ಏ.1ರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಏರಿಕೆ

ನವದೆಹಲಿ: ಏ.1ರಿಂದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರಗಳಲ್ಲಿ ಹೆಚ್ಚಳವಾಗಲಿದ್ದು, ಪ್ರಯಾಣ ವೆಚ್ಚ ಮತ್ತಷ್ಟು ಏರಿಕೆಯಾಗಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರತಿ ವರ್ಷದಂತೆ ಈ ಬಾರಿಯೂ ಟೋಲ್ ದರಗಳನ್ನು ಪರಿಷ್ಕರಿಸಿದ್ದು, 4%ನಿಂದ 5%ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ದರ ಏರಿಕೆ ಕಾರು, ಬಸ್, ಲಾರಿ ಸೇರಿದಂತೆ ಎಲ್ಲಾ ವಾಹನಗಳಿಗೆ ಅನ್ವಯವಾಗಲಿದೆ. ಹೆದ್ದಾರಿಗಳ ನಿರ್ವಹಣೆ, ದುರಸ್ತಿ ಹಾಗೂ ಅಭಿವೃದ್ಧಿ ವೆಚ್ಚಗಳನ್ನು ಗಣನೆಗೆ ತೆಗೆದುಕೊಂಡು ಈ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ಎನ್‌ಹೆಚ್‌ಎಐ ಅಧಿಕಾರಿಗಳು ಹೇಳಿದ್ದಾರೆ.

ಕರ್ನಾಟಕದಲ್ಲಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್‌ವೇ ಸೇರಿದಂತೆ 8 ಇತರ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಈ ಏರಿಕೆಯ ಪರಿಣಾಮ ಬೀರಲಿದೆ. ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್‌ವೇಯಲ್ಲಿ ಟೋಲ್ ಸಂಗ್ರಹ ಆರಂಭವಾದ 2023ರ ಏ.1ರಿಂದ ಇದು ನಾಲ್ಕನೇ ಬಾರಿಗೆ ದರ ಏರಿಕೆಯಾಗುತ್ತಿದೆ. ಹಿಂದೆ 2023ರ ಜೂನ್‌ನಲ್ಲಿ ಘೋಷಿಸಲಾದ 22% ಏರಿಕೆಯನ್ನು ಜನರ ವಿರೋಧದಿಂದ ಹಿಂಪಡೆಯಲಾಗಿತ್ತು. ಆದರೆ ವಾರ್ಷಿಕವಾಗಿ ಸುಮಾರು 5% ಏರಿಕೆಯನ್ನು ಮುಂದುವರೆಸಲಾಗುತ್ತಿದೆ.

ಇದಲ್ಲದೆ, ಫಾಸ್ಟ್ಟ್ಯಾಗ್ ಬಳಕೆಯನ್ನು ಉತ್ತೇಜಿಸಲು ಹೊಸ ನಿಯಮಗಳನ್ನು ಜಾರಿಗೊಳಿಸಲಾಗುತ್ತಿದೆ. ಫಾಸ್ಟ್ಟ್ಯಾಗ್‌ನಲ್ಲಿ ಸಾಕಷ್ಟು ಬ್ಯಾಲೆನ್ಸ್ ಇಲ್ಲದಿದ್ದರೆ ಅಥವಾ ತಾಂತ್ರಿಕ ದೋಷದಿಂದ ಪಾವತಿ ವಿಫಲವಾದರೆ ಡಬಲ್ ಟೋಲ್ ಶುಲ್ಕ ವಿಧಿಸಲಾಗುವುದು. ಇದರಿಂದ ಟೋಲ್ ಪ್ಲಾಜಾಗಳಲ್ಲಿ ವಾಹನ ಸಂಚಾರದ ದಟ್ಟಣೆ ಕಡಿಮೆಯಾಗುವ ನಿರೀಕ್ಷೆ ಇದೆ.
ಪ್ರತಿ ವರ್ಷ ಏಪ್ರಿಲ್ 1ರಿಂದ ಟೋಲ್ ದರಗಳ ಪರಿಷ್ಕರಣೆಯನ್ನು ಮಾಡುವ ಪದ್ಧತಿಯಂತೆ ಈ ಬಾರಿಯೂ ಜಾರಿಗೊಳಿಸಲಾಗುತ್ತಿದ್ದು, ದೈನಂದಿನ ಸಂಚಾರಿಕರು, ಉದ್ಯೋಗಿಗಳು ಹಾಗೂ ವ್ಯಾಪಾರಸ್ಥರ ಮೇಲೆ ಹೆಚ್ಚಿನ ಹೊರೆ ಬೀಳಲಿದೆ ಎಂದು ಆತಂಕ ವ್ಯಕ್ತವಾಗಿದೆ. ಎನ್‌ಹೆಚ್‌ಎಐಯ ಈ ನಿರ್ಧಾರದಿಂದ ರಾಜ್ಯದ ಪ್ರಮುಖ ಹೆದ್ದಾರಿಗಳಲ್ಲಿ ಪ್ರಯಾಣಿಸುವವರಿಗೆ ಆರ್ಥಿಕ ಒತ್ತಡ ಹೆಚ್ಚಾಗಲಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!