ಟ ಕೃತಿ ಸನೋನ್

ನಟ-ನಟಿಯರ ನಡುವೆ ವ್ಯತ್ಯಾಸ ಇರುತ್ತದೆ ಎಂದು ಕೃತಿ ಸನೋನ್ ಆರೋಪ.

ಸಹಾಯಕ ನಿರ್ದೇಶಕರ ವರ್ತನೆ ಬಗ್ಗೆಯೂ ಕೃತಿ ಸನೋನ್ ಅಸಮಾಧಾನ.
ಚಿತ್ರರಂಗದಲ್ಲಿ ಪುರುಷ ಮತ್ತು ಮಹಿಳಾ ಕಲಾವಿದರ ನಡುವೆ ನಡೆಯುವ ಲಿಂಗ ತಾರತಮ್ಯದ (Gender Bias) ಕುರಿತು ಖ್ಯಾತ ನಟಿ ಕೃತಿ ಸನನ್ (Kriti Sanon) ಮುಕ್ತವಾಗಿ ಧ್ವನಿ ಎತ್ತಿದ್ದಾರೆ. ಚಿತ್ರೀಕರಣದ ಸೆಟ್‌ಗಳಲ್ಲಿ ಮಹಿಳಾ ಕಲಾವಿದರನ್ನು ಹೇಗೆ ಕೀಳಾಗಿ ಕಾಣಲಾಗುತ್ತದೆ ಮತ್ತು ಪುರುಷರಿಗೆ ಹೋಲಿಸಿದರೆ ನಟಿಯರನ್ನು ಹೇಗೆ ತಾರತಮ್ಯದಿಂದ ನಡೆಸಿಕೊಳ್ಳಲಾಗುತ್ತದೆ ಎಂಬುದನ್ನು ಅವರು ಬಿಚ್ಚಿಟ್ಟಿದ್ದಾರೆ. ಪ್ರಸಿದ್ಧ ಯೂಟ್ಯೂಬರ್ ಲಿಲ್ಲಿ ಸಿಂಗ್ ಅವರ ಟಾಕ್ ಶೋನಲ್ಲಿ ಭಾಗವಹಿಸಿದ್ದ ಕೃತಿ, ತಾವು ಮಾಡೆಲಿಂಗ್, ಇಂಜಿನಿಯರಿಂಗ್ ಕಾಲೇಜು ಮತ್ತು ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರಗಳ ಭಾಗವಾಗಿದ್ದರೂ, ಬಾಲಿವುಡ್‌ನಲ್ಲೇ ಅತ್ಯಂತ ಹೆಚ್ಚು ಸವಾಲುಗಳನ್ನು ಎದುರಿಸಬೇಕಾಗಿ ಬಂತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರಶ್ನೆ ಕೇಳಿದರೆ ಕಿರಿಕಿರಿ ಅಂತಾರೆ!’

ಚಿತ್ರೀಕರಣದ ಸಮಯದಲ್ಲಿ ಪುರುಷ ಮತ್ತು ಮಹಿಳಾ ಕಲಾವಿದರನ್ನು ನೋಡುವ ದೃಷ್ಟಿಕೋನವೇ ಬೇರೆಯಾಗಿರುತ್ತದೆ ಎಂದು ಕೃತಿ ವಿವರಿಸಿದ್ದಾರೆ. ತಮಗೆ ಚಿತ್ರಕಥೆ ಹಾಗೂ ಪಾತ್ರಗಳ ಬಗ್ಗೆ ನಿರ್ದೇಶಕರನ್ನು ಪ್ರಶ್ನಿಸುವ ಅಭ್ಯಾಸ ಮೊದಲಿನಿಂದಲೂ ಇದೆ ಎಂದ ಅವರು, ‘ಒಬ್ಬ ನಟಿ ಪ್ರಶ್ನೆ ಕೇಳಿದರೆ ಸೆಟ್‌ನಲ್ಲಿರುವವರು ‘ಇವಳು ಎಷ್ಟು ಪ್ರಶ್ನೆ ಕೇಳುತ್ತಾಳೆ, ಇನ್ನು ಇವಳ 50 ಪ್ರಶ್ನೆಗಳು ಶುರುವಾಗುತ್ತವೆ’ ಎಂದು ಆಡಿಕೊಳ್ಳುತ್ತಾರೆ. ಇದೇ ಪ್ರಶ್ನೆಯನ್ನು ಒಬ್ಬ ನಟ ಕೇಳಿದರೆ, ಅವನು ಸಿನಿಮಾದಲ್ಲಿ ತುಂಬಾ ಆಸಕ್ತಿ ಹೊಂದಿದ್ದಾನೆ ಎಂದು ಹೊಗಳುತ್ತಾರೆ’ ಎಂದು ಹೇಳಿದ್ದಾರೆ.

