ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ದಳಪತಿ ವಿಜಯ್ ಪತ್ನಿ

ಕಾಲಿವುಡ್ ಖ್ಯಾತ ನಟ ದಳಪತಿ ವಿಜಯ್ ಸಂಸಾರದಲ್ಲಿ ಬಿರುಕು ಮೂಡಿದೆ. ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ದಾಂಪತ್ಯದ ಬಳಿಕ ಅವರು ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ. ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಸಂಗೀತಾ ಆರೋಪಿಸಿದ್ದಾರೆ.
ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ದಳಪತಿ ವಿಜಯ್ ಪತ್ನಿನಟಿ ಜೊತೆ ಅನೈತಿಕ ಸಂಬಂಧ ಆರೋಪ

ಕಾಲಿವುಡ್ ಖ್ಯಾತ ನಟ ದಳಪತಿ ವಿಜಯ್ ಸಂಸಾರದಲ್ಲಿ ಬಿರುಕು ಮೂಡಿದೆ. ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ದಾಂಪತ್ಯದ ಬಳಿಕ ಅವರು ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ. ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಸಂಗೀತಾ ಆರೋಪಿಸಿದ್ದಾರೆ. ಸಿನಿಮಾಗಿಂತಲೂ ಹೆಚ್ಚಾಗಿ ರಾಜಕೀಯದಲ್ಲಿ ವಿಜಯ್ ಅವರು ಈಗ ಆಸಕ್ತಿ ಹೊಂದಿದ್ದಾರೆ. ಆದರೆ, ಅವರ ಮೇಲೆ ಅನೈತಿಕ ಸಂಬಂಧದ ಆರೋಪ ಕೇಳಿಬಂದಿರುವುದರಿಂದ ರಾಜಕೀಯದ ಹಾದಿಗೆ ಇದು ಕಪ್ಪು ಚುಕ್ಕಿ ಆಗಲಿದೆ.

ಚೆಂಗಲ್​ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಸಂಗೀತಾ ಅವರು ಫೆಬ್ರವರಿ 27ರಂದು ವಿಚ್ಛೇದನಕ್ಕೆ ಅರ್ಜಿ ಸಲ್ಲಿದಿದ್ದಾರೆ. ಈ ವಿಷಯದ ಬಗ್ಗೆ ವಿಜಯ್ ಅವರು ಇನ್ನೂ ಅಧಿಕೃತ ಹೇಳಿಕೆ ನೀಡುವುದು ಬಾಕಿ ಇದೆ. ನಟಿಯ ಜೊತೆ ವಿಜಯ್ ಅವರಿಗೆ ಅನೈತಿಕ ಸಂಬಂಧ ಇದೆ ಎಂದು ಪತ್ನಿ ಆರೋಪ ಮಾಡಿದ್ದು, ಕೋರ್ಟ್ ವಿಚಾರಣೆ ವೇಳೆ ಆ ನಟಿಯ ಹೆಸರು ಹೊರಬರಲಿದೆ.

ವಿಜಯ್ ಮತ್ತು ಸಂಗೀತಾ ಅವರ ಸಂಸಾರದ ವಿಚಾರಗಳು ಆದಷ್ಟು ಗುಟ್ಟಾಗಿ ಇರುತ್ತಿದ್ದವು. ಅದರ ನಡುವೆ ದಳಪತಿ ವಿಜಯ್ ಅವರ ನಟಿಯೊಬ್ಬರ ಜೊತೆ ಸಂಬಂಧ ಹೊಂದಿದ್ದಾರೆ ಎಂಬ ಗಾಸಿಪ್ ಹಬ್ಬಿತ್ತು. ಸೋಶಿಯಲ್ ಮೀಡಿಯಾದಲ್ಲಿ ಆ ಬಗ್ಗೆ ಗುಸುಗುಸು ಕೇಳಿಬರುತ್ತಿತ್ತು. ಈಗ ಸ್ವತಃ ಪತ್ನಿಯೇ ಆರೋಪ ಮಾಡಿರುವುದರಿಂದ ವದಂತಿ ನಿಜವಾದಂತಾಗಿದೆ.

ದಳಪತಿ ವಿಜಯ್ ನಟಿಸಿರುವ ಕೊನೇ ಸಿನಿಮಾ ‘ಜನ ನಾಯಗನ್’ ಇನ್ನೂ ಬಿಡುಗಡೆ ಆಗುವುದು ಬಾಕಿ ಇದೆ. ಆ ಚಿತ್ರ ತೆರೆಕಂಡ ಬಳಿಕ ಅವರು ಚಿತ್ರರಂಗದಿಂದ ಸಂಪೂರ್ಣ ದೂರ ಉಳಿದು, ರಾಜಕೀಯದಲ್ಲಿ ಸಕ್ರಿಯರಾಗಲಿದ್ದಾರೆ.

.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!