ರಾಜ್ಯದಲ್ಲಿರುವ ಪಾಕಿಸ್ತಾನಿಗಳನ್ನು ಹುಡುಕಿ ಶೀಘ್ರದಲ್ಲೇ ಗೇಟ್ ಪಾಸ್ : CM ಸಿದ್ದು

ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ರಾಜ್ಯದ ವಿವಿಧ ನಗರಗಳಲ್ಲಿ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗವುದು ಎಂದರು.ಕಾಶ್ಮೀರದಲ್ಲಿ ಭದ್ರತೆ ಹೆಚ್ಚಿಸಬೇಕಿತ್ತು.ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು.ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು. ಈ ಘಟನೆಯಲ್ಲಿ ಭದ್ರತಾ ವೈಫಲ್ಯವಾಗಿದೆ. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ ? ಕಾಶ್ಮೀರದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆಗೆ ಸಚಿವ ಸಂತೋಷ್ ಲಾಡ್ ಅವರನ್ನು ನಿಯೋಜಿಸಿದ್ದು, ಅವರು ಎಲ್ಲ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತಂದಿದ್ದಾರೆ ಎಂದರು.

ನಾವು ಯುದ್ಧದ ಪರ ಇಲ್ಲ….ಉಗ್ರರ ದಾಳಿಗೆ ಸಂಬಂಧಿಸಿದಂತೆ, ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇದೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅಗತ್ಯವಿಲ್ಲ.ಕಾಶ್ಮೀರದ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು. ನಾವು ಯುದ್ಧದ ಪರ ಇಲ್ಲ. ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕೇಂದ್ರಸರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು ಎಂದರು.

ಪ್ರಧಾನಿಯವರು ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ….ಕಾಶ್ಮೀರದ ಉಗ್ರರ ದಾಳಿಗೆ ಸಂಭಂಧಿಸಿದಂತೆ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿಯವರು ಭಾಗವಹಿಸದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಮಹತ್ವಯುತ ಸಭೆಯಾಗಿದ್ದು, ಪ್ರಧಾನಿಯವರು ಈ ಸಭೆಯಲ್ಲಿ ಹಾಜರಿರಬೇಕಿತ್ತು. ಆದರೆ ಅವರಿಗೆ ಈ ಸಭೆಗಿಂತ ಬಿಹಾರದ ಚುನಾವಣಾ ಪ್ರಚಾರವೇ ಮುಖ್ಯವೆಂದು ಕಾಣುತ್ತದೆ. ಪ್ರಧಾನಿಯವರು ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು