ಹಿರಿಯ ನಟ ಅನಂತ್ ನಾಗ್​ ಅವರನ್ನ ಸನ್ಮಾನಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ !

ಪ್ರಸಿದ್ಧ ಕನ್ನಡ ನಟ ಅನಂತ ನಾಗ್ ಅವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸನ್ಮಾನಿಸಿದರು. 52 ವರ್ಷಗಳಿಂದ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ಅನಂತ ನಾಗ್ ಅವರ ಕೊಡುಗೆಯನ್ನು ಜೋಶಿ ಅವರು ಮೆಚ್ಚುಗೆ ಪಡೆದರು.
ಪದ್ಮಭೂಷಣ ಪ್ರಶಸ್ತಿ ಪಡೆದ ಹಿರಿಯ ನಟ ಅನಂತ್ ನಾಗ್​ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸನ್ಮಾನ
ಅನಂತ್ ನಾಗ್

ಹಿರಿಯ ನಟ ಅನಂತ್ ನಾಗ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಕನ್ನಡ ಚಿತ್ರರಂಗಕ್ಕೆ ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ಗಮನಿಸಿ ಕೇಂದ್ರ ಸರ್ಕಾರ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ಈಗ ಬೆಂಗಳೂರಿನಲ್ಲಿ ನಡೆದ ‘ಒಂದು ಕಲಾತ್ಮಕ ಸಂಜೆ’ ಕಾರ್ಯಕ್ರಮದಲ್ಲಿ ಅನಂತ್ ನಾಗ್ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸನ್ಮಾನಿಸಿದ್ದಾರೆ.

ಅನಂತ್ ನಾಗ್ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 1973ರಲ್ಲಿ. ‘ಸಂಕಲ್ಪ’ ಅವರ ನಟನೆಯ ಮೊದಲ ಚಿತ್ರ. ಅವರು ಬಣ್ಣದ ಲೋಕದಲ್ಲಿ ಕಳೆದ 52 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಾ ಬರುತ್ತಿದ್ದಾರೆ. ಹಾಸ್ಯ, ಗಂಭೀರ, ಹಾರರ್ ಸೇರಿದಂತೆ ವಿಭಿನ್ನ ಕಥಾ ಹಂದರಗಳ ಸಿನಿಮಾಗಳಲ್ಲಿ ಅನಂತ್ ಕಾಣಿಸಿಕೊಂಡಿದ್ದಾರೆ. ಅವರಿಗೆ ಜೋಶಿ ವಿಶೇಷ ಗೌರವ ಸಲ್ಲಿಕೆ ಮಾಡಿದ್ದಾರೆ.

ಅನಂತ್ ನಾಗ್ ಬಗ್ಗೆ ಜೋಶಿ ಟ್ವೀಟ್ :
ಅನಂತ್ ನಾಗ್ ಅವರನ್ನು ಸನ್ಮಾನಿಸಿದ ಬಳಿಕ ಮಾತನಾಡಿದ ಜೋಶಿ ಅವರು, ‘75ನೇ ವಯಸ್ಸಿನಲ್ಲೂ ಅನಂತ್ ನಾಗ್ ಕ್ರಿಯಾಶೀಲರಾಗಿದ್ದಾರೆ. ಅವರು ಅತ್ಯುತ್ತಮ ನಟನೆಯ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಎಲ್ಲರನ್ನೂ ಅವರು ರಂಜಿಸಿದ್ದಾರೆ’ ಎಂದು ಜೋಶಿ ಹರ್ಷ ವ್ಯಕ್ತಪಡಿಸಿದರು. ಈ ವೇಳೆ ಅನಂತ್ ನಾಗ್ ಪತ್ನಿ ಧರ್ಮಪತ್ನಿ ಹಾಗೂ ಹಿರಿಯ ಕಲಾವಿದೆ ಗಾಯತ್ರಿ ಅನಂತನಾಗ್ ಹಾಗೂ ಗಣಪತಿ ಭಟ್ ಸೇರಿದಂತೆ ಚಿತ್ರರಂಗದ ಕಲಾವಿದರು ಉಪಸ್ಥಿತರಿದ್ದರು.

ಅನಂತ್​ನಾಗ್ ಅವರಿಗೆ ಈ ಮೊದಲು ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ್ದ ಅವರು, ‘ಪದ್ಮ ಪ್ರಶಸ್ತಿ ಬಂದಿದೆ ಎಂಬುದಕ್ಕಿಂತಲೂ ನೀವೆಲ್ಲರೂ ಸೇರಿ ನನಗೆ ಕೊಡಿಸಿದ್ದೀರಿ, ಅವರು ಕೊಟ್ಟಿದ್ದಾರೆ, ನಾನು ತೆಗೆದುಕೊಂಡು ಬಂದಿದ್ದೇನೆ’ ಎಂದಿದ್ದರು. ಅನಂತ್ ನಾಗ್ ಅವರಿಗೆ ಈ ಗೌರವ ಸಲ್ಲಬೇಕು ಎಂದು ಕನ್ನಡಿಗರು ಹಲವು ವರ್ಷಗಳಿಂದ ಹೇಳುತ್ತಲೇ ಬರುತ್ತಿದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!