ನನ್ನ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ… : ಸಿಎಂ ಸಿದ್ದರಾಮಯ್ಯ

ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಿಟ್ ಅರ್ಜಿಯಲ್ಲಿ ಮಧ್ಯಂತರ ಪರಿಹಾರವಾಗಿ ಪ್ರಾಸಿಕ್ಯೂಷನ್ ಗೆ ತಡೆಯಾಜ್ಞೆ ನೀಡಬೇಕೆಂದು ಕೋರಲಾಗಿದೆ. ಈ ರಿಟ್ ಅರ್ಜಿಯ ಬಗ್ಗೆ ಖ್ಯಾತ ವಕೀಲರಾದ ಶ್ರೀ ಅಭಿಷೇಕ್ ಮನು ಸಿಂಗ್ವಿಯವರು ವಾದ ಮಂಡಿಸಲಿದ್ದಾರೆ. ನನ್ನ ಆತ್ಮಸಾಕ್ಷಿ ಸ್ಪಷ್ಟವಾಗಿದ್ದು, ನಾನು ಯಾವ ತಪ್ಪನ್ನೂ ಎಸಗಿಲ್ಲ. ನಾನು ಮಂತ್ರಿಯಾಗಿ 40 ವರ್ಷಗಳು ಕಳೆದಿದ್ದು, ಈ ಅವಧಿಯಲ್ಲಿ ನನ್ನ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ. ಜನರ ಆಶೀರ್ವಾದದಿಂದ ಅವರ ಸೇವೆಯಲ್ಲಿ ನಿರತನಾಗಿದ್ದೇನೆ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ. ನಾನು ಯಾವುದೇ ತಪ್ಪು ಮಾಡಿಲ್ಲವೆಂದು ರಾಜ್ಯದ ಜನರಿಗೂ ತಿಳಿದಿದೆ ಎಂದರು.

ಬಿಜೆಪಿಯವರು ಸಿಎಂ ರಾಜಿನಾಮೆ ಬೇಡಿಕೆಯಿರಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ರಾಜಭವನವನ್ನು ಬಳಸಿಕೊಂಡು ಬಿಜೆಪಿ, ಜೆಡಿಎಸ್ ಹಾಗೂ ಕೇಂದ್ರಸರ್ಕಾರದವರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ದುರುದ್ದೇಶದಿಂದ ನನ್ನ ಮೇಲೆ ಬಸಿ ಬಳಿಯಲು ಇಂತಹ ಕೃತ್ಯಕ್ಕೆ ಕೈಹಾಕಿದ್ದಾರೆ. ಬಿಜೆಪಿಯವರು ದುರುದ್ದೇಶದಿಂದ ಪ್ರತಿಭಟನೆ ಮಾಡುತ್ತಿದ್ದು, ರಾಜಕೀಯವಾಗಿ ಇದನ್ನು ಎದಿರುಸುತ್ತೇವೆ. ಈ ಪಿತೂರಿಯ ವಿರುದ್ಧ ಕಾನೂನು ಹಾಗೂ ರಾಜಕೀಯ ಹೋರಾಟವನ್ನು ಕೈಗೊಳ್ಳುತ್ತೇವೆ. ಇಂತಹ ರಾಜಕೀಯ ಹೋರಾಟಗಳನ್ನು ನಿರಂತರವಾಗಿ ಮಾಡಿಕೊಂಡುಬಂದಿದ್ದು, ಇನ್ನೂ ಹೆಚ್ಚಿನ ಸ್ಪೂರ್ತಿಯೊಂದಿಗೆ ಹೋರಾಡುತ್ತೇನೆ ಎಂದರು.

ಪ್ರತಿಪಕ್ಷಗಳಿಗೆ ಸಿಎಂ ಅವರಿಂದ ಭಯ ಕಾಡುತ್ತಿದ್ದು, ಅವರನ್ನೇ ಗುರಿಮಾಡಿಕೊಂಡು ಆಪಾದನೆ ಮಾಡುತ್ತಿರುವ ಬಗೆಗಿನ ಪ್ರಶ್ನೆಗೆ ಉತ್ತರಿಸುತ್ತಾ, ನಾನು ಬಡಜನರ ಪರವಾಗಿರುವುದೇ ಪ್ರತಿಪಕ್ಷಗಳ ಭಯಕ್ಕೆ ಕಾರಣವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿರುವುದು ಅವರನ್ನು ಕಾಡುತ್ತಿದೆ. ಸಿದ್ದರಾಮಯ್ಯನನ್ನು ರಾಜಕೀಯವಾಗಿ ಮುಗಿಸಿದರೆ, ಕಾಂಗ್ರೆಸ್ ಪಕ್ಷವನ್ನು ಮುಗಿಸಬಹುದು ಎಂಬ ಭ್ರಮೆಯಲ್ಲಿ ಪ್ರತಿಪಕ್ಷಗಳಿವೆ ಎಂದರು.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