ವಿಶ್ವಕಪ್​ನಲ್ಲೂ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ!

T20 World Cup 2026 Final India vs New zealand ,ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್​ಗಳಲ್ಲಿ 159 ರನ್​ ಬಾರಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 96 ರನ್​ಗಳ ಅಮೋಘ ಗೆಲುವು ದಾಖಲಿಸಿದೆ.

ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಒಂದೇ ಬಾರಿ ಮೂರು ದಾಖಲೆಗಳನ್ನು ಬರೆಯುವ ಮೂಲಕ ಎಂಬುದೇ ವಿಶೇಷ.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 255 ರನ್​ಗಳು.

256 ರನ್​ಗಳ ಕಠಿಣ ಗುರಿ ಪಡೆದ ನ್ಯೂಝಿಲೆಂಡ್ ತಂಡವು 19 ಓವರ್​ಗಳಲ್ಲಿ 159 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 96 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಮೂರು ಭರ್ಜರಿ ದಾಖಲೆಗಳನ್ನು ತನ್ನದಾಗಿಸಿಕೊಂಡಿದೆ. ಆ ದಾಖಲೆಗಳಾವುವು ಎಂದು ನೋಡುವುದಾದರೆ….

3 ವಿಶ್ವಕಪ್ ಗೆದ್ದ ಮೊದಲ ತಂಡ: ಟಿ20 ವಿಶ್ವಕಪ್ ಇತಿಹಾಸದಲ್ಲೇ ಮೂರು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಮೊದಲ ತಂಡವೆಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ. 2007, 2024 ರಲ್ಲಿ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದ್ದ ಭಾರತ ಇದೀಗ ಮತ್ತೊಮ್ಮೆ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿ ಈ ಸಾಧನೆ ಮಾಡಿದೆ.

ತವರಿನಲ್ಲಿ ಗೆದ್ದ ಮೊದಲ ತಂಡ: ಟಿ20 ವಿಶ್ವಕಪ್ ಇತಿಹಾಸದಲ್ಲಿ ತವರಿನಲ್ಲಿ ಯಾವುದೇ ತಂಡ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿರಲಿಲ್ಲ. ಆದರೆ ಈ ಬಾರಿ ತವರು ಮೈದಾನಗಳಲ್ಲಿ ಪ್ರಚಂಡ ಪ್ರದರ್ಶನ ನೀಡಿರುವ ಭಾರತ ತಂಡವು ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಚಾಂಪಿಯನ್ ಪಟ್ಟ ಉಳಿಸಿಕೊಂಡ ಮೊದಲ ತಂಡ: ಟಿ20 ವಿಶ್ವಕಪ್​ನಲ್ಲಿ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟ ಅಲಂಕರಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಗೂ ಟೀಮ್ ಇಂಡಿಯಾ ಪಾತ್ರವಾಗಿದೆ. ಅಂದರೆ 2024 ರಲ್ಲಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಭಾರತ ಇದೀಗ ಮತ್ತೊಮ್ಮೆ ಟ್ರೋಫಿ ಎತ್ತಿ ಹಿಡಿಯುವ ಮೂಲಕ ಬ್ಯಾಕ್ ಟು ಬ್ಯಾಕ್ ಟಿ20 ವಿಶ್ವಕಪ್ ಗೆದ್ದ ಮೊದಲ ತಂಡ ಎನಿಸಿಕೊಂಡಿದೆ.

Related Posts

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

  ಒಡಿಶಾದ ಪುರಿಯಲ್ಲಿ ಭವ್ಯ ಜಗನ್ನಾಥ ರಥಯಾತ್ರೆ ಇಂದಿನಿಂದ ಆರಂಭಗೊಂಡಿದೆ. ಲಕ್ಷಾಂತರ ಭಕ್ತರು ‘ಜಯ ಜಗನ್ನಾಥ’ ಘೋಷಗಳೊಂದಿಗೆ ಈ ಮಹಾ ಉತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ಜಗನ್ನಾಥ ಸ್ವಾಮಿ, ಬಲಭದ್ರ ಮತ್ತು ಸುಭದ್ರಾ ದೇವಿ ದೇವಾಲಯದಿಂದ ಹೊರಬಂದು ಭಕ್ತರಿಗೆ ದರ್ಶನ ನೀಡುತ್ತಾರೆ. ಹೊಸ ರಥಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!