ಗರ್ಭಪಾತಕ್ಕೆ ಬಾಂಬೆ ಹೈಕೋರ್ಟ್​ ಒಪ್ಪಿಗೆ, ಕಾರಣವೇನು?

ಮಹಿಳೆ ತಾನು ಗರ್ಭಿಣಿ ಎಂದು ತಿಳಿಯುತ್ತಿದ್ದಂತೆ ಮಗುವನ್ನು ಬರಮಾಡಿಕೊಳ್ಳಲು ಒಂದೊಂದೇ ತಯಾರಿಯನ್ನು ಆರಂಭಿಸುತ್ತಾಳೆ. ನೂರಾರು ಕನಸುಗಳನ್ನು ಕಾಣುತ್ತಾಳೆ. ಒಂದೊಮ್ಮೆ ಇನ್ನೇನು ಕೆಲವೇ ದಿನಗಳಲ್ಲಿ ಹೆರಿಗೆಯಾಗುತ್ತದೆ ಎನ್ನುವ ಖುಷಿಯಲ್ಲಿದ್ದಾಗ ಮಗುವಿಗೆ ಕಾಯಿಲೆ ಎಂದು ಗೊತ್ತಾದರೆ ಆಕೆಯ ಮನಸ್ಸು ಘಾಸಿಗೊಳ್ಳುತ್ತದೆ. ಅಂಥದ್ದೇ ಘಟನೆ ಮುಂಬೈನಲ್ಲಿ ನಡೆದಿದೆ.
26 ವರ್ಷದ ಮಹಿಳೆ 8 ತಿಂಗಳ ಗರ್ಭಿಣಿ, 20 ವಾರಗಳು ಕಳೆದ ಬಳಿಕ ಹೊಟ್ಟೆಯಲ್ಲಿರುವ ಮಗುವಿಗೆ ಮ್ಯಾಕ್ರೋಸೆಫಾಲಿ(ಅಸಹಜ ದೊಡ್ಡ ತಲೆ) ಮತ್ತು ಮೆದುಳಿಗೆ ಸಂಬಂಧಿಸಿದ ಗಂಭೀರ ಸಮಸ್ಯೆಗಳಿವೆ ಎಂಬುದು ತಿಳಿದುಬಂದಿದೆ. ಜೆಜೆ ಆಸ್ಪತ್ರೆಯ ವೈದ್ಯಕೀಯ ಮಂಡಳಿಯು ಗರ್ಭಪಾತವನ್ನು ಸರ್ವಾನುಮತದಿಂದ ಶಿಫಾರಸು ಮಾಡಿತ್ತು. ಮಗುವಿಗೆ ಅಪಸ್ಮಾರ, ಮಾನಸಿಕ ದೌರ್ಬಲ್ಯ, ನಡೆಯಲು ತೊಂದರೆ ಮತ್ತು ದೃಷ್ಟಿ ದುರ್ಬಲತೆಯಂತಹ ಗಂಭೀರ ಆರೋಗ್ಯ ಸಮಸ್ಯೆಗಳಿವೆ ಎಂದು ಮಂಡಳಿ ತಿಳಿಸಿದೆ.
ಕೇಂದ್ರ ಸರ್ಕಾರದ ಆಗಸ್ಟ್ 2018 ರ ಮಾರ್ಗಸೂಚಿಯನ್ನು ಉಲ್ಲೇಖಿಸಿ, ಮಹಿಳೆ 20 ವಾರಗಳ ನಂತರ ಗರ್ಭಪಾತಕ್ಕೆ ಅನುಮತಿ ಕೋರಿದ್ದರು. ಮಹಿಳೆಯ ಸಂತಾನೋತ್ಪತ್ತಿ ಹಕ್ಕುಗಳು, ಆಕೆಯ ದೈಹಿಕ ಸ್ವಾಯತ್ತತೆ ಮತ್ತು ಆಯ್ಕೆ ಮಾಡುವ ಹಕ್ಕನ್ನು ಗಣನೆಗೆ ತೆಗೆದುಕೊಂಡು ವೈದ್ಯಕೀಯ ಮಂಡಳಿಯ ಅಭಿಪ್ರಾಯವನ್ನು ನ್ಯಾಯಾಲಯವು ಒಪ್ಪಿಕೊಂಡಿತು ಮತ್ತು ಗರ್ಭಪಾತಕ್ಕೆ ಅನುಮತಿ ನೀಡಿತು.

ಕೇಂದ್ರ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳು ಮತ್ತು ಮಹಾರಾಷ್ಟ್ರ ಸರ್ಕಾರ ಅಳವಡಿಸಿಕೊಂಡ ನೀತಿಯ ಪ್ರಕಾರ, ವೈದ್ಯಕೀಯ ತಜ್ಞರು ಅಗತ್ಯವೆಂದು ಭಾವಿಸಿದರೆ ವೈದ್ಯರು MTP ಕಾರ್ಯವಿಧಾನವನ್ನು ನಿರ್ವಹಿಸಲು ನಾವು ಅವಕಾಶ ನೀಡುತ್ತೇವೆ ಎಂದು ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ಡೆರೆ ಮತ್ತು ನೀಲಾ ಗೋಕಲೆ ಅವರ ಪೀಠವು ತನ್ನ ಆದೇಶದಲ್ಲಿ ತಿಳಿಸಿದೆ.
ಗರ್ಭಾವಸ್ಥೆಯು 24 ವಾರಗಳಿಗಿಂತ ಹೆಚ್ಚು ಕಾಲ ಇದ್ದರೆ, ಭ್ರೂಣವು ಜೀವಂತವಾಗಿ ಜನಿಸದಂತೆ, ಅಲ್ಟ್ರಾಸೌಂಡ್-ಮಾರ್ಗದರ್ಶಿತ ಕಾರ್ಯವಿಧಾನದ ಮೂಲಕ ಭ್ರೂಣದ ಹೃದಯ ಬಡಿತವನ್ನು ನಿಲ್ಲಿಸಲು ಮಾರ್ಗಸೂಚಿಗಳು ಅವಕಾಶ ನೀಡುತ್ತವೆ ಎಂದು ಮಹಿಳೆಯ ವಕೀಲರಾದ ಮೀನಾಜ್ ಕಾಕ್ಲ್ಯಾ ನ್ಯಾಯಾಲಯದಲ್ಲಿ ವಾದಿಸಿದರು. ಕೇಂದ್ರದ ಈ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರವೂ ಅಳವಡಿಸಿಕೊಂಡಿದ್ದು, ಇದರ ಅಡಿಯಲ್ಲಿ ಗರ್ಭಪಾತಕ್ಕೆ ಅವಕಾಶ ನೀಡಲಾಗಿದೆ..ಗರ್ಭಪಾತಕ್ಕೆ ಸಂಬಂಧಿಸಿದ ಕಾನೂನು ಏನು ಹೇಳುತ್ತದೆ? 20 ವಾರಗಳವರೆಗೆ ಯಾವುದೇ ವಿಶೇಷ ಅನುಮತಿಯಿಲ್ಲದೆ ಗರ್ಭಪಾತವನ್ನು ಮಾಡಬಹುದು. ಆದಾಗ್ಯೂ, 20 ರಿಂದ 24 ವಾರಗಳ ನಡುವೆ, ವೈದ್ಯರ ಸಮಿತಿಯ ಅನುಮೋದನೆಯ ನಂತರ ಕೆಲವು ಸಂದರ್ಭಗಳಲ್ಲಿ ಮಾತ್ರ ಇದನ್ನು ಮಾಡಬಹುದು. 24 ವಾರಗಳಿಗಿಂತ ಹೆಚ್ಚಿನ ಅವಧಿಯ ಗರ್ಭಧಾರಣೆಯನ್ನು ಅಂತ್ಯಗೊಳಿಸಲು ನ್ಯಾಯಾಲಯದ ಅನುಮತಿ ಅಗತ್ಯವಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!