ಐವರು ನುಸುಳುಕೋರರನ್ನು ಕೊ*ದು ವೀರ ಮರಣವನ್ನಪ್ಪಿದ ಯೋಧ….

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ ಮೂಲದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಶ್ರೀ ಸತ್ಯಸಾಯಿ ಜಿಲ್ಲೆಯ ಗೋರಂಟ್ಲ ಮಂಡಲದ ಕಲ್ಲಿತಾಂಡದ ಅಗ್ನಿವೀರ್ ಜವಾನ್ ಮುರಳಿ ನಾಯಕ್ (24) ಹುತಾತ್ಮ ರಾಗಿದ್ದು, ಇವರು 2022 ಅಕ್ಟೋಬರ್ ನಲ್ಲಿ ಅಗ್ನಿವೀರ್ಗೆ ಆಯ್ಕೆಯಾಗಿ, ಮಹಾ ರಾಷ್ಟ್ರದ ನಾಸಿಕ್ನಲ್ಲಿ ಕರ್ತವ್ಯ ನಿರ್ವಹಿ ಸುತ್ತಿದ್ದರು. ಗುರುವಾರ ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಕರ್ತವ್ಯದಲ್ಲಿದ್ದಾಗ ಮುರಳಿ ನಾಯಕ್, ಗುಂಡಿನ ಚಕಮಕಿಯಲ್ಲಿ ಐದು ನುಸುಳುಕೋರರನ್ನು ಕೊ*ದು, ಬಳಿಕ ಪ್ರಾಣ ತ್ಯಾಗ ಮಾಡಿದ್ದಾರೆ.

ಮುರಳಿಯ ತಂದೆ ಶ್ರೀರಾಮ್ ನಾಯಕ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ, ಬೆಳಗ್ಗೆ 9 ಗಂಟೆಗೆ ನಮಗೆ ಸೇನಾ ಅಧಿಕಾರಿಗಳು ಕರೆ ಮಾಡಿ ಮಗನ ಸಾ*ನ ಸುದ್ದಿ ತಿಳಿಸಿದರು. ಬೆಳಗಿನ ಜಾವ 3.30ರ ಸುಮಾರಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನನ್ನ ಮಗ ಮುರಳಿಯನ್ನು ಕಳೆದು ಕೊಂಡಿದ್ದೇವೆ. ಅವನನ್ನು ಕಾಶ್ಮೀರದಲ್ಲಿ ನಿಯೋಜಿಸಲಾಗಿತ್ತು. ಅವನು ಈ ವಿಷಯ ವನ್ನು ನಮ್ಮಿಂದ ಮರೆಮಾಚಿದ್ದ. ಪಂಜಾಬ್ ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ನಮಗೆ ಹೇಳಿದ್ದ ಎಂದು ದುಃಖ ತೋಡಿಕೊಂಡರು.
ಮುರಳಿ ನಮಗೆ ಒಬ್ಬನೇ ಮಗ. ಅವನಿಗೆ ಕೇವಲ 23 ವರ್ಷ. ನಮ್ಮ ದುಃಖವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ದೇಶ ಸೇವೆ ಮಾಡಲು ಸೇನೆಗೆ ಸೇರುವುದು ಅವನ ಗುರಿಯಾಗಿತ್ತು. ನನ್ನ ವಿರೋಧದ ನಡುವೆಯೂ ಅವನು ಸೇನೆಗೆ ಸೇರಿದ್ದ. ಕನಿಷ್ಠ ಒಂದು ವರ್ಷ ಸೇನಾ ಸಮವಸ್ತ್ರ ಧರಿಸಲು ಬಯಸಿದ್ದ ಅವನು ತನ್ನ ಆಸೆ ಈಡೇರೆಸಿಕೊಂಡಿದ್ದ. ನಿನ್ನೆ ಬೆಳಗ್ಗೆ 8 ಗಂಟೆಗೆ ನಮ್ಮೊಂದಿಗೆ ವಿಡಿಯೋ ಕರೆಯಲ್ಲಿ ಮಾತನಾಡಿದ್ದ ಎಂದು ತಿಳಿಸಿದರು.

ಭಾರತ ಮಾತೆಗಾಗಿ ಹಾಗೂ ದೇಶದ ರಕ್ಷಣೆಗಾಗಿ ತನ್ನ ಪ್ರಾಣವನ್ನು ತ್ಯಾಗ ಮಾಡಿದ ವೀರ ಯೋಧನನ್ನು ಸಮಸ್ತ ನಾಡು ಗೌರವಿಸುತ್ತಿದ್ದು, ಇವರ ತ್ಯಾಗ ಬಲಿದಾನವನ್ನು ಶ್ಲಾಘಿಸುವುದರ ಜೊತೆಗೆ ವೀರ ಯೋಧನ ಮರಣಕ್ಕೆ ಸಾಂತ್ವಾನವನ್ನು ಸೂಚಿಸುತ್ತಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು