ಮೈಸೂರು ಗ್ರೇಡ್‌ 1 ಪಾಲಿಕೆಗೆ ಮಾರ್ಗಸೂಚಿ ಬದಲಾವಣೆಮಾಡಿದ ಕೇಂದ್ರ.

ಮೈಸೂರು : ಹುಬ್ಬಳ್ಳಿ-ಧಾರವಾಡ ಮಾದರಿಯಂತೆ ಮೈಸೂರು ಮಹಾನಗರ ಪಾಲಿಕೆಯನ್ನು ಗ್ರೇಡ್-1 ಪಾಲಿಕೆಯನ್ನಾಗಿಸಲು ರಾಜ್ಯ ಸರಕಾರ ಮುಂದಾಗಿದೆ.

ಬಿಬಿಎಂಪಿ ಮಾದರಿಯಲ್ಲಿ ಬೃಹತ್ ಮೈಸೂರು ಮಹಾನಗರ ಪಾಲಿಕೆ ಮಾಡಬೇಕೆಂಬ ಪ್ರಸ್ತಾವನೆಯನ್ನು ರಾಜ್ಯ ಸರಕಾರ ಕೈ ಬಿಟ್ಟಿರುವುದರಿಂದ ಗ್ರೇಡ್-1 ಪಾಲಿಕೆಯನ್ನಾಗಿಸಬೇಕೆಂದು ಪಾಲಿಕೆ ಆಯುಕ್ತರು ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಶೀಘ್ರದಲ್ಲಿಯೇ ಅನುಮೋದನೆ ದೊರೆಯುವ ನಿರೀಕ್ಷೆ ಇದೆ. ಜತೆಗೆ ಪಾಲಿಕೆ ಸುತ್ತಲಿನ ಸ್ಥಳೀಯ ಸಂಸ್ಥೆಗಳು ಕೂಡ ಸೇರ್ಪಡೆಯಾಗಲಿವೆ.

ಬೆಂಗಳೂರು-ಮೈಸೂರು ದಶಪಥ ರಸ್ತೆ , ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅಂತಾರಾಷ್ಟ್ರೀಯ ಕ್ರೀಡಾಂಗಣ ಸೇರಿದಂತೆ ನಾನಾ ಯೋಜನೆಗಳ ಅನುಷ್ಠಾನದಿಂದ ಮೈಸೂರು ಪಾಲಿಕೆಯನ್ನು ಬೃಹತ್ ಪಾಲಿಕೆ ಮಾಡಬೇಕೆಂಬ ಚರ್ಚೆ ಶುರುವಾಗಿತ್ತು. ಈ ಹಿನ್ನೆಲೆಯಲ್ಲಿ ಮೈಸೂರಿನ ಹೊರವಲಯದ ಹೂಟಗಳ್ಳಿ ನಗರಸಭೆ, ಶ್ರೀರಾಂಪುರ, ರಮ್ಮನಹಳ್ಳಿ, ಬೋಗಾದಿ, ಕಡಕೊಳ ಪಟ್ಟಣ ಪಂಚಾಯಿತಿಯೊಂದಿಗೆ ಎಂಟು ಗ್ರಾಪಂಗಳನ್ನು ಸೇರಿಸಿಕೊಂಡು ಬೃಹತ್ ಪಾಲಿಕೆಯನ್ನಾಗಿ ರಚನೆ ಮಾಡಲು ಪ್ರಸ್ತಾವನೆ ತಯಾರಿಸಲಾಗಿತ್ತು.

ನಂತರ, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರ ಅಧ್ಯಕ್ಷತೆಯಲ್ಲಿ ಕರೆದಿದ್ದ ಸಭೆಯಲ್ಲಿಪಾಲಿಕೆ ಅಕಾರಿಗಳು ವಿಷಯ ಮಂಡಿಸಲು ಸಿದ್ಧತೆ ಮಾಡಿಕೊಂಡಿದ್ದರು. ಈ ನಡುವೆ ಕಾಂಗ್ರೆಸ್ನ ಕೆಲ ನಾಯಕರು ಸಿಎಂ ಅವರಿಗೆ ಬೃಹತ್ ಪಾಲಿಕೆಯನ್ನಾಗಿ ಮಾಡದಂತೆ ಒತ್ತಡ ಹೇರಿದ್ದರು. ಇದರಿಂದ ಸಿಎಂ ಕೂಡ ಸಭೆ ನಡೆಸಲು ನಿರಾಸಕ್ತಿ ತೋರಿಸಿದ್ದರು. ಬಳಿಕ ಸಿಎಂ ಸೂಚನೆ ಮೇರೆಗೆ ಗ್ರೇಡ್-1 ಪಾಲಿಕೆ ಮಾಡುವ ಸಂಬಂಧ ಪಾಲಿಕೆ ಅಕಾರಿಗಳು ಪ್ರಸ್ತಾವನೆ ಸಿದ್ಧಪಡಿಸಿ ಸರಕಾರಕ್ಕೆ ಸಲ್ಲಿಸಿದ್ದಾರೆ.

ಗ್ರೇಡ್ 1 ಪಾಲಿಕೆಯನ್ನಾಗಿಸಲು ಅಗತ್ಯವಿರುವ 15 ಲಕ್ಷ ಜನಸಂಖ್ಯೆಯನ್ನು ಮೈಸೂರು ಹೊಂದಿದೆ. ಪಾಲಿಕೆ ಸುತ್ತಲಿನ ನಗರ ಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳನ್ನು ಸೇರ್ಪಡೆ ಮಾಡಿಕೊಂಡರೆ 16 ಲಕ್ಷ ಜನಸಂಖ್ಯೆಯಾಗಲಿದೆ.

 

ಸದ್ಯಕ್ಕಿಲ್ಲ ಚುನಾವಣೆ:
2023 ರ ನ. 14 ರಂದು ಜನಪ್ರತಿನಿಗಳ ಆಡಳಿತ ಮುಗಿದಿದ್ದು, ಸದ್ಯಕ್ಕೆ ಚುನಾವಣೆ ನಡೆಯುವುದು ಅನುಮಾನವಾಗಿದೆ. ಗ್ರೇಡ್-1 ಪಾಲಿಕೆ ರಚನೆಯಾದ ನಂತರ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳ್ಳಲು ಅಂದಾಜು ಒಂದು ವರ್ಷವಾದರೂ ಸಮಯ ಬೇಕಾಗುವ ಕಾರಣ ಅಲ್ಲಿಯವರೆಗೆ ಆಕಾಂಕ್ಷಿಗಳು ಕಾಯಬೇಕಿದೆ.

ಜನಸಂಖ್ಯೆ ಕೊರತೆಯಿಂದಾಗಿ ಮೈಸೂರು ಮಹಾ ನಗರ ಪಾಲಿಕೆಯನ್ನು ಬೃಹತ್ ಮಹಾನಗರ ಪಾಲಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿಗ್ರೇಡ್ 1 ಪಾಲಿಕೆಯನ್ನಾಗಿಸಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆ. ಆದಷ್ಟು ಬೇಗ ಪಾಲಿಕೆಯ ಪ್ರಸ್ತಾವನೆಗೆ ಸರಕಾರ ಅನುಮೋದನೆ ನೀಡಿ ಸ್ಥಳೀಯ ಸಂಸ್ಥೆಯ ಚುನಾವಣೆ ನಡೆಸಲಿ -ಜಿ.ಟಿ.ದೇವೇಗೌಡ, ಶಾಸಕ.

ವಿಶೇಷ ಅನುದಾನ:
ಮೈಸೂರು ನಗರ ಪಾಲಿಕೆಯನ್ನು ಗ್ರೇಡ್-1 ಪಾಲಿಕೆಯಾಗಿ ಮೇಲ್ದರ್ಜೆಗೇರಿಸಿದರೆ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಹೆಚ್ಚಿನ ಅನುದಾನ ಸಿಗುವ ಅವಕಾಶವಿರುತ್ತದೆ. ಗ್ರೇಡ್- 1 ಸಿಟಿಗಳಿಗೆ ಸಿಗುವ ವಿಶೇಷ ಸವಲತ್ತುಗಳು ಕೇಂದ್ರದಿಂದ ಸಿಗಲಿದೆ. ಜತೆಗೆ ಪಾಲಿಕೆಯ ವ್ಯಾಪ್ತಿಯ ಪ್ರದೇಶಗಳೊಂದಿಗೆ ಸುತ್ತಲಿನ ಸ್ಥಳೀಯ ಸಂಸ್ಥೆಗಳ ಪ್ರದೇಶಗಳನ್ನು ಸೇರ್ಪಡೆಗೊಳಿಸಲು ಅವಕಾಶವಾಗಲಿದೆ ಎನ್ನುತ್ತಾರೆ ಪಾಲಿಕೆ ಅಧಿಕಾರಿಗಳು.

 

ಮೈಸೂರು ಮಹಾನಗರ ಪಾಲಿಕೆಯನ್ನು ಗ್ರೇಡ್ 1 ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವ ಸಂಬಂಧ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರದಲ್ಲಿಯೇ ಅನುಮೋದನೆ ದೊರೆಯುವ ನಿರೀಕ್ಷೆ ಇದೆ -ದಾಸೇಗೌಡ, ಉಪ ಆಯುಕ್ತ(ಅಭಿವೃದ್ಧಿ), ಮೈಸೂರು ಮಹಾ ನಗರ ಪಾಲಿಕೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!