ಜನವರಿ 26 ರಿಂದ ಅದ್ದೂರಿ ಸುತ್ತೂರು ಜಾತ್ರಾ ಮಹೋತ್ಸವ.

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು (Mysuru) ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ (Suttur) ಜಾತ್ರಾ ಮಹೋತ್ಸವ ಆರಂಭವಾಗಿದ್ದು, ಜನವರಿ 26 ರಿಂದ 31 ರ ವರೆಗೂ ಅದ್ಧೂರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಮಠಗಳ ಮಠಾಧೀಶರು ಸಹ ಭಾಗವಹಿಸಿದ್ದರು.
ಈ ಸುತ್ತೂರು ಜಾತ್ರಾ ಮಹೋತ್ಸವವು ಬಹಳ ಜನಪ್ರಿಯ ಕಾರ್ಯಕ್ರಮವಾಗಿದ್ದು ನಾಡಿನಾದ್ಯಂತದಿಂದ ಭಕ್ತಾದಿಗಳು ಜಾತ್ರೆಯಲ್ಲಿ ಭಾಗವಹಿಸಲು ಬರುತ್ತಾರೆ.
ಈ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಆ ಪ್ರದೇಶದ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ತೋರಿಸುವ ಕಾರ್ಯಕ್ರಮಗಳನ್ನು ಸಹ ಹಮ್ಮಿಕೊಳ್ಳಲಾಗುತ್ತದೆ. ಕೃಷಿ ಹಾಗೂ ವಿವಿಧ ರೀತಿಯ ವಸ್ತುಪ್ರದರ್ಶನ, ವಿಚಾರ ಕಾರ್ಯಾಗಾರಗಳು ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಜಾತ್ರೆಯಲ್ಲಿ ಗ್ರಾಮೀಣ ಆಟಗಳನ್ನು ಆಡುವುದು ಸುತ್ತೂರಿನಲ್ಲಿ ದಶಕಗಳಿಂದ ಒಂದು ಶ್ರೀಮಂತ ಸಂಪ್ರದಾಯದಂತೆ ಆಚರಿಸಿಕೊಂಡು ಬರಲಾಗುತ್ತಿದೆ. ಗ್ರಾಮೀಣ ಆಟಗಳನ್ನು ಮುಂದಿನ ಪೀಳಿಗೆಗೆ ಧಾಟಿಸುವುದು ಮತ್ತು ನಗರವಾಸಿ ಜನರಿಗೆ ಈ ಆಟಗಳನ್ನು ಪರಿಚಯಿಸುವುದು ಈ ಸಂಪ್ರದಾಯದ ಉದ್ದೇಶ.
ಇದೇ ಕಾರಣಕ್ಕೆ ರಾಜ್ಯದಲ್ಲೇ ಪ್ರಸಿದ್ಧ ಜಾತ್ರೆ ಎಂದು ಕೊಂಡಾಡಲ್ಪಡುವ ಸುತ್ತೂರು ಜಾತ್ರೆ ಮತ್ತಷ್ಟು ಮಹತ್ವ ಪಡೆದುಕೊಂಡಿದೆ. ಅಲ್ಲದೆ, ರಾಜ್ಯದ ಪ್ರಮುಖ ಜಾತ್ರೆಗಳಲ್ಲೊಂದಾಗಿ ಸ್ಥಾನ ಪಡೆದುಕೊಂಡಿದೆ ಎಂದರೂ ತಪ್ಪಾಗಲಾರದು. ಜಾತ್ರಾ ಮಹೋತ್ಸವದಲ್ಲಿ ನಿತ್ಯವೂ ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ಜಾತ್ರೆಯ ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಲಿದೆ.

ಸಾಮೂಹಿಕ ವಿವಾಹ : ಜನವರಿ 27 ಸೋಮವಾರದಂದು ನಡೆಯುವ ಉಚಿತ ಸಾಮೂಹಿಕ ವಿವಾಹದಲ್ಲಿ ಜಾತಿ-ಮತ ಭೇದವಿಲ್ಲದೆ ಸರ್ವಧರ್ಮಗಳ ಎಲ್ಲರಿಗೂ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಅಂತರ್ಜಾತಿಗಳ, ವಿಶೇಷ ಚೇತನರು ಹಾಗೂ ಹೊರ ರಾಜ್ಯಗಳ ವಧು-ವರರು ಸಹ ಪಾಲ್ಗೊಳ್ಳಲಿದ್ದಾರೆ. ವಿವಾಹಗಳ ನೋಂದಣಿಯಾಗುತ್ತದೆ. ವಧುವಿಗೆ ಸೀರೆ, ಕುಪ್ಪಸ, ಮಾಂಗಲ್ಯ ಹಾಗೂ ಕಾಲುಂಗುರಗಳನ್ನು, ವರನಿಗೆ ಪಂಚೆ, ವಲ್ಲಿ, ಷರ್ಟ್ಗಳನ್ನು ನೀಡಲಾಗುತ್ತದೆ. ಸಾಮೂಹಿಕ ವಿವಾಹ ವ್ಯವಸ್ಥೆಯಲ್ಲಿ ಈವರೆಗೆ 3200ಕ್ಕೂ ಹೆಚ್ಚು ಮಂದಿ ಸತಿಪತಿಗಳಾಗಿದ್ದಾರೆ. ವಧು-ವರರು ವಿವಾಹದ ದೃಢೀಕರಣಪತ್ರ ಹಾಗೂ ನೋಂದಣಿಪತ್ರಗಳನ್ನು ಸಲ್ಲಿಸಿ, ಸರ್ಕಾರ ನೀಡುವ ಪ್ರೋತ್ಸಾಹಧನವನ್ನು ಪಡೆದುಕೊಳ್ಳಬಹುದಾಗಿದೆ.

54ನೇ ದನಗಳ ಪರಿಷೆ : ದನಗಳ ಜಾತ್ರೆಯನ್ನು ಕಳೆದ 53 ವರ್ಷಗಳಿಂದಲೂ ಏರ್ಪಡಿಸಲಾಗುತ್ತಿದೆ. ರೈತಬಾಂಧವರು ಎತ್ತು, ಹಸು, ಹೋರಿಗಳನ್ನು ಕೊಂಡುಕೊಳ್ಳಲು ಹಾಗೂ ಮಾರಾಟ ಮಾಡಲು ಅವಕಾಶವಿರುತ್ತದೆ. ಪಶುಪಾಲನಾ ಹಾಗೂ ಪಶುವೈದ್ಯಕೀಯ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಮಾಡಲಾಗುವುದು. ಚುಚ್ಚುಮದ್ದು ಮತ್ತು ಜಂತುಹುಳು ನಿವಾರಕ ಔಷಧಿಯನ್ನು ಉಚಿತವಾಗಿ ನೀಡಲಾಗುತ್ತದೆ. ಉತ್ತಮ ರಾಸುಗಳಿಗೆ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಗುವುದು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!