ಗಡ್ಡವಿದೆ ಎಂದು ಕಾಶ್ಮೀರಿ ವೈದ್ಯನಿಗೆ ಮೆಡಿಕಲ್ ಕಾಲೇಜಿನಲ್ಲಿ ದಾಖಲಾತಿ ನಿರಾಕರಣೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ……..

ನೆಫ್ರಾಲಜಿ ಸ್ಪೆಷಲೈಸೇಷನ್ಗೆ ಸ್ಪರ್ಧಾತ್ಮಕವಾದ NEET-SS ಪರೀಕ್ಷೆಯಲ್ಲಿ ಉತ್ತೀರ್ಣರಾದ ಜಮ್ಮು ಮತ್ತು ಕಾಶ್ಮೀರದ ವೈದ್ಯ ಜುಬೈರ್ ಅಹ್ಮದ್ ತಮಿಳುನಾಡಿನ ಕೊಯಮತ್ತೂರಿನ ಕೊವಾಯ್ ಮೆಡಿಕಲ್ ಸೆಂಟರ್ ಆ್ಯಂಡ್ ಹಾಸ್ಪಿಟಲ್ ನಲ್ಲಿ ಕೌನ್ಸೆಲಿಂಗ್ ಸಮಯದಲ್ಲಿ ಅನಿರೀಕ್ಷಿತ ಆಘಾತ ಎದುರಾಯಿತು. ತಮ್ಮ ಮೆಡಿಕಲ್ ಕಾಲೇಜಿನ ಡ್ರೆಸ್ ಕೋಡ್ ಉಲ್ಲಂಘನೆಯನ್ನು ಉಲ್ಲೇಖಿಸಿ ಕಾಲೇಜು ಅಧಿಕಾರಿಗಳು ಆ ವೈದ್ಯ ಗಡ್ಡ ಬೋಳಿಸಿಕೊಳ್ಳದ ಹೊರತು ಅವರನ್ನು ಕಾಲೇಜಿಗೆ ಸೇರಿಸಿಕೊಳ್ಳಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಅಹ್ಮದ್ ಅವರು ಗಡ್ಡ ಬೋಳಿಸುವೆನೆಂದು ಭರವಸೆಯನ್ನು ನೀಡಿದರೂ ತಮಿಳುನಾಡಿನ ಆಸ್ಪತ್ರೆ ಆಡಳಿತ ಸೀಟು ನೀಡಲು ನಿರಾಕರಿಸಿತು. ಅವರ 2 ಲಕ್ಷ ರೂ. ಅಡ್ಮಿಷನ್ ಡೆಪಾಸಿಟ್ ಅನ್ನು ಸಹ ತಡೆಹಿಡಿಯಿತು.

ಈ ಘಟನೆಯು ಧಾರ್ಮಿಕ ತಾರತಮ್ಯದ ಆರೋಪಗಳನ್ನು ಹುಟ್ಟುಹಾಕಿದೆ. ಏಕೆಂದರೆ ಗಡ್ಡವು ಅನೇಕ ಮುಸ್ಲಿಂ ಪುರುಷರಿಗೆ ಸಾಂಸ್ಕೃತಿಕ ಮತ್ತು ಧಾರ್ಮಿಕ ಮಹತ್ವವನ್ನು ಹೊಂದಿದೆ. ಇದೀಗ ಕಾಶ್ಮೀರದ ವಿದ್ಯಾರ್ಥಿ ಸಂಘವು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಮನವಿ ಸಲ್ಲಿಸಿದ್ದು, ಕಾಲೇಜಿನ ಕ್ರಮಗಳು ಭಾರತೀಯ ಸಂವಿಧಾನದ 25ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದ್ದಾರೆ. ತಮ್ಮ ಪತ್ರದಲ್ಲಿ ವಿದ್ಯಾರ್ಥಿ ಸಂಘವು, ಶಿಕ್ಷಣ ಸಂಸ್ಥೆಗಳು ಮೂಲಭೂತ ಹಕ್ಕುಗಳೊಂದಿಗೆ ಸಂಘರ್ಷಿಸುವ ಡ್ರೆಸ್ ಕೋಡ್ಗಳನ್ನು ವಿಧಿಸಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿದೆ. “ಈ ನಿರಾಕರಣೆ ಧಾರ್ಮಿಕ ಪೂರ್ವಾಗ್ರಹದಿಂದ ಉಂಟಾಗಿದ್ದು, ಅದು ಅಪಾಯಕಾರಿಯಾಗಿದೆ” ಎಂದು ಒಕ್ಕೂಟದ ಪ್ರತಿನಿಧಿಯೊಬ್ಬರು ಹೇಳಿದ್ದಾರೆ.

Related Posts

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್