
ಇಂಡಿಯನ್ ಪ್ರೀಮಿಯರ್ ಲೀಗ್ 3ನೇ ಆವೃತ್ತಿಗೆ ಇಂದು ಚಾಲನೆ ದೊರೆಯಲಿದೆ. ಗುಜರಾತ್‌ನ ವಡೋದರಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಜೈಂಟ್ಸ್ ಕಣಕ್ಕಿಳಿಯಲಿದೆ. ಇಂದಿನಿಂದ ಆರಂಭವಾಗಲಿರುವ ಚುಟುಕು ಕ್ರಿಕೆಟ್ ಕದನದ ಫೈನಲ್ ಫೈಟ್ ಮಾರ್ಚ್ 15 ರಂದು ನಡೆಯಲಿದೆ.




