ರಾಜ್ಯ ಸರ್ಕಾರ 3 ವರ್ಷಗಳಲ್ಲಿ ಭರ್ತಿ ಮಾಡಿರುವ ಉದ್ಯೋಗ ಕೇವಲ 8 ಸಾವಿರ?

ಫೆಬ್ರವರಿ 25: ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ ಬೆನ್ನಲ್ಲೇ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ಕಳೆದ 2.5 ವರ್ಷಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು ವಿವಿಧ ಇಲಾಖೆಗಳಲ್ಲಿ ಮಾಡಲಾಗಿದೆ ಎಂದು ತಿಳಿಸಿದ್ದರು. ಆದ್ರೆ ಮುಖ್ಯಮಂತ್ರಿಗಳ ಹೇಳಿಕೆ ಹಸೀ ಸುಳ್ಳು ಎಂದು ವಿಪಕ್ಷ ಬಿಜೆಪಿ ಆರೋಪಿಸಿದ್ದು, ಮಿಂಚಿನ ವೇಗಕ್ಕಿಂತಲೂ ಸಿದ್ದರಾಮಯ್ಯನವರು ಹೇಳುವ ಸುಳ್ಳಿನ ವೇಗವೇ ಹೆಚ್ಚು ಎಂದು ವ್ಯಂಗ್ಯವಾಡಿದೆ.

ಬಿಜೆಪಿ ಆರೋಪವೇನು?

ಸುಳ್ಳು ಹೇಳಿದರೂ ಸತ್ಯದ ತಲೆ ಮೇಲೆ ಹೊಡೆದಂತೆ ಹೇಳಬೇಕು ಎಂಬ ನಾಣ್ಣುಡಿ ಇದೆ. ಆದರೆ ಸಿದ್ದರಾಮಯ್ಯ ಅವರು ಸತ್ಯದ ತಲೆ ಮೇಲೆ ಮಾತ್ರವಲ್ಲ, ಸತ್ಯದ ಪೂರ್ತಿ ದೇಹದ ಮೇಲೆಯೇ ಹೊಡೆಯುವಂತಹ ಸುಳ್ಳು ಹೇಳಿದ್ದಾರೆ. ತಮ್ಮ ಕರ್ನಾಟಕ ನಿರ್ನಾಮದ ಬೋಗಸ್‌ ಗ್ಯಾರಂಟಿ ಸರ್ಕಾರದ ಈ ಅವಧಿಯಲ್ಲಿ 40 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ ಎಂದು ನಿನ್ನೆ ಹಸಿಹಸಿ ಸುಳ್ಳು ಹೇಳಿದ್ದರು. ಆದರೆ ಕಾಂಗ್ರೆಸ್​​ ಸರ್ಕಾರದ ಈ ಅವಧಿಯಲ್ಲಿ ನೇಮಕಾತಿ ಪೂರ್ಣಗೊಂಡ ಸರ್ಕಾರಿ ಹುದ್ದೆಗಳು ಕೇವಲ 8,157 ಹಾಗೂ ನೇಮಕಾತಿ ಪ್ರಗತಿಯಲ್ಲಿರುವ ಹುದ್ದೆಗಳು ಕೇವಲ 3,081. ಈ ಮಾಹಿತಿಯನ್ನು ಸ್ವತಃ ಸಿಎಂ ಸಿದ್ದರಾಮಯ್ಯನವರೇ ಎರಡು ತಿಂಗಳ ಹಿಂದೆ ನಡೆದ ಚಳಿಗಾಲದ ಅಧಿವೇಶನದಲ್ಲಿ ತಿಳಿಸಿದ್ದಾರೆ ಎಂದು ಬಿಜೆಪಿ ಹೇಳಿದೆ.

2025ರ ಡಿಸೆಂಬರ್​​ 18ರಂದು ಈ ಬಗ್ಗೆ ಸತ್ಯ ಮಾಹಿತಿ ನೀಡಿದ್ದ ಸಿಎಂ 2026ರ ಫೆಬ್ರವರಿ 24ರಂದು ಸುಳ್ಳು ಹೇಳಿದ್ದಾರೆ. ಸತ್ಯ ಏನೆಂಬುದು ತಿಳಿದಿದ್ದರೂ, ಸಿಎಂ ಹುದ್ದೆಯಲ್ಲಿ ಕುಳಿತು ಹೀಗೆ ಹಸಿಹಸಿ ಸುಳ್ಳು ಹೇಳುವುದಕ್ಕೆ ಅವರಿಗೆ ನಾಚಿಕೆಯಾಗಬೇಕು ಎಂದು ವಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಸದನದ ಒಳಗೊಂದು ಮಾಹಿತಿ, ಹೊರಗೆ ಸುಳ್ಳಿನ ಪ್ರದರ್ಶನ ಮಾಡಿ ಇನ್ನೂ ಎಷ್ಟು ದಿನ ಜನರನ್ನು ವಂಚಿಸುವಿರಿ? ಜನರ ಮುಂದೆ, 40,000 ಹುದ್ದೆ ಭರ್ತಿ ಮಾಡಿದ್ದೇವೆ ಎಂದು ಹಸಿ ಸುಳ್ಳು ಹೇಳುವುದು ರಾಜ್ಯದ ನಿರುದ್ಯೋಗಿ ಯುವಜನತೆಗೆ ಮಾಡುತ್ತಿರುವ ನೇರ ವಂಚನೆಯಲ್ಲವೇ? ರಾಜ್ಯದ ಅತಿ ದೀರ್ಘಾವಧಿ ಮುಖ್ಯಮಂತ್ರಿಗಳಾಗಿರುವ ತಾವೇ ಈ ರೀತಿ ರಾಜ್ಯದ ಜನತೆಯ ದಾರಿ ತಪ್ಪಿಸಿದರೆ ಹೇಗೆ? ದಯವಿಟ್ಟು ಸುಳ್ಳಿನ ಪ್ರಚಾರ ನಿಲ್ಲಿಸಿ, ಯುವಜನರ ಆಕ್ರೋಶ, ನೋವನ್ನು ಅರ್ಥಮಾಡಿಕೊಳ್ಳಿ. ಪರಿಸ್ಥಿತಿ ಕೈಮೀರುವ ಮುನ್ನ ಬಾಕಿ ಇರುವ ನೇಮಕಾತಿ ಪ್ರಕ್ರಿಯೆಗಳನ್ನು ಕೂಡಲೇ ಪೂರ್ಣಗೊಳಿಸಿ, ನಮ್ಮ ಯುವಜನತೆಗೆ ನ್ಯಾಯ ಒದಗಿಸಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಕೌಂಟರ್​​ ಕೊಟ್ಟಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!