ದೇಗುಲದ ಪುನರ್ ಪ್ರತಿಷ್ಠಾಪನೆ ವೇಳೆ ದಾಂಧಲೆ ಮಾಡಿದ ಕಾಡಾನೆ.

ಬೇಲೂರು : ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ನಿನ್ನೆ ಮುಂಜಾನೆಯಿಂದ ಆರಂಭವಾದ ಕೋಟೆದ ಬಬ್ಬುಸ್ವಾಮಿ, ಚಾಮುಂಡೇಶ್ವರಿ ಹಾಗು ಪರಿವಾರ ದೈವಗಳ ದೈವಸ್ಥಾನ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ವಿಜೃಂಭಣೆಯ ಚಾಲನೆ ದೊರೆತಿದ್ದು, ರಾತ್ರಿ ಸುಮಾರು 9.30ರ ಸಮಯದಲ್ಲಿ ಕಳೆದ ಮೂರ್ನಾಲ್ಕು ತಿಂಗಳಿಂದ ಕಣ್ಮರೆಯಾಗಿದ್ದ ಮೂರ್ನಾಲ್ಕು ಕಾಡನೆಗಳು ಏಕಾಏಕಿ ಪ್ರತ್ಯಕ್ಷವಾಗಿದ್ದು ಭಕ್ತ ಸಮೂಹ ಧಾರ್ಮಿಕ ಕಾರ್ಯಕ್ರಮಗಳ ನಡುವೆ ಕಾಡನೆಗಳನ್ನು ನೋಡಲು ಮುಗಿಬಿದ್ದ ಸನ್ನಿವೇಶ ನಿರ್ಮಾಣವಾಗಿತ್ತು.

Belur

ಭಕ್ತ ಸಮೂಹ ಕಾಡಾನೆಗಳನ್ನು ನೋಡಲು ಮುಗಿಬೀಳು ತ್ತಿದ್ದಂತೆ ರೊಚ್ಚಿಗೆದ್ದ ಕಾಡಾನೆಗಳು ಘೀಳಿಡುತ್ತಾ ರಸ್ತೆಯ ಬದಿಯಲ್ಲಿ ಸುತ್ತುವರೆಯುತ್ತಿತ್ತು, ಇದಾದ ಬಳಿಕ ದೇಗುಲದ ಆಡಳಿತ ಮಂಡಳಿ ಭಕ್ತರನ್ನು ನಿಯಂತ್ರಿಸಿ ಕೊಳ್ಳಲು ಪಟಾಕಿ ಸಿಡಿಸಿದರು.

ನಂತರ ಮಾಹಿತಿ ಪಡೆದ ಅರಣ್ಯ ಇಲಾಖೆ ಹಾಗು ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಭಕ್ತ ಸಮೂಹವನ್ನು ನಿಯಂತ್ರಿಸಿಕೊಳ್ಳಲು ಹರಸಾಹಸ ಪಟ್ಟು ಕಾಡಾನೆಗಳಿಗೆ ರಸ್ತೆ ದಾಟಲು ಅವಕಾಶ ಕಲ್ಪಿಸಿದರು. ದೇಗುಲದಲ್ಲಿ ನೆರೆದಿದ್ದ ಭಕ್ತರ ಕಿರುಚಾಟಕ್ಕೆ ರೊಚ್ಚಿಗೆದ್ದ ಒಂಟಿ ಕಾಡಾನೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರು ಹಾಗೂ ಬೈಕ್ ಗಳ ಮೇಲೆ ದಾಳಿಮಾಡಿರುವ ದೃಶ್ಯ ಇದೀಗ ಮೋಬೈಲ್ ನಲ್ಲಿ ಸೆರೆಯಾಗಿದೆ.ತನ್ನ ಪಾಡಿಗೆ ರಸ್ತೆ ದಾಟುತ್ತಿದ್ದ ಕಾಡನೆಗಳಿಗೆ ಅಡಚಣೆ ಮಾಡಿದ್ದೆ ಇಷ್ಟೆಲ್ಲಾ ಅನಾಹುತಗಳಿಗೆ ಕಾರಣವೆಂದು ಹಲವರು ತಿಳಿಸಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!