
ಅಖಿಲಾ ಅವರು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನವರು. ಕಿರುತೆರೆ ಹಾಗೂ ಸೋಶಿಯಲ್ ಮೀಡಿಯಾ ಮೂಲಕ ಅವರು ಖ್ಯಾತಿ ಗಳಿಸಿದ್ದಾರೆ. ಸುಮಧುರ ಗಾಯನದ ಮೂಲಕ ಅವರು ಜನಮನ ಗೆದ್ದಿದ್ದಾರೆ. ಅವರು ಈಗ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದು ಅಚ್ಚರಿ ಮೂಡಿಸಿದೆ. ಅಖಿಲಾ ಪಜಿಮಣ್ಣು ಹಾಗೂ ಧನಂಜಯ್ ಶರ್ಮಾ ಅವರು ಪುತ್ತೂರು ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಅಖಿಲಾ ಪಜಿಮಣ್ಣು ಮತ್ತು ಧನಂಜಯ್ ಶರ್ಮಾ ನಡುವೆ ಮಧ್ಯಸ್ಥಿಕೆಗೆ ಕಳೆದ ಆರು ತಿಂಗಳಿಂದ ಕೋರ್ಟ್ ಅವಕಾಶ ನೀಡಿತ್ತು. ಬುಧವಾರ ಈ ದಂಪತಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಮ್ಯೂಚುಯಲ್ ಡಿವೋರ್ಸ್ ಪಡೆಯಲು ಇಬ್ಬರೂ ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಧನಂಜಯ್ ಶರ್ಮ ಅವರು ಪುತ್ತೂರಿನ ನ್ಯಾಯಾಲಯಕ್ಕೆ ಆಗಮಿಸಿ ಹೇಳಿಕೆ ನೀಡಿ ವಾಪಸ್ ತೆರಳಿದ್ದಾರೆ. ಸದ್ಯದಲ್ಲೇ ಅವರು ಅಮೆರಿಕಕ್ಕೆ ಹೋಗಲಿದ್ದಾರೆ. ಸದ್ಯ ನ್ಯಾಯಾಲಯದಲ್ಲಿ ಈ ದಂಪತಿಯ ವಿಚ್ಛೇದನ ಅರ್ಜಿಯ ವಿಚಾರಣೆ ಮುಗಿದಿದೆ. ನ್ಯಾಯಾಲಯವು ಶುಕ್ರವಾರಕ್ಕೆ (ಜೂನ್ 19) ತೀರ್ಪು ಕಾಯ್ದಿರಿಸಿದೆ. ಅರೇಂಜ್ ಮ್ಯಾರೇಜ್ ಮಾಡಿಕೊಂಡಿದ್ದ ಅಖಿಲಾ ಮತ್ತು ಧನಂಜಯ್ ಅವರು ಈಗ ವಿಚ್ಛೇದನ ಪಡೆದುಕೊಳ್ಳುತ್ತಿದ್ದಾರೆ.





