ಅರ್ಧ ದಿನದಲ್ಲೇ 308 ಕೋಟಿ ರೂ. ಮದ್ಯ ಮಾರಾಟ : ಹೊಸ ವರ್ಷಾಚರಣೆಯಿಂದ ಅಬಕಾರಿ ಇಲಾಖೆಗೆ ಭರ್ಜರಿ ಆದಾಯ.

ಹೊಸ ವರ್ಷ ಆಚರಣೆಯ ಸಂಭ್ರಮ ಅಬಕಾರಿ ಇಲಾಖೆಗಂತೂ ಭರ್ಜರಿ ಆದಾಯ ತಂದುಕೊಟ್ಟಿದೆ. ಡಿಸೆಂಬರ್ 31ರಂದು ಕೇವಲ ಅರ್ಧ ದಿನದಲ್ಲಿ 300 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಮದ್ಯ ಮಾರಾಟವಾಗಿದ್ದು, ಕಳೆದ ವರ್ಷ ಇದೇ ದಿನ ಗಳಿಸಿದ ಆದಾಯಕ್ಕಿಂತಲೂ ಹೆಚ್ಚಿನ ಆದಾಯ ಗಳಿಸಿದೆ.

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಗೆ ನೂರಾರು ಕೋಟಿ ರುಪಾಯಿ ಆದಾಯ ಹರಿದು ಬಂದಿದೆ. ಡಿಸೆಂಬರ್ 31 ರ ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಧ ದಿನದ ಅವಧಿಯಲ್ಲಿ ಕೆಎಸ್ಬಿಸಿಎಲ್ನಿಂದ ಬರೋಬ್ಬರಿ 308 ಕೋಟಿ ರುಪಾಯಿ ಮದ್ಯ ಮಾರಾಟವಾಗಿದೆ. ಅಬಕಾರಿ ಇಲಾಖೆಯ ನಿರೀಕ್ಷೆಗೂ ಮೀರಿ ಮಾರಾಟವಾಗಿದೆ.
ಅಬಕಾರಿ ಇಲಾಖೆ 250 ಕೋಟಿ ರೂ. ಮೌಲ್ಯದ ಮದ್ಯ ಮಾರಾಟದ ಗುರಿ ಇಟ್ಟುಕೊಂಡಿತ್ತು. ಆದರೆ, ಅದನ್ನೂ ಮೀರಿ ಮಾರಾಟವಾಗಿದೆ. ಕಳೆದ ವರ್ಷ 2023 ರ ಡಿಸೆಂಬರ್ 31 ರಂದು 193 ಕೋಟಿ ರುಪಾಯಿ ಮದ್ಯ ಮಾರಾಟ ಆಗಿತ್ತು. 2024 ಡಿಸೆಂಬರ್ 31 ರಂದು 7,305 ಮದ್ಯ ಮಾರಾಟಗಾರರು ಕೆಎಸ್ಬಿಸಿಎಲ್ನಿಂದ ಮದ್ಯ ಖರೀದಿ ಮಾಡಿದ್ದಾರೆ.
ಐಎಂಎಲ್ 4,83,715 ಲಕ್ಷ ಬಾಕ್ಸ್ ಮಾರಾಟದಿಂದ 250.25 ಕೋಟಿ ಆದಾಯ ಸಂಗ್ರಹವಾಗಿದೆ. ಬಿಯರ್- 2,92,339 ಲಕ್ಷ ಬಾಕ್ಸ್ ಮಾರಾಟದಿಂದ 57,75 ಕೋಟಿ ಆದಾಯ ಸಂಗ್ರಹವಾಗಿದೆ. ಒಟ್ಟು 7,76,042 ಲಕ್ಷ ಬಾಕ್ಸ್ ಮದ್ಯ ಮಾರಾಟದಿಂದ ಒಟ್ಟು 308 ಕೋಟಿ ರುಪಾಯಿ ಆದಾಯ ಸಂಗ್ರಹವಾಗಿದೆ.

27-12-2024 ರ ಶುಕ್ರವಾರದಂದು ಕೂಡ ಬರೋಬ್ಬರಿ 408.58 ಕೋಟಿ ರುಪಾಯಿ ಮದ್ಯ ಮಾರಾಟವಾಗಿತ್ತು. ಐಎಂಎಲ್ 6,22,062 ಲಕ್ಷ ಬಾಕ್ಸ್ ಮಾರಾಟದಿಂದ 327,50 ಕೋಟಿ ರುಪಾಯಿ ಆದಾಯ ಸಂಗ್ರಹವಾಗಿತ್ತು. ಬಿಯರ್ 4,04,998 ಲಕ್ಷ ಬಾಕ್ಸ್ ಮಾರಾಟದಿಂದ 80,58 ಕೋಟಿ ರುಪಾಯಿ ಆದಾಯ ಗಳಿಕೆಯಾಗಿತ್ತು. ಐಎಂಎಲ್, ಬಿಯರ್ ಸೇರಿ ಒಟ್ಟು- 10,27,060 ಲಕ್ಷ ಬಾಕ್ಸ್ ಮದ್ಯ ಮಾರಾಟದಿಂದ 408.50 ಕೋಟಿ ರುಪಾಯಿ ಆದಾಯ ಹರಿದುಬಂದಿತ್ತು.
ಏತನ್ಮಧ್ಯೆ, ಬೆಂಗಳೂರಿನಲ್ಲಿ ಹೊಸ ವರ್ಷ ಆಚರಣೆ ಸಂಭ್ರಮದಿಂದ ನಡೆದಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿ ಲಕ್ಷಾಂತರ ಮಂದಿ ಸಂಭ್ರಮದಿಂದ ಕುಣಿದು ಕುಪ್ಪಳಿಸಿದ್ದಾರೆ. ಕೆಲವೆಡೆ ಸಣ್ಣಪುಟ್ಟ ಅಹಿತಕರ ಘಟನೆಗಳು ನಡೆದಿದ್ದು ಬಿಟ್ಟರೆ, ಒಟ್ಟಾರೆಯಾಗಿ ಹೊಸ ವರ್ಷದ ಸ್ವಾಗತ, ಸಂಭ್ರಮಾಚರಣೆ ಶಾಂತಿಯುತವಾಗಿ ನೆರವೇರಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು