ತಡಿಯಂಡಮೋಳ್ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆ ನಾಪತ್ತೆ: ಶೋಧ ಕಾರ್ಯ ಮುಂದುವರಿಕೆ.

ಮಡಿಕೇರಿ: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ನಾಪತ್ತೆಯಾಗಿರುವ ಮಹಿಳೆಯನ್ನು ಶರಣ್ಯ (36) ಎಂದು ಗುರುತಿಸಲಾಗಿದೆ. ಅವರು ಯವಕಪಾಡಿ ಗ್ರಾಮದ ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದು, ಅಲ್ಲಿಂದ ಟ್ರೆಕ್ಕಿಂಗ್‌ಗೆ ಒಬ್ಬರೇ ತೆರಳಿದ್ದರು. ಆನ್‌ಲೈನ್ ಮೂಲಕ ಬುಕ್ಕಿಂಗ್ ಮಾಡಿಕೊಂಡು ಬಂದಿದ್ದ ಶರಣ್ಯ ಅವರನ್ನು ಕಾಡಾನೆಗಳ ಸಂಚಾರ ಇರುವ ಪ್ರದೇಶವಾದ್ದರಿಂದ ಇತರ ಪ್ರವಾಸಿಗರ ಜೊತೆ ಕಳುಹಿಸಲಾಗಿತ್ತು.

ಆದರೆ, ಬೆಟ್ಟಕ್ಕೆ ತೆರಳಿದ್ದ ಇತರ ಪ್ರವಾಸಿಗರು ಹಿಂದಿರುಗಿದ್ದರೂ ಶರಣ್ಯ ಮಾತ್ರ ಮರಳಿ ಬರದ ಹಿನ್ನೆಲೆ ಆತಂಕ ಉಂಟಾಗಿದೆ. ಈ ವಿಷಯವನ್ನು ಸ್ಥಳೀಯ ನಿವಾಸಿ ಕುಡಿಯರ ಮುತ್ತಪ್ಪ ಅವರು ಪೊಲೀಸರಿಗೆ ತಿಳಿಸಿದ್ದಾರೆ.

ತಕ್ಷಣವೇ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಹಾಗೂ ಗ್ರಾಮಸ್ಥರು ಬೆಟ್ಟದ ವಿವಿಧ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಿದರೂ ಮಹಿಳೆಯ ಸುಳಿವು ಇನ್ನೂ ಸಿಗಲಿಲ್ಲ.

ಇನ್ನೂ ಇಂದು ಕೂಡ ಶೋಧ ಕಾರ್ಯ ಮುಂದುವರಿದಿದ್ದು, ಮಹಿಳೆಯ ಮೊಬೈಲ್ ಕೇರಳ ನೆಟ್‌ವರ್ಕ್‌ನಲ್ಲಿ ಸಿಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಾಪೋಕ್ಲು ಠಾಣಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಪೊಲೀಸ್ ಮತ್ತು ಅರಣ್ಯ ಇಲಾಖೆ ತಂಡಗಳು ಬೆಟ್ಟದ ಪ್ರದೇಶದಲ್ಲಿ ತಂಗಿದ್ದು ಶೋಧ ಕಾರ್ಯ ತೀವ್ರಗೊಳಿಸಿವೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!