Wayanad Archives - Good News 24x7 https://www.goodnews24x7.com/tag/wayanad/ Kannada Tue, 07 Jul 2026 10:57:58 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Wayanad Archives - Good News 24x7 https://www.goodnews24x7.com/tag/wayanad/ 32 32 ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ, 3 ಸಾ*ವು, ಹಲವರು ನಾಪತ್ತೆ https://www.goodnews24x7.com/landslide-in-wayanad-kerala-3-dead-many-missing/ Tue, 07 Jul 2026 10:57:58 +0000 https://www.goodnews24x7.com/?p=9783 2024ರ ಜುಲೈನಲ್ಲಿ ಸಂಭವಿಸಿದ ಭೂಕುಸಿತವು ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು, ಆ ದುರಂತದಲ್ಲಿ ಸುಮಾರು 298 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದೀಗ ಮತ್ತೆ ಅದೇ ರೀತಿಯ ಅವಘಡ ಮರುಕಳಿಸಿದ್ದು, ಈ ಭಾಗದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಸುರಕ್ಷತೆಯ ಬಗ್ಗೆ ತೀವ್ರ ಚರ್ಚೆಗಳು ಆರಂಭವಾಗಿವೆ.…

The post ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ, 3 ಸಾ*ವು, ಹಲವರು ನಾಪತ್ತೆ appeared first on Good News 24x7.

]]>

2024ರ ಜುಲೈನಲ್ಲಿ ಸಂಭವಿಸಿದ ಭೂಕುಸಿತವು ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು, ಆ ದುರಂತದಲ್ಲಿ ಸುಮಾರು 298 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದೀಗ ಮತ್ತೆ ಅದೇ ರೀತಿಯ ಅವಘಡ ಮರುಕಳಿಸಿದ್ದು, ಈ ಭಾಗದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಸುರಕ್ಷತೆಯ ಬಗ್ಗೆ ತೀವ್ರ ಚರ್ಚೆಗಳು ಆರಂಭವಾಗಿವೆ.

ಕೇರಳದ ವಯನಾಡಿನ ಕಲ್ಲಾಡಿಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೂವರು ಮೃತಪಟ್ಟಿದ್ದು, ಐವರು ನಾಪತ್ತೆಯಾಗಿದ್ದಾರೆ. ಸುರಂಗ ಮಾರ್ಗದ ಕಾಮಗಾರಿ ಸ್ಥಳದ ಮೇಲೆ ಮಣ್ಣಿನ ರಾಶಿ ಕುಸಿದು ಕಾರ್ಮಿಕರಿದ್ದ ಬಸ್‌ಗಳು ಹೂತುಹೋಗಿವೆ. ಭಾರೀ ಮಳೆಯ ನಡುವೆ ಎನ್‌ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಮುಖ್ಯಮಂತ್ರಿ ಸತೀಶನ್ ತುರ್ತು ಸಭೆ ಕರೆದಿದ್ದು, ಸಚಿವರು ಸ್ಥಳಕ್ಕೆ ದೌಡಾಯಿಸಿ ಪರಿಹಾರ ಕಾರ್ಯಗಳ ಉಸ್ತುವಾರಿ ವಹಿಸಿದ್ದಾರೆ.

ಕೇರಳದ ವಯನಾಡಿನಲ್ಲಿ ಮತ್ತೊಂದು ಭೀಕರ ಭೂಕುಸಿತ ಸಂಭವಿಸಿದೆ. ಅನಕ್ಕಂಫೊಯಿಲ್-ಕಲ್ಲಾಡಿ-ಮೇಪ್ಪಾಡಿ ಅವಳಿ ಸುರಂಗ ಮಾರ್ಗದ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಈ ದುರಂತ ನಡೆದಿದ್ದು, 3 ಮಂದಿ ಸಾವಿಗೀಡಾಗಿದ್ದಾರೆ. ಸುಮಾರು ಏಳು ಮಂದಿ ಮಣ್ಣಿನಡಿ ಸಿಲುಕಿರುವ ಆತಂಕ ವ್ಯಕ್ತವಾಗಿದೆ. ಕನಿಷ್ಠ ಆರು ಮಂದಿ ಕಾರ್ಮಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರೆಡ್ ಅಲರ್ಟ್ ಘೋಷಣೆ
ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು ವಯನಾಡ್ ಮತ್ತು ಕೋಝಿಕ್ಕೋಡ್ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ. ಮಲಪ್ಪುರಂ, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಜಾರಿಯಲ್ಲಿದೆ. ಕೇವಲ ಒಂದು ದಿನದಲ್ಲಿ ವೈಥಿರಿಯಲ್ಲಿ 123 ಮಿ.ಮೀ ಮಳೆಯಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ತುರ್ತು ಸಭೆ ಕರೆದಿದ್ದಾರೆ. ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಸೂಚನೆ ನೀಡಿದ್ದು, ಸಚಿವರಾದ ಟಿ. ಸಿದ್ದಿಕ್ ಮತ್ತು ಎ.ಪಿ. ಅನಿಲ್ ಕುಮಾರ್ ಅವರಿಗೆ ಸ್ಥಳಕ್ಕೆ ತೆರಳಿ ಉಸ್ತುವಾರಿ ನೋಡಿಕೊಳ್ಳುವಂತೆ ಆದೇಶಿಸಿದ್ದಾರೆ. ಕಲ್ಪೆಟ್ಟಾದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಿದೆ.