‘ಹೆಚ್ಚು ತಲೆ ಕೆಡಿಸಿಕೊಳ್ಳಬೇಡ, ಸುಮ್ಮನೆ ನಟಿಸು’:
‘ನನಗೂ ಇಂತಹ ಅನುಭವವಾಗಿದೆ. ನಾನು ಪ್ರಶ್ನೆ ಕೇಳಿದಾಗ ‘ಹೆಚ್ಚು ತಲೆ ಕೆಡಿಸಿಕೊಳ್ಳಬೇಡ, ಸುಮ್ಮನೆ ನಟಿಸು’ ಎಂದು ಹೇಳುತ್ತಿದ್ದರು. ಆದರೆ ಅದೇ ಪ್ರಶ್ನೆಯನ್ನು ಸಹನಟ ಕೇಳಿದಾಗ ‘ಓಕೆ, ಹಾಗೇ ಮಾಡೋಣ’ ಎಂದು ಒಪ್ಪಿಕೊಳ್ಳುತ್ತಿದ್ದರು’ ಎಂದು ಕೃತಿ ಬೇಸರ ಹಂಚಿಕೊಂಡಿದ್ದಾರೆ. ಚಿತ್ರೀಕರಣದ ವೇಳೆ ಸಿಗುವ ಸೌಲಭ್ಯಗಳಲ್ಲೂ ನಟ-ನಟಿಯರ ನಡುವೆ ವ್ಯತ್ಯಾಸ ಇರುತ್ತದೆ ಎಂದು ಕೃತಿ ಸನೋನ್ ಗಂಭೀರ ಆರೋಪ ಮಾಡಿದ್ದಾರೆ.

‘ಸಣ್ಣ ಕಾರು ಕೊಟ್ಟರೂ ಪರವಾಗಿಲ್ಲ, ಆದರೆ’:
‘ಹಲವು ಬಾರಿ ನಟರಿಗೆ ನೀಡಲಾಗುವ ಕಾರು ಅಥವಾ ಕ್ಯಾರವಾನ್ ರೂಮ್‌ಗಳು ತುಂಬಾ ಐಷಾರಾಮಿಯಾಗಿರುತ್ತವೆ. ಆದರೆ ನಟಿಯರಿಗೆ ಸಾಮಾನ್ಯವಾದ ರೂಮ್ ನೀಡಲಾಗುತ್ತದೆ. ನನಗೆ ಸಣ್ಣ ರೂಮ್ ಅಥವಾ ಸಣ್ಣ ಕಾರು ಕೊಟ್ಟರೂ ಪರವಾಗಿಲ್ಲ, ಆದರೆ ಆ ಮೂಲಕ ನಾನು ಅವರಿಗಿಂತ ಕಮ್ಮಿ ಎನ್ನುವಂತೆ ನನ್ನನ್ನು ಭಾವಿಸಬೇಡಿ ಎನ್ನುವುದಷ್ಟೇ ನನ್ನ ವಾದ’ ಎಂದು ಕೃತಿ ಹೇಳಿದ್ದಾರೆ.

ಇದರೊಂದಿಗೆ ಸಹಾಯಕ ನಿರ್ದೇಶಕರ ವರ್ತನೆಯ ಬಗ್ಗೆಯೂ ಮಾತನಾಡಿರುವ ಅವರು, ‘ಶೂಟಿಂಗ್ ಸೆಟ್‌ಗೆ ಬರುವಂತೆ ಸಹಾಯಕ ನಿರ್ದೇಶಕರು ಮೊದಲು ಹುಡುಗಿಯರನ್ನೇ ಕರೆಯುತ್ತಾರೆ. ಅವರಿಗೆ ಪುರುಷ ನಟರನ್ನು ಕಂಡರೆ ಕೊಂಚ ಭಯವಿರುತ್ತದೆ. ಹೀಗಾಗಿ ಮಹಿಳಾ ನಟಿಯರನ್ನು ಅವರು ತುಂಬಾ ಸಲೀಲಾಗಿ ತೆಗೆದುಕೊಳ್ಳುತ್ತಾರೆ’ ಎಂದಿದ್ದಾರೆ.

ತಮ್ಮ ವೃತ್ತಿಜೀವನದ ಆರಂಭದ ದಿನಗಳನ್ನು ನೆನಪಿಸಿಕೊಂಡ ಕೃತಿ, ಹಿಂದೆ ಬಾಲಿವುಡ್‌ನಲ್ಲಿ ಮಹಿಳೆಯರಿಗೆ ಸಿಗುತ್ತಿದ್ದ ಪಾತ್ರಗಳು ಕೇವಲ ಗ್ಲಾಮರ್ ಅಥವಾ ನಾಯಕನ ಪ್ರೇಯಸಿಯ ಪಾತ್ರಕ್ಕೆ ಮಾತ್ರ ಸೀಮಿತವಾಗಿದ್ದವು. ಆದರೆ ಈಗ ಕಾಲ ಬದಲಾಗುತ್ತಿದೆ, ಮಹಿಳಾ ಪ್ರಧಾನ ಚಿತ್ರಗಳು ಬರುತ್ತಿವೆ ಮತ್ತು ನಟಿಯರಿಗಾಗಿ ಉತ್ತಮ ಪಾತ್ರಗಳನ್ನು ಬರೆಯಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

The post ಚಿತ್ರರಂಗದ ತಾರತಮ್ಯ ಬಿಚ್ಚಿಟ್ಟ ಕೃತಿ ಸನೋನ್ appeared first on Good News 24x7.

]]>
ಬೌದ್ಧ ಸನ್ಯಾಸಿಗಳ ಮೇಲೆ ಹರಿದ ಕಾರು, 9 ಮಂದಿ ಸಾ*ವು https://www.goodnews24x7.com/car-runs-over-buddhist-monks-on-pilgrimage-9-dead/ Fri, 03 Jul 2026 07:27:42 +0000 https://www.goodnews24x7.com/?p=9756 ಥೈಲ್ಯಾಂಡ್‌ನ ಮುಕ್ದಹಾನ್‌ನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. 11 ವರ್ಷದ ಬಾಲಕನೊಬ್ಬ ಅಪ್ಪ ಅಮ್ಮನಿಗೆ ತಿಳಿಯದೆ ಕಾರು ಚಲಾಯಿಸಿ, ತೀರ್ಥಯಾತ್ರೆಗೆ ಹೊರಟಿದ್ದ 9 ಬೌದ್ಧ ಸನ್ಯಾಸಿಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಭೀಕರ ಅಪಘಾತದಲ್ಲಿ ಒಂಬತ್ತು ಸನ್ಯಾಸಿಗಳು ಮೃ*ತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆ…

The post ಬೌದ್ಧ ಸನ್ಯಾಸಿಗಳ ಮೇಲೆ ಹರಿದ ಕಾರು, 9 ಮಂದಿ ಸಾ*ವು appeared first on Good News 24x7.

]]>

ಥೈಲ್ಯಾಂಡ್‌ನ ಮುಕ್ದಹಾನ್‌ನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. 11 ವರ್ಷದ ಬಾಲಕನೊಬ್ಬ ಅಪ್ಪ ಅಮ್ಮನಿಗೆ ತಿಳಿಯದೆ ಕಾರು ಚಲಾಯಿಸಿ, ತೀರ್ಥಯಾತ್ರೆಗೆ ಹೊರಟಿದ್ದ 9 ಬೌದ್ಧ ಸನ್ಯಾಸಿಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಭೀಕರ ಅಪಘಾತದಲ್ಲಿ ಒಂಬತ್ತು ಸನ್ಯಾಸಿಗಳು ಮೃ*ತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆ ಇಡೀ ಥೈಲ್ಯಾಂಡ್ ದೇಶವನ್ನು ತಲ್ಲಣಗೊಳಿಸಿದ್ದು, ರಸ್ತೆ ಸುರಕ್ಷತೆ ಮತ್ತು ಮಕ್ಕಳ ಮೇಲಿನ ನಿಗಾದ ಮಹತ್ವವನ್ನು ಎತ್ತಿ ತೋರಿಸಿದೆ
.
ಥೈಲ್ಯಾಂಡ್: ಯಾತ್ರೆಗೆ ಹೊರಟಿದ್ದ ಬೌದ್ಧ ಸನ್ಯಾಸಿಗಳ ಮೇಲೆ ಹರಿದ ಕಾರು, 9 ಮಂದಿ ಸಾ*ವು

ಬ್ಯಾಂಕಾಕ್, ಜುಲೈ 03: ಈಶಾನ್ಯ ಥೈಲ್ಯಾಂಡ್‌ನ ಮುಕ್ದಹಾನ್ ಪ್ರಾಂತ್ಯದಲ್ಲಿ ಅತ್ಯಂತ ಭೀಕರ ಹಾಗೂ ಮನಕಲಕುವ ಅಪಘಾತ(Accident)ವೊಂದು ಸಂಭವಿಸಿದೆ. ಹೆತ್ತವರ ಅನುಮತಿಯಿಲ್ಲದೆ 11 ವರ್ಷದ ಬಾಲಕನೊಬ್ಬ ವಾಹನ ಚಲಾಯಿಸಿಕೊಂಡು , ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬೌದ್ಧ ಸನ್ಯಾಸಿಗಳಿಗೆ ಡಿಕ್ಕಿ ಹೊಡೆದಿದೆ. ಈ ಘೋರ ಅಪಘಾತದಲ್ಲಿ ಒಂಬತ್ತು ಬೌದ್ಧ ಸನ್ಯಾಸಿಗಳು ಸಾ*ವನ್ನಪ್ಪಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ.

‘ಬುದ್ಧೋ ಬುದ್ಧೋ’ ಎನ್ನುತ್ತಿದ್ದಾಗಲೇ ಅಪ್ಪಳಿಸಿತು ಸಾ*ವು ಸುಮಾರು 35 ಸನ್ಯಾಸಿಗಳು ಮತ್ತು ಐದು ಜನ ಸಾಮಾನ್ಯ ಅನುಯಾಯಿಗಳ ಗುಂಪು ಮುಕ್ದಹಾನ್ ಪ್ರಾಂತ್ಯದ ರಸ್ತೆಯ ಮೂಲಕ ತೀರ್ಥಯಾತ್ರೆಗಾಗಿ ನಡೆದುಕೊಂಡು ಹೋಗುತ್ತಿತ್ತು. ಅಪಘಾತದಿಂದ ಕೂದಲೆಳೆಯ ಅಂತರದಲ್ಲಿ ಬದುಕುಳಿದ ಫ್ರಾ ಸೋಂಪಾಂಗ್ ಎಂಬ ಸನ್ಯಾಸಿ ಘಟನೆ ಬಗ್ಗೆ ಮಾತನಾಡಿ, ನಾವೆಲ್ಲರೂ ‘ಬುದ್ಧೋ, ಬುದ್ಧೋ’ ಎಂದು ಧ್ಯಾನ ಮಂತ್ರ ಜಪಿಸುತ್ತಾ ಸಾಗುತ್ತಿದ್ದೆವು. ಈ ವೇಳೆ ಬಾಲಕನೊಬ್ಬ ಓಡಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಇದ್ದಕ್ಕಿದ್ದಂತೆ ವೇಗದಲ್ಲಿ ನಮ್ಮ ಸಾಲಿಗೆ ಡಿಕ್ಕಿ ಹೊಡೆಯಿತು. ಮೊದಲ ಒಂಬತ್ತು ಸನ್ಯಾಸಿಗಳು ಬದುಕುಳಿದರು, ಆದರೆ ಉಳಿದವರು ಕಾರು ಡಿಕ್ಕಿಯ ರಭಸಕ್ಕೆ ಗಾಳಿಯಲ್ಲಿ ಹಾರಿ ಬಿದ್ದರು ಎಂದು ಕಣ್ಣೀರಿಟ್ಟಿದ್ದಾರೆ.

