ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸಿದ್ದರು:ಇತಿಹಾಸ ತಿರುಚಬೇಡಿ, ಸಿಎಂ ಸಿದ್ದರಾಮಯ್ಯ

ಮೈಸೂರು: ನಾಡಹಬ್ಬ ಮೈಸೂರು ದಸರಾಗೆ ಚಾಲನೆ ಸಿಕ್ಕಿದೆ. ಇಂದು ಲೇಖಕಿ ಬಾನು ಮುಷ್ತಾಕ್ ಅವರು ತಾಯಿ ಚಾಮುಂಡೇಶ್ವರಿ ಪುಷ್ಪಾರ್ಚನೆ ಮಾಡಲು ಮೂಲಕ ಉದ್ಘಾಟಿಸಿದರು. ಇನ್ನು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸಿದ್ದರು ಇತಿಹಾಸ ತಿರುಚಬೇಡಿ ಎಂದರು.

ವಿಜಯನಗರ ಕಾಲದಲ್ಲಿ ದಸರಾ ಆಚರಣೆ ಮಾಡುತ್ತಿದ್ದರು. ಬಳಿಕ ವಿಜಯನಗರ ಸಾಮ್ರಾಜ್ಯ ಪತನವಾದ ಸಂದರ್ಭದಲ್ಲಿ ಮೈಸೂರು ಅರಸರು ಆಚರಣೆ ಮಾಡಿದರು. ನಂತರ ಶ್ರೀರಂಗಪಟ್ಟಣದಲ್ಲಿ ಹೈದರಾಲಿ ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಣೆ ಮಾಡಿದ್ದರು. ಎಲ್ಲರೂ ಇತಿಹಾಸವನ್ನ ತಿಳಿದುಕೊಳ್ಳಬೇಕು. ಆ ಕಾರಣಕ್ಕಾಗಿಯೇ ಸಂವಿಧಾನದ ಪೀಠಿಕೆಯನ್ನು ಪ್ರತಿಯೊಂದು ಶಾಲೆಯಲ್ಲೂ ಓದಬೇಕೆಂದು ಮಾಡಿದ್ದೇವೆ. ಇತಿಹಾಸವನ್ನ ತಿರುಚಿ ರಾಜಕೀಯಕ್ಕೋಸ್ಕರ ಮಾಡಬಾರದು. ರಾಜಕೀಯ ಮಾಡೋಣ ಅಂದ್ರೆ ಬಹಳಷ್ಟು ಇದೆ. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಮಾಡೋಣ. ಇಲ್ಲ ಸಲ್ಲದ ದ್ವೇಷಕ್ಕೋಸ್ಕರ ರಾಜಕಾರಣ ಮಾಡಬಾರದು ಎಂದು ಹೇಳಿದರು.

ಈ ಮೂಲಕ ಟಿಪ್ಪು ಸುಲ್ತಾನ್ ಸಹ ದಸರಾ ಆಚಣೆ ಮಾಡಿದ್ದಾರಾ ಎನ್ನುವ ಚರ್ಚೆಗಳು ಶುರುವಾಗಿದ್ದು, ಈ ಬಗ್ಗೆ ಇತಿಹಾಸಕಾರರು ದಸರಾದ ನಿಜವಾದ ಇತಿಹಾಸವನ್ನು ಈಗಿನ ಪೀಳಿಗೆಗೆ ತಿಳಿಸಬೇಕಿದೆ.

Related Posts

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

You Missed

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!