The post ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತ, 3 ಸಾ*ವು, ಹಲವರು ನಾಪತ್ತೆ appeared first on Good News 24x7.

]]>
ಗಣೇಶ ಹಬ್ಬ ಆಚರಣೆಗೆ ಸರ್ಕಾರ ಕಠಿಣ ನಿರ್ಬಂಧ ವಿಧಿಸಿರುವುದು ಸರಿಯಲ್ಲ ಶಾಸಕ ಅಶ್ವಥ್ ನಾರಾಯಣ್ ಹೇಳಿಕೆ https://www.goodnews24x7.com/it-is-not-right-for-the-government-to-impose-strict-restrictions-on-the-celebration-of-ganesh-festival-says-mla-ashwath-narayan/ Thu, 21 Aug 2025 08:02:03 +0000 https://www.goodnews24x7.com/?p=6415 ಹಬ್ಬ ಆಚರಣೆಯ ಬಗ್ಗೆಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಅಶ್ವಥ್ ನಾರಾಯಣ್, ಸನಾತನ ಧರ್ಮದ ವಿರುದ್ದ ಮಾತನಾಡಿದರು, ಅಜಾ‍ನ್ ಗೆ ಸರ್ಕಾರ ಕಡಿವಾಣ ಹಾಕಲಿಲ್ಲ ಸುಪ್ರೀಂಕೋರ್ಟ್ ಸೂಚನೆ ಇದ್ರೂ ಕ್ರಮ ಕೈಗೊಳ್ಳಲಿಲ್ಲ. ಆದರೆ ಗಣೇಶ ಹಬ್ಬಕ್ಕೆ ನಿರ್ಬಂಧಗಳನ್ನ ವಿಧಿಸಲಾಗಿದೆ. ಹಬ್ಬ ಆಚರಣೆಗೆ…

The post ಗಣೇಶ ಹಬ್ಬ ಆಚರಣೆಗೆ ಸರ್ಕಾರ ಕಠಿಣ ನಿರ್ಬಂಧ ವಿಧಿಸಿರುವುದು ಸರಿಯಲ್ಲ ಶಾಸಕ ಅಶ್ವಥ್ ನಾರಾಯಣ್ ಹೇಳಿಕೆ appeared first on Good News 24x7.

]]>

ಹಬ್ಬ ಆಚರಣೆಯ ಬಗ್ಗೆಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಅಶ್ವಥ್ ನಾರಾಯಣ್, ಸನಾತನ ಧರ್ಮದ ವಿರುದ್ದ ಮಾತನಾಡಿದರು, ಅಜಾ‍ನ್ ಗೆ ಸರ್ಕಾರ ಕಡಿವಾಣ ಹಾಕಲಿಲ್ಲ ಸುಪ್ರೀಂಕೋರ್ಟ್ ಸೂಚನೆ ಇದ್ರೂ ಕ್ರಮ ಕೈಗೊಳ್ಳಲಿಲ್ಲ. ಆದರೆ ಗಣೇಶ ಹಬ್ಬಕ್ಕೆ ನಿರ್ಬಂಧಗಳನ್ನ ವಿಧಿಸಲಾಗಿದೆ. ಹಬ್ಬ ಆಚರಣೆಗೆ ಅವಕಾಶ ನೀಡಬೇಕು ನಿರ್ಬಂಧಗಳು ಸರಿಯಲ್ಲ ಎಂದರು.

