ವೈರಲ್ ಹುಡುಗಿಗೆ ಶುರುವಾಯ್ತು ಬ್ಯಾಡ್​ ಕಾಮೆಂಟ್ಸ್, ಏನಂದ್ರು ನಿತ್ಯಶ್ರೀ..?

ಎರಡ್ಮೂರು ದಿನಗಳ ಹಿಂದೆ ‘ಹೂವಿನ ಬಾಣದಂತೆ, ಯಾರಿಗೂ ಕಾಣದಂತೆ..’ ಹಾಡನ್ನು ಹಾಡಿದ ನಿತ್ಯಶ್ರೀ ಎಲ್ಲೆಡೆ ಸುದ್ದಿಯಾಗಿದ್ದಾರೆ..ಇದೀಗ ವೈರಲ್ ಸ್ಟಾರ್​ಗೆ ಸೊಶಿಯಲ್ ಮೀಡಿಯಾದಲ್ಲಿ ಬ್ಯಾಡ್​ ಕಾಮೆಂಟ್ಸ್ ಕಾಟ ಶುರುವಾಗಿದೆ.
ಒಂದಷ್ಟು ಜನ ಬ್ಯಾಡ್ ಕಾಮೆಂಟ್ ಮಾಡ್ತಿದ್ದಾರೆ, ಕೆಲವರು ಇವಳೇನು ಸಾಧನೆ ಮಾಡಿದ್ದಾಳೆ ಅಂತ ವೈರಲ್ ಮಾಡ್ತಿದ್ದೀರಿ ಅಂತಿದ್ದಾರೆ. ಶೇ 100 ರಲ್ಲಿ ಶೇ 90 ರಷ್ಟು ಜನರು ಒಳ್ಳೆ ಕಾಮೆಂಟ್ಸ್ ಕೊಟ್ಟಿದ್ದಾರೆ. ಬ್ಯಾಡ್ ಕಾಮೆಂಟ್ಸ್​ಗೆಲ್ಲ ತಲೆ ಕೆಡಿಸಿಕೊಳ್ಳಲ್ಲ. ನನ್ನಿಂದ ಒಂದಷ್ಟು ಜನ ನಕ್ಕಿದ್ರು ಅನ್ನೋ ಖುಷಿ ಇದೆ ಎಂದು ಹೇಳಿದ್ದಾರೆ.

ಈ ಮುಗ್ಧ ಹುಡುಗಿ ಹಿನ್ನಲೆ ಏನು..? ಈ ವೈರಲ್ ಹುಡುಗಿ ನಿತ್ಯಾ ಶ್ರೀ ಮೂಲತಃ ಊರು ಮಂಡ್ಯ ಜಿಲ್ಲೆಯ ಕೆ.ಆರ್.​ಪೇಟೆ ತಾಲೂಕಿನ ಮೊಸಳೆಕೊಪ್ಪ ಗ್ರಾಮ. ತಮ್ಮ ಪದವಿ ಶಿಕ್ಷಣ ಪಡೆಯಲು ಮೈಸೂರಿನಲ್ಲಿ ನೆಲೆಸಿದ್ದಾರೆ. ಇದೇ ವೇಳೆ ವೈರಲ್ ಹಾಡಿನ ಬಗ್ಗೆ ಮಾತನಾಡಿರುವ ಅವರು.. ನಾನು ನನ್ನ ಸ್ನೇಹಿತರನ್ನು ಖುಷಿ ಪಡಿಸಲು ಹಾಡಿದ್ದೆ. ಇದು ಇಷ್ಟು ವೈರಲ್ ಆಗತ್ತೆ ಎಂದು ಗೊತ್ತಿರಲಿಲ್ಲ. ತುಂಬಾ ಖುಷಿ ಆಗಿದೆ ಎಂದು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ನನ್ನ ಗುರುಗಳು ಕೃಷ್ಣಮೂರ್ತಿ ಸರ್ ಹಾಡನ್ನು ರೆಕಾರ್ಡ್ ಮಾಡಿ ಇನ್​​ಸ್ಟಾಗ್ರಾಮ್​​ನಲ್ಲಿ ಅಪ್ಲೋಡ್ ಮಾಡಿದ್ರು. ಅದು ರಾತ್ರೋರಾತ್ರಿ ಸಕ್ಕತ್ ವೈರಲ್ ಆಗಿದೆ. ಎಲ್ಲರೂ ಕೂಡ ನನ್ನ ಗುರುತು ಹಿಡಿತಿದ್ದಾರೆ. ನನ್ನ ಜೊತೆ ಸೆಲ್ಫಿ ಕೇಳಿದ್ದಾರೆ. ನನಗೆ ನಟಿ ಆಗಬೇಕು, ಆ್ಯಕ್ಟಿಂಗ್ ಮಾಡಬೇಕು ಎಂಬ ಆಸೆ ಇದೆ. ಯಶ್ ನನ್ನ ಫೇವರಿಟ್ ನಟ. ಅವರ ಜೊತೆ ಒಂದು ಸೈಡ್ ರೋಲ್ ಮಾಡಬೇಕೆಂಬ ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!