ರಾಜ್ಯದ ನಗರ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಹೆಚ್ ಡಿಕೆ ಸಕಾರಾತ್ಮಕ ಸ್ಪಂದನೆ.

ನವದೆಹಲಿ : ಕೇಂದ್ರ ಸರಕಾರ ಪ್ರಾಯೋಜಿತ PM E-ಡ್ರೈವ್ ಉಪಕ್ರಮದ ಅಡಿಯಲ್ಲಿ ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡುವಂತೆ ಕೋರಿ ಕರ್ನಾಟಕ ಸರಕಾರ ಸಲ್ಲಿಸಿದ ಮನವಿಯನ್ನು ಕೇಂದ್ರದ ಬೃಹತ್ ಕೈಗಾರಿಕಾ ಸಚಿವಾಲಯವು ಸ್ವೀಕರಿಸಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ನಗರ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಉತ್ತಮಪಡಿಸುವ ಅಗತ್ಯವನ್ನು ಉಲ್ಲೇಖಿಸಿ ಕರ್ನಾಟಕದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸಲ್ಲಿರುವ ಮನವಿಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ನವದೆಹಲಿಯ ಸಚಿವಾಲಯದಲ್ಲಿ ತಮ್ಮನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ ಅವರ ಜತೆ ಕುಮಾರಸ್ವಾಮಿ ಅವರು ರಾಜ್ಯದ ನಗರ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಮಹತ್ವದ ಮಾತುಕತೆ ನಡೆಸಿದರು.
ಅಲ್ಲದೆ ಕರ್ನಾಟಕ ಸರಕಾರಕ್ಕೆ ಕೇಂದ್ರದಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ವಿದ್ಯುತ್ ಚಾಲಿತ ಬಸ್ಸುಗಳ ಹಂಚಿಕೆ ಪ್ರಕ್ರಿಯೆ ಈಗಾಗಲೇ ನಡೆಯುತ್ತಿದೆ ಮತ್ತು ಕರ್ನಾಟಕಕ್ಕೆ ಹಂತಹಂತವಾಗಿ ಮತ್ತು ಆದ್ಯತೆಯ ಮೇರೆಗೆ ವಿದ್ಯುತ್ ಚಾಲಿತ ಬಸ್ಸುಗಳನ್ನು ಹಂಚಿಕೆ ಮಾಡಲಾಗುವುದು ಎಂದು ಭರವಸೆ ನೀಡಿದರು.


“ಕರ್ನಾಟಕಕ್ಕೆ ಕೇಂದ್ರ ಸರಕಾರದಿಂದ ಸೂಕ್ತ ಬೆಂಬಲ ಸಿಗುತ್ತದೆ ಎಂದು ನಾನು ಖಚಿತಪಡಿಸುತ್ತೇನೆ” ಎಂದು ರಾಮಲಿಂಗಾರೆಡ್ಡಿ ಅವರಿಗೆ ಸ್ಪಷ್ಟವಾಗಿ ತಿಳಿಸಿದ ಕುಮಾರಸ್ವಾಮಿ ಅವರು, “ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ PM E-ಡ್ರೈವ್ ಯೋಜನೆ ಅತ್ಯಂತ ಯಶಸ್ವಿಯಾಗಿ ಮುಂದುವರಿಯುತ್ತಿದೆ. ಸಾರಿಗೆ ವ್ಯವಸ್ಥೆಯಲ್ಲಿ, ಅದರಲ್ಲಿಯೂ ನಗರ ಪ್ರದೇಶಗಳಲ್ಲಿ ವಾಹನಗಳು ಹೊರಸೂಸುವ ಮಾಲಿನ್ಯವನ್ನು ಶೂನ್ಯಮಟ್ಟಕ್ಕೆ ಇಳಿಸುವ ನಿಟ್ಟಿನಲ್ಲಿ ಕರ್ನಾಟಕವೂ ಸೇರಿ ಭಾರತದಾದ್ಯಂತ ವಿದ್ಯುತ್ ಚಾಲಿತ ಬಸ್ಸುಗಳ ಅಳವಡಿಕೆಗೆ ಕೇಂದ್ರ ಸರಕಾರವು ದೊಡ್ಡ ಪ್ರಮಾಣದಲ್ಲಿ ಪ್ರಯತ್ನ ಮಾಡುತ್ತಿದೆ . ಕರ್ನಾಟಕವು ಪಿಎಂ ಇ-ಡ್ರೈವ್ ಯೋಜನೆ ಅಡಿಯಲ್ಲಿ ಖಂಡಿತವಾಗಿಯೂ ಹೆಚ್ಚು ಬಸ್ಸುಗಳನ್ನು ಪಡೆಯುತ್ತದೆ” ಎಂದು ತಿಳಿಸಿದರು.


PM E-ಡ್ರೈವ್ ಉಪಕ್ರಮದಡಿಯಲ್ಲಿ 9 ಪ್ರಮುಖ ನಗರಗಳಿಗೆ 14,000 ವಿದ್ಯುತ್ ಚಾಲಿತ ಬಸ್ ಗಳನ್ನು ಹಂಚಿಕೆ ಮಾಡಲಾಗುವುದು. ಚಾರ್ಜಿಂಗ್ ಸ್ಟೇಷನ್ ಗಳು, ಬಸ್ ಡಿಪೋಗಳು ಮತ್ತು ವಾಹನ ನಿರ್ವಹಣಾ ವ್ಯವಸ್ಥೆ ಸೇರಿದಂತೆ ಸಂಬಂಧಿತ ಮೂಲಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವಿನ ಚರ್ಚೆ ನಡೆಸುತ್ತಿವೆ. ಈಗಾಗಲೇ ಗುರುತಿಸಲಾದ ನಗರ ಸಮೂಹಗಳಲ್ಲಿ ಈ ಯೋಜನೆಯ ತ್ವರಿತ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಸಚಿವಾಲಯದ ಹಿರಿಯ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.


ನಾವು ವಿದ್ಯುತ್ ಚಾಲಿತ ಬಸ್ಸುಗಳನ್ನು ವಿತರಿಸುತ್ತಿದ್ದೇವೆ ಎನ್ನುವುದಕ್ಕಿಂತ, ನಾವು ಭಾರತದ ಜನತೆಗೆ ಸ್ವಚ್ಛ, ಚುರುಕಾದ ಮತ್ತು ಹೆಚ್ಚು ಉತ್ತಮವಾದ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುತ್ತಿದ್ದೇವೆ” ಎಂದು ತಿಳಿಸಿದ ಕೇಂದ್ರ ಸಚಿವ ಹೆಚ್ ಡಿಕೆ, ಬೆಂಗಳೂರು ನಗರ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಈ ನಿಟ್ಟಿನಲ್ಲಿ ನಗರದಲ್ಲಿ ಮಾಲಿನ್ಯರಹಿತ ಸಾರಿಗೆ ವ್ಯವಸ್ಥೆ ಕಲ್ಪಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪ್ರಾರಂಭಿಸಲಾದ PM E-ಡ್ರೈವ್ ಉಪಕ್ರಮವು 14,028 ವಿದ್ಯುತ್ ಚಾಲಿತ ಬಸ್ಸುಗಳೊಂದಿಗೆ ನಗರಗಳಲ್ಲಿ ವಾಯುಮಾಲಿನ್ಯ ರಹಿತ ಸಾರಿಗೆ ವ್ಯವಸ್ಥೆ ಕಲ್ಪಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಗೆ ಕೇಂದ್ರ ಸರಕಾರದಿಂದ ಎರಡು ವರ್ಷಗಳ ಅವಧಿಯಲ್ಲಿ ₹10,900 ಕೋಟಿ ಮೊತ್ತವನ್ನು ವೆಚ್ಚ ಮಾಡಲಾಗುತ್ತಿದೆ. ಎಲ್ಲಾ ರಾಜ್ಯ ಸರಕಾರಗಳು ಮತ್ತು ಪಾಲುದಾರರ ಸಹಯೋಗದೊಂದಿಗೆ ಈ ಪರಿವರ್ತನಾಶೀಲ ಗುರಿಯನ್ನು ಪೂರೈಸಲು ಬೃಹತ್ ಕೈಗಾರಿಕಾ ಸಚಿವಾಲಯವು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿಕೆ ಹೇಳಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!