Yashasvi Jaiswal Archives - Good News 24x7 https://www.goodnews24x7.com/tag/yashasvi-jaiswal/ Kannada Sat, 21 Jun 2025 07:47:11 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Yashasvi Jaiswal Archives - Good News 24x7 https://www.goodnews24x7.com/tag/yashasvi-jaiswal/ 32 32 ಯಶಸ್ವಿ ಜೈಸ್ವಾಲ್ ವಿಶ್ವ ದಾಖಲೆ; 148 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಇದೇ ಮೊದಲು……. https://www.goodnews24x7.com/%e0%b2%af%e0%b2%b6%e0%b2%b8%e0%b3%8d%e0%b2%b5%e0%b2%bf-%e0%b2%9c%e0%b3%88%e0%b2%b8%e0%b3%8d%e0%b2%b5%e0%b2%be%e0%b2%b2%e0%b3%8d-%e0%b2%b5%e0%b2%bf%e0%b2%b6%e0%b3%8d%e0%b2%b5-%e0%b2%a6%e0%b2%be/ Sat, 21 Jun 2025 07:47:11 +0000 https://www.goodnews24x7.com/?p=4561 ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಯಶಸ್ವಿ ಜೈಸ್ವಾಲ್ ಆಂಗ್ಲರ ನಾಡಿನಲ್ಲಿ ಚೊಚ್ಚಲ ಶತಕ ಸಿಡಿಸಿದ್ದಾರೆ. ಈ ಮೂಲಕ ಲೀಡ್ಸ್ ಮೈದಾನದಲ್ಲಿ ಸೆಂಚುರಿ ಸಿಡಿಸಿದ ಭಾರತದ ಮೊದಲ ಆರಂಭಿಕ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದರ ಜೊತೆಗೆ ವಿಶೇಷ ವಿಶ್ವ…

The post ಯಶಸ್ವಿ ಜೈಸ್ವಾಲ್ ವಿಶ್ವ ದಾಖಲೆ; 148 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಇದೇ ಮೊದಲು……. appeared first on Good News 24x7.

]]>

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಯಶಸ್ವಿ ಜೈಸ್ವಾಲ್ ಆಂಗ್ಲರ ನಾಡಿನಲ್ಲಿ ಚೊಚ್ಚಲ ಶತಕ ಸಿಡಿಸಿದ್ದಾರೆ. ಈ ಮೂಲಕ ಲೀಡ್ಸ್ ಮೈದಾನದಲ್ಲಿ ಸೆಂಚುರಿ ಸಿಡಿಸಿದ ಭಾರತದ ಮೊದಲ ಆರಂಭಿಕ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದರ ಜೊತೆಗೆ ವಿಶೇಷ ವಿಶ್ವ ದಾಖಲೆಗೂ ಕೊರೊಳೊಡ್ಡಿದ್ದಾರೆ. ಟೆಸ್ಟ್ ಕ್ರಿಕೆಟ್ ಶುರುವಾಗಿ ಬರೋಬ್ಬರಿ 148 ವರ್ಷಗಳಾಗಿವೆ. 148 ವರ್ಷಗಳಲ್ಲಿ ಯಾವುದೇ ಬ್ಯಾಟರ್​ನಿಂದ ಸಾಧ್ಯವಾಗದ ವಿಶೇಷ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ ನಿರ್ಮಿಸಿದ್ದಾರೆ. ಅದು ಕೂಡ ಕೇವಲ 2 ವರ್ಷಗಳಲ್ಲಿ ಎಂಬುದು ವಿಶೇಷ.

ಲೀಡ್ಸ್​​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಯಶಸ್ವಿ ಜೈಸ್ವಾಲ್ ಶುಭಾರಂಭ ಮಾಡಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ 159 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 16 ಫೋರ್​ಗಳೊಂದಿಗೆ 101 ರನ್ ಬಾರಿಸಿದ್ದಾರೆ. ವಿಶೇಷ ಎಂದರೆ ಇದು ಯಶಸ್ವಿ ಜೈಸ್ವಾಲ್ ಅವರ ಚೊಚ್ಚಲ ಇಂಗ್ಲೆಂಡ್ ಟೆಸ್ಟ್ ಸರಣಿ. ಅಂದರೆ ಇಂಗ್ಲೆಂಡ್ ಕಣಕ್ಕಿಳಿದ ಮೊದಲ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆಯುವಲ್ಲಿಯೂ ಯುವ ದಾಂಡಿಗ ಯಶಸ್ವಿಯಾಗಿದ್ದಾನೆ.

ಅಂದರೆ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ಯಾವುದೇ ಬ್ಯಾಟರ್ ಮೂರು ಪ್ರಮುಖ ದೇಶಗಳ ವಿರುದ್ಧ ಆಡಿದ ವಿದೇಶಿ ಸರಣಿಯ ಮೊದಲ ಪಂದ್ಯದಲ್ಲಿ ಶತಕ ಬಾರಿಸಿಲ್ಲ. ಆದರೆ ಎರಡು ವರ್ಷಗಳ ಹಿಂದೆ ಟೆಸ್ಟ್ ಕೆರಿಯರ್ ಶುರು ಮಾಡಿದ ಯಶಸ್ವಿ ಜೈಸ್ವಾಲ್ ಅಂತಹದೊಂದು ಸಾಧನೆ ಮಾಡಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.2023 ರಲ್ಲಿ ಕೆರಿಬಿಯನ್ ದ್ವೀಪದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ 171 ರನ್ ಬಾರಿಸಿದ್ದರು. ಇದಾದ ಬಳಿಕ 2024 ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ತನ್ನ ಚೊಚ್ಚಲ ಸರಣಿಯ ಮೊದಲ ಪಂದ್ಯದಲ್ಲೇ 161 ರನ್ ಕಲೆಹಾಕಿದ್ದರು. ಇದೀಗ ಇದೇ ಮೊದಲ ಬಾರಿಗೆ ಇಂಗ್ಲೆಂಡ್​ನಲ್ಲಿ ಟೆಸ್ಟ್ ಆಡುತ್ತಿರುವ ಜೈಸ್ವಾಲ್ ಶತಕದೊಂದಿಗೆ ಅಬ್ಬರಿಸಿದ್ದಾರೆ.

ಇದರೊಂದಿಗೆ ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್​ನಲ್ಲಿ ಕಣಕ್ಕಿಳಿದ ಮೊದಲ ಟೆಸ್ಟ್​ನಲ್ಲೇ ಶತಕ ಸಿಡಿಸಿದ ವಿಶ್ವದ ಏಕೈಕ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ 148 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಯಾರಿಂದಲೂ ಸಾಧ್ಯವಾಗದ ಅಪರೂಪದ ವಿಶ್ವ ದಾಖಲೆಯನ್ನು ನಿರ್ಮಿಸುವಲ್ಲಿ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾನೆ.

 

 

The post ಯಶಸ್ವಿ ಜೈಸ್ವಾಲ್ ವಿಶ್ವ ದಾಖಲೆ; 148 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಇದೇ ಮೊದಲು……. appeared first on Good News 24x7.

]]>
ಮೂವರು ಕನ್ನಡಿಗರು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡದಿಂದ ಆಯ್ಕೆ. https://www.goodnews24x7.com/three-kannadigas-selected-in-indias-test-series-against-england/ Sat, 24 May 2025 12:48:31 +0000 https://www.goodnews24x7.com/?p=4068 ಮುಂಬೈ : ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಇಬ್ಬರು ಕನ್ನಡಿಗರಿಗೆ ಸ್ಥಾನ ದೊರೆತಿದೆ. 18 ಸದಸ್ಯರ ಟೆಸ್ಟ್ ತಂಡದ ನಾಯಕರಾಗಿ ಯುವ ಆಟಗಾರ ಶುಭ್ಮನ್ ಗಿಲ್, ಉಪನಾಯಕರಾಗಿ ರಿಷಬ್ ಪಂತ್ ಆಯ್ಕೆಯಾಗಿದ್ದಾರೆ. ಟೆಸ್ಟ್ ತಂಡದಲ್ಲಿ ಕನ್ನಡಿಗರಾದ ಕೆ.ಎಲ್…

The post ಮೂವರು ಕನ್ನಡಿಗರು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡದಿಂದ ಆಯ್ಕೆ. appeared first on Good News 24x7.

]]>

ಮುಂಬೈ : ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಇಬ್ಬರು ಕನ್ನಡಿಗರಿಗೆ ಸ್ಥಾನ ದೊರೆತಿದೆ.
18 ಸದಸ್ಯರ ಟೆಸ್ಟ್ ತಂಡದ ನಾಯಕರಾಗಿ ಯುವ ಆಟಗಾರ ಶುಭ್ಮನ್ ಗಿಲ್, ಉಪನಾಯಕರಾಗಿ ರಿಷಬ್ ಪಂತ್ ಆಯ್ಕೆಯಾಗಿದ್ದಾರೆ. ಟೆಸ್ಟ್ ತಂಡದಲ್ಲಿ ಕನ್ನಡಿಗರಾದ ಕೆ.ಎಲ್ ರಾಹುಲ್ , ಕರುಣ್ ನಾಯರ್, ಪ್ರಸಿದ್ ಕೃಷ್ಣಗೆ ಸ್ಥಾನ ಲಭಿಸಿದೆ.

ಕೆ.ಎಲ್ ರಾಹುಲ್

ಪ್ರಸಿದ್ ಕೃಷ್ಣ

ಕರುಣ್ ನಾಯರ್

 

ತಂಡದಲ್ಲಿ ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್ ಹಾಗೂ ಸಾಯಿ ಸುದರ್ಶನ್ ಕಾಣಿಸಿಕೊಂಡಿದ್ದಾರೆ. ಆಲ್ರೌಂಡರ್ಗಳಾಗಿ ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ವೇಗದ ಬೌಲರ್ ಗಳಾಗಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್ ಹಾಗೂ ಅರ್ಷದೀಪ್ ಸಿಂಗ್ ಆಯ್ಕೆಯಾಗಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಈ ಕೆಳಗಿನಂತಿದೆ
ಶುಭ್ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್.

ಶುಭ್ಮನ್ ಗಿಲ್ (ನಾಯಕ)

ರಿಷಭ್ ಪಂತ್ (ಉಪನಾಯಕ)

 

 

ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಹೀಗಿದೆ ನೋಡಿ
ಮೊದಲ ಟೆಸ್ಟ್: 20-24 ಜೂನ್, 2025
2ನೇ ಟೆಸ್ಟ್: ಜುಲೈ 2-6, 2025
3ನೇ ಟೆಸ್ಟ್: ಜುಲೈ 10-14, 2025
4ನೇ ಟೆಸ್ಟ್: 23-27 ಜುಲೈ, 2025
5ನೇ ಟೆಸ್ಟ್: 31 ಜುಲೈ-4 ಆಗಸ್ಟ್, 2025

The post ಮೂವರು ಕನ್ನಡಿಗರು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡದಿಂದ ಆಯ್ಕೆ. appeared first on Good News 24x7.

]]>