ಹೆಣ್ಣುಮಗು ಹುಟ್ಟಿದ್ದಕ್ಕೆ ಬಿಸ್ಕತ್​ನಲ್ಲಿ ವಿಷವಿಟ್ಟ TSR ಯೋಧ!

ಅಗರ್ತಲಾ: ಗಂಡು ಮಗು ಹುಟ್ಟಲಿಲ್ಲ ಅಂತ ಒಂದು ವರ್ಷದ ಹೆಣ್ಣು ಮಗುವಿಗೆ ಯೋಧರೊಬ್ಬರು ಬಿಸ್ಕತ್​ನಲ್ಲಿ ವಿಷ ಇಟ್ಟು ತಿನಿಸಿ ಜೀವ ತೆಗೆದಿದ್ದಾರೆ. ತ್ರಿಪುರಾದ ಖೊವೈ ಜಿಲ್ಲೆಯ ಬೆಹಲಬಾರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಜಿಲ್ಲೆಯ ಬೆಹಲಬಾರಿ ಗ್ರಾಮದ ರಥೀಂದ್ರ ದೆಬ್ಬಾರ್ಮ್ ಜೀವ ತೆಗೆದ ಆರೋಪಿ. ಇವರು ತ್ರಿಪುರಾ ಸ್ಟೇಟ್ ರೈಫಲ್ಸ್ (ಟಿಎಸ್​​ಆರ್​)​ನ ಬೆಟಲಿಯಾನ್​ 10ರಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಗಳ ಜೀವ ತೆಗೆದ ಹಿನ್ನೆಲೆಯಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಕೋರ್ಟ್​ ವಿಚಾರಣೆ ನಡೆಸಿ ಆರೋಪಿಯನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ ಎಂದು ಹೇಳಲಾಗಿದೆ.

ರಥೀಂದ್ರ ದೆಬ್ಬಾರ್ಮ್ ಹಾಗೂ ಮಿತಾಲಿ ದೆಬ್ಬಾರ್ಮ್​ ದಂಪತಿಗೆ ಎರಡು ಹೆಣ್ಣು ಮಕ್ಕಳಿವೆ. ಇದರಲ್ಲಿ 2ನೇ ಮಗು ಸುಹಾನಿ, ತನ್ನ ತಂದೆಯಿಂದಲೇ ಜೀವ ಕಳೆದುಕೊಂಡಿದೆ. ಈ ಬಗ್ಗೆ ಆರೋಪ ಮಾಡಿರುವ ಹೆಂಡತಿ ನನ್ನ ಗಂಡನಿಂದಲೇ ಮಗು ಇಲ್ಲವಾಗಿದೆ ಎಂದು ದುಃಖಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

ಮಿತಾಲಿ ತನ್ನ ಮಕ್ಕಳೊಂದಿಗೆ ಸಹೋದರಿಯ ಊರಿಗೆ ಹೋಗಿದ್ದಳು. ಈ ವೇಳೆ ಗಂಡ ಕೂಡ ಜೊತೆಗೆ ಬಂದಿದ್ದನು. ಮನೆಯಲ್ಲಿ ಇರುವಾಗ ಬಿಸ್ಕೆತ್​ ಕೊಡಿಸುವುದಾಗಿ ನನ್ನ ಮಗಳು ಸುಹಾನಿ ಹಾಗೂ ಸಹೋದರಿಯ ಮಗನನ್ನು ಕರೆದುಕೊಂಡು ಸಮೀಪದ ಅಂಗಡಿಗೆ ಹೋಗಿದ್ದರು. ಇದಾದ ಮೇಲೆ ಮಗಳು ವಾಂತಿ ಮಾಡಲು ಶುರು ಮಾಡಿದಳು. ಅವಳ ಬಾಯಿಂದ ಮೆಡಿಸೆನ್​ ವಾಸನೆ ಬರುತ್ತಿತ್ತು. ಇದಕ್ಕೆ ಏನಾದರೂ ತಿನ್ನಿಸಿದ್ದೀಯಾ ಎಂದು ಗಂಡನನ್ನ ಕೇಳಿದ್ದೆ. ಅವರು ಏನನ್ನು ಒಪ್ಪಲಿಲ್ಲ. ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಜೀವ ಹೋಗಿದೆ ಅಂತ ವೈದ್ಯರು ಹೇಳಿದರು ಎಂದು ತಾಯಿ ಮಿತಾಲಿ ಹೇಳಿದ್ದಾರೆ.

ಮತ್ತೊಂದು ಹೆಣ್ಣು ಮಗು ಹುಟ್ಟಿದ್ದಕ್ಕೆ ನನ್ನನ್ನು ನಿತ್ಯ ನಿಂದಿಸುತ್ತಿದ್ದರು. ಕೂದಲು ಹಿಡಿದು ಎಳೆದಾಡಿ ಹೊಡೆಯುತ್ತಿದ್ದರು. ಗಂಡು ಮಗು ಹುಟ್ಟಲಿಲ್ಲ ಎನ್ನುತ್ತಿದ್ದರು. ಮಗುನ ಮುಗಿಸಿದ್ದಕ್ಕೆ ಗಂಡನಿಗೆ ಮರಣದಂಡನೆಯಂತಹ ಕಠಿಣ ಶಿಕ್ಷೆಯಾಗಬೇಕು ಎಂದು ಮಿತಾಲಿ ಆಗ್ರಹವಾಗಿದೆ. ಸದ್ಯ ಪೊಲೀಸರು ಆರೋಪಿಯನ್ನ ವಿಚಾರಣೆ ನಡೆಸುತ್ತಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!