ಆರ್.ಸಿ.ಬಿ vs ಡಿ.ಸಿ ಈ ಪಂದ್ಯದಲ್ಲಿ ಗೆದ್ದವರೆ ಅಂಕಪಟ್ಟಿಯಲ್ಲಿ ನಂಬರ್ 1….

ಇಂಡಿಯನ್ ಪ್ರೀಮಿಯರ್ ಲೀಗ್ನ 46ನೇ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್ನಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ. ಏಕೆಂದರೆ ಪ್ರಸ್ತುತ ಅಂಕ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 12 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದರೆ, ಆರ್ಸಿಬಿ ತಂಡ 12 ಪಾಯಿಂಟ್ಸ್ನೊಂದಿಗೆ ತೃತೀಯ ಸ್ಥಾನದಲ್ಲಿದೆ. ಉಭಯ ತಂಡಗಳ ನಡುವಣ ಈ ಪಂದ್ಯದಲ್ಲಿ ಗೆಲ್ಲುವ ತಂಡ 14 ಅಂಕಗಳೊಂದಿಗೆ ಗುಜರಾತ್ ಟೈಟಾನ್ಸ್ ತಂಡವನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಲಿದೆ.

ಇನ್ನು ಇಂದಿನ ಪಂದ್ಯದಲ್ಲಿ ಜಯಗಳಿಸುವ ತಂಡವು ತನ್ನ ಪ್ಲೇಆಫ್ ಹಾದಿಯನ್ನು ಮತ್ತಷ್ಟು ಸುಗಮಗೊಳಿಸಲಿದೆ. ಏಕೆಂದರೆ ಈ ಪಂದ್ಯದಲ್ಲಿ ಗೆಲುವು ದಾಖಲಿಸಿದರೆ ಒಟ್ಟು 14 ಅಂಕಗಳನ್ನು ಪಡೆಯಬಹುದು. ಅಲ್ಲದೆ ಮುಂದಿನ 4 ಮ್ಯಾಚ್ಗಳಲ್ಲಿ ಒಂದು ಜಯ ಸಾಧಿಸಿದರೆ 16 ಅಂಕಗಳೊಂದಿಗೆ ಪ್ಲೇಆಫ್ಗೆ ಪ್ರವೇಶಿಸಬಹುದು. ಹೀಗಾಗಿ ಇಂದಿನ ಮ್ಯಾಚ್ ಉಭಯ ತಂಡಗಳಿಗೆ ಮಹತ್ವದ ಪಂದ್ಯವಾಗಿ ಮಾರ್ಪಟ್ಟಿದೆ.

ಇದಾಗ್ಯೂ ಇಂದಿನ ಪಂದ್ಯದಲ್ಲಿ ಆರ್ಸಿಬಿ ಪಾಲಿಗೆ ಗೆಲುವು ಅಂದುಕೊಂಡಷ್ಟು ಸುಲಭವಲ್ಲ. ಏಕೆಂದರೆ ಕಳೆದ ಪಂದ್ಯದಲ್ಲಿ ರಾಯಲ್ ಪಡೆ ವಿರುದ್ಧ ಪಾರುಪತ್ಯ ಮೆರೆಯುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯಶಸ್ವಿಯಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಡೆಲ್ಲಿ ಬಾಯ್ಸ್ ಕಡೆಯಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಇನ್ನು ಉಭಯ ತಂಡಗಳು ಈವರೆಗೆ 32 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 19 ಬಾರಿ ಗೆಲುವು ದಾಖಲಿಸಿದರೆ, ಡೆಲ್ಲಿ ಕ್ಯಾಪಿಟಲ್ಸ್ 12 ಸಲ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು.

ಇಲ್ಲಿ ಆರ್ಸಿಬಿ ಮೇಲುಗೈ ಹೊಂದಿದ್ದರೂ, ಪ್ರಸ್ತುತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬಲಿಷ್ಠವಾಗಿದೆ. ಹೀಗಾಗಿ ಈ ಹಿಂದಿನ ಅಂಕಿ ಅಂಶಗಳು ಇಲ್ಲಿ ಗಣನೆಗೆ ಬರುವುದಿಲ್ಲ ಎನ್ನಬಹುದು. ಅದರಲ್ಲೂ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕೆಎಲ್ ರಾಹುಲ್ ಸೇರಿದಂತೆ ಸ್ಟಾರ್ ಆಟಗಾರರ ದಂಡೇ ಇದ್ದು, ಹೀಗಾಗಿ ದೆಹಲಿ ಜೇಟ್ಲಿ ಸ್ಟೇಡಿಯಂನಲ್ಲಿ ಆರ್ಸಿಬಿ ಮತ್ತು ಡಿಸಿ ನಡುವೆ ಭರ್ಜರಿ ಪೈಪೋಟಿಯನ್ನಂತು ನಿರೀಕ್ಷಿಸಬಹುದು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!