ಕನ್ನಡ ಕಲಾವಿದರಿಗೆ ಗೌರವ ಕೊಡಿ ; ಡಾ.ರೂಪ ಅಯ್ಯರ್ ಆಕ್ರೋಶ !!

ಕನ್ನಡ ಚಿತ್ರರಂಗ ಹಾಗೂ ಕನ್ನಡ ಕಲಾವಿದರ ಬಗ್ಗೆ ನಟ್ಟು- ಬೋಲ್ಟು ಪದ ಉಪಯೋಗಿಸಿ ಅವಮಾನಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಖಂಡನೀಯವಾದದ್ದು ಎಂದು ಭಾರತೀಯ ಜನತಾ ಪಕ್ಷದ ಕಲೆ ಮತ್ತು ಸಂಸ್ಕೃತಿಕ ಪ್ರಕೋಷ್ಠ ರಾಜ್ಯ ಸಂಚಾಲಕಿ ಡಾ.ರೂಪ ಅಯ್ಯರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ನಡೆದ ಸಿನಿಮೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ನಟ- ನಟಿಯರ ಕುರಿತು ಮಾಡಿದ ಭಾಷಣದ ವೇಳೆ ಕಲಾವಿದರ ನಟ್ಟು- ಬೋಲ್ಟು ಸರಿ ಮಾಡ್ತೇನೆ ಎಂಬ ಅಸಡ್ಡೆ ಹೇಳಿಕೆ ನೀಡಿರುವ ಡಿ.ಕೆ ಶಿವಕುಮಾರ್ ಕೂಡಲೇ ಚಿತ್ರರಂಗದವರ ಕ್ಷಮೆ ಕೋರಬೇಕೆಂದು ಆಗ್ರಹಿಸಿದ್ದಾರೆ.
ಚಿತ್ರರಂಗವದವರಿಗೆ ಅವರದ್ದೇ ಆದ ಗೌರವ, ಸ್ಥಾನಮಾನಗಳಿವೆ. ಅದರಲ್ಲೂ ನಟ- ನಟಿಯರು ಸೇರಿದಂತೆ ತಂತ್ರಜ್ಞರು, ಕಲಾವಿದರು ಹೀಗೆ ಸಾವಿರಾರು ಮಂದಿ ಚಿತ್ರರಂಗವನ್ನು ನಂಬಿ ಬದುಕುತ್ತಿದ್ದಾರೆ. ಆದರೆ ಅಂತವರಿಗೆ ಒಂದು ಸರ್ಕಾರಿ ಆಸ್ಪತ್ರೆಗೆ ಹೋದರೇ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ..ಅಲ್ಲದೇ ಸರ್ಕಾರದ ಸವಲತ್ತುಗಳು ದೊರಕುತ್ತಿಲ್ಲ…ಹಗಲಿರುಳೆನ್ನದೇ ದುಡಿಯುವ ಚಿತ್ರರಂಗವದ ಬಗ್ಗೆ ಮಾತನಾಡುವ ನೈತಿಕತೆ ಡಿಕೆಶಿ ಅವರಿಗಿಲ್ಲ ಎಂದು ಮಾತನಾಡಿದರು .

ಒಂದು ಸಿನಿಮಾ ಮಾಡಬೇಕಾದರೇ ಎಷ್ಟು ಕಷ್ಟ ಪಡಬೇಕಿದೆ. ಚಿತ್ರಕ್ಕೆ ಸಿಗುವ ಸಬ್ಸಿಡಿಗೆ ವರ್ಷಾನುಗಟ್ಟಲೇ ಕಾಯಬೇಕಾದ ಪರಿಸ್ಥಿತಿ ಇದೆ. ಚಿತ್ರಕ್ಕೆ ಬಂಡವಾಳ ಹಾಕಿ ಕೈ ಸುಟ್ಟುಕೊಂಡು ಎಷ್ಟೋ ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಯೂ ಸಾಕಷ್ಟಿದೆ ಎಂದಿರುವ ರೂಪ ಅಯ್ಯರ್, ಅಣ್ಣಾವ್ರು ಡಾ.ರಾಜ್ ಕುಮಾರ್, ಶಂಕರ್ ನಾಗ್, ಅಂಬರೀಷ್, ವಿಷ್ಣುವರ್ಧನ್ ಅವರುಗಳ ಕಾಲದಿಂದಲೂ ಕನ್ನಡ ಚಿತ್ರರಂಗಕ್ಕೆ, ಕನ್ನಡ ಕಲಾವಿದರಿಗೆ ಅವರದ್ದೇ ಆದ ಸ್ಥಾನ ಮಾನ, ಗೌರವವಿದೆ. ಇದನ್ನು ಅರಿಯದೇ ಬಾಯಿಗೆ ಬಂದಂತೆ ಮಾತನಾಡುವುದು ಸಲ್ಲದು ಎಂದಿದ್ದಾರೆ.
ಚಿತ್ರರಂಗದವರನ್ನು ಅವರ ಪಾಡಿಗೆ ಬಿಡಿ.ಕಲಾವಿದರ ಬಗ್ಗೆ ಹಗುರವಾಗಿ ಮಾತನಾಡಿ ನಿಮ್ಮ ರಾಜಕೀಯಕ್ಕೆ ಬಳಸಿಕೊಳ್ಳಬೇಡಿ ಎಂದು ಕಿಡಿಕಾರಿದ್ದಾರೆ. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾಡಿ ಹೊರ ರಾಜ್ಯ, ದೇಶಗಳಿಂದ ಇತರರನ್ನು ಕರೆಸಿ ಹೊಗಳಿ ಸನ್ಮಾನಿಸುವುದನ್ನು ಬಿಟ್ಟು, ನಮ್ಮ ಕನ್ನಡ ಚಿತ್ರರಂಗ ಹಾಗೂ ಕನ್ನಡ ಕಲಾವಿದರಿಗೆ ಮನ್ನಣೆ ಕೊಟ್ಟು, ಪ್ರೋತ್ಸಾಹಿಸಿ. ಇಲ್ಲದಿದ್ದರೆ ಸುಮ್ಮನಿದ್ದುಬಿಡಿ. ಅದನ್ನು ಬಿಟ್ಟು ಇಲ್ಲ ಸಲ್ಲದ ಹೇಳಿಕೆಗಳನ್ನು ನೀಡಿ ಕಲಾವಿದರನ್ನು ಅವಮಾನಿಸಬೇಡಿ ಎಂದು ಕಿಡಿಕಾರಿದ್ದಾರೆ.
ಇನ್ನೂ ಉಪಮುಖ್ಯಮಂತ್ರಿಯಾಗಿ ಕಲಾವಿದರ ಬಗ್ಗೆ ಮಾತನಾಡುವುದು ನಿಜಕ್ಕೂ ಅವರ ಹುದ್ದೆಗ ಶೋಭೆ ತರುವಂತದಲ್ಲ. ರಾಜಕೀಯವಾಗಿ ಅವರ ವ್ಯಾಪ್ತಿಯಲ್ಲಿ ಏನು ಬೇಕಾದರೂ ಮಾತನಾಡಿಕೊಳ್ಳಲಿ .ಅದನ್ನು ಬಿಟ್ಟು ಬಹಿರಂಗವಾಗಿ ಕನ್ನಡ ಚಿತ್ರರಂಗ ಹಾಗೂ ಕಲಾವಿದರ ಬಗ್ಗೆ ಅವಮಾನಿಸುವಂತಹ ಹೇಳಿಕೆ ನೀಡುವುದನ್ನು ಈ ಕೂಡಲೇ ನಿಲ್ಲಿಸಲಿ ಎಂದು ರೂಪ ಅಯ್ಯರ್ ಒತ್ತಾಯಿಸಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು