war Archives - Good News 24x7 https://www.goodnews24x7.com/tag/war/ Kannada Mon, 16 Mar 2026 11:45:20 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg war Archives - Good News 24x7 https://www.goodnews24x7.com/tag/war/ 32 32 ನಾವು ಕೇಳಿದರೂ ಇರಾನ್ ಒಪ್ಪಂದಕ್ಕೆ ಸಿದ್ಧವಿಲ್ಲ :ಯುದ್ಧದ ಬಗ್ಗೆ ಟ್ರಂಪ್ ಪ್ರತಿಕ್ರಿಯೆ! https://www.goodnews24x7.com/even-if-we-ask-iran-is-not-ready-for-a-deal-trumps-response-to-the-wareven-if-we-ask-iran-is-not-ready-for-a-deal-trumps-response-to-the-war/ Mon, 16 Mar 2026 11:45:13 +0000 https://www.goodnews24x7.com/?p=8902   ಇರಾನ್ ಹಾಗೂ ಇಸ್ರೇಲ್-ಅಮೆರಿಕದ ನಡುವಿನ ಯುದ್ಧ ಕೇವಲ ಆ 3 ದೇಶಗಳ ನಡುವಿನ ಸಂಘರ್ಷವಾಗಿ ಉಳಿದಿಲ್ಲ. ಜಗತ್ತಿನಾದ್ಯಂತ ಹಲವು ದೇಶಗಳು ಈ ಯುದ್ಧದ ಪರಿಣಾಮವನ್ನು ಎದುರಿಸುತ್ತಿವೆ. ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ ನಂತರವಂತೂ ಅನೇಕ ದೇಶಗಳಲ್ಲಿ ಇಂಧನ, ಗ್ಯಾಸ್ ಮುಂತಾದ…

The post ನಾವು ಕೇಳಿದರೂ ಇರಾನ್ ಒಪ್ಪಂದಕ್ಕೆ ಸಿದ್ಧವಿಲ್ಲ :ಯುದ್ಧದ ಬಗ್ಗೆ ಟ್ರಂಪ್ ಪ್ರತಿಕ್ರಿಯೆ! appeared first on Good News 24x7.

]]>

 

ಇರಾನ್ ಹಾಗೂ ಇಸ್ರೇಲ್-ಅಮೆರಿಕದ ನಡುವಿನ ಯುದ್ಧ ಕೇವಲ ಆ 3 ದೇಶಗಳ ನಡುವಿನ ಸಂಘರ್ಷವಾಗಿ ಉಳಿದಿಲ್ಲ. ಜಗತ್ತಿನಾದ್ಯಂತ ಹಲವು ದೇಶಗಳು ಈ ಯುದ್ಧದ ಪರಿಣಾಮವನ್ನು ಎದುರಿಸುತ್ತಿವೆ. ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ ನಂತರವಂತೂ ಅನೇಕ ದೇಶಗಳಲ್ಲಿ ಇಂಧನ, ಗ್ಯಾಸ್ ಮುಂತಾದ ಮೂಲಭೂತ ಅಗತ್ಯ ವಸ್ತುಗಳ ಬಿಕ್ಕಟ್ಟು ಎದುರಾಗಿದೆ. ಈ ಯುದ್ಧ ಯಾವಾಗ ನಿಲ್ಲುತ್ತದೆ ಎಂದು ಜನರು ಕಾಯುತ್ತಿದ್ದಾರೆ.

ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ ನೀಡಿದ್ದು, ಯುದ್ಧ ನಿಲ್ಲಿಸಲು ಇರಾನ್ ನಮ್ಮೊಡನೆ ಒಪ್ಪಂದಕ್ಕೆ ಒಪ್ಪುತ್ತಿಲ್ಲ ಎಂದಿದ್ದಾರೆಇರಾನ್ ಜೊತೆಗಿನ ಸಂಘರ್ಷದ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಇರಾನ್ ಮೇಲೆ ದಾಳಿ ನಡೆಸಲು ಇನ್ನೇನೂ ಉಳಿದಿಲ್ಲ, ಎಲ್ಲವನ್ನೂ ಧ್ವಂಸಗೊಳಿಸಲಾಗಿದೆ ಎಂದಿದ್ದ ಟ್ರಂಪ್ ಇರಾನ್ ಕದನವಿರಾಮಕ್ಕೆ ರೆಡಿ ಇದ್ದರೂ ನಾವು ಸಿದ್ಧರಿಲ್ಲ ಎಂದಿದ್ದರು. ಆದರೆ, ನಿನ್ನೆ ಬೇರೆ ರೀತಿಯದ್ದೇ ಹೇಳಿಕೆ ನೀಡಿರುವ ಅವರು ನಾವು ಇರಾನ್ ಜೊತೆ ಯುದ್ಧ ನಿಲ್ಲಿಸುವ ಬಗ್ಗೆ ಮಾತುಕತೆ ನಡೆಸಿದ್ದರೂ ಇರಾನ್ ಒಪ್ಪಂದಕ್ಕೆ ಸಿದ್ಧವಿಲ್ಲ ಎಂದು ಹೇಳಿದ್ದಾರೆ.

ಇರಾನ್- ಇಸ್ರೇಲ್, ಅಮೆರಿಕದ ನಡುವಿನ ಯುದ್ಧ ಮೂರನೇ ವಾರಕ್ಕೆ ಕಾಲಿಟ್ಟಿದೆ. ಈ ಸಂಘರ್ಷದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕ ಅಧ್ಯಕ್ಷ ಟ್ರಂಪ್, ಅಮೆರಿಕ ಇರಾನ್ ಜೊತೆ ಚರ್ಚೆ ನಡೆಸುತ್ತಿದೆ. ಆದರೆ ಯುದ್ಧವನ್ನು ಕೊನೆಗೊಳಿಸಲು ಇರಾನ್ ಒಪ್ಪಂದಕ್ಕೆ ಸಿದ್ಧವಾಗಿಲ್ಲ ಎಂದು ಹೇಳಿದ್ದಾರೆ.

ಭಾನುವಾರ ಏರ್ ಫೋರ್ಸ್ ಒನ್‌ನಲ್ಲಿ ವರದಿಗಾರರ ಜೊತೆ ಮಾತನಾಡಿದ ಟ್ರಂಪ್, “ಹೌದು, ನಾವು ಇರಾನ್ ಜೊತೆ ಮಾತನಾಡುತ್ತಿದ್ದೇವೆ” ಎಂದಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಹರಡಿರುವ ಮತ್ತು ಜಾಗತಿಕ ಮಾರುಕಟ್ಟೆಗಳನ್ನು ತಲ್ಲಣಗೊಳಿಸಿರುವ ಸಂಘರ್ಷವನ್ನು ಕೊನೆಗೊಳಿಸಲು ಯಾವುದಾದರೂ ರಾಜತಾಂತ್ರಿಕತೆ ನಡೆಯುತ್ತಿದೆಯೇ ಎಂದು ಕೇಳಿದಾಗ ಅದಕ್ಕೆ ಉತ್ತರಿಸಿದ ಟ್ರಂಪ್, “ನಾವು ಮಾತುಕತೆ ನಡೆಸುತ್ತಿದ್ದೇವೆ. ಆದರೆ ಅವರು ಯುದ್ಧ ನಿಲ್ಲಿಸಲು ಸಿದ್ಧರಾಗಿದ್ದಾರೆಂದು ನನಗೆ ಅನಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ ಇರಾನ್‌ನ ವಿದೇಶಾಂಗ ಸಚಿವರು ಅಮೆರಿಕದ ಜೊತೆ ಯಾವುದೇ ಮಾತುಕತೆಗಳು ನಡೆಯುತ್ತಿಲ್ಲ ಎಂದು ಹೇಳಿಕೆ ನೀಡಿದ್ದರು. ಫೆಬ್ರವರಿ 28ರಂದು, ಇರಾನ್‌ನ ಸುಪ್ರೀಂ ನಾಯಕ ಅಲಿ ಖಮೇನಿ ಮತ್ತು ಡಜನ್​ಗಟ್ಟಲೆ ಇರಾನಿನ ಹಿರಿಯ ಅಧಿಕಾರಿಗಳು ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯ ಮೊದಲ ದಿನದಂದೇ ಪ್ರಾಣ ಕಳೆದುಕೊಂಡರು. ಇದಾದ ನಂತರ ಇರಾನ್ ಕೂಡ ಪ್ರತೀಕಾರದ ದಾಳಿ ನಡೆಸಿ ಗಲ್ಫ್ ದೇಶಗಳಲ್ಲಿರುವ ಅಮೆರಿಕದ ವಾಯುನೆಲೆಗಳು ಮತ್ತು ಇಸ್ರೇಲ್ ಮೇಲೆ ದಾಳಿ ನಡೆಸಿತ್ತು.

 

The post ನಾವು ಕೇಳಿದರೂ ಇರಾನ್ ಒಪ್ಪಂದಕ್ಕೆ ಸಿದ್ಧವಿಲ್ಲ :ಯುದ್ಧದ ಬಗ್ಗೆ ಟ್ರಂಪ್ ಪ್ರತಿಕ್ರಿಯೆ! appeared first on Good News 24x7.

]]>
200 ಕನ್ನಡಿಗರ ರಕ್ಷಣೆಗೆ ಸರಕಾರ ಕ್ರಮ https://www.goodnews24x7.com/government-steps-up-to-rescue-200-kannadigasgovernment-steps-up-to-rescue-200-kannadigas/ Mon, 02 Mar 2026 12:53:41 +0000 https://www.goodnews24x7.com/?p=8599 ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿರುವ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧ ಭೀತಿ ತೀವ್ರವಾಗಿ ಆವರಿಸಿದೆ. ಈ ಬಿಕ್ಕಟ್ಟಿನಿಂದಾಗಿ ಆತಂಕಗೊಂಡಿರುವ ಅನಿವಾಸಿ ಕನ್ನಡಿಗರ ರಕ್ಷಣೆಗೆ ರಾಜ್ಯ ಸರಕಾರ ಕಾರ್ಯ ಪ್ರವೃತ್ತವಾಗಿದೆ.ಮಧ್ಯಪ್ರಾಚ್ಯ ದೇಶಗಳಲ್ಲಿರುವ ಕರ್ನಾಟಕದ ನಿವಾಸಿಗಳ ಪತ್ತೆ ಮಾಡಲು ಹಾಗೂ ಸುರಕ್ಷತೆ ಖಚಿತಪಡಿಸಿಕೊಳ್ಳಲು,…

The post 200 ಕನ್ನಡಿಗರ ರಕ್ಷಣೆಗೆ ಸರಕಾರ ಕ್ರಮ appeared first on Good News 24x7.

