ಯಾವ ವಿಮಾನಕ್ಕಿಂತಲೂ ಕಮ್ಮಿಯಿಲ್ಲ ಈ ಕ್ಯಾಬ್‌ನಲ್ಲಿರುವ ಸೌಲಭ್ಯ!

ನಗರ ಪ್ರದೇಶಗಳಲ್ಲಿ ಹೆಚ್ಚಿನವರು ಅನುಕೂಲಕರ ಪ್ರಯಾಣವೆಂದು ಓಲಾ, ಉಬರ್ನಂತಹ ಕ್ಯಾಬ್ಗಳಲ್ಲೇ ಹೆಚ್ಚಾಗಿ ಓಡಾಡುತ್ತಿರುತ್ತಾರೆ. ಆದ್ರೆ ಹೆಚ್ಚಾಗಿ ಕ್ಯಾಬ್ ಡ್ರೈವರ್ಸ್ಗಳು ಸಮಯಕ್ಕೆ ಸರಿಯಾಗಿ ಬರೊಲ್ಲ, ಹೆಚ್ಚು ಹಣ ಪೀಕುತ್ತಾರೆ, ಗ್ರಾಹಕರೊಂದಿಗೆ ಸರಿಯಾಗಿ ವರ್ತನೆಯನ್ನು ತೋರುತ್ತಿಲ್ಲ ಎನ್ನೋ ದೂರುಗಳೇ ಕೇಳಿ ಬರುತ್ತಿರುತ್ತವೆ. ಈ ಎಲ್ಲಾ ಸಂಗತಿಗಳ ನಡುವೆ ಇಲ್ಲೊಬ್ರು ಕ್ಯಾಬ್ ಡ್ರೈವರ್ ಕಾರ್ಯ ಎಲ್ಲರ ಮನ ಗೆದ್ದಿದೆ. ಸಾಮಾನ್ಯವಾಗಿ ವಿಮಾನಗಳಲ್ಲಿ ಊಟ, ತಿಂಡಿಯಿಂದ ಹಿಡಿದು ಪ್ರಯಾಣಿಕರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಆದ್ರೆ ಇಲ್ಲೊಬ್ರು ಕ್ಯಾಬ್ ಡ್ರೈವರ್ ನಾನೇನು ಕಮ್ಮಿಯಿಲ್ಲ ಎನ್ನುತ್ತಾ ವಿಮಾನಗಳಿಗಿಂತಲೂ ಉತ್ತಮವಾದ ಕ್ಯಾಬ್ ಸೇವೆಯನ್ನು ತಮ್ಮ ಪ್ರಯಾಣಿಕರಿಗೆ ಒದಗಿಸುತ್ತಿದ್ದಾರೆ. ಹೌದು ಇವರು ಉಚಿತ ತಿಂಡಿ, ನೀರಿನಿಂದ ಹಿಡಿದು ವೈ-ಫೈ ವರೆಗೆ ತಮ್ಮ ಕ್ಯಾಬ್ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗಾಗಿ ಎಲ್ಲಾ ರೀತಿಯ ಸೌಲಭ್ಯವನ್ನು ಒದಗಿಸಿಕೊಡುತ್ತಿದ್ದಾರೆ. ಈ ಕುರಿತ ಫೋಟೊವೊಂದು ಇದೀಗ ಸಖತ್ ವೈರಲ್ ಆಗುತ್ತಿದೆ.
ದೆಹಲಿ ಮೂಲದ ಉಬರ್ ಚಾಲಕ ತಮ್ಮ ಕ್ಯಾಬ್ನಲ್ಲಿ ಪ್ರಯಾಣಿಕರಿಗೆ ಐಷಾರಾಮಿ ಸೇವೆಯನ್ನು ಒದಗಿಸುತ್ತಿದ್ದಾರೆ. ಕ್ಯಾಬ್ ಡ್ರೈವರ್ ಅಬ್ದುಲ್ ಖದೀರ್ ವಿಮಾನಗಳಿಗಿಂತಲೂ ಉತ್ತಮವಾದ ಕ್ಯಾಬ್ ಸೇವೆಯನ್ನು ತಮ್ಮ ಪ್ರಯಾಣಿಕರಿಗೆ ಒದಗಿಸುತ್ತಿದ್ದಾರೆ. ಇವರು ಪ್ರಯಾಣಿಕರಿಗಾಗಿ ಕ್ಯಾಬ್ನಲ್ಲಿ ಉಚಿತ ತಿಂಡಿಗಳು, ನೀರಿನ ಬಾಟಲ್, ತಂಪು ಪಾನೀಯ, ಕ್ಯಾಂಡಿ, ಚೂಯಿಂಗ್ಗಮ್, ಸುಗಂಧ ದ್ರವ್ಯ, ಪ್ರಥಮ ಚಿಕಿತ್ಸಾ ಕಿಟ್, ಹ್ಯಾಂಡ್ ಸ್ಯಾನಿಟೈಸರ್, ಔಷಧಗಳು, ಇಯರ್ಬಡ್, ಟಿಷ್ಯೂ ಪೇಪರ್, ನ್ಯೂಸ್ ಪೇಪರ್, ನಿಯತಕಾಲಿಕೆ, ವೈಫೈ ಎಲ್ಲಾ ರೀತಿಯ ಸೌಲಭ್ಯಗಳನ್ನು ಸಹ ಒದಗಿಸಿಕೊಡುತ್ತಿದ್ದಾರೆ.
ಈ ಕುರಿತ ಪೋಸ್ಟ್ ಒಂದನ್ನು r/delhi ಹೆಸರಿನ ರೆಡ್ಡಿಟ್ ಪೇಜ್ ಒಂದರಲ್ಲಿ ಶೇರ್ ಮಾಡಲಾಗಿದೆ. ವೈರಲ್ ಆಗುತ್ತಿರುವ ಈ ಫೋಟೋದಲ್ಲಿ ಕ್ಯಾಬ್ ಒಂದರಲ್ಲಿ ನೀರು, ಜ್ಯೂಸ್, ತಿಂಡಿಗಳಿಂದ ಹಿಡಿದು ಔಷಧಗಳವರೆಗೆ ಪ್ರಯಾಣಿಕರಿಗೆ ಅಗತ್ಯವಾಗಿ ಬೇಕಾದಂತಹ ಎಲ್ಲಾ ರೀತಿಯ ಸೌಲಭ್ಯಗಳಿರುವಂತಹ ದೃಶ್ಯವನ್ನು ಕಾಣಬಹುದು.
ಮೂರು ದಿನಗಳ ಹಿಂದೆ ಶೇರ್ ಮಾಡಲಾದ ಈ ಪೋಸ್ಟ್ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ಚಾಲಕನಿಗೆ ದೇವರು ಒಳ್ಳೆಯದು ಮಾಡಲಿʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಬಹುಶಃ ವಿಮಾನದಲ್ಲಿಯೂ ಇಷ್ಟು ಸೌಲಭ್ಯ ಇಲ್ಲ ಎಂದು ಕಾಣುತ್ತೆʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼನಾನು ಕೂಡಾ ಈ ಕ್ಯಾಬ್ನಲ್ಲಿ ಪ್ರಯಾಣಿಸಿದ್ದೆ, ಆ ಚಾಲಕ ತುಂಬಾ ಒಳ್ಳೆಯ ವ್ಯಕ್ತಿʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಚಾಲಕನ ಈ ಉತ್ತಮ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!