ನಾವು ಸದಾ ನಿಮ್ಮೊಂದಿಗಿದ್ದೇವೆ…..RCB ಭಾವುಕ ಪೋಸ್ಟ್ !

ಇಂಡಿಯನ್ ಪ್ರೀಮಿಯರ್ ಲೀಗ್ ​ ಸೀಸನ್-18ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಜೂನ್ 4 ಎಂಬುದು ‘ಕಪ್​’ಚುಕ್ಕೆ. ಬೆಂಗಳೂರಿನಲ್ಲಿ ನಡೆದ RCB ಕಪ್ ಗೆದ್ದ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಮಂದಿ ಅಭಿಮಾನಿಗಳು ಅಸುನೀಗಿದ್ದರು. ಈ ದುರ್ಘಟನೆಯ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಯಾವುದೇ ಪೋಸ್ಟ್ ಹಂಚಿಕೊಂಡಿರಲಿಲ್ಲ.

ಇದೀಗ ಬರೋಬ್ಬರಿ 84 ದಿನಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಒಂದು ಕಾಣಿಸಿಕೊಂಡಿದೆ. ಅದು ಸಹ ಅಭಿಮಾನಿಗಳಿಗಾಗಿ ಹೊಸ ಭರವಸೆಯನ್ನು ನೀಡುವ ಮೂಲಕ ಎಂಬುದು ವಿಶೇಷ.

ಆರ್​ಸಿಬಿ ಪೋಸ್ಟ್​ ಸಾರಾಂಶ ಹೀಗಿದೆ:
ನಾವು ಪೋಸ್ಟ್ ಮಾಡಿ ಸುಮಾರು ಮೂರು ತಿಂಗಳಕಾಲ ಕಳೆದಿದೆ. ನಮ್ಮ ಮೌನ, ಖಾಲಿತನದಿಂದಷ್ಟೇ ಅಲ್ಲ, ದುಃಖದಿಂದ ತುಂಬಿದ ತೀವ್ರವಾದ ಮೌನ. ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ ವಿಷಯಗಳನ್ನು ಮತ್ತು ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದೆವು. ಆದರೆ ಜೂನ್ 4ರ ಘಟನೆ ಎಲ್ಲವನ್ನೂ ಬದಲಾಯಿಸಿತು.

ಆ ದಿನ ನಮ್ಮ ಹೃದಯವನ್ನು ಮುರಿಯಿತು. ನಂತರದ ಮೌನವು ಕೇವಲ ನಿಶ್ಯಬ್ದವಲ್ಲ, ಅದು ಶ್ರದ್ಧೆಯಿಂದ ತುಂಬಿದ ಶಾಂತ ಶ್ರದ್ಧಾಂಜಲಿ. ಈ ಮೌನದೊಳಗೆ ನೋವನ್ನು ಅನುಭವಿಸುತ್ತಾ ನಾವು ಆಳವಾಗಿ ಯೋಚಿಸಿದ್ದೆವು ಮತ್ತು ಅನೇಕ ವಿಷಯಗಳನ್ನು ಕಲಿತೆವು. ನೋವನ್ನೇ ಶ್ರದ್ಧೆಯಾಗಿ, ನಂಬಿಕೆಯಾಗಿ ರೂಪಿಸಬೇಕೆಂದು ತೀರ್ಮಾನಿಸಿದ್ದೆವು.

ಅದರ ಫಲವೇ ಆರ್‌ಸಿಬಿ ಕೇರ್ಸ್. ನಮ್ಮ ಅಭಿಮಾನಿಗಳು ಮತ್ತು ಸಮುದಾಯಕ್ಕಾಗಿ ನಿಷ್ಠೆಯಿಂದ ರೂಪಿಸಿದ ಒಂದು ಯೋಜನೆ.

ಇಂದು ನಾವು ಮರಳಿದ್ದೇವೆ. ನಿಮ್ಮೊಂದಿಗೆ ನಿಲ್ಲುವ ಭರವಸೆಯನ್ನು ನೀಡುತ್ತಾ, ಕರ್ನಾಟಕದ ಹೆಮ್ಮೆಯಾಗಿ ಮುಂದೆ ಸಾಗುತ್ತೇವೆ. ಇದು ನಮ್ಮ ಕಾಳಜಿ, ನಮ್ಮ ಪ್ರತಿಜ್ಞೆ.

ಆರ್‌ಸಿಬಿ ಕೇರ್ಸ್: ನಾವು ಸದಾ ನಿಮ್ಮೊಂದಿಗಿದ್ದೇವೆ.

 

Related Posts

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಅರ್ಜುನ್ ತೆಂಡೂಲ್ಕರ್ ಸಾನಿಯಾ ಚಾಂದೋಕ್   ಅವರನ್ನು ವಿವಾಹವಾಗಿದ್ದಾರೆ. ಸಚಿನ್ ಪುತ್ರನ ಪತ್ನಿ ಸಾನಿಯಾ ಯಾರು, ಅವರ ಹಿನ್ನೆಲೆ, ಕುಟುಂಬದ ಸಂಪತ್ತು ಎಷ್ಟು ಎಂಬ ಕುತೂಹಲವಿದೆ. ಸಾನಿಯಾ ಖ್ಯಾತ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು. ಅವರ ಕುಟುಂಬ ಬಾಸ್ಕಿನ್-ರಾಬಿನ್ಸ್ ಅನ್ನು ಭಾರತಕ್ಕೆ…

ಎರಡೆರಡು ಇತಿಹಾಸ ನಿರ್ಮಿಸಲಿದೆ ಟೀಂ ಇಂಡಿಯಾ!

  2026ರ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಿಸಲಿದೆ. ಹಾಲಿ ಚಾಂಪಿಯನ್ ಭಾರತ, ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿ ಇತಿಹಾಸ ಸೃಷ್ಟಿಸುವ ಗುರಿಯಲ್ಲಿದೆ. ಹಿಂದಿನ ದಾಖಲೆಗಳನ್ನು ಮುರಿದು, ಸತತ ಫೈನಲ್ ತಲುಪುವ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!