]]>

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿರುವ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧ ಭೀತಿ ತೀವ್ರವಾಗಿ ಆವರಿಸಿದೆ. ಈ ಬಿಕ್ಕಟ್ಟಿನಿಂದಾಗಿ ಆತಂಕಗೊಂಡಿರುವ ಅನಿವಾಸಿ ಕನ್ನಡಿಗರ ರಕ್ಷಣೆಗೆ ರಾಜ್ಯ ಸರಕಾರ ಕಾರ್ಯ ಪ್ರವೃತ್ತವಾಗಿದೆ.ಮಧ್ಯಪ್ರಾಚ್ಯ ದೇಶಗಳಲ್ಲಿರುವ ಕರ್ನಾಟಕದ ನಿವಾಸಿಗಳ ಪತ್ತೆ ಮಾಡಲು ಹಾಗೂ ಸುರಕ್ಷತೆ ಖಚಿತಪಡಿಸಿಕೊಳ್ಳಲು, ದೇಶದ ವಿದೇಶಾಂಗ ಸಚಿವಾಲಯದೊಂದಿಗೆ ನೇರ ಹಾಗೂ ನಿರಂತರವಾಗಿ ರಾಜ್ಯ ಸರಕಾರ ಸಮನ್ವಯ ಸಾಧಿಸುತ್ತಿದೆ. ಇದು ವರೆಗೂ ವರದಿಯಾದಂತೆ 200 ಜನರು ಸಂಪರ್ಕಿ ಸಿದ್ದು, ಈ ಪಟ್ಟಿ ನಿರಂತರವಾಗಿ ನವೀಕೃತಗೊಳ್ಳುತ್ತಿದೆ ಎಂದು ವಿಪತ್ತು ನಿರ್ವಹಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಪರಿಹಾರ ಆಯುಕ್ತ ಮುನೀಶ್ ಮೌನ್ಸಿಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುದ್ಧ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಬೆಂಗಳೂರಿಂದ ಅಬುಧಾಬಿ, ದುಬೈ ಮತ್ತು ಬಹರೇನ್ ಸೇರಿದಂತೆ ಮಧ್ಯಪ್ರಾಚ್ಯದ ವಿವಿಧ ರಾಷ್ಟ್ರಗಳಿಗೆ ಹೋಗಬೇಕಿದ್ದ ವಿಮಾನಗಳು ರದ್ದಾಗಿವೆ ಪರಿಣಾಮವಾಗಿಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಲವಾರು ಪರಿಣಾಮ, ಭಾನುವಾರ ಬೆಂಗಳೂರಿನ ಕೆಂಪೇಗೌಡ ಪ್ರಯಾಣಿಕರು ಸಿಲುಕಿ, ಪರದಾಡುವಂತಾಯಿತು.ವಿಮಾನಯಾನ ಸಂಸ್ಥೆಗಳು ಸುರಕ್ಷತಾ ಕಾಳಜಿಯನ್ನು ಏರ್ ಇಂಡಿಯಾ ಮತ್ತು ಇಂಡಿಗೊ ಸೇರಿದಂತೆ ಚರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿವೆ. ಪ್ರಯಾ ಉಲ್ಲೇಖಿಸಿ ಮಧ್ಯಪ್ರಾಚ್ಯದಲ್ಲಿ ಹಲವಾರು ಕಾರ್ಯಾ ಣಿಕರು ಮರು ಬುಕಿಂಗ್ ಮತ್ತು ಮರುಪಾವತಿ ಬಯಸುತ್ತಿರುವುದರಿಂದ ಬೆಂಗಳೂರಿನ ವಿಮಾನಯಾನ ಕೌಂಟರ್‌ಗಳಲ್ಲಿ ಸರತಿ ಸಾಲುಗಳು ಕಂಡುಬಂದವು.

ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ಮತ್ತು ಸುರಕ್ಷಿತ ವಾಪಸಾತಿಗಾಗಿ ಅಗತ್ಯ ಕ್ರಮ ವಹಿಸಲು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕಾರ್ಯದರ್ಶಿಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಪತ್ರ ಬರೆದಿದ್ದಾರೆ.
ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿಗೂ ಪತ್ರ ಬರೆದಿರುವ ಅವರು, ವಿಮಾನಯಾನ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ, ಪರಿಸ್ಥಿತಿ ತಿಳಿಯಾಗುತ್ತಿದ್ದಂತೆ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಅಗತ್ಯ ವಿಮಾನಗಳ ವ್ಯವಸ್ಥೆ ಮಾಡಬೇಕು ಎಂದು ಕೋರಿದ್ದಾರೆ.

The post 200 ಕನ್ನಡಿಗರ ರಕ್ಷಣೆಗೆ ಸರಕಾರ ಕ್ರಮ appeared first on Good News 24x7.

]]>
ಡಿಸಿಎಂ ಡಿಕೆ ಶಿವಕುಮಾರ್ ಜತೆ ಬಹಿರಂಗ ಚರ್ಚೆಗೆ ಸಿದ್ಧ:ತೇಜಸ್ವಿ ಸೂರ್ಯ https://www.goodnews24x7.com/%e0%b2%a1%e0%b2%bf%e0%b2%b8%e0%b2%bf%e0%b2%8e%e0%b2%82-%e0%b2%a1%e0%b2%bf%e0%b2%95%e0%b3%86-%e0%b2%b6%e0%b2%bf%e0%b2%b5%e0%b2%95%e0%b3%81%e0%b2%ae%e0%b2%be%e0%b2%b0%e0%b3%8d-%e0%b2%9c%e0%b2%a4/ Thu, 17 Jul 2025 10:23:35 +0000 https://www.goodnews24x7.com/?p=5156 ಬೆಂಗಳೂರಿನ ಸುರಂಗ ಮಾರ್ಗ ಯೋಜನೆ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಕಾಂಗ್ರೆಸ್ ನಡುವೆ ವಾಗ್ವಾದ ತೀವ್ರಗೊಂಡಿದೆ. ಯೋಜನೆ ಭ್ರಷ್ಟಾಚಾರದಿಂದ ಕೂಡಿದ್ದು, ಬೆಂಗಳೂರಿಗೆ ಅದರ ಅಗತ್ಯವೇ ಇಲ್ಲ ಎಂದು ಸೂರ್ಯ ಪ್ರತಿಪಾದಿಸಿದರೆ, ಕಾಂಗ್ರೆಸ್ ಯೋಜನೆಯ ಪ್ರಯೋಜನಗಳನ್ನು ಪ್ರತಿಪಾದಿಸುತ್ತಿದೆ. ಈ ಮಧ್ಯೆ,…

The post ಡಿಸಿಎಂ ಡಿಕೆ ಶಿವಕುಮಾರ್ ಜತೆ ಬಹಿರಂಗ ಚರ್ಚೆಗೆ ಸಿದ್ಧ:ತೇಜಸ್ವಿ ಸೂರ್ಯ appeared first on Good News 24x7.

]]>

ಬೆಂಗಳೂರಿನ ಸುರಂಗ ಮಾರ್ಗ ಯೋಜನೆ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಕಾಂಗ್ರೆಸ್ ನಡುವೆ ವಾಗ್ವಾದ ತೀವ್ರಗೊಂಡಿದೆ. ಯೋಜನೆ ಭ್ರಷ್ಟಾಚಾರದಿಂದ ಕೂಡಿದ್ದು, ಬೆಂಗಳೂರಿಗೆ ಅದರ ಅಗತ್ಯವೇ ಇಲ್ಲ ಎಂದು ಸೂರ್ಯ ಪ್ರತಿಪಾದಿಸಿದರೆ, ಕಾಂಗ್ರೆಸ್ ಯೋಜನೆಯ ಪ್ರಯೋಜನಗಳನ್ನು ಪ್ರತಿಪಾದಿಸುತ್ತಿದೆ. ಈ ಮಧ್ಯೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಬಹಿರಂಗ ಚರ್ಚೆಗೆ ಸೂರ್ಯ ಸವಾಲು ಹಾಕಿದ್ದಾರೆ.

ಬೆಂಗಳೂರು, ಜುಲೈ 17: ಬೆಂಗಳೂರಿನಲ್ಲಿ ಉದ್ದೇಶಿತ ಸುರಂಗ ಮಾರ್ಗ ರಸ್ತೆ ವಿಚಾರವಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಆಡಳಿತರೂಢ ಕಾಂಗ್ರೆಸ್ನಡುವಣ ವಾಕ್ಸಮರ ತೀವ್ರಗೊಂಡಿದೆ. ಯೋಜನೆಯಿಂದ ಬೆಂಗಳೂರಿಗೆ ಏನೂ ಉಪಯೋಗವಿಲ್ಲ, ಬ್ರಹ್ಮಾಂಡ ಭ್ರಷ್ಟಾಚಾರದಿಂದ ಕೂಡಿದೆ ಎಂದು ತೇಜಸ್ವಿ ಸೂರ್ಯ ಎರಡು ದಿನಗಳ ಹಿಂದೆ ಆರೋಪಿಸಿದ್ದರು. ಅಲ್ಲದೆ, ಯೋಜನೆ ಹೇಗೆ ಸಾಧಕವಲ್ಲ ಎಂಬುದನ್ನು ವಿವರವಾಗಿ ಪತ್ರಿಕಾಗೋಷ್ಠಿ ಮೂಲಕ ಬಹಿರಂಗಪಡಿಸಿದ್ದರು.

ಅದಕ್ಕೆ ತಿರುಗೇಟು ನೀಡಿದ್ದ ಕಾಂಗ್ರೆಸ್, ಯೋಜನೆ ಸಂಬಂಧಿತ ಪ್ರಮುಖ ಸಲಹೆ ಸೂಚನೆಗಳಿಗೆ ಸದಾ ಸ್ವಾಗತವಿದೆ. ಆದರೆ, ಬ್ರಾಂಡ್ ಬೆಂಗಳೂರಿನ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಕೇವಲ ರಾಜಕೀಯ ದೃಷ್ಟಿಯಿಂದ ನೋಡಬಾರದು ಎಂದು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸರಣಿ ಸಂದೇಶ ಪ್ರಕಟಿಸುವ ಮೂಲಕ ತಿರುಗೇಟು ನೀಡಿತ್ತು. ಅದಕ್ಕೆ ಪ್ರತಿಕ್ರಿಯಿಸಿರುವ ತೇಜಸ್ವಿ ಸೂರ್ಯ, ಸುರಂಗ ರಸ್ತೆ ಯೋಜನೆಯ ನೇತೃತ್ವ ವಹಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಬಹಿರಂಗ ಚರ್ಚೆಗೆ ಸಿದ್ಧವಿದ್ದೇನೆ ಎಂದಿದ್ದಾರೆ.

ಸುರಂಗ ರಸ್ತೆಗೆ ಸಂಬಂಧಿಸಿದ ತಾಂತ್ರಿಕ ಸಲಹೆ ಮತ್ತು ಸಾರ್ವಜನಿಕ ಚರ್ಚೆಗೆ ನೀವು (ಕಾಂಗ್ರೆಸ್ ಸರ್ಕಾರ) ನಿಜಕ್ಕೂ ಮುಕ್ತರಾಗಿದ್ದರೆ, ಡಿಕೆ ಶಿವಕುಮಾರ್ ಜೊತೆ ಬಹಿರಂಗ ಚರ್ಚೆಗೆ ಪ್ರಸ್ತಾಪಿಸುತ್ತಿದ್ದೇನೆ. ಸಮಯ ಮತ್ತು ಸ್ಥಳವನ್ನು ನೀವೇ ನಿಗದಿ ಮಾಡಿ. ಒಳಿತು ಕೆಡುಕುಗಳನ್ನು ಆರೋಗ್ಯಕರ ರೀತಿಯಲ್ಲಿ ಚರ್ಚಿಸುವುದು ಖಂಡಿತವಾಗಿಯೂ ಪ್ರಯೋಜನಕಾರಿಯಾಗಿದೆ. ನಿಮ್ಮಿಂದ ಪ್ರತಿಕ್ರಿಯೆ ನಿರೀಕ್ಷಿಸುತ್ತಿದ್ದೇನೆ ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದಾರೆ.

The post ಡಿಸಿಎಂ ಡಿಕೆ ಶಿವಕುಮಾರ್ ಜತೆ ಬಹಿರಂಗ ಚರ್ಚೆಗೆ ಸಿದ್ಧ:ತೇಜಸ್ವಿ ಸೂರ್ಯ appeared first on Good News 24x7.

]]>
ಕೋವಿಡ್ ಮೇಘಸ್ಫೋಟದ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ‌ ಭವಿಷ್ಯ! https://www.goodnews24x7.com/kodimath-swamijis-explosive-prediction-about-cloudburst/ Sat, 24 May 2025 11:30:21 +0000 https://www.goodnews24x7.com/?p=4063 ಬೆಳಗಾವಿ : ಮತ್ತೆ ವಾಯುರೂಪದಲ್ಲಿ ಬಾಧೆ ಅಪ್ಪಳಿಸಲಿದೆ. ಮೇಘಸ್ಫೋಟವೂ ಸಂಭವಿಸಿ, ಸಾವು-ನೋವು ಹೆಚ್ಚಾಗಲಿದೆ. ‘ಅರಸನ ಅರಮನೆಗೆ ಕಾರ್ಮೋಡ ಕವಿದಿದೆ’ ಎನ್ನುವ ಮೂಲಕ‌ ಅನೇಕ ರಾಜಕೀಯ ಮುಖಂಡರು ಸಾವನ್ನಪ್ಪುತ್ತಾರೆ ಎಂದು ಕೋಡಿಮಠದ ಡಾ. ಶಿವಯೋಗಿ ಶಿವಾನಂದ ಸ್ವಾಮೀಜಿ ಸ್ಫೋಟಕ‌ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು…

The post ಕೋವಿಡ್ ಮೇಘಸ್ಫೋಟದ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ‌ ಭವಿಷ್ಯ! appeared first on Good News 24x7.

]]>

ಬೆಳಗಾವಿ : ಮತ್ತೆ ವಾಯುರೂಪದಲ್ಲಿ ಬಾಧೆ ಅಪ್ಪಳಿಸಲಿದೆ. ಮೇಘಸ್ಫೋಟವೂ ಸಂಭವಿಸಿ, ಸಾವು-ನೋವು ಹೆಚ್ಚಾಗಲಿದೆ. ‘ಅರಸನ ಅರಮನೆಗೆ ಕಾರ್ಮೋಡ ಕವಿದಿದೆ’ ಎನ್ನುವ ಮೂಲಕ‌ ಅನೇಕ ರಾಜಕೀಯ ಮುಖಂಡರು ಸಾವನ್ನಪ್ಪುತ್ತಾರೆ ಎಂದು ಕೋಡಿಮಠದ ಡಾ. ಶಿವಯೋಗಿ ಶಿವಾನಂದ ಸ್ವಾಮೀಜಿ ಸ್ಫೋಟಕ‌ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಐದು ವರ್ಷ ಕೋವಿಡ್ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರುವುದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ ಲೋಕಕ್ಕೆ ವಾಯು, ಜಲದಿಂದ ಐದು ವರ್ಷ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪಲಿದೆ. ಮೇಘಸ್ಫೋಟ ಆಗುವ ಸಾಧ್ಯತೆಗಳಿವೆ. ಭೂಕಂಪ ಸಂಭವಿಸುವ ಸಾಧ್ಯತೆ ಇದ್ದು, ಮತೀಯ ಗಲಭೆಗಳು ಹೆಚ್ಚಾಗಲಿವೆ ಎಂದು ಸ್ವಾಮೀಜಿ ಎಚ್ಚರಿಸಿದರು.

ಯುದ್ಧದ ಭೀತಿ ಮತ್ತೆ ಪ್ರಾರಂಭ ಆಗಲಿದೆ. ಜನರಲ್ಲಿ ಅಶಾಂತಿ ಇದೆ. ಕೆಲವು ದೇಶಗಳು ಅಳಿದು ಹೋಗಲಿವೆ. ಹೊಸ ಹೊಸ ದೇಶಗಳು ಉತ್ಪತ್ತಿಯಾಗುತ್ತವೆ.‌ ‘ಅರಸನ ಅರಮನೆಗೆ ಕಾರ್ಮೋಡ ಕವಿದಿದೆ’. ಅನೇಕ ರಾಜಕೀಯ ಮುಖಂಡರಿಗೆ ಸಾವು, ನೋವು ಹಾಗೂ ಜೀವ ಭಯವಿದೆ ಎಂದು ಸ್ವಾಮೀಜಿ ಸ್ಫೋಟಕ‌ ವಿಚಾರವನ್ನು ಹೊರ ಹಾಕಿದರು.

ರಾಜ್ಯ ರಾಜಕಾರಣದ ಬಗ್ಗೆ – ಸಂಕ್ರಾಂತಿಯವರೆಗೂ ರಾಜ್ಯ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ. ಸಂಕ್ರಾಂತಿಯ ಭವಿಷ್ಯ ನೋಡಿಕೊಂಡು ಮುಂದೆ ಏನಾಗುತ್ತೆ‌ ನೋಡಬೇಕು ಎಂದು ಕೋಡಿಮಠದ ಸ್ವಾಮೀಜಿ ಹೇಳಿದರು.

The post ಕೋವಿಡ್ ಮೇಘಸ್ಫೋಟದ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ‌ ಭವಿಷ್ಯ! appeared first on Good News 24x7.

]]>
ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಬಗ್ಗೆ ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯ. https://www.goodnews24x7.com/minister-zameer-ahmed-khans-statement-union-minister-prahlad-joshis-sarcasm/ Sat, 03 May 2025 10:45:24 +0000 https://www.goodnews24x7.com/?p=3576 ವಿಜಯಪುರ : ಮೋದಿ ಅವಕಾಶ ಕೊಟ್ರೆ ನಾನು ಪಾಕ್ ಮೇಲೆ ಯುದ್ದ ಮಾಡೋಕೆ ಸಿದ್ಧ ಪ್ರಧಾನಿ ಮೋದಿ ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸಲಿ ಎಂಬ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ.…

The post ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಬಗ್ಗೆ ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯ. appeared first on Good News 24x7.

]]>

ವಿಜಯಪುರ : ಮೋದಿ ಅವಕಾಶ ಕೊಟ್ರೆ ನಾನು ಪಾಕ್ ಮೇಲೆ ಯುದ್ದ ಮಾಡೋಕೆ ಸಿದ್ಧ ಪ್ರಧಾನಿ ಮೋದಿ ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸಲಿ ಎಂಬ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ.

 

 

 

 

 

ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಮೀರ್ ರಂತಹ ದೊಡ್ಡ ತ್ಯಾಗಮಯಿ ಯಾರಿಲ್ಲ. ಜಮೀರ್ ಅಹ್ಮದ್ ಖಾನ್ ಶಾಂತವಾಗಿದ್ದರೇ ಸಾಕು. ನೀವೇನು ಮಾಡೋದು ಬೇಡ ಮಿಲಿಟರಿಯನ್ನ ನಂಬಿ ಸುಮ್ಮನಿರಿ ಸಾಕು ನಿಮ್ಮ ಭಾಷಣ ಬೇಡ. ನೀವು ಗಡಿಗೆ ಹೋಗೋದು ಬೇಡ ಎಂದರು.

ಜಮೀರ್ ರಂತಹ ದೊಡ್ಡ ತ್ಯಾಗಮಯಿ ಯಾರಿಲ್ಲ ಎಂದು ಲೇವಡಿ ಮಾಡಿದ ಪ್ರಹ್ಲಾದ್ ಜೋಶಿ, ಸೈನಿಕರು ಇಂಟೆಲಿಜೆನ್ಸ್ ಬಗ್ಗೆ ವಿಶ್ವಾಸವಿಡಿ. ಜಮೀರ್ ಶಾಂತವಾಗಿರುವುದೇ ದೇಶಕ್ಕೆ ದೊಡ್ಡ ಸೇವೆ. ಭಾರತೀಯ ಸೈನಿಕರನ್ನ ನಂಬಿ ಸುಮ್ಮನಿರಿ ಸಾಕು. ಜಮೀರ್, ಸಂತೋಷ್ ಲಾಡ್, ಮಲ್ಲಿಕಾರ್ಜುನ ಖರ್ಗೆ ಸಿದ್ದರಾಮಯ್ಯ ಸುಮ್ಮನಿದ್ದರೇ ಸಾಕು ಎಂದರು.

The post ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಬಗ್ಗೆ ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯ. appeared first on Good News 24x7.

]]>