ಚೇಸ್ ಮಾಸ್ಟರ್ ಕಿಂಗ್ ಕೊಹ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಗೆ ಪಾಕ್ ದಾಂಡಿಗನ ವಿಶ್ವ ದಾಖಲೆ ಧೂಳಿಪಟ

Chase Master Records: ಟಿ20 ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿಯ ನಾಗಾಲೋಟ ಮುಂದುವರೆದಿದೆ. ಎಸ್​ಆರ್​ಹೆಚ್ ವಿರುದ್ಧ 69 ರನ್​ಗಳಿಸುವ ಮೂಲಕ ಕಿಂಗ್ ಕೊಹ್ಲಿ ಟಿ20 ರನ್ ಸರದಾರರ ಪಟ್ಟಿಯಲ್ಲಿ ಪಾಕ್ ದಾಂಡಿಗ ಶೊಯೆಬ್ ಮಲಿಕ್ ಅವರನ್ನು ಹಿಂದಿಕ್ಕಿದ್ದಾರೆ. ಅಷ್ಟೇ ಅಲ್ಲದೆ ಅತ್ಯಧಿಕ ರನ್​ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲೂ ಮೇಲೇರಿದ್ದಾರೆ.ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ಹೆಸರಿಗೆ ಮತ್ತೊಂದು ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಅದು ಕೂಡ ಟಿ20 ರನ್​ ಸರದಾರರ ಪಟ್ಟಿಯಲ್ಲಿ ಒಂದು ಸ್ಥಾನ ಮೇಲೇರುವ ಮೂಲಕ. ಅಂದರೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಲಿಸ್ಟ್​ನಲ್ಲಿ ಕಿಂಗ್ ಕೊಹ್ಲಿ ಒಂದು ಸ್ಥಾನ ಮೇಲೇರಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 38 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 69 ರನ್ ಬಾರಿಸಿ ಮಿಂಚಿದ್ದರು. ಈ 69 ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಆರನೇ ಸ್ಥಾನದಲ್ಲಿ ಪಾಕಿಸ್ತಾನದ ಬ್ಯಾಟರ್ ಶೊಯೆಬ್ ಮಲಿಕ್ ಕಾಣಿಸಿಕೊಂಡಿದ್ದರು. ಇದೀಗ ಮಲಿಕ್ ಅವರನ್ನು ಹಿಂದಿಕ್ಕುವಲ್ಲಿ ಕೊಹ್ಲಿ ಯಶಸ್ವಿಯಾಗಿದ್ದಾರೆ.

ಶೊಯೆಬ್ ಮಲಿಕ್ ಟಿ20 ಕ್ರಿಕೆಟ್​ನಲ್ಲಿ ಈವರೆಗೆ 515 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 10665 ಎಸೆತಗಳನ್ನು ಎದುರಿಸಿರುವ ಅವರು ಒಟ್ಟು 13571 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ರನ್​ಗಳಿಸಿ ಪಾಕ್ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ.ಇದೀಗ ಕೇವಲ 398 ಟಿ20 ಇನಿಂಗ್ಸ್​ಗಳಲ್ಲಿ ವಿರಾಟ್ ಕೊಹ್ಲಿ 13,612 ರನ್​ಗಳಿಸಿದ್ದಾರೆ. ಈ ಮೂಲಕ ಶೊಯೆಬ್ ಮಲಿಕ್ ಅವರನ್ನು ಹಿಂದಿಕ್ಕಿ ಕಿಂಗ್ ಕೊಹ್ಲಿ ಟಿ20 ರನ್ ಸರದಾರರ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೇರಿದ್ದಾರೆ. ಅಷ್ಟೇ ಅಲ್ಲದೆ ಟಿ20 ಇತಿಹಾಸದಲ್ಲೇ ಅತೀ ಹೆಚ್ಚು ರನ್​ಗಳಿಸಿದ ವಿಶ್ವ ದಾಖಲೆ ಬರೆಯಲು ಮುನ್ನುಗ್ಗುತ್ತಿದ್ದಾರೆ.

ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್​ಗಳಿಸಿದ ವಿಶ್ವ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ 455 ಟಿ20 ಇನಿಂಗ್ಸ್​ಗಳ ಮೂಲಕ ಒಟ್ಟು 14562 ರನ್​ಗಳಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇದೀಗ 13,612 ರನ್​ ಕಲೆಹಾಕಿರುವ ಕೊಹ್ಲಿ ಇನ್ನು 951 ರನ್​ಗಳಿಸಿದರೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಧಿಕ ರನ್​ಗಳಿಸಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು