ಗರ್ಲ್ಸ್‌ ಹಾಸ್ಟೆಲ್‌ನಲ್ಲಿ ಹಿಡನ್‌ ಕ್ಯಾಮೆರಾ ; 300 ಕ್ಕೂ ಹೆಚ್ಚು ವಿಡಿಯೋ ಸೆರೆ ?

ಇತ್ತೀಚಿಗಷ್ಟೇ ಹಿಂದೆ ಉಡುಪಿಯ ಕಾಲೇಜೊಂದರ ವಾಶ್ರೂಮ್ನಲ್ಲಿ ಹಿಡನ್ ಕ್ಯಾಮೆರಾ ಇಟ್ಟಿದ್ದಂತಹ ಘಟನೆಯೊಂದು ಭಾರೀ ವಿವಾದವನ್ನು ಸೃಷ್ಟಿಸಿತ್ತು. ಇದೀಗ ಇಲ್ಲೊಂದು ಗರ್ಲ್ಸ್ ಹಾಸ್ಟೆಲ್ ಬಾತ್ರೂಮ್ನಲ್ಲಿ ಹಿಡನ್ ಕ್ಯಾಮೆರಾ ಅಳವಡಿಸಲಾಗಿದೆ ಎಂಬ ಆರೋಪವೊಂದು ಕೇಳಿ ಬಂದಿದೆ. ಹಾಸ್ಟೆಲ್ ವಾಶ್ರೂಮ್ನಲ್ಲಿ ಅಡುಗೆ ಸಿಬ್ಬಂದಿ ಹಿಡನ್ ಕ್ಯಾಮೆರಾ ಇಟ್ಟು ವಿಡಿಯೋ ಚಿತ್ರೀಕರಿಸಿದ್ದಾನೆ ಎಂದು ಆರೋಪಿಸಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಇದೀಗ ಪ್ರತಿಭಟನೆಗೆ ಇಳಿದಿದ್ದಾರೆ.


ಈ ಘಟನೆ ತೆಲಂಗಾಣದ ಮೇಡ್ಚಲ್ನ ಸಿಎಂಆರ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದ್ದು, ಹಾಸ್ಟೆಲ್ ಬಾತ್ರೂಮ್ನಲ್ಲಿ ಹಿಡನ್ ಕ್ಯಾಮೆರಾ ಕ್ಯಾಮೆರಾ ಇಟ್ಟಿದ್ದಾರೆ ಎಂದು ಆರೋಪಿಸಿ ಇಲ್ಲಿನ ವಿದ್ಯಾರ್ಥಿನಿಯರು ಪ್ರತಿಭಟನೆಗೆ ಇಳಿದಿದ್ದಾರೆ. ಹಾಸ್ಟೆಲ್ ಬಾತ್ರೂಮ್ನಲ್ಲಿ ಅಡುಗೆ ಸಿಬ್ಬಂದಿಯೇ ಹಿಡನ್ ಕ್ಯಾಮೆರಾ ಇಟ್ಟಿರಬಹುದೆಂದು ಹಲವರು ಆರೋಪಿಸಿದ್ದಾರೆ.
ಟಾಯ್ಲೆಟ್, ವಾಶ್ರೂಮ್ಗಳಲ್ಲಿ ಹಿಡನ್ ಕ್ಯಾಮೆರಾ, ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿದಂತಹ ಪ್ರಕರಣಗಳ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇತ್ತೀಚಿಗಷ್ಟೇ ಆಂಧ್ರಪ್ರದೇಶದ ಇಂಜಿನಿಯರ್ ಕಾಲೇಜಿನಲ್ಲಿ ಮಹಿಳಾ ಹಾಸ್ಟೆಲ್ ವಾಶ್ ರೂಮ್ನಲ್ಲಿ ರಹಸ್ಯ ಕ್ಯಾಮೆರಾ ಪತ್ತೆಯಾದ ಆತಂಕಕಾರಿ ಘಟನೆ ನಡೆದಿತ್ತು. ಇದೀಗ ಇಲ್ಲೊಂದು ಅಂತಹದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ಗರ್ಲ್ಸ್ ಹಾಸ್ಟೆಲ್ ಬಾತ್ರೂಮ್ನಲ್ಲಿ ಹಿಡನ್ ಕ್ಯಾಮೆರಾ ಅಳವಡಿಸಲಾಗಿದೆ ಎಂಬ ಆರೋಪವೊಂದು ಕೇಳಿ ಬಂದಿದೆ ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಇದೀಗ ಪ್ರತಿಭಟನೆಗೆ ಇಳಿದಿದ್ದಾರೆ. ತೀವ್ರ ಮಟ್ಟದ ಪ್ರತಿಭಟನೆ ನಡೆದಿದ್ದು, ಘಟನೆಯ ಬಗ್ಗೆ ಮಾಹಿತಿ ಪಡೆದ ಮೇಡ್ಚಿಲ್ ಪೊಲೀಸರು ಕೂಡಲೇ ಸ್ಥಳಕ್ಕಾಗಮಿಸಿ ತನಿಖೆ ಆರಂಭಿಸಿದ್ದಾರೆ. ಜೊತೆಗೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ವಿದ್ಯಾರ್ಥಿನಿಯರಿಗೆ ಭರವಸೆ ನೀಡಿದ್ದಾರೆ.

31ರಂದು ಹೊಸ ವರ್ಷದ ಸಂಭ್ರಮದ ಅಂಗವಾಗಿ ಹಾಸ್ಟೆಲ್ನಲ್ಲಿ ಡಿಜೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ನಂತರ, ಎಲ್ಲಾ ಹುಡುಗಿಯರು ಹಾಸ್ಟೆಲ್ಗೆ ಹೋದಾಗ, ಅಲ್ಲಿ ಕ್ಯಾಮೆರಾ ಇರುವುದನ್ನು ಅವರು ಪತ್ತೆ ಹಚ್ಚಿದ್ದಾರೆ. ಅಲ್ಲದೆ ಬಾತ್ ರೂಂನ ವೆಂಟಿಲೇಟರ್ನಲ್ಲಿ ಕೈಗಳ ಗುರುತು, ಕನ್ನಡಿಯ ಮೇಲೆ ಹೊರಗಿನಿಂದ ಕ್ಯಾಮೆರಾ ಇಟ್ಟಿರುವ ಗುರುತುಗಳು ಪತ್ತೆಯಾಗಿವೆ ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ. ಜೊತೆಗೆ ಕಳೆದ ಮೂರು ತಿಂಗಳಿನಿಂದ ಸುಮಾರು 300 ರೆಕಾರ್ಡಿಂಗ್ಗಳನ್ನು ಸೆರೆ ಹಿಡಿಯಲಾಗಿದೆ, ಇದೆಲ್ಲಾ ಅಡುಗೆ ಸಿಬ್ಬಂದಿಯೇ ಮಾಡಿರಬೇಕು ಎಂಬ ಸಂಶಯವಿದೆ ಎಂದು ವಿದ್ಯಾರ್ಥಿನಿಯರು ಹೇಳಿಕೆ ನೀಡಿದ್ದಾರೆ.

ಸದ್ಯ ವಿದ್ಯಾರ್ಥಿನಿಯರ ದೂರು ಸ್ವೀಕರಿಸಿದ ಪೊಲೀಸರು ಏಳು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅವರಿಂದ 12 ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಾಳೆಯೊಳಗೆ ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆ ತೀವ್ರಗೊಳಿಸುವುದಾಗಿ ವಿದ್ಯಾರ್ಥಿ ಸಂಘಟನೆಗಳು ಎಚ್ಚರಿಕೆ ನೀಡಿವೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!