ಕಿಂಗ್ ಕೊಹ್ಲಿ ಅಬ್ಬರಕ್ಕೆ ರೆಕಾರ್ಡ್ಸ್ ಗಳು ಉಡೀಸ್….

ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ದಾಖಲೆಗಳ ಸರಮಾಲೆ ಮುಂದುವರೆದಿದೆ. ಇದೀಗ ಈ ದಾಖಲೆಗಳ ಪಟ್ಟಿಗೆ ಒಂದಷ್ಟು ಹೊಸ ದಾಖಲೆಗಳು ಸೇರ್ಪಡೆಯಾಗಿವೆ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…

ಇಂಡಿಯನ್ ಪ್ರೀಮಿಯರ್ ಲೀಗ್ನ 52ನೇ ಪಂದ್ಯದ ಮೂಲಕ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದು ಸಹ ದಾಖಲೆಗಳ ಮೇಲೆಯೇ ದಾಖಲೆಗಳನ್ನು ಬರೆಯುವ ಮೂಲಕ ಎಂಬುದು ವಿಶೇಷ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಸಿಎಸ್ಕೆ ವಿರುದ್ಧ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ಪರ ವಿರಾಟ್ ಕೊಹ್ಲಿ 33 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 66 ರನ್ ಬಾರಿಸಿದ್ದರು. ಈ ಭರ್ಜರಿ ಬ್ಯಾಟಿಂಗ್ನೊಂದಿಗೆ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳ ಸಂಪೂರ್ಣ ಪಟ್ಟಿ ಈ ಕೆಳಗಿನಂತಿದೆ.

ಸಿಕ್ಸರ್ ಕಿಂಗ್: ಈ ಪಂದ್ಯದಲ್ಲಿ ಬಾರಿಸಿದ 5 ಸಿಕ್ಸ್ಗಳೊಂದಿಗೆ ವಿರಾಟ್ ಕೊಹ್ಲಿ ಆರ್ಸಿಬಿ ಪರ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಆರ್ಸಿಬಿ ಪರ 300+ ಸಿಕ್ಸ್ ಬಾರಿಸಿದ ಏಕೈಕ ಬ್ಯಾಟ್ಸ್ಮನ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿ ಆರ್ಸಿಬಿ ಪರ ಈವರೆಗೆ 304 ಸಿಕ್ಸ್ಗಳನ್ನು ಬಾರಿಸಿದ್ದಾರೆ.

 

 

ಸಿಕ್ಸರ್ ಸರದಾರ: ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಮೈದಾನದಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೂ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 151 ಸಿಕ್ಸ್ ಬಾರಿಸಿ ಗೇಲ್ ಈ ದಾಖಲೆ ಬರೆದಿದ್ದರು. ಇದೀಗ ಬೆಂಗಳೂರಿನಲ್ಲಿ 154 ಸಿಕ್ಸ್ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಈ ದಾಖಲೆ ಮುರಿದಿದ್ದಾರೆ.

500+ ರನ್ಸ್: ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ 500+ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಕೂಡ ವಿರಾಟ್ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ 7 ಬಾರಿ 500+ ರನ್ ಕಲೆಹಾಕಿದ ಡೇವಿಡ್ ವಾರ್ನರ್ ಹೆಸರಿನಲ್ಲಿತ್ತು. ಇದೀಗ 8ನೇ ಬಾರಿ 500+ ಸ್ಕೋರ್ಗಳಿಸಿ ವಿರಾಟ್ ಕೊಹ್ಲಿ ಇತಿಹಾಸ ನಿರ್ಮಿಸಿದ್ದಾರೆ.

ಅರ್ಧಶತಕದ ವೀರ: ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ ಡೇವಿಡ್ ವಾರ್ನರ್ (62) ಅವರ ದಾಖಲೆಯನ್ನು ಸಹ ವಿರಾಟ್ ಕೊಹ್ಲಿ ಸರಿಗಟ್ಟಿದ್ದಾರೆ. ಸಿಎಸ್ಕೆ ವಿರುದ್ಧದ ಅರ್ಧಶತಕದೊಂದಿಗೆ ಕೊಹ್ಲಿಯ ಐಪಿಎಲ್ ಹಾಫ್ ಸೆಂಚುರಿಗಳ ಸಂಖ್ಯೆ 62 ಕ್ಕೇರಿದೆ.

ರನ್ ಸರದಾರ: ಐಪಿಎಲ್ ಇತಿಹಾಸದಲ್ಲಿ ಒಂದು ತಂಡದ ಪರ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಕೂಡ ವಿರಾಟ್ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಡೇವಿಡ್ ವಾರ್ನರ್ ಹೆಸರಿನಲ್ಲಿತ್ತು. ವಾರ್ನರ್ ಪಂಜಾಬ್ ಕಿಂಗ್ಸ್ ವಿರುದ್ಧ 1134 ರನ್ ಬಾರಿಸಿ ಈ ದಾಖಲೆ ಬರೆದಿದ್ದರು. ಇದೀಗ ಸಿಎಸ್ಕೆ ವಿರುದ್ಧ 1146 ರನ್ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.ಒಟ್ಟಾರೆಯಾಗಿ ಎಲ್ಲವೂ ಆರ್‌ಸಿಬಿ ಆಟಗಾರರು ಅಂದುಕೊಂಡಂತೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಿತು. ಇದರಿಂದ 11 ಪಂದ್ಯಗಳನ್ನಾಡಿರುವ ಆರ್‌ಸಿಬಿ ತಂಡವು 8 ಗೆಲುವನ್ನು ಸಾಧಿಸಿ 16 ಅಂಕಗಳೊಂದಿಗೆ ಮತ್ತೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

 

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!