ನಾಳೆ ಹಳದಿ ಲೈನ್ ಮೆಟ್ರೋಗೆ ಹಸಿರು ನಿಶಾನೆ ತೋರಲಿರುವ ಪ್ರಧಾನಿ. ನಾಳಿನ ವೇಳಾಪಟ್ಟಿ ಹೀಗಿದೆ ?

ಹಲವು ವರ್ಷಗಳ ಬಳಿಕ ನನಸಾಗಿರೋ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಚಾರ ಆರಂಭಕ್ಕೆ ಕೌಂಟ್​ ಡೌನ್ ಆರಂಭವಾಗಿದೆ. ನಾಳೆ ಹಳದಿ ಮಾರ್ಗಕ್ಕೆ ದೇಶದ ಪ್ರಧಾನಿ ಹಸಿರು ನಿಶಾನೆ ತೋರಲಿದ್ದಾರೆ. ರಾಜ್ಯರಾಜಧಾನಿಯಲ್ಲಿ ಸಂಚಾರಕ್ಕೆ ಸಿದ್ದಗೊಂಡಿರೋ ಹಳದಿ ಲೈನ್ ಮೆಟ್ರೋಗೆ ಹಸಿರು ನಿಶಾನೆ ತೋರಲು ಪ್ರಧಾನಿ ಮೋದಿ ಆಗಸ್ಟ್​ 10ರಂದು (ನಾಳೆ) ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಲ್ಲದೇ ಮೂರು ವಂದೇ ಭಾರತ್ ರೈಲುಗಳಿಗೂ ಮೋದಿ ಅಂದು ಚಾಲನೆ ನೀಡಲಿದ್ದಾರೆ. ಬೆಂಗಳೂರು-ಬೆಳಗಾವಿ, ಅಮೃತಸರ-ಮಾತಾ ವೈಷ್ಣೋದೇವಿ, ನಾಗಪುರ-ಪುಣೆ ಮಾರ್ಗದ ವಂದೇ ಭಾರತ್ ರೈಲುಗಳನ್ನ ಮೋದಿ ಉದ್ಘಾಟಿಲಿದ್ದಾರೆ.. ಇದೇ ವೇಳೆ ನಮ್ಮ ಮೆಟ್ರೋದ 3ನೇ ಹಂತದ 2 ಕಾರಿಡಾರ್‌ಗಳಿಗೂ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ರಾಜಧಾನಿಗೆ ನಮೋ! ನಾಳೆ ಪ್ರಧಾನಿ ವೇಳಾಪಟ್ಟಿ ಏನು ?

    • ನಾಳೆ ಬೆಳಗ್ಗೆ 7.50ಕ್ಕೆ ದೆಹಲಿಯಿಂದ ಹೊರಡಲಿರುವ ಮೋದಿ
    • ಬೆ.10.30ಕ್ಕೆ ಬೆಂಗಳೂರು HAL ವಿಮಾನ ನಿಲ್ದಾಣಕ್ಕೆ ಮೋದಿ ಆಗಮನ
    • ಬೆ.10.50ಕ್ಕೆ ಹೆಲಿಕಾಪ್ಟರ್‌ನಲ್ಲಿ ಹೆಚ್‌ಕ್ಯೂಟಿಸಿ ಹೆಲಿಪ್ಯಾಡ್‌ಗೆ ಆಗಮನ
    • ಬೆ.11ಕ್ಕೆ ರಸ್ತೆ ಮೂಲಕ ಸಂಗೊಳ್ಳಿ ರಾಯಣ್ಣ ಸಿಟಿ ರೈಲ್ವೆ ನಿಲ್ದಾಣಕ್ಕೆ ಎಂಟ್ರಿ
    • ಬೆ.11.15ಕ್ಕೆ ರೈಲ್ವೆ ನಿಲ್ದಾಣದಲ್ಲಿ 3 ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ
    • ಬೆ.11.45ಕ್ಕೆ ರಸ್ತೆ ಮಾರ್ಗವಾಗಿ ರಾಗಿಗುಡ್ಡದ ಮೆಟ್ರೋ ನಿಲ್ದಾಣಕ್ಕೆ ಆಗಮನ
    • ಬೆ.11.50 ರಿಂದ ಮ.12.50ವರೆಗೂ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ
    • ಮೆಟ್ರೋ ರೈಲಿನಲ್ಲಿಯೇ ಎಲೆಕ್ಟ್ರಾನಿಕ್‌ ಸಿಟಿ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣ
    • ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ನಮ್ಮ ಮೆಟ್ರೋದ 3ನೇ ಹಂತಕ್ಕೆ ಶಂಕುಸ್ಥಾಪನೆ
    • ಮ.1 ರಿಂದ 2 ಗಂಟೆವರೆಗೂ IIIT ಆಡಿಟೋರಿಯಂನಲ್ಲಿ ಕಾರ್ಯಕ್ರಮ
    • ಮ.2.05ಕ್ಕೆ ಹೆಲಿಕಾಪ್ಟರ್‌ನಲ್ಲಿ HAL ವಿಮಾನ ನಿಲ್ದಾಣಕ್ಕೆ ನಮೋ ವಾಪಸ್
    • ಮ.2.40ಕ್ಕೆ HAL ವಿಮಾನ ನಿಲ್ದಾಣದಿಂದ ದೆಹಲಿಗೆ ಮೋದಿಯ ಪ್ರಯಾಣ

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!