ದಳಪತಿ ವಿಜಯ್ ಅವರು ತಮ್ಮ 69ನೇ ಸಿನಿಮಾಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದು ವಿಜಯ್ ಅವರ ಕೊನೆಯ ಸಿನಿಮಾ ಆಗಿರಲಿದೆ. ಇತ್ತೀಚೆಗಷ್ಟೇ ರಿಲೀಸ್ ಆದ ‘ಉಔಂಖಿ’ ಸಿನಿಮಾ ಫ್ಲಾಪ್ ಆಗಿದೆ. ಈ ಕಾರಣಕ್ಕೆ ಅವರ ಮುಂದಿನ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ದಳಪತಿ ವಿಜಯ್ ಅವರ ಕೊನೆಯ ಸಿನಿಮಾ ಎಂದು ‘ಕೆವಿಎನ್ ಪ್ರೊಡಕ್ಷನ್ಸ್’ ಖಚಿತಪಡಿಸಿದೆ.

ದಳಪತಿ ವಿಜಯ್ ಅವರು ರಾಜಕೀಯದಲ್ಲಿ ಬ್ಯುಸಿ ಆಗುತ್ತಿದ್ದಾರೆ. ಈ ಕಾರಣಕ್ಕೆ ‘Thalapathy 69’ ಅವರ ಕೊನೆಯ ಸಿನಿಮಾ ಆಗಲಿದೆ ಎಂದು ಹೇಳಲಾಗಿತ್ತು. ಇದಾದ ಬಳಿಕವೂ ಅವರು ಕೆಲವು ಸಿನಿಮಾ ಒಪ್ಪಿಕೊಳ್ಳುತ್ತಾರೆ ಎಂದು ವರದಿ ಆಗಿತ್ತು. ಆದರೆ, ಆ ರೀತಿ ಇಲ್ಲ ಎಂಬುದು ಸ್ಪಷ್ಟವಾಗಿದೆ. ಈಗ ರಿಲೀಸ್ ಆಗಿರೋ ವಿಡಿಯೋದಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.
ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ‘Thalapathy 69’ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಈ ಚಿತ್ರದ ಅಪ್ಡೇಟ್ ಇಂದು (ಸೆಪ್ಟೆಂಬರ್ 14) ಸಿಗಲಿದೆ. ಈ ಮೊದಲು ವಿಜಯ್ ಸಿನಿಮಾ ರಿಲೀಸ್ ಆದಾಗ ಫ್ಯಾನ್ಸ್ ಹೇಗೆ ಸಂಭ್ರಮಿಸಿದ್ದರು ಎನ್ನುವುದರ ಫೋಟೋ ಹಂಚಿಕೊಳ್ಳಲಾಗಿದೆ. ವಿಡಿಯೋದ ಕೊನೆಯಲ್ಲಿ ‘ಕೊನೆಯ ಬಾರಿ ಖಿhಚಿಟಚಿಠಿಚಿಣhಥಿ 69’ ಎಂದು ಬರೆಯಲಾಗಿದೆ. ಈ ಮೂಲಕ ಇದು ವಿಜಯ್ ಕೊನೆಯ ಸಿನಿಮಾ ಎಂಬುದನ್ನು ಖಚಿತಪಡಿಸಿದ್ದಾರೆ.
‘ತಮಿಳಗ ವೆಟ್ರಿ ಕಳಗಂ’ ಅನ್ನೋದು ವಿಜಯ್ ಪಕ್ಷದ ಹೆಸರು. ಅವರು ಮುಂದಿನ ದಿನಗಳಲ್ಲಿ ಪಕ್ಷ ಕಟ್ಟು ಕೆಲಸದಲ್ಲಿ ಬ್ಯುಸಿ ಆಗಲಿದ್ದಾರೆ. 2026ರ ವಿಧಾನಸಭೆ ಚುನಾವಣೆಯಲ್ಲಿ ಅವರು ಸ್ಪರ್ಧೆ ಮಾಡಲಿದ್ದಾರೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.





