ಆ್ಯಂಕರ್ ಅನುಶ್ರೀ ಮದುವೆಗೆ ದಿನಾಂಕ ಫಿಕ್ಸ್?ಈಗ ಅಧಿಕೃತವಾಗುತ್ತಿದೆ.

ಪ್ರಸಿದ್ಧ ಕನ್ನಡ ಆ್ಯಂಕರ್ ಅನುಶ್ರೀ ಅವರ ಮದುವೆಯ ಸುದ್ದಿ ಈಗ ಅಧಿಕೃತವಾಗುತ್ತಿದೆ. ಆಗಸ್ಟ್ ತಿಂಗಳಲ್ಲಿ ಅವರ ವಿವಾಹ ನಡೆಯಲಿದೆ ಎಂದು ವರದಿಗಳಿವೆ. ಬೆಂಗಳೂರಿನ ಉದ್ಯಮಿಯೊಂದಿಗೆ ಅವರ ವಿವಾಹ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಅನುಶ್ರೀ ಅವರು ಇನ್ನೂ ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿಲ್ಲ.

ಆ್ಯಂಕರ್ ಅನುಶ್ರೀ ಅವರು ಯಾವಾಗ ಮದುವೆ ಆಗುತ್ತಾರೆ ಎನ್ನುವ ಪ್ರಶ್ನೆ ಅನೇಕರನ್ನು ಕಾಡುತ್ತಿತ್ತು. ಪ್ರತಿ ವೇದಿಕೆ ಮೇಲೆ ಅವರ ಎದುರು ಪ್ರಶ್ನೆಗಳನ್ನು ಇಡಲಾಗುತ್ತಿತ್ತು. ಈ ವರ್ಷ ವಿವಾಹ ಆಗಿಯೇ ಆಗುತ್ತೇನೆ ಎಂದು ಅವರು ಭರವಸೆ ನೀಡಿದ್ದರು. ಈಗ ಅದು ನಿಜ ಆಗುತ್ತಿದೆ. ಆಗಸ್ಟ್ ತಿಂಗಳಲ್ಲಿ ಅನುಶ್ರೀ ಅವರ ವಿವಾಹ ಅದ್ದೂರಿಯಾಗಿ ನಡೆಯಲಿದೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಅನುಶ್ರೀ ಅವರು ಆ್ಯಂಕರ್ ಆಗಿ, ನಟಿಯಾಗಿ ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ನಟನೆಗಿಂತ ಆ್ಯಂಕರ್ ಆಗಿಯೇ ಅವರು ಹೆಚ್ಚು ಗುರುತಿಸಿಕೊಂಡಿದ್ದಾರೆ. ವೇದಿಕೆ ಯಾವುದೇ ಇದ್ದರೂ ಅಂಜದೆ, ಅಳುಕದೆ ಆ್ಯಂಕರಿಂಗ್ ಮಾಡುವ ಸಾಮರ್ಥ್ಯ ಅವರಿಗೆ ಇದೆ. ಇನ್ನು ಸ್ಕ್ರಿಪ್ಟ್ ಅನ್ನೋದು ಅವರಿಗೆ ಬೇಕಾಗಿಯೇ ಇಲ್ಲ. ಅಷ್ಟು ಸುಂದರವಾಗಿ, ಮನರಂಜಾತ್ಮಕವಾಗಿ ಅವರು ಆ್ಯಂಕರಿಂಗ್ ಮಾಡ ಬಲ್ಲರು. ಈ ಕಾರಣದಿಂದಲೇ ಆ್ಯಂಕರಿಂಗ್ ಲೋಕದಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಇದೆ. ಜೀ ಕನ್ನಡದ ಬಹುತೇಕ ಶೋಗಳಿಗೆ ಅವರದ್ದೇ ನಿರೂಪಣೆ ಇರುತ್ತದೆ. ಈಗ ಅವರು ಮದುವೆ ಆಗುತ್ತಿದ್ದಾರೆ ಎಂಬ ವಿಚಾರ ಹೊರ ಬಿದ್ದಿದೆ.

ಆಗಸ್ಟ್ 28ಕ್ಕೆ ಅನುಶ್ರೀ ಮದುವೆ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿದೆ. ಬೆಂಗಳೂರು ಮೂಲದ ಉದ್ಯಮಿ ರೋಷನ್ ಜೊತೆ ಅವರು ವಿವಾಹ ಆಗುತ್ತಿದ್ದಾರೆ. ಹಾಗಾದರೆ ಇದು ಲವ್ ಮ್ಯಾರೇಜಾ? ಅಲ್ಲಾ ಪಕ್ಕಾ ಅರೇಂಜ್ ಮ್ಯಾರೇಜ್ ಎನ್ನುತ್ತಿವೆ ಮೂಲಗಳು. ಕುಟುಂಬದವರು ನೋಡಿದ ಹುಡುಗನ ಜೊತೆ ಅನುಶ್ರೀ ವಿವಾಹ ಆಗುತ್ತಿದ್ದಾರಂತೆ. ಬೆಂಗಳೂರಿನಲ್ಲೇ ಈ ವಿವಾಹ ಗ್ರಾಂಡ್ಆಗಿ ನೆರವೇರಲಿದೆ ಎನ್ನಲಾಗುತ್ತಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!