ಅಂತಿಮ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿಯಾಗಿ ಗೆಲುವು

ಇಂಗ್ಲೆಂಡ್​ ವಿರುದ್ಧ ನಡೆದ ಅಂತಿಮ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿಯಾಗಿ ಗೆಲುವು ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 2-2 ರಿಂದ ಭಾರತ- ಇಂಗ್ಲೆಂಡ್​ ಸಮಬಲ ಸಾಧಿಸಿವೆ.

ಲಂಡನ್‌ನಲ್ಲಿರುವ ಕೆನ್ನಿಂಗ್ಟನ್‌ನ ಓವಲ್ ಸ್ಟೇಡಿಯಂನಲ್ಲಿ ನಡೆದ 5ನೇ ಟೆಸ್ಟ್​ ಪಂದ್ಯದಲ್ಲಿ ಇಂಗ್ಲೆಂಡ್​ ಕ್ಯಾಪ್ಟನ್​ ಆಲಿ ಪೋಪ್ ಟಾಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದರು. ಹೀಗಾಗಿ ಮೊದಲ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡಿದ್ದ ಶುಭ್​ಮನ್ ಗಿಲ್ ನೇತೃತ್ವದ ಭಾರತ ತಂಡ ಆರಂಭದಲ್ಲಿ ಸಂಕಷ್ಟಕ್ಕೆ ಒಳಗಾಗಿತ್ತು. ಏಕೆಂದರೆ ಜೈಸ್ವಾಲ್​ ಕೇವಲ 2 ರನ್​ಗೆ ಔಟ್ ಆದ್ರೆ ಕನ್ನಡಿಗ ರಾಹುಲ್ ಅವರು ಕೇವಲ 14 ರನ್​ಗಳಿಗೆ ಔಟ್ ಆಗಿ ನಿರಾಸೆ ಮೂಡಿಸಿದ್ದರು.

https://www.youtube.com/live/qNWknyOXIxs?si=kI6c-WUw-4m2I2Shಸೇಟುಗಳಿಗೆ ಸೇಲ್ ಆದ್ರಾ ಮೈಸೂರು ನಗರ ಪಾಲಿಕೆ ಅಧಿಕಾರಿಗಳು! ಚಾಮುಂಡಿ ಪುರಂ ಸರ್ಕಲ್ ನಲ್ಲಿ ಅಕ್ರಮ ಕಟ್ಟಡ!

ನಾಯಕ ಶುಭ್​ಮನ್ ಗಿಲ್ ಕೂಡ 21 ರನ್​ಗೆ ರನೌಟ್ ಆಗಿದ್ದರು. ಧೃವ್ ಜುರೆಲ್ ಹಾಗೂ ವಾಷಿಂಗ್ಟನ್​ ಸುಂದರ್ ಕೆಲ ಸಮಯ ಬ್ಯಾಟಿಂಗ್ ಮಾಡಿದರೂ ಇಂಗ್ಲೆಂಡ್​ ದಾಳಿಗೆ ವಿಕೆಟ್​ ಒಪ್ಪಿಸಿದರು. ಆದರೆ ಇನ್ನೊಬ್ಬ ಕನ್ನಡಿಗ ಕರುಣ್ ನಾಯರ್​ ಅವರ ಅಮೋಘವಾದ ಅರ್ಧಶತಕ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ 224 ರನ್​ಗೆ ಆಲೌಟ್ ಆಗಿತ್ತು.

ಇದಾದ ಮೇಲೆ ಮೊದಲ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್​ ಆರಂಭದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ಮಾಡಿತ್ತು. ಓಪನರ್​ ಜಾಕ್ ಕ್ರಾಲಿ ಅರ್ಧಶತಕ ಬಾರಿಸಿದ್ದರು. ಹ್ಯಾರಿ ಬ್ರೂಕ್​ 53 ರನ್​ ಸಿಡಿಸಿದ್ದರು. ಕೊನೆಯಲ್ಲಿ ಬ್ಯಾಟಿಂಗ್​ನಲ್ಲಿ ವಿಫಲತೆ ಹೆಚ್ಚಾಯಿತು. ಉಳಿದ ಬ್ಯಾಟರ್ಸ್​ ಉತ್ತಮ ಬ್ಯಾಟಿಂಗ್ ಮಾಡದ ಕಾರಣ ಆಂಗ್ಲ ಪಡೆ ಕೇವಲ 247 ರನ್​ಗೆ ಆಲೌಟ್ ಆಗಿತ್ತು. ಆದರೆ ಇನ್ನಿಂಗ್ಸ್​​ನಲ್ಲಿ 23 ರನ್​ಗಳ ಮುನ್ನಡೆ ಕಾಯ್ದುಕೊಂಡಿದ್ದರು.

ನಂತರ 2ನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡಿದ್ದ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಮಾಡಿತ್ತು. ಆರಂಭಿಕ ಬ್ಯಾಟರ್​ ಯಶಸ್ವಿ ಜೈಸ್ವಾಲ್ 118 ರನ್​ಗಳ ಚಚ್ಚಿ ಭಾರತಕ್ಕೆ ನೆರವಾಗಿದ್ದರು. ಇನ್ನು ಈ ಇನ್ನಿಂಗ್ಸ್​ನಲ್ಲೂ ಕೆ.ಎಲ್ ರಾಹುಲ್ (7)​ ವಿಫಲ ಬ್ಯಾಟಿಂಗ್ ಪ್ರದರ್ಶನ ಮಾಡಿದ್ದರು.

Related Posts

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

ಕ್ವಾಲಿಫೈಯರ್ ಆಡದೆಯೇ ಆರ್‌ಸಿಬಿ ಫೈನಲ್ ತಲುಪಬಹುದು..!

ಐಪಿಎಲ್ 2026 ಕ್ವಾಲಿಫೈಯರ್ 1 ರಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಧರ್ಮಶಾಲಾದಲ್ಲಿ ಸೆಣಸಾಡಲಿವೆ. ಈ ಪಂದ್ಯ ಮಳೆಯಿಂದ ರದ್ದಾದರೆ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಸೋತ ತಂಡಕ್ಕೆ ಕ್ವಾಲಿಫೈಯರ್ 2 ಆಡಲು ಮತ್ತೊಂದು ಅವಕಾಶವಿದ್ದರೂ,…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!