ಕೋಳಿಗಳಲ್ಲಿ ಹಕ್ಕಿ ಜ್ವರ ಭೀತಿ ; ಕಟ್ಟೆಚ್ಚರಕ್ಕೆ ಸರ್ಕಾರ ಆದೇಶ.

ಸತ್ತ ಕೋಳಿಗಳ ಸ್ಯಾಂಪಲ್ ಭೂಪಾಲ್ ಸಂಶೋಧನಾಲಯಕ್ಕೆ ರವಾನೆ, ಹಕ್ಕಿಜ್ವರ

ಬೆಂಗಳೂರು :- ಕೋಳಿಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸುವಂತೆ ಸರ್ಕಾರ ಆದೇಶ ಮಾಡಿದೆ.
ಚಿಕ್ಕಬಳ್ಳಾಪುರ, ಬಳ್ಳಾರಿ, ರಾಯಚೂರು, ಕೊಪ್ಪಳ, ತುಮಕೂರಿನ ಕೆಲವು ಪ್ರದೇಶ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಈ ಸಾಂಕ್ರಾಮಿಕ ರೋಗ ಕಂಡು ಬಂದಿದೆ. ಸಾಮೂಹಿಕವಾಗಿ ಕೋಳಿಗಳು ಸಾಯುತ್ತಿ ರುವ ಹಿನ್ನೆಲೆಯಲ್ಲಿ ರೋಗ ಪತ್ತೆಗೆ ಭೂಪಾಲ್ನ ಸಂಶೋಧನಾ ಕೇಂದ್ರಕ್ಕೆ ಮೃತ ಕೋಳಿಗಳ ಸ್ಯಾಂಪಲ್ ಕಳುಹಿಸಲಾಗಿದೆ. ರಾಜ್ಯದಲ್ಲಿ ಹಕ್ಕಿ ಜ್ವರ ಕಾಣಿಸಿಕೊಳ್ಳು ತ್ತಿದ್ದಂತೆ ಕುಕ್ಕುಟ ಉದ್ಯಮ ನೆಲೆ ಕಚ್ಚಿದೆ. ಮುಂದಿನ ದಿನಗಳಲ್ಲಿ ಕೋಳಿ ಸಾಕಾಣಿಕೆದಾರರಿಗೆ ನಷ್ಟ ಉಂಟಾ ಗುವ ಸಾಧ್ಯತೆಗಳು ಕಂಡುಬರುತ್ತಿವೆ. ರೋಗ ಕಂಡು ಬಂದ ಕಡೆಗಳ ಪ್ರದೇಶದ ಮೂರು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಪಶುಸಂಗೋಪನಾ ಮತ್ತು ಆರೋಗ್ಯ ಇಲಾಖೆ ಜಂಟಿಯಾಗಿ ಎಲ್ಲಾ ಕೋಳಿಗಳನ್ನು ಸಾಯಿಸುತ್ತಿದೆ. ಪ್ರಾಥಮಿಕ ವರದಿ ಪ್ರಕಾರ ಮೃತ ಕೋಳಿಗಳಲ್ಲಿ
ಎಚ್5ಎನ್ ಏವಿಯನ್ ಇನ್ನೂಯೆನ್ನಾ ರೋಗಾಣು ಇರುವುದು ಪತ್ತೆಯಾಗಿದೆ. ಇದು ವ್ಯಾಪಕವಾಗಿ ಹರಡು ವುದನ್ನು ತಡೆಗಟ್ಟಲು ಎರಡೂ ಇಲಾಖೆಗಳು ಕೆಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವುದಲ್ಲದೆ, ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಈ ರೋಗ ಪಕ್ಷಿಗಳಿಂದ ಕೋಳಿಗೆ ಹರಡಿರಬಹುದು ಎಂಬ ಸಂಶಯವಿದೆ, ಆದರೆ, ಇದುವರೆಗೂ ಈ ರೋಗ ಮನುಷ್ಯರಿಗೆ ತಗುಲಿರುವ ವರದಿ ಇಲ್ಲ. ಮೊದಲು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಣಿಸಿಕೊಂಡ ಹಕ್ಕಿ ಜ್ವರ ಎರಡು-ಮೂರು ದಿನಗಳಲ್ಲೇ ರಾಜ್ಯದ ಇತರೆ ಭಾಗಗಳಿಗೆ ಹರಡಿರುವುದರಿಮದ ಆರೋಗ್ಯ ಇಲಾಖೆ ಆತಂಕ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲೇ ಕಟ್ಟೆಚ್ಚರ ವಹಿಸುವ ಜೊತೆಗೆ ವಿವಿಧ ಭಾಗಗಳ ಕೋಳಿಗಳ ರೋಗ ಪರೀಕ್ಷೆಗೆ ಮುಂದಾಗಿದೆ. ಬೇಸಿಗೆ ಸಂದರ್ಭದಲ್ಲಿ ಕೋಳಿ ಗಳಿಗೆ ಹಕ್ಕಿ ಜ್ವರ ತಗಲುವುದು ಸಾಮಾನ್ಯ, ರೋಗಕ್ಕೆ ತುತ್ತಾದ ಕೋಳಿ ಮಾಂಸ ಸೇವನೆ ಮಾಡಿದರೆ ಮನುಷ್ಯ ನಿಗೂ ಸಾಂಕ್ರಾಮಿಕ ರೋಗ ತಗಲುವ ಸಾಧ್ಯತೆ ಇದೆ.
ಹಾಸಿಗೆ ಮೀಸಲಿಡಲು ಸೂಚನೆ: ಕೋಳಿ ಮಾಂಸ
ತಿನ್ನುವ ಮೊದಲು ಹೆಚ್ಚಿನ ಉಷ್ಣತೆಯಲ್ಲಿ ಬೇಯಿಸಿ ಬಳಸಿದರೆ ದುಷ್ಪರಿಣಾಮ ಉಂಟಾಗದು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಹಕ್ಕಿ ಜ್ವರ ಕಾಣಿಸಿ ಕೊಂಡಿರುವ ಪ್ರದೇಶಕ್ಕೆ ಹತ್ತಿರದ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಹಾಸಿಗೆಗಳನ್ನು ಮೀಸಲಿಡುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಇಲಾಖೆ ಸೂಚಿಸಿದೆ. ಅಲ್ಲದೆ, ರೋಗ ಕಾಣಿಸಿಕೊಂಡ ವ್ಯಕ್ತಿಗಳಿಗೆ ಅಗತ್ಯ ಔಷಧ ನೀಡಲು ಸಿದ್ಧತೆ ಮಾಡಿಕೊಳ್ಳುವಂತೆಯೂ ತಿಳಿಸಲಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!