ಅಪಘಾತದ ತೀವ್ರತೆಗೆ ಐವರು ಸನ್ಯಾಸಿಗಳು ಸ್ಥಳದಲ್ಲೇ ಮೃ*ತಪಟ್ಟರೆ, ಇನ್ನು ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಸದ್ಯ ಮೂವರು ಸನ್ಯಾಸಿಗಳ ಸ್ಥಿತಿ ಗಂಭೀರವಾಗಿದೆ.

ಮನೆಯಲ್ಲಿ ಯಾರೂ ಇಲ್ಲದಾಗ ಕಾರು ತಂದಿದ್ದ ಬಾಲಕ ಪೊಲೀಸ್ ತನಿಖೆಯ ಪ್ರಕಾರ, ಅಪಘಾತದ ಸಮಯದಲ್ಲಿ ಬಾಲಕನ ಮನೆಯಲ್ಲಿ ಯಾರೂ ಇರಲಿಲ್ಲ. ಆತ ಅಸ್ವಸ್ಥನಾಗಿದ್ದ ಕಾರಣ ಶಾಲೆಗೆ ಹೋಗದೆ ಮನೆಯಲ್ಲೇ ಉಳಿದಿದ್ದ. ಈ ವೇಳೆ ಹೆತ್ತವರಿಗೆ ತಿಳಿಸದೆ ಕಾರಿನ ಕೀ ತಗೆದುಕೊಂಡು ರಸ್ತೆಗಿಳಿದಿದ್ದಾನೆ. ಕಾರು ಕಾಣೆಯಾಗಿರುವುದನ್ನು ಅರಿತ ಪೋಷಕರು ಪೊಲೀಸರಿಗೆ ದೂರು ನೀಡುವಷ್ಟರಲ್ಲೇ ಈ ಭೀಕರ ದುರಂತ ಸಂಭವಿಸಿತ್ತು. ಪ್ರಾಥಮಿಕ ಮಾಹಿತಿಯ ಪ್ರಕಾರ ಆತ ವಿಶೇಷ ಅಗತ್ಯವಿರುವ ಬಾಲಕ ಎಂದು ತಿಳಿದುಬಂದಿದ್ದು, ವೈದ್ಯರು ಮತ್ತು ಪೋಷಕರ ತಂಡ ಆತನನ್ನು ನೋಡಿಕೊಳ್ಳುತ್ತಿದೆ.

 

ಥೈಲ್ಯಾಂಡ್‌ನಲ್ಲಿ ಬೌದ್ಧ ಸನ್ಯಾಸಿಗಳನ್ನು ಅತ್ಯಂತ ಪವಿತ್ರವಾಗಿ ಮತ್ತು ಗೌರವದಿಂದ ಕಾಣಲಾಗುತ್ತದೆ. ಹೀಗಾಗಿ ಈ ಘಟನೆ ಇಡೀ ದೇಶವನ್ನು ತಲ್ಲಣಗೊಳಿಸಿದೆ. ಗಾಯಗೊಂಡ ಸನ್ಯಾಸಿಗಳ ಪ್ರಾಣ ಉಳಿಸಲು ಮುಕ್ದಹಾನ್ ಆಸ್ಪತ್ರೆಯು ಸಾರ್ವಜನಿಕರಲ್ಲಿ ತುರ್ತು ರಕ್ತದಾನ ಮಾಡುವಂತೆ ಮನವಿ ಮಾಡಿದೆ.

ಮುಕ್ದಹಾನ್ ಪ್ರಾಂತ್ಯದ ಗವರ್ನರ್ ವೊರಾಯನ್ ಬುನ್ನಾರತ್ ಈ ಕುರಿತು ಮಾತನಾಡಿ, ಈ ಘಟನೆ ಇಡೀ ದೇಶದ ರಸ್ತೆ ಸುರಕ್ಷತೆಗೆ ಒಂದು ದೊಡ್ಡ ಎಚ್ಚರಿಕೆಯಾಗಬೇಕು. ಅಪಘಾತಗಳನ್ನು ತಡೆಗಟ್ಟುವ ವಿಷಯದಲ್ಲಿ ಪೋಷಕರು ತಮ್ಮ ಮಕ್ಕಳ ಮೇಲೆ ನಿಗಾ ಇಡುವುದು ಎಷ್ಟು ಮುಖ್ಯ ಎಂಬುದಕ್ಕೆ ಇದೊಂದು ಕಣ್ಣು ತೆರೆಸುವ ಪಾಠ ಎಂದು ಹೇಳಿದ್ದಾರೆ. ವಾಹನವನ್ನು ಸದ್ಯ ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮಗಳ ಕುರಿತು ಪೊಲೀಸರು ಪರಿಶೀಲಿಸುತ್ತಿದ್ದಾರೆ.

The post ಬೌದ್ಧ ಸನ್ಯಾಸಿಗಳ ಮೇಲೆ ಹರಿದ ಕಾರು, 9 ಮಂದಿ ಸಾ*ವು appeared first on Good News 24x7.

]]>
ಈಗ’ ಚಿತ್ರಕ್ಕೆ ಸುದೀಪ್ ಲಾಸ್ಟ್ ಚಾಯ್ಸ್ ಆಗಿತ್ತು; ರಾಜಮೌಳಿ https://www.goodnews24x7.com/sudeep-was-the-last-choice-for-the-film-eega-rajamouli/ Fri, 03 Jul 2026 06:37:27 +0000 https://www.goodnews24x7.com/?p=9753 ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಕಿಚ್ಚ ಸುದೀಪ್ ಕಾಂಬಿನೇಶನ್‌ನ ಸೂಪರ್ ಹಿಟ್ ‘ಈಗ’ ಸಿನಿಮಾ ಇತ್ತೀಚೆಗೆ ವಿದೇಶದ ವಿಶೇಷ ಪ್ರದರ್ಶನದಲ್ಲೂ ಧೂಳೆಬ್ಬಿಸಿದೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಹಳೆಯ ವಿಡಿಯೋದಲ್ಲಿ, ‘ಈಗ’ ಚಿತ್ರದ ಜಟಿಲ ಖಳನಾಯಕನ ಪಾತ್ರಕ್ಕೆ ಸುದೀಪ್ ಅವರನ್ನೇ…

The post ಈಗ’ ಚಿತ್ರಕ್ಕೆ ಸುದೀಪ್ ಲಾಸ್ಟ್ ಚಾಯ್ಸ್ ಆಗಿತ್ತು; ರಾಜಮೌಳಿ appeared first on Good News 24x7.

]]>

ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಕಿಚ್ಚ ಸುದೀಪ್ ಕಾಂಬಿನೇಶನ್‌ನ ಸೂಪರ್ ಹಿಟ್ ‘ಈಗ’ ಸಿನಿಮಾ ಇತ್ತೀಚೆಗೆ ವಿದೇಶದ ವಿಶೇಷ ಪ್ರದರ್ಶನದಲ್ಲೂ ಧೂಳೆಬ್ಬಿಸಿದೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಹಳೆಯ ವಿಡಿಯೋದಲ್ಲಿ, ‘ಈಗ’ ಚಿತ್ರದ ಜಟಿಲ ಖಳನಾಯಕನ ಪಾತ್ರಕ್ಕೆ ಸುದೀಪ್ ಅವರನ್ನೇ ಆಯ್ಕೆ ಮಾಡಲು ಇದ್ದ ಮುಖ್ಯ ಕಾರಣ ಹಾಗೂ ಅಮಿತಾಭ್ ಬಚ್ಚನ್ ಎದುರು ಅವರ ನಟನೆ ನೋಡಿ ಬೆರಗಾದ ಕ್ಷಣವನ್ನು ರಾಜಮೌಳಿ ಬಿಚ್ಚಿಟ್ಟಿದ್ದಾರೆ.

ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಸ್ಯಾಂಡಲ್‌ವುಡ್ ಬಾದ್‌ಶಾ ಕಿಚ್ಚ ಸುದೀಪ್ ಕಾಂಬಿನೇಶನ್‌ನ ‘ಈಗ’ ಸಿನಿಮಾ ಎಷ್ಟು ದೊಡ್ಡ ಹಿಟ್ ಆಗಿತ್ತು ಎಂಬುದು ಎಲ್ಲರಿಗೂ ಗೊತ್ತು. ಈ ಚಿತ್ರದಲ್ಲಿ ಸುದೀಪ್ ಅವರ ಅಪ್ರತಿಮ ಖಳನಾಯಕನ ನಟನೆಗೆ ಇಡೀ ಭಾರತೀಯ ಚಿತ್ರರಂಗವೇ ಫಿದಾ ಆಗಿತ್ತು. ಇತ್ತೀಚೆಗೆ ಈ ಸಿನಿಮಾದ ವಿಶೇಷ ಪ್ರದರ್ಶನ ವಿದೇಶದಲ್ಲಿ ನಡೆದಿದ್ದು, ಎಲ್ಲರೂ ಫಿದಾ ಆಗಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಳೆಯ ಸಂದರ್ಶನದ ವಿಡಿಯೋವೊಂದರಲ್ಲಿ ರಾಜಮೌಳಿ ಅವರು, ‘ಈಗ’ ಚಿತ್ರಕ್ಕೆ ಸುದೀಪ್ ಅವರನ್ನೇ ವಿಲನ್ ಪಾತ್ರಕ್ಕೆ ಆಯ್ಕೆ ಮಾಡಲು ಇದ್ದ ಮುಖ್ಯ ಕಾರಣವನ್ನು ಬಹಿರಂಗಪಡಿಸಿದ್ದರು.

‘ಚಿತ್ರದಲ್ಲಿ ಅಷ್ಟು ಭಯಾನಕ ವಿಲನ್ ಆಗಿರುವ ವ್ಯಕ್ತಿ, ತನ್ನ ಮೊದಲ ಡೈಲಾಗ್‌ನಲ್ಲೇ ‘ಪ್ರತಿ ವಿಷಯಕ್ಕೂ ವೈಲೆನ್ಸ್ ಯಾಕೆ?’ ಅಂತಾನೆ. ಆಮೇಲೆ ಆತ ತುಂಬಾ ವೈಲೆಂಟ್ ಆಗಿ ಬದಲಾಗುತ್ತಾನೆ. ಮಧ್ಯದಲ್ಲಿ ಕಾಮಿಡಿ ಮಾಡುತ್ತಾನೆ, ರೋಮ್ಯಾಂಟಿಕ್ ಆಗುತ್ತಾನೆ, ನಂತರ ಹುಚ್ಚನಂತೆ ಆಡುತ್ತಾನೆ. ಇಷ್ಟೂ ಶೇಡ್‌ಗಳನ್ನು ನಟನೆಯಲ್ಲಿ ತೋರಿಸುವುದು ಕತ್ತಿಯ ಮೇಲಿನ ನಡಿಗೆಯಿದ್ದಂತೆ. ಸ್ವಲ್ಪ ಹೆಚ್ಚು ಕಮ್ಮಿಯಾದರೂ ಅದು ಓವರ್ ಆಕ್ಟಿಂಗ್ ಎನಿಸಿಕೊಳ್ಳುತ್ತದೆ’ ಎಂದು ರಾಜಮೌಳಿ ಆ ಪಾತ್ರದ ಗಾಂಭೀರ್ಯತೆಯನ್ನು ವಿವರಿಸಿದ್ದರು.

ಅಮಿತಾಭ್ ಬಚ್ಚನ್ ಮುಂದೆ ಸುದೀಪ್ ನಟನೆ ನೋಡಿ ಬೆರಗಾಗಿದ್ದರಾಮ್ ಗೋಪಾಲ್ ವರ್ಮಾ ನಿರ್ದೇಶನದ ‘ರನ್’ ಚಿತ್ರದಲ್ಲಿ ಸುದೀಪ್ ಅವರ ನಟನೆಯನ್ನು ನೋಡಿ ತಾನು ಫುಲ್ ಫ್ಲಾಟ್ ಆಗಿದ್ದಾಗಿ ರಾಜಮೌಳಿ ನೆನಪಿಸಿಕೊಂಡಿದ್ದಾರೆ. ‘ರನ್ ಸಿನಿಮಾದಲ್ಲಿ ಸುದೀಪ್ ಅವರ ಸೂಕ್ಷ್ಮ ನಟನೆ ಹಾಗೂ ಮ್ಯಾನರಿಸಂ ಅದ್ಭುತವಾಗಿತ್ತು. ಅದರಲ್ಲೂ ಬಾಲಿವುಡ್ ಮಹಾನಾಯಕ ಅಮಿತಾಭ್ ಬಚ್ಚನ್ ಅವರ ಮುಂದೆಯೇ ಅಷ್ಟು ಭರ್ಜರಿಯಾಗಿ ನಟಿಸುವುದನ್ನು ಕಂಡು, ಸುದೀಪ್ ನಿಜಕ್ಕೂ ಒಬ್ಬ ಗ್ರೇಟ್ ಆಕ್ಟರ್ ಎಂದು ನನಗೆ ಅನಿಸಿತ್ತು. ಹಾಗಾಗಿ ‘ಈಗ’ ಚಿತ್ರದ ಕ್ಯಾರೆಕ್ಟರ್ ರೆಡಿಯಾದ ತಕ್ಷಣ ನಮಗೆ ಮೊದಲು ನೆನಪಾಗಿದ್ದೇ ಸುದೀಪ್’ ಎಂದಿದ್ದರು ರಾಜಮೌಳಿ

ಸುದೀಪ್ ಅವರೇ ಫಸ್ಟ್… ಅವರೇ ಲಾಸ್ಟ್
ಸಂದರ್ಶನದ ಕೊನೆಯಲ್ಲಿ ನಿರೂಪಕರು, ‘ಹಾಗಾದರೆ ಈ ಪಾತ್ರಕ್ಕೆ ನಿಮ್ಮ ಮೊದಲ ಆಯ್ಕೆ ಸುದೀಪ್ ಅವರೇನಾ?’ ಎಂದು ಕೇಳಿದಾಗ, ರಾಜಮೌಳಿ ಅವರು ನಗುತ್ತಾ, ‘ಫಸ್ಟ್ ಚಾಯ್ಸ್ ಕೂಡ ಅವರೇ, ಲಾಸ್ಟ್ ಚಾಯ್ಸ್ ಕೂಡ ಅವರೇ! ಫೈನಲ್ ಆಗಿ ಎಲ್ಲವೂ ಅವರೇ ಆಗಿದ್ದರು’ ಎಂದು ಹೇಳುವ ಮೂಲಕ ಕಿಚ್ಚನ ಮೇಲಿರುವ ತಮ್ಮ ಗೌರವ ಹಾಗೂ ನಂಬಿಕೆಯನ್ನು ವ್ಯಕ್ತಪಡಿಸಿದ್ದರು.

The post ಈಗ’ ಚಿತ್ರಕ್ಕೆ ಸುದೀಪ್ ಲಾಸ್ಟ್ ಚಾಯ್ಸ್ ಆಗಿತ್ತು; ರಾಜಮೌಳಿ appeared first on Good News 24x7.

]]>
16 ದಾಖಲೆಗಳ ನೀಡಿದ್ರೂ ಸಿಗದ ಭಾರತೀಯ ಪೌರತ್ವ https://www.goodnews24x7.com/indian-citizenship-not-granted-despite-submitting-16-documents/ Fri, 03 Jul 2026 06:13:04 +0000 https://www.goodnews24x7.com/?p=9744 ಗುವಾಹಟಿ ಹೈಕೋರ್ಟ್ ಇತ್ತೀಚೆಗೆ ವ್ಯಕ್ತಿಯೊಬ್ಬರ ಪೌರತ್ವ ಸಾಬೀತುಪಡಿಸಲು ಸಲ್ಲಿಸಿದ್ದ 16 ಪ್ರಮುಖ ದಾಖಲೆಗಳನ್ನು ತಿರಸ್ಕರಿಸಿದೆ. ಪ್ಯಾನ್, ವೋಟರ್ ಐಡಿ ಸೇರಿದಂತೆ ಹಲವು ದಾಖಲೆಗಳಲ್ಲಿನ ಲೋಪದೋಷಗಳಿಂದಾಗಿ ಅರ್ಜಿದಾರರನ್ನು ವಿದೇಶಿ ಎಂದು ಘೋಷಿಸಲಾಗಿದೆ. ಭಾರತೀಯ ಪೌರತ್ವ ಸಾಬೀತಿಗೆ ವ್ಯಕ್ತಿಯ ಮೇಲೆ ಇರುವ ಹೊಣೆಯ ಜೊತೆಗೆ,…

The post 16 ದಾಖಲೆಗಳ ನೀಡಿದ್ರೂ ಸಿಗದ ಭಾರತೀಯ ಪೌರತ್ವ appeared first on Good News 24x7.

]]>

ಗುವಾಹಟಿ ಹೈಕೋರ್ಟ್ ಇತ್ತೀಚೆಗೆ ವ್ಯಕ್ತಿಯೊಬ್ಬರ ಪೌರತ್ವ ಸಾಬೀತುಪಡಿಸಲು ಸಲ್ಲಿಸಿದ್ದ 16 ಪ್ರಮುಖ ದಾಖಲೆಗಳನ್ನು ತಿರಸ್ಕರಿಸಿದೆ. ಪ್ಯಾನ್, ವೋಟರ್ ಐಡಿ ಸೇರಿದಂತೆ ಹಲವು ದಾಖಲೆಗಳಲ್ಲಿನ ಲೋಪದೋಷಗಳಿಂದಾಗಿ ಅರ್ಜಿದಾರರನ್ನು ವಿದೇಶಿ ಎಂದು ಘೋಷಿಸಲಾಗಿದೆ. ಭಾರತೀಯ ಪೌರತ್ವ ಸಾಬೀತಿಗೆ ವ್ಯಕ್ತಿಯ ಮೇಲೆ ಇರುವ ಹೊಣೆಯ ಜೊತೆಗೆ, ದಾಖಲೆಗಳ ಲಿಂಕ್ ಕೊರತೆ ಮತ್ತು ಕಾಗುಣಿತ ವ್ಯತ್ಯಾಸಗಳು ತಿರಸ್ಕಾರಕ್ಕೆ ಪ್ರಮುಖ ಕಾರಣಗಳಾಗಿವೆ. ಈ ಪ್ರಕರಣವು ಅಸ್ಸಾಂನಲ್ಲಿ ಪೌರತ್ವ ಸಾಬೀತಿನ ಸವಾಲುಗಳನ್ನು ಎತ್ತಿ ತೋರಿಸುತ್ತದೆ

16 ದಾಖಲೆಗಳ ನೀಡಿದ್ರೂ ಸಿಗದ ಭಾರತೀಯ ಪೌರತ್ವ, ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್

ಗುವಾಹಟಿ, ಜುಲೈ 03: ಪೌರತ್ವ(Citizenship) ಸಾಬೀತುಪಡಿಸುವ ನಿಟ್ಟಿನಲ್ಲಿ ವ್ಯಕ್ತಿಯೊಬ್ಬರು ಸಲ್ಲಿಕೆ ಮಾಡಿದ್ದ ಪ್ಯಾನ್ ಕಾರ್ಡ್, ಮತದಾರರ ಗುರುತಿನ ಚೀಟಿ ಸೇರಿದಂತೆ ಬರೋಬ್ಬರಿ 16 ಪ್ರಮುಖ ದಾಖಲೆಗಳನ್ನು ಗುವಾಹಟಿ ಹೈಕೋರ್ಟ್ ತಿರಸ್ಕರಿಸಿದೆ. ಈ ಎಲ್ಲಾ ದಾಖಲೆಗಳಿದ್ದರೂ ಅರ್ಜಿದಾರ ತಾನು ಭಾರತೀಯ ಪ್ರಜೆ ಎಂಬುದನ್ನು ಕಾನೂನಾತ್ಮಕವಾಗಿ ಸಾಬೀತುಪಡಿಸಲು ವಿಫಲನಾಗಿದ್ದಾನೆ ಎಂದು ನ್ಯಾಯಾಲಯ ಹೇಳಿದೆ.

ಏನಿದು ಪ್ರಕರಣ? ಹೈಕೋರ್ಟ್ ಮೆಟ್ಟಿಲೇರಿದ್ದು ಯಾಕೆ? ಅಸ್ಸಾಂನ ಕಾಮರೂಪ್ ಜಿಲ್ಲೆಯ ವಿದೇಶಿಯರ ನ್ಯಾಯಮಂಡಳಿಯು 2019 ರ ಫೆಬ್ರವರಿಯಲ್ಲಿ ಅಮೀನುಲ್ ಹೋಕ್ ಎಂಬಾತನನ್ನು ವಿದೇಶಿ (ಅಕ್ರಮ ವಲಸಿಗ) ಎಂದು ಘೋಷಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಹೋಕ್ ಗುವಾಹಟಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.

ತಾನು ಭಾರತೀಯ ಎಂದು ಸಾಬೀತುಪಡಿಸಲು ಹೋಕ್ ಅವರು 1951 ರ ಎನ್‌ಆರ್‌ಸಿ (NRC) ಪ್ರತಿ, 1966 ರಿಂದ 2017 ರವರೆಗಿನ ಪೋಷಕರ ಮತದಾರರ ಪಟ್ಟಿ, 1973 ರ ಭೂ ಖರೀದಿ ಪತ್ರಗಳು, ಪ್ಯಾನ್ ಕಾರ್ಡ್ (PAN), ವೋಟರ್ ಐಡಿ ಮತ್ತು ಶಾಲಾ ಪ್ರಮಾಣಪತ್ರ ಸೇರಿದಂತೆ 16 ದಾಖಲೆಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದರು.

ದಾಖಲೆಗಳನ್ನು ಹೈಕೋರ್ಟ್ ತಿರಸ್ಕರಿಸಿದ್ದೇಕೆ? ನ್ಯಾಯಮೂರ್ತಿಗಳಾದ ಕಲ್ಯಾಣ್ ರೈ ಸುರಾನ ಮತ್ತು ಶಮೀಮಾ ಜಹಾನ್ ಅವರ ಪೀಠವು ಜೂನ್ 30 ರಂದು ಈ ಆದೇಶ ಪ್ರಕಟಿಸಿದೆ. ವಿದೇಶಿಯರ ಕಾಯ್ದೆ 1964ರ ಸೆಕ್ಷನ್ 9 ರ ಪ್ರಕಾರ, ಒಬ್ಬ ವ್ಯಕ್ತಿ ವಿದೇಶಿಯೇ ಅಥವಾ ಅಲ್ಲವೇ ಎಂಬ ಪ್ರಶ್ನೆ ಎದ್ದಾಗ, ತಾನು ಭಾರತೀಯ ಪ್ರಜೆ ಎಂದು ಸಾಬೀತುಪಡಿಸುವ ಸಂಪೂರ್ಣ ಜವಾಬ್ದಾರಿ ಆ ವ್ಯಕ್ತಿಯ ಮೇಲೆಯೇ ಇರುತ್ತದೆ. ಆದರೆ ಹೋಕ್ ಸಲ್ಲಿಸಿದ ದಾಖಲೆಗಳಲ್ಲಿ ಹಲವು ಗಂಭೀರ ಲೋಪದೋಷಗಳಿರುವುದನ್ನು ಕೋರ್ಟ್ ಪತ್ತೆಹಚ್ಚಿದೆ.

ಹೋಕ್ ಅವರ ತಂದೆ ಮತ್ತು ಅಜ್ಜನ ಹೆಸರುಗಳ ಕಾಗುಣಿತದಲ್ಲಿ ಮತದಾರರ ಪಟ್ಟಿಯಿಂದ ಪಟ್ಟಿಗೆ ಭಾರಿ ವ್ಯತ್ಯಾಸಗಳಿದ್ದವು. ಅಲ್ಲದೆ, ಅವರ ಕುಟುಂಬವು ದೋಬಕುರಾ, ಘುಗುಡೋಬಾ ಮತ್ತು ಹಶ್ಡೋಬಾ ಎಂಬ ಮೂರು ಹಳ್ಳಿಗಳಿಗೆ ವಲಸೆ ಹೋಗಿದೆ ಎಂದು ವಾದಿಸಲಾಗಿದ್ದರೂ, ಅದಕ್ಕೆ ಪೂರಕವಾದ ಯಾವುದೇ ಅಧಿಕೃತ ವಾಸಸ್ಥಳ ಬದಲಾವಣೆ ದಾಖಲೆ ಇರಲಿಲ್ಲ. ಮತದಾರರ ಪಟ್ಟಿಯ ಹೆಸರುಗಳನ್ನು ಹೊಂದಿಸಲು ಕಟ್ಟುಕಥೆ ಹೆಣೆಯಲಾಗಿದೆ ಎಂದು ಕೋರ್ಟ್ ಹೇಳಿದೆ.

ತನಿಖೆಯ ವೇಳೆ ಹೋಕ್ ಅವರ ತಂದೆ ನ್ಯಾಯಾಲಯಕ್ಕೆ ಬಂದು ಈತನೇ ನನ್ನ ಮಗ ಎಂದು ಮೌಖಿಕವಾಗಿ ಹೇಳಿಕೆ ನೀಡಿದ್ದರು. ಆದರೆ ಲಿಖಿತ ಲಿಂಕ್ ದಾಖಲೆಗಳಿಲ್ಲದೆ ಕೇವಲ ತಂದೆಯ ಮೌಖಿಕ ಸಾಕ್ಷ್ಯವನ್ನು ಒಪ್ಪಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.

ಹೋಕ್ ಸಲ್ಲಿಕೆ ಮಾಡಿದ್ದ ಹಶ್ಡೋಬಾ ಶಾಲೆಯ ಪ್ರಮಾಣಪತ್ರವನ್ನು ಬರೆದುಕೊಟ್ಟ ಮುಖ್ಯೋಪಾಧ್ಯಾಯರು ನ್ಯಾಯಾಲಯಕ್ಕೆ ಹಾಜರಾಗಿ ಅದನ್ನು ದೃಢಪಡಿಸಿರಲಿಲ್ಲ. ಹೀಗಾಗಿ ಆ ದಾಖಲೆಯನ್ನೂ ಕೋರ್ಟ್ ತಿರಸ್ಕರಿಸಿದೆ.

ಅಸ್ಸಾಂನಲ್ಲಿ 2019 ರಲ್ಲೇ ರಾಷ್ಟ್ರೀಯ ನಾಗರಿಕ ನೋಂದಣಿ (NRC) ಪ್ರಕ್ರಿಯೆ ಪೂರ್ಣಗೊಂಡಿದ್ದರೂ, ಅದು ಇನ್ನೂ ಅಧಿಕೃತವಾಗಿ ಜಾರಿಯಾಗಿಲ್ಲ. ಇಂತಹ ಸಂದರ್ಭದಲ್ಲಿ ಅಗತ್ಯ ಕಾನೂನು ಚೌಕಟ್ಟಿನ ಲಿಂಕ್ ದಾಖಲೆಗಳನ್ನು ಒದಗಿಸದ ಹಿನ್ನೆಲೆಯಲ್ಲಿ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.

The post 16 ದಾಖಲೆಗಳ ನೀಡಿದ್ರೂ ಸಿಗದ ಭಾರತೀಯ ಪೌರತ್ವ appeared first on Good News 24x7.

]]>