ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ.

ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ, ಜುಲೈ 9 : ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಉತ್ತರಪ್ರದೇಶ ಹಾಗೂ ತಮಿಳುನಾಡುಯ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ರಕ್ಷಣಾ ಕಾರಿಡಾರ್ ಸ್ಥಾಪನೆ ಹಾಗೂ ಟನಲ್ ಯೋಜನೆ , ಬಳ್ಳಾರಿ ರಸ್ತೆಯಲ್ಲಿ ಲಿಂಕ್ ರೋಡ್ ಯೋಜನೆ, ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಯ ನಿರ್ಮಾಣಕ್ಕೆ ಅವಶ್ಯವಿರುವ ಕೇಂದ್ರ ರಕ್ಷಣಾ ಇಲಾಖೆಗೆ ಸೇರಿದ ಜಾಗವನ್ನು ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ನೀಡುವಂತೆ ಕೋರಿ ಮನವಿ ಸಲ್ಲಿಸಿರುವ ಬಗ್ಗೆ ವಿವರಿಸಿದರು.

ರಾಹುಲ್ ಗಾಂಧಿಯನ್ನು ಭೇಟಿಯಾಗುವ ಕಾರ್ಯಕ್ರಮವಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ರಾಹುಲ್ ಗಾಂಧಿಯವರ ಸಮಯವನ್ನು ಸಾಧ್ಯವಾದರೆ ಭೇಟಿಯಾಗುವುದಾಗಿ ತಿಳಿಸಿದರು. ಕಾಂಗ್ರೆಸ್ ನ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ನಾಳೆ ನವದೆಹಲಿಗೆ ಆಗಮಿಸಲಿದ್ದು, ಅವರೊಂದಿಗೆ ವಿಧಾನಪರಿಷತ್ ಸದಸ್ಯರು ಹಾಗೂ ನಿಗಮಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಲಾಗುವುದು. ಅಂತೆಯೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಭೇಟಗೆ ಸಮಯವನ್ನು ಕೋರಲಾಗಿದ್ದು, ನಾಳೆ ಭೇಟಿಯಾಗುವ ಸಾಧ್ಯತೆಯಿದೆ ಎಂದರು.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಯಶ್ ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ…

You Missed

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