ಭೂಕುಸಿತದಿಂದ ಸಂಕಷ್ಟದಲ್ಲಿರುವರಿಗೆ ಪರಿಹಾರಕ್ಕಾಗಿ ವಯನಾಡಿಗೆ ರಾಜ್ಯ ಸರ್ಕಾರದಿಂದ 10 ಕೋಟಿ ರೂ ಅನುದಾನ ಹಿನ್ನೆಲೆಯಲ್ಲಿ ಈ ಕುರಿತು ಮಾತನಾಡಿದ ಅಶ್ವಥ್ ನಾರಾಯಣ್, ಇದು ಕಾಂಗ್ರೆಸ್ ಪಕ್ಷದ ಹಣ ಎಂದುಕೊಂಡಿದ್ದಾರೆ ಸಾರ್ವಜನಿಕರ ತೆರಿಗೆ ಹಣ ದುರ್ಬಳಕೆಯಾಗಬಾರದು. ನಾವು ಸರ್ಕಾರದ ನಿರ್ಧಾರ ಖಂಡಿಸುತ್ತೇವೆ ಎಂದರು.

The post ಗಣೇಶ ಹಬ್ಬ ಆಚರಣೆಗೆ ಸರ್ಕಾರ ಕಠಿಣ ನಿರ್ಬಂಧ ವಿಧಿಸಿರುವುದು ಸರಿಯಲ್ಲ ಶಾಸಕ ಅಶ್ವಥ್ ನಾರಾಯಣ್ ಹೇಳಿಕೆ appeared first on Good News 24x7.

]]>
ಪಾಕ್ ಪರ ಘೋಷಣೆ ಕೂಗಿದ್ರೂ ತಪ್ಪು : ಸಿಎಂ ಸಿದ್ದರಾಮಯ್ಯ. https://www.goodnews24x7.com/even-if-you-shout-slogans-in-favor-of-pakistan-it-is-wrong-investigate-and-take-appropriate-action-cm-siddaramaiah/ Wed, 30 Apr 2025 10:10:27 +0000 https://www.goodnews24x7.com/?p=3488 ಬೆಂಗಳೂರು : ಮಂಗಳೂರಿನಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾರೇ ಪಾಕ್ ಪರ ಘೊಣೆ ಕೂಗಿದರೂ ತಪ್ಪು ತನಿಖೆ ಮಾಡಿ ಸೂಕ್ತ ಕ್ರಮ…

The post ಪಾಕ್ ಪರ ಘೋಷಣೆ ಕೂಗಿದ್ರೂ ತಪ್ಪು : ಸಿಎಂ ಸಿದ್ದರಾಮಯ್ಯ. appeared first on Good News 24x7.

]]>

ಬೆಂಗಳೂರು : ಮಂಗಳೂರಿನಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾರೇ ಪಾಕ್ ಪರ ಘೊಣೆ ಕೂಗಿದರೂ ತಪ್ಪು ತನಿಖೆ ಮಾಡಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ. ಆರೋಪಿಗಳು ಯಾರೇ ಆಗಿದ್ದರೂ ಅವರ ವಿರುದ್ದ ಕ್ರಮ ಖಚಿತ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವತ್ತು ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.ಏ. 27 ರಂದು ಪಾಕಿಸ್ತಾನದ ವಿರುದ್ದ ಘೋಷಣೆ ಕೂಗಿದ್ದಕ್ಕೆ ಸ್ಥಳೀಯರ ಗುಂಪು ಘೋಷಣೆ ಕೂಗಿದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿತ್ತು. ಬಳಿಕ ಆ ವ್ಯಕ್ತಿ ಮೃತಪಟ್ಟಿದ್ದು ಆತನ ಮೃತದೇಹ ಪತ್ತೆಯಾಗಿತ್ತು. ಮೃತ ಆರೋಪಿಯು ಕೇರಳದ ವಯನಾಡಿನ ಪುಲ್ಪಳಿ ನಿವಾಶಿ ಅಶ್ರಫ್ ಎಂದು ತಿಳಿದುಬಂದಿದೆ.

The post ಪಾಕ್ ಪರ ಘೋಷಣೆ ಕೂಗಿದ್ರೂ ತಪ್ಪು : ಸಿಎಂ ಸಿದ್ದರಾಮಯ್ಯ. appeared first on Good News 24x7.

]]>
ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧೆ https://www.goodnews24x7.com/navya-haridas-contest-from-bjp-against-priyanka-gandhi/ Sun, 20 Oct 2024 02:10:31 +0000 https://www.goodnews24x7.com/?p=883 ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧೆ ಮುಂಬರುವ ಲೋಕಸಭಾ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ತೀವ್ರ ಕುತೂಹಲ ಸೃಷ್ಟಿಸಿರುವ ಕೇರಳದ ವಯನಾಡಿನಲ್ಲಿ ಈ ಬಾರಿ ಮಹಿಳಾ ಅಭ್ಯರ್ಥಿಗಳಿಬ್ಬರು ಮುಖಾಮುಖಿಯಾಗಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪ್ರಿಯಾಂಕಾ ಗಾಂಧಿ…

The post ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧೆ appeared first on Good News 24x7.

]]>

ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧೆ

ಮುಂಬರುವ ಲೋಕಸಭಾ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ತೀವ್ರ ಕುತೂಹಲ ಸೃಷ್ಟಿಸಿರುವ ಕೇರಳದ ವಯನಾಡಿನಲ್ಲಿ ಈ ಬಾರಿ ಮಹಿಳಾ ಅಭ್ಯರ್ಥಿಗಳಿಬ್ಬರು ಮುಖಾಮುಖಿಯಾಗಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧಿಸಲಿದ್ದಾರೆ.

36 ವರ್ಷದ ನವ್ಯಾ ಹರಿದಾಸ್ ಅವರು ಮೆಕ್ಯಾನಿಕಲ್ ಇಂಜಿನಿಯರ್ ಪದವಿ ಓದಿದ್ದು ,ಕ್ಯಾಲಿಕಟ್ ವಿಶ್ವವಿದ್ಯಾಲಯದ ಕೆಎಂಸಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಟೆಕ್ ಪದವಿ ಪಡೆದಿದ್ದಾರೆ. ಸದ್ಯ ಅವರು ಕೋಝಿಕ್ಕೋಡ್ ಕಾರ್ಪೊರೇಷನ್‌ನಲ್ಲಿ ಕೌನ್ಸಿಲರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಟ್ವಿಟ್ಟರ್ ಪ್ರೊಫೈಲ್ ಪ್ರಕಾರ ಅವರು ಬಿಜೆಪಿಯಲ್ಲಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸಿದ್ದಾರೆ.

The post ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧೆ appeared first on Good News 24x7.

]]>
ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ https://www.goodnews24x7.com/priyanka-gandhi-vadra-is-contesting-from-wayanad-lok-sabha-constituency/ Wed, 16 Oct 2024 01:46:15 +0000 https://www.goodnews24x7.com/?p=838 ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ ಚುನಾವಣಾ ರಾಜಕೀಯಕ್ಕೆ ಪ್ರಿಯಾಂಕಾ ವಾದ್ರಾ ಅಧಿಕೃತ ಎಂಟ್ರಿಯಾಗಿದ್ದು ಕೇರಳದ ವಯನಾಡಿನಿಂದ ಈ ಬಾರಿ ಕಣಕ್ಕೆ ಇಳಿಯಲಿದ್ದಾರೆ. ಸಂಸದ ರಾಹುಲ್‌ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ವಯನಾಡು ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು…

The post ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ appeared first on Good News 24x7.

]]>

ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ

ಚುನಾವಣಾ ರಾಜಕೀಯಕ್ಕೆ ಪ್ರಿಯಾಂಕಾ ವಾದ್ರಾ ಅಧಿಕೃತ ಎಂಟ್ರಿಯಾಗಿದ್ದು ಕೇರಳದ ವಯನಾಡಿನಿಂದ ಈ ಬಾರಿ ಕಣಕ್ಕೆ ಇಳಿಯಲಿದ್ದಾರೆ. ಸಂಸದ ರಾಹುಲ್‌ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ವಯನಾಡು ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕೆ ಇಳಿಸುವುದಾಗಿ ಎಐಸಿಸಿ ಅಧಿಕೃತ ಪ್ರಕಟಣೆಯ ಮೂಲಕ ತಿಳಿಸಿದೆ.

ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್​ ತನ್ನ ಅಭ್ಯರ್ಥಿ ಹೆಸರನ್ನು ಪ್ರಕಟಿಸಿದ್ದು, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

The post ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ appeared first on Good News 24x7.

]